ಭಾರತದಲ್ಲೂ ಇನ್‌ಸೈಟ್ ಹೈಬ್ರಿಡ್ ಕಾರು ಬಿಡುಗಡೆ ಮಾಡಲಿದೆ ಹೋಂಡಾ
ದೇಶಾದ್ಯಂತ 2020ರ ಏಪ್ರಿಲ್ 1ರಿಂದ ಬಿಎಸ್-6 ಜಾರಿಗೆ ಬರುತ್ತಿದ್ದು, ಈ ಹಿನ್ನಲೆಯಲ್ಲಿ ಬಹುತೇಕ ಕಾರು ಉತ್ಪಾದನಾ ಸಂಸ್ಥೆಗಳು ಸಣ್ಣ ಗಾತ್ರದ ಡೀಸೆಲ್ ಎಂಜಿನ್ ಆಯ್ಕೆಗಳನ್ನು ಸ್ಥಗಿತಗೊಳಿಸುತ್ತಿವೆ. ಇದರಿಂದ ಡೀಸೆಲ್ ಎಂಜಿನ್‌ಗೆ ಪರ್ಯಾಯವಾಗಿ ಪೆಟ್ರೋಲ್, ಪೆಟ್ರೋಲ್ ಹೈಬ್ರಿಡ್ ಮತ್ತು ಸಿಎನ್‌ಜಿ ಕಾರುಗಳ ಆಯ್ಕೆ ಹೆಚ್ಚುತ್ತಿದ್ದು, ಹೋಂಡಾ ಕೂಡಾ ಈ ನಿಟ್ಟಿನಲ್ಲಿ ಕೆಲವು ಮಹತ್ವದ ಬದಲಾವಣೆಗಳನ್ನು ಪರಿಚಯಿಸುತ್ತಿದೆ.

ಹೋಂಡಾ ಕಾರ್ಸ್ ಇಂಡಿಯಾ ಸಂಸ್ಥೆಯು ಸದ್ಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕಾರುಗಳ ಜೊತೆಗೆ ಅಕಾರ್ಡ್ ಹೈಬ್ರಿಡ್ ಕಾರನ್ನು ಸಹ ಮಾರಾಟ ಮಾಡುತ್ತಿದೆ. ಆದರೆ ಇತ್ತೀಚೆಗೆ ಮಾರುಕಟ್ಟೆಯಲ್ಲಿನ ಬೇಡಿಕೆ ಆಧಾರದ ಮೇಲೆ ಕೆಲವು ಬದಲಾವಣೆಗಳನ್ನು ಪರಿಚಯಿಸುತ್ತಿರುವ ಹೋಂಡಾ ಸಂಸ್ಥೆಯು ವಿದೇಶಿ ಮಾರುಕಟ್ಟೆಗಳಲ್ಲಿ ಭಾರೀ ಬೇಡಿಕೆಯೊಂದಿಗೆ ಮಾರಾಟವಾಗುತ್ತಿರುವ ಕೆಲವು ಹೈಬ್ರಿಡ್ ಸೆಡಾನ್ ಕಾರುಗಳನ್ನ ಭಾರತದಲ್ಲೂ ಪರಿಚಯಿಸುವ ಸುಳಿವು ನೀಡಿದೆ.

ಮುಂದಿನ ಮೂರು ವರ್ಷಗಳ ಅವಧಿಯಲ್ಲಿ ವಿವಿಧ ಮಾದರಿಯ ಕೆಲವು ಹೈಬ್ರಿಡ್ ಎಂಜಿನ್ ಕಾರುಗಳನ್ನು ಪರಿಚಯಿಸಲಿರುವ ಹೋಂಡಾ ಸಂಸ್ಥೆಯು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಸಿ-ಆರ್‌ವಿ, ಸಿಟಿ ಮತ್ತು ಸಿವಿಕ್ ಕಾರಗಳನ್ನು ಹೈಬ್ರಿಡ್ ಎಂಜಿನ್ ಹೊರತರುವ ಯೋಜನೆಯಲ್ಲಿದೆ.

ಸದ್ಯ ಹೋಂಡಾ ಸಂಸ್ಥೆಯು ಸಿಟಿ ಸೆಡಾನ್ ಕಾರಿನಲ್ಲಿ ಸ್ಮಾರ್ಟ್ ಹೈಬ್ರಿಡ್ ವರ್ಷನ್ ಬಿಡುಗಡೆಗಾಗಿ ಸಿದ್ದತೆ ನಡೆಸುತ್ತಿದ್ದು, ಈ ಮಧ್ಯೆ ಯುರೋಪ್ ಪ್ರಮುಖ ರಾಷ್ಟ್ರಗಳಲ್ಲಿ ಕಳೆದ ವರ್ಷವಷ್ಟೇ ಬಿಡುಗಡೆಗೊಂಡಿರುವ ಇನ್‌ಸೈಟ್ ಹೈಬ್ರಿಡ್ ಕಾರನ್ನು ಭಾರತದಲ್ಲಿ ಬಿಡುಗಡೆಗೊಳಿಸುವುದಕ್ಕಾಗಿ ರೋಡ್ ಟೆಸ್ಟಿಂಗ್ ಮಾಡುತ್ತಿರುವುದು ಕಂಡುಬಂದಿದೆ.

ಟೊಯೊಟಾ ಪ್ರಿಯಸ್ ಹೈಬ್ರಿಡ್ ಆವೃತ್ತಿಗೆ ಪೈಪೋಟಿಯಾಗಿ ಭಾರತದಲ್ಲಿ ಬಿಡುಗಡೆಗಾಗಿ ಸಿದ್ದವಾಗುತ್ತಿರುವ ಇನ್‌ಸೈಟ್ ಕಾರು ಮಾದರಿಯು 1.5-ಲೀಟರ್ ಪೆಟ್ರೋಲ್ ಹೈಬ್ರಿಡ್ ಎಂಜಿನ್ ಜೊತೆಗೆ ರೋಡ್ ಟೆಸ್ಟ್ ಪ್ರಕ್ರಿಯೆ ಕೈಗೊಂಡಿದ್ದು, ಇದೇ ಎಂಜಿನ್ ಅನ್ನು ಸಿಟಿ ಫೇಸ್‌ಲಿಫ್ಟ್ ಆವೃತ್ತಿಯಲ್ಲೂ ಜೋಡಣೆ ಮಾಡಬಹುದಾದ ಸಾಧ್ಯತೆಗಳಿವೆ. ಆದರೆ ಈ ಕುರಿತು ಯಾವುದೇ ಅಧಿಕೃತ ಮಾಹಿತಿ ಇಲ್ಲವಾದರೂ ಹೊಸ ಆಮದು ನೀತಿಯಡಿ ಈ ಕಾರು ಭಾರತ ಪ್ರವೇಶಿಸಬಹುದಾಗಿದೆ.

ಕೇಂದ್ರ ಸರ್ಕಾರವು ಭಾರತದಲ್ಲಿ ವಾಹನ ಉತ್ಪಾದನೆ ಮಾಡುತ್ತಿರುವ ವಿದೇಶಿ ಆಟೋ ಸಂಸ್ಥೆಗಳಿಗೆ ಕೆಲವು ವಿನಾಯ್ತಿಗಳನ್ನು ನೀಡಿದ್ದು, ವಾರ್ಷಿಕವಾಗಿ ಯಾವುದೇ ಷರತ್ತುಗಳಲ್ಲಿದೆ 2,500 ಯನಿಟ್ ವಾಹನಗಳನ್ನು ದೇಶಿಯ ಮಾರುಕಟ್ಟೆಗೆ ಆಮದು ಮಾಡಿಕೊಂಡು ಮಾರಾಟ ಮಾಡುವ ಅವಕಾಶ ಒದಗಿಸಿದೆ.

ಈ ಅವಕಾಶ ಬಳಸಿಕೊಳ್ಳಲು ಯೋಜಿಸಿರುವ ಬಹುತೇಕ ಆಟೋ ಉತ್ಪಾದನಾ ಸಂಸ್ಥೆಗಳು ವಿದೇಶಿ ಮಾರುಕಟ್ಟೆಯಲ್ಲಿ ಮಾರಾಟಮಾಡುತ್ತಿರುವ ಜನಪ್ರಿಯ ಕಾರು ಆವೃತ್ತಿಗಳನ್ನು ಕೆಲವು ಬದಲಾವಣೆಗಳೊಂದಿಗೆ ಭಾರತದಲ್ಲಿ ಬಿಡುಗಡೆಗಾಗಿ ಸಿದ್ದಗೊಳ್ಳುತ್ತಿವೆ.
MOST READ: ನೀರು ಮತ್ತು ಆಲ್ಕೋಹಾಲ್‍ನಿಂದ ಚಲಿಸಲಿದೆ ಈ ಎಂಜಿನ್..!

ಇದರ ಭಾಗವಾಗಿ ಹೋಂಡಾ ಕೂಡಾ ತನ್ನ ಇನ್‌ಸೈಟ್ ಹೈಬ್ರಿಡ್ ಸೆಡಾನ್ ಮಾದರಿಯನ್ನು ಭಾರತದಲ್ಲಿ ಬಿಡುಗಡೆಗಾಗಿ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಕೈಗೊಂಡಿದ್ದು, ಮುಂಬರುವ ದಿನಗಳಲ್ಲಿ ಹೊಸ ಕಾರಿನ ಬಿಡುಗಡೆಗೆ ಕುರಿತಾದ ನಿಖರ ಮಾಹಿತಿ ಲಭ್ಯವಾಗಲಿದೆ.
MOST READ: ಸ್ಟಾರ್ ನಟಿಗೆ ಸಿಕ್ತು ಬರೋಬ್ಬರಿ 11 ಕೋಟಿ ಮೌಲ್ಯದ ರೋಲ್ಸ್ ರಾಯ್ಸ್ ಕಾರ್ ಗಿಫ್ಟ್

ಇನ್ನು 2020ರ ಏಪ್ರಿಲ್ 1 ರಿಂದ ಜಾರಿಗೆ ಬರಲಿರುವ ಬಿಎಸ್-6 ನಿಯಮದಿಂದಾಗಿ ಡೀಸೆಲ್ ಕಾರುಗಳ ಮಾರಾಟ ಮತ್ತಷ್ಟು ದುಬಾರಿಯಾಗಲಿದ್ದು, ಬಹುತೇಕ ಕಾರು ಸಂಸ್ಥೆಗಳು ಎಂಟ್ರಿ ಲೆವಲ್ ಕಾರುಗಳಲ್ಲಿ ಡೀಸೆಲ್ ಎಂಜಿನ್ ಆಯ್ಕೆಯನ್ನೇ ಕೈಬಿಡುತ್ತಿವೆ. ಹೋಂಡಾ ಕೂಡಾ 1.5-ಲೀಟರ್‌ಗಿಂತಲೂ ಕೆಳಗಿನ ಡೀಸೆಲ್ ಎಂಜಿನ್ ಸ್ಥಗಿತಗೊಳಿಸುವ ಸಾಧ್ಯತೆಗಳಿದ್ದು, ಪೆಟ್ರೋಲ್ ಮತ್ತು ಪೆಟ್ರೋಲ್ ಹೈಬ್ರಿಡ್ ಕಾರುಗಳ ಸದ್ದು ಜೋರಾಗಲಿದೆ.
Source: Rushlane


Click it and Unblock the Notifications








