ಬಿಡುಗಡೆಯಾಗಲಿರುವ ಹೋಂಡಾ ಜಾಝ್ ಎಲೆಕ್ಟ್ರಿಕ್ ಕಾರಿನ ಮೈಲೇಜ್ ಎಷ್ಟು ಗೊತ್ತಾ?

ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳ ಹಾವಳಿ ಜೋರಾಗುತ್ತಿದೆ. ಭವಿಷ್ಯ ವಾಹನಗಳ ಮೇಲೆ ಹೆಚ್ಚಿನ ಗಮನಹರಿಸಿರುವ ಆಟೋ ಉತ್ಪಾದನಾ ಸಂಸ್ಥೆಗಳು ವಿವಿಧ ಬಗೆಯ ಹೊಸ ಎಲೆಕ್ಟ್ರಿಕ್ ವಾಹನಗಳ ಪರಿಚಯಿಸುವ ತವಕದಲ್ಲಿದ್ದು, ಹೋಂಡಾದಿಂದ ಜಾಝ್ ಎಲೆಕ್ಟ್ರಿಕ್ ಕಾರು ಕೂಡಾ ಬಿಡುಗಡೆಯಾಗುವುದು ಖಚಿತವಾಗಿದೆ.

ಬಿಡುಗಡೆಯಾಗಲಿರುವ ಹೋಂಡಾ ಜಾಝ್ ಎಲೆಕ್ಟ್ರಿಕ್ ಕಾರಿನ ಮೈಲೇಜ್ ಎಷ್ಟು ಗೊತ್ತಾ?

ಜಪಾನ್ ಮೂಲದ ವಾಹನ ತಯಾರಕ ಸಂಸ್ಥೆಯಾದ ಹೋಂಡಾ ತನ್ನ ಬಹುನೀರಿಕ್ಷಿತ ಜಾಝ್ ಎಲೆಕ್ಟ್ರಿಕ್ ಆವೃತ್ತಿಯನ್ನು ಪರಿಚಯಿಸುವ ಯೋಜನೆಯಲಿದ್ದು, ಜಾಗತಿಕ ಮಾರುಕಟ್ಟೆಗಳಲ್ಲಿ ಫಿಟ್ ಎಂಬ ಹೆಸರಿನಲ್ಲಿ ಮಾರಾಟವಾಗುತ್ತಿರುವ ಹೊಸ ಕಾರು ಇದೀಗ ಭಾರತದಲ್ಲೂ ಸದ್ದು ಮಾಡುವ ತವಕದಲ್ಲಿದೆ.

ಬಿಡುಗಡೆಯಾಗಲಿರುವ ಹೋಂಡಾ ಜಾಝ್ ಎಲೆಕ್ಟ್ರಿಕ್ ಕಾರಿನ ಮೈಲೇಜ್ ಎಷ್ಟು ಗೊತ್ತಾ?

ಹೆಚ್ಚಿನ ಮೈಲೇಜ್ ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಹೊತ್ತು ಬರಲಿರುವ ಹೋಂಡಾ ಜಾಝ್ ಎಲೆಕ್ಟ್ರಿಕ್ ಕಾರುಗಳು ನಿಸ್ಸಾನ್ ಲೀಫ್ ಮತ್ತು ಹ್ಯುಂಡೈ ಕೊನಾ ಕಾರುಗಳಿಗಿಂತ ಕಡಿಮೆ ಬೆಲೆಯಲ್ಲಿ ಪರಿಚಯಿಸಲಾಗುತ್ತಿದ್ದು, ಬಿಡುಗಡೆಗೊಳಿಸುವ ಸಂಬಂಧ ದೇಶದ ಪ್ರಮುಖ ನಗರಗಳಲ್ಲಿ ಹೊಸ ಕಾರನ್ನು ಸ್ಪಾಟ್ ಟೆಸ್ಟಿಂಗ್ ನಡೆಸಲಾಗುತ್ತಿದೆ.

ಬಿಡುಗಡೆಯಾಗಲಿರುವ ಹೋಂಡಾ ಜಾಝ್ ಎಲೆಕ್ಟ್ರಿಕ್ ಕಾರಿನ ಮೈಲೇಜ್ ಎಷ್ಟು ಗೊತ್ತಾ?

ಎಲೆಕ್ಟ್ರಿಕ್ ಜಾಝ್ ಕಾರನ್ನು ಸಿದ್ದಗೊಳಿಸಲು ಹೋಂಡಾ ಸಂಸ್ಥೆಯು ಚೀನಾದ ಜನಪ್ರಿಯ ಬ್ಯಾಟರಿ ತಯಾರಕ ಸಂಸ್ಥೆಯಾದ ಕಾನ್ಟೆಂಪರಿ ಆಮ್ಪ್ರೆಕ್ಸ್ ಟೆಕ್ನಾಲಜಿಯೊಂದಿಗೆ ಕೈ ಜೋಡಿಸಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಚೀನಾದಲ್ಲೂ ಬಿಡುಗಡೆಯಾಗುವ ಹೊಸ ಕಾರು ತದನಂತರವಷ್ಟೇ ಭಾರತದಲ್ಲಿ ಬಿಡುಗಡೆಯಾಗಲಿದೆ.

ಬಿಡುಗಡೆಯಾಗಲಿರುವ ಹೋಂಡಾ ಜಾಝ್ ಎಲೆಕ್ಟ್ರಿಕ್ ಕಾರಿನ ಮೈಲೇಜ್ ಎಷ್ಟು ಗೊತ್ತಾ?

ಭಾರತದಂತೆಯೇ ಚೀನಾದಲ್ಲೂ ಕೂಡಾ ಇಂಧನ ಆಧಾರಿತ ಕಾರು ಮತ್ತು ದ್ವಿಚಕ್ರ ವಾಹನಗಳಿಗಿಂತ ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚಿನ ಆದ್ಯತೆಯನ್ನು ನೀಡಲಾಗುತ್ತಿದ್ದು, ಹೀಗಾಗಿ ಹೊಸ ಜಾಝ್ ಕಾರು 2019ರ ಅಂತ್ಯಕ್ಕೆ ಗ್ರಾಹಕರ ಕೈಸೇರುವುದು ಖಚಿತವಾಗಿದೆ.

ಬಿಡುಗಡೆಯಾಗಲಿರುವ ಹೋಂಡಾ ಜಾಝ್ ಎಲೆಕ್ಟ್ರಿಕ್ ಕಾರಿನ ಮೈಲೇಜ್ ಎಷ್ಟು ಗೊತ್ತಾ?

ಫಿಟ್ ಕಾರು ಮಾದರಿಯಲ್ಲೇ ಜಾಝ್ ಎಲೆಕ್ಟ್ರಿಕ್ ಕಾರುಗಳು ಸಹ 331-ವೋಲ್ಟ್, 20kWh ಲೀಥಿಯಂ ಅಯಾನ್ ಬ್ಯಾಟರಿ ಸೌಲಭ್ಯವನ್ನು ಪಡೆದುಕೊಂಡಿದ್ದು, ಒಂದು ಬಾರಿ ಪೂರ್ಣಪ್ರಮಾಣದಲ್ಲಿ ಚಾರ್ಜ್ ಮಾಡಿದ್ದಲ್ಲಿ ಗರಿಷ್ಠವಾಗಿ 225ಕಿ.ಮಿ ಮೈಲೇಜ್ ನೀಡಲಿಯೆಂತೆ.

ಬಿಡುಗಡೆಯಾಗಲಿರುವ ಹೋಂಡಾ ಜಾಝ್ ಎಲೆಕ್ಟ್ರಿಕ್ ಕಾರಿನ ಮೈಲೇಜ್ ಎಷ್ಟು ಗೊತ್ತಾ?

ಇನ್ನು 20kWh ಲೀಥಿಯಂ ಅಯಾನ್ ಬ್ಯಾಟರಿಯು ಪೂರ್ಣ ಪ್ರಮಾಣದಲ್ಲಿ ಚಾರ್ಜಿಂಗ್ ಮಾಡಲು ಸುಮಾರು 6 ಗಂಟೆ ತೆಗೆದುಕೊಳ್ಳಲಿದ್ದು, ಮತ್ತೊಂದು ಉನ್ನತ ಮಾದರಿಯ ಲೀಥಿಯಂ ಬ್ಯಾಟರಿ ಸೌಲಭ್ಯವನ್ನು ಪಡೆದುಕೊಂಡಲ್ಲಿ ಅದು ಕೇವಲ 20 ನಿಮಿಷಗಳಲ್ಲಿ ಶೇ.80ರಷ್ಟು ಬ್ಯಾಟರಿ ಚಾರ್ಜ್‌ಗೊಳ್ಳುತ್ತೆ.

ಬಿಡುಗಡೆಯಾಗಲಿರುವ ಹೋಂಡಾ ಜಾಝ್ ಎಲೆಕ್ಟ್ರಿಕ್ ಕಾರಿನ ಮೈಲೇಜ್ ಎಷ್ಟು ಗೊತ್ತಾ?

ಹೀಗಾಗಿ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ವಿವಿಧ ಬ್ಯಾಟರಿ ಸೌಲಭ್ಯವುಳ್ಳ ಜಾಝ್ ಎಲೆಕ್ಟ್ರಿಕ್ ಕಾರುಗಳು ಖರೀದಿಗೆ ಲಭ್ಯವಿರಲಿದ್ದು, 2019 ಅಂತ್ಯಕ್ಕೆ ಇಲ್ಲವೇ 2020ರ ಆರಂಭದಲ್ಲಿ ಬಿಡುಗಡೆಯಾಗುವ ಹೊಸ ಕಾರು ಮಹೀಂದ್ರಾ ಮತ್ತು ಹ್ಯುಂಡೈ ಹೊಸ ಎಲೆಕ್ಟ್ರಿಕ್ ಕಾರುಗಳಿಗೆ ಪೈಪೋಟಿ ನೀಡಲಿದೆ.

ಬಿಡುಗಡೆಯಾಗಲಿರುವ ಹೋಂಡಾ ಜಾಝ್ ಎಲೆಕ್ಟ್ರಿಕ್ ಕಾರಿನ ಮೈಲೇಜ್ ಎಷ್ಟು ಗೊತ್ತಾ?

ಕಾರಿನ ಬೆಲೆಗಳು(ಅಂದಾಜು)

ಜಾಝ್ ಕಾರುಗಳು ಸದ್ಯಕ್ಕೆ ಪೆಟ್ರೋಲ್ ಮತ್ತು ಡಿಸೇಲ್ ಆವೃತ್ತಿಯೊಂದಿಗೆ ಆಂಭಿಕವಾಗಿ ರೂ. 7.45 ಲಕ್ಷದಿಂದ ರೂ.9.40 ಲಕ್ಷದ ತನಕ ಬೆಲೆ ಹೊಂದಿದ್ದು, ಎಲೆಕ್ಟ್ರಿಕ್ ವರ್ಷನ್ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ರೂ. 16 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.

MOST READ: ಹೊಸ ಕಾಯ್ದೆ ಶುರು - ಟ್ಯಾಕ್ಸಿ ಚಾಲಕರಿಗೆ ಪೊಲೀಸರಿಂದ ನೋಟಿಸ್..!

ಬಿಡುಗಡೆಯಾಗಲಿರುವ ಹೋಂಡಾ ಜಾಝ್ ಎಲೆಕ್ಟ್ರಿಕ್ ಕಾರಿನ ಮೈಲೇಜ್ ಎಷ್ಟು ಗೊತ್ತಾ?

ಪ್ರಸ್ತುತ ದೇಶಿಯ ಮಾರುಕಟ್ಟೆಯಲ್ಲಿ ಹೋಂಡಾ ಜಾಝ್ ಕಾರು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಯ ಮೂಲಕ ಹ್ಯಾಚ್‌ಬ್ಯಾಕ್ ವಿಭಾದಲ್ಲಿ ಉತ್ತಮ ಬೇಡಿಕೆ ಕಾಯ್ದುಕೊಂಡಿದ್ದು, ಜಾಝ್ ಕಾರಿನ ಪೆಟ್ರೋಲ್ ಮಾದರಿಯು 1.2 ಲೀಟರ್ ಐ-ವಿಟೆಕ್ ಪೆಟ್ರೋಲ್ ಎಂಜಿನ್ ಸಹಾಯದಿಂದ 87 ಬಿಹೆಚ್‍‍ಪಿ ಮತ್ತು 110ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಶಕ್ತಿಯನ್ನು ಪಡೆದಿದೆ.

ಬಿಡುಗಡೆಯಾಗಲಿರುವ ಹೋಂಡಾ ಜಾಝ್ ಎಲೆಕ್ಟ್ರಿಕ್ ಕಾರಿನ ಮೈಲೇಜ್ ಎಷ್ಟು ಗೊತ್ತಾ?

ಹಾಗೆಯೇ ಜಾಝ್ ಕಾರಿನ ಡೀಸೆಲ್ ಆವೃತ್ತಿಯು 1.5 ಲೀಟರ್ ಐ-ಡಿಟೆಕ್ ಟರ್ಬೋಚಾರ್ಜ್ಡ್ ಡೀಸೆಲ್ ಎಂಜಿನ್ ಸಹಾಯದಿಂದ 99ಬಿಹೆಚ್‍‍ಪಿ ಮತ್ತು 200 ಎನ್ಎಮ್ ಟಾರ್ಕ್ ಅನ್ನು ಉತ್ಪಾದಿಸುವ ಶಕ್ತಿಯನ್ನು ಪಡೆದಿದ್ದು, ಪೆಟ್ರೋಲ್ ಎಂಜಿನ್ ಅನ್ನು 5 ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‍‍‍ಬಾಕ್ಸ್‌ನೊಂದಿಗೆ ಹಾಗೂ ಡೀಸೆಲ್ ಏಂಜಿನ್ ಅನ್ನು 6 ಸ್ಪೀಡ್ ಮ್ಯಾನುವಲ್ ಗೇರ್‍‍ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ.

Most Read Articles

Kannada
English summary
Honda Jazz Electric Spied In India. Read in Kannada.
Story first published: Saturday, January 12, 2019, 13:46 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X