ಕೈಗೆಟುವ ಬೆಲೆಯಲ್ಲಿ ಬಿಡುಗಡೆಯಾಗಲಿದೆ ಹೋಂಡಾ ಜಾಝ್ ಎಲೆಕ್ಟ್ರಿಕ್ ಕಾರು

ಭಾರತದಲ್ಲಿ ಸದ್ಯ ಎಲೆಕ್ಟ್ರಿಕ್ ಕಾರುಗಳ ಸದ್ದು ಜೋರಾಗುತ್ತಿದೆ. ಭವಿಷ್ಯ ವಾಹನಗಳ ಮೇಲೆ ಹೆಚ್ಚಿನ ಗಮನಹರಿಸಿರುವ ಬಹುತೇಕ ಆಟೋ ಉತ್ಪಾದನಾ ಸಂಸ್ಥೆಗಳು ವಿವಿಧ ಬಗೆಯ ಹೊಸ ಎಲೆಕ್ಟ್ರಿಕ್ ವಾಹನಗಳನ್ನು ಪರಿಚಯಿಸುವ ತವಕದಲ್ಲಿದ್ದು, ಹೋಂಡಾ ಕೂಡಾ ತನ್ನ ಜನಪ್ರಿಯ ಜಾಝ್ ಆವೃತ್ತಿಯ ಎಲೆಕ್ಟ್ರಿಕ್ ವರ್ಷನ್ ಅನ್ನು ಬಿಡುಗಡೆಗೊಳಿಸುತ್ತಿದೆ.

ಕೈಗೆಟುವ ಬೆಲೆಯಲ್ಲಿ ಬಿಡುಗಡೆಯಾಗಲಿದೆ ಹೋಂಡಾ ಜಾಝ್ ಎಲೆಕ್ಟ್ರಿಕ್ ಕಾರು

ಜಪಾನ್ ಬ್ರಾಂಡ್ ವಾಹನ ತಯಾರಕ ಸಂಸ್ಥೆಯಾಗಿರುವ ಹೋಂಡಾ ಸಂಸ್ಥೆಯು ತನ್ನ ಬಹುನೀರಿಕ್ಷಿತ ಜಾಝ್ ಎಲೆಕ್ಟ್ರಿಕ್ ಆವೃತ್ತಿಯನ್ನು ಪರಿಚಯಿಸುವ ಸಂಬಂಧ ಈಗಾಗಲೇ ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಕೈಗೊಂಡಿದ್ದು, ಜಾಗತಿಕ ಮಾರುಕಟ್ಟೆಗಳಲ್ಲಿ ಫಿಟ್ ಎಂಬ ಹೆಸರಿನೊಂದಿಗೆ ಮಾರಾಟವಾಗುತ್ತಿರುವ ಹೊಸ ಕಾರು ಇದೀಗ ಭಾರತೀಯ ಮಾರುಕಟ್ಟೆಯಲ್ಲೂ ಭಾರೀ ಸದ್ದು ಮಾಡುವ ತವಕದಲ್ಲಿದೆ.

ಕೈಗೆಟುವ ಬೆಲೆಯಲ್ಲಿ ಬಿಡುಗಡೆಯಾಗಲಿದೆ ಹೋಂಡಾ ಜಾಝ್ ಎಲೆಕ್ಟ್ರಿಕ್ ಕಾರು

2020ರ ಹೊತ್ತಿಗೆ ದೇಶಾದ್ಯಂತ ಶೇ.100ರಷ್ಟು ಎಲೆಕ್ಟ್ರಿಕ್ ವಾಹನಗಳನ್ನು ಮಾರಾಟ ಮಾಡುವ ಉದ್ದೇಶದೊಂದಿಗೆ ಹಲವು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿರುವ ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳನ್ನು ತಗ್ಗಿಸುವ ಸಂಬಂಧ ಎಲೆಕ್ಟ್ರಿಕ್ ವಾಹನಗಳ ಮಾರಾಟ ಹೆಚ್ಚಿಸಲು ಕೆಲವು ಮಹತ್ವದ ಕ್ರಮಕೈಗೊಳ್ಳುತ್ತಿದೆ.

ಕೈಗೆಟುವ ಬೆಲೆಯಲ್ಲಿ ಬಿಡುಗಡೆಯಾಗಲಿದೆ ಹೋಂಡಾ ಜಾಝ್ ಎಲೆಕ್ಟ್ರಿಕ್ ಕಾರು

ಹೀಗಾಗಿ ಕೇಂದ್ರ ಸರ್ಕಾರದ ನಿರ್ದೇಶನದಂತೆ ಎಲೆಕ್ಟ್ರಿಕ್ ವಾಹನಗಳ ನಿರ್ಮಾಣದ ಮೇಲೆ ಹೆಚ್ಚಿನ ಆಸಕ್ತಿ ವಹಿಸಿರುವ ಹೋಂಡಾ ಸೇರಿದಂತೆ ಬಹುತೇಕ ಆಟೋ ಉತ್ಪಾದನಾ ಸಂಸ್ಥೆಗಳು ಈಗಾಗಲೇ ಕೆಲವು ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆ ಮಾಡಿದ್ದರೆ, ಇನ್ನು ಕೆಲವು ಆಟೋ ಉತ್ಪಾದನಾ ಸಂಸ್ಥೆಗಳು 2020ರ ಆರಂಭದಲ್ಲಿ ಬಿಡುಗಡೆಗಾಗಿ ಸಿದ್ದನಡೆಸುತ್ತಿವೆ.

ಕೈಗೆಟುವ ಬೆಲೆಯಲ್ಲಿ ಬಿಡುಗಡೆಯಾಗಲಿದೆ ಹೋಂಡಾ ಜಾಝ್ ಎಲೆಕ್ಟ್ರಿಕ್ ಕಾರು

ಇದರಲ್ಲಿ ಹೋಂಡಾ ಸಂಸ್ಥೆಯ ಜಾಝ್ ಎಲೆಕ್ಟ್ರಿಕ್ ಕಾರುಗಳು ನೀರಿಕ್ಷೆ ಹುಟ್ಟುಹಾಕಿದ್ದು, ಹೆಚ್ಚಿನ ಮೈಲೇಜ್ ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಹೊತ್ತು ಬರಲಿರುವ ಜಾಝ್ ಇವಿ ಕಾರು ನಿಸ್ಸಾನ್ ಲೀಫ್ ಮತ್ತು ಹ್ಯುಂಡೈ ಕೊನಾ ಕಾರುಗಳಿಗಿಂತಲೂ ಕಡಿಮೆ ಬೆಲೆಯಲ್ಲಿ ಬಿಡುಗಡೆಯಾಗುವ ಸುಳಿವು ನೀಡಿದೆ. ಹೀಗಾಗಿ ಹೊಸ ಕಾರು ಬಿಡುಗಡೆಗೊಳಿಸುವ ಸಂಬಂಧ ದೇಶದ ಪ್ರಮುಖ ನಗರಗಳಲ್ಲಿ ಹೊಸ ಕಾರನ್ನು ಸ್ಪಾಟ್ ಟೆಸ್ಟಿಂಗ್ ನಡೆಸಲಾಗುತ್ತಿದ್ದು, ಸಾಮಾನ್ಯ ಕಾರಿನ ಮಾದರಿಯಲ್ಲೇ ಹೊಸ ಇವಿ ಕಾರು ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದೆ.

ಕೈಗೆಟುವ ಬೆಲೆಯಲ್ಲಿ ಬಿಡುಗಡೆಯಾಗಲಿದೆ ಹೋಂಡಾ ಜಾಝ್ ಎಲೆಕ್ಟ್ರಿಕ್ ಕಾರು

ಎಲೆಕ್ಟ್ರಿಕ್ ಜಾಝ್ ಕಾರನ್ನು ಸಿದ್ದಗೊಳಿಸಲು ಹೋಂಡಾ ಸಂಸ್ಥೆಯು ಚೀನಾದ ಜನಪ್ರಿಯ ಬ್ಯಾಟರಿ ತಯಾರಕ ಸಂಸ್ಥೆಯಾದ ಕಾನ್ಟೆಂಪರಿ ಆಮ್ಪ್ರೆಕ್ಸ್ ಟೆಕ್ನಾಲಜಿಯೊಂದಿಗೆ ಕೈ ಜೋಡಿಸಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಚೀನಾದಲ್ಲೂ ಬಿಡುಗಡೆಯಾಗುವ ಹೊಸ ಕಾರು ತದನಂತರವಷ್ಟೇ ಭಾರತದಲ್ಲಿ ಬಿಡುಗಡೆಯಾಗಲಿದೆ.

ಕೈಗೆಟುವ ಬೆಲೆಯಲ್ಲಿ ಬಿಡುಗಡೆಯಾಗಲಿದೆ ಹೋಂಡಾ ಜಾಝ್ ಎಲೆಕ್ಟ್ರಿಕ್ ಕಾರು

ಭಾರತದಂತೆಯೇ ಚೀನಾದಲ್ಲೂ ಕೂಡಾ ಇದೀಗ ಇಂಧನ ಆಧಾರಿತ ಕಾರು ಮತ್ತು ದ್ವಿಚಕ್ರ ವಾಹನಗಳಿಗಿಂತ ಎಲೆಕ್ಟ್ರಿಕ್ ವಾಹನಗಳ ಮೇಲೆ ಹೆಚ್ಚಿನ ಆದ್ಯತೆಯನ್ನು ನೀಡಲಾಗುತ್ತಿದ್ದು, ಹೀಗಾಗಿ ಹೊಸ ಜಾಝ್ ಕಾರು 2019ರ ಅಂತ್ಯಕ್ಕೆ ಇಲ್ಲವೇ 2020ರ ಆರಂಭದಲ್ಲಿ ಗ್ರಾಹಕರ ಕೈಸೇರಲಿದೆ.

ಕೈಗೆಟುವ ಬೆಲೆಯಲ್ಲಿ ಬಿಡುಗಡೆಯಾಗಲಿದೆ ಹೋಂಡಾ ಜಾಝ್ ಎಲೆಕ್ಟ್ರಿಕ್ ಕಾರು

ಫಿಟ್ ಕಾರು ಮಾದರಿಯಲ್ಲೇ ಜಾಝ್ ಎಲೆಕ್ಟ್ರಿಕ್ ಕಾರು ಸಹ ಗ್ರಾಹಕರ ಬೇಡಿಕೆಯೆಂತೆ 20kWh ಮತ್ತು 25kWh ಲೀಥಿಯಂ ಅಯಾನ್ ಬ್ಯಾಟರಿ ಆಯ್ಕೆಯನ್ನು ಪಡೆದುಕೊಳ್ಳಲಿದ್ದು, ಇದು ಒಂದು ಬಾರಿ ಪೂರ್ಣಪ್ರಮಾಣದಲ್ಲಿ ಚಾರ್ಜ್ ಮಾಡಿದ್ದಲ್ಲಿ ಗರಿಷ್ಠವಾಗಿ 250ರಿಂದ 300 ಕಿ.ಮಿ ಮೈಲೇಜ್ ನೀಡಲಿಯೆಂತೆ.

ಕೈಗೆಟುವ ಬೆಲೆಯಲ್ಲಿ ಬಿಡುಗಡೆಯಾಗಲಿದೆ ಹೋಂಡಾ ಜಾಝ್ ಎಲೆಕ್ಟ್ರಿಕ್ ಕಾರು

ಜಾಝ್‌ನಲ್ಲಿ ಬಳಸಲಾಗಿರುವ ಲೀಥಿಯಂ ಅಯಾನ್ ಬ್ಯಾಟರಿಯು ಪೂರ್ಣ ಪ್ರಮಾಣದಲ್ಲಿ ಚಾರ್ಜಿಂಗ್ ಮಾಡಲು ಸುಮಾರು 6ರಿಂದ 8 ಗಂಟೆಗಳ ಕಾಲ ಸಮಯ ತೆಗೆದುಕೊಳ್ಳಲಿದ್ದು, ಫಾಸ್ಟ್ ಡಿಸಿ ಚಾರ್ಜರ್ ಸೌಲಭ್ಯದೊಂದಿಗೆ ಕೇವಲ 40 ನಿಮಿಷಗಳಲ್ಲಿ ಶೇ.80ರಷ್ಟು ಬ್ಯಾಟರಿ ಚಾರ್ಜ್‌ ಮಾಡಿಕೊಳ್ಳಬಹುದಾಗಿದೆ.

ಕೈಗೆಟುವ ಬೆಲೆಯಲ್ಲಿ ಬಿಡುಗಡೆಯಾಗಲಿದೆ ಹೋಂಡಾ ಜಾಝ್ ಎಲೆಕ್ಟ್ರಿಕ್ ಕಾರು

ಕಾರಿನ ಬೆಲೆಗಳು(ಅಂದಾಜು)

ಪ್ರೀಮಿಯಂ ಸೌಲಭ್ಯಗಳನ್ನು ಹೊಂದಿರುವ ಜಾಝ್ ಪೆಟ್ರೋಲ್ ಮತ್ತು ಡಿಸೇಲ್ ಕಾರುಗಳು ಸದ್ಯಕ್ಕೆ ಮಾರುಕಟ್ಟೆಯಲ್ಲಿ ಆಂಭಿಕವಾಗಿ ರೂ. 7.45 ಲಕ್ಷದಿಂದ ರೂ.9.40 ಲಕ್ಷದ ತನಕ ಬೆಲೆ ಹೊಂದಿದ್ದು, ಎಲೆಕ್ಟ್ರಿಕ್ ಆವೃತ್ತಿಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.12 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 15 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.

More from DriveSpark

Article Published On: Friday, July 12, 2019, 16:02 [IST]
English summary
Honda Jazz Electric Spied Testing In India Yet Again. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+