ಹೋಂಡಾ ಕಾರುಗಳ ಮಾರಾಟದಲ್ಲಿ 'ಅಮೇಜ್' ಕಮಾಲ್..!

ಹೋಂಡಾ ಇಂಡಿಯಾ ಸಂಸ್ಥೆಯು ಭಾರತೀಯ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹಲವು ವಿನೂತನ ಕಾರು ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, ಏಪ್ರಿಲ್ ಅವಧಿಯ ಕಾರು ಮಾರಾಟದಲ್ಲಿ ಶೇ.23 ರಷ್ಟು ಮುನ್ನಡೆ ಸಾಧಿಸಿದೆ. ಹೋಂಡಾ ಕಾರುಗಳ ಮಾರಾಟದಲ್ಲಿ ಅಮೇಜ್ ಆವೃತ್ತಿಯನ್ನು ಮಹತ್ವದ ಪಾತ್ರ ವಹಿಸುತ್ತಿದ್ದು, ಬಿಡುಗಡೆಯಾದ ದಿನದಿಂದಲೂ ಇದುವರೆಗೂ ಒಂದೇ ರೀತಿಯಲ್ಲಿ ಬೇಡಿಕೆ ಕಾಯ್ದುಕೊಂಡು ಬಂದಿದೆ.

ಹೋಂಡಾ ಕಾರುಗಳ ಮಾರಾಟದಲ್ಲಿ 'ಅಮೇಜ್' ಕಮಾಲ್..!

ಹೋಂಡಾ ಸಂಸ್ಥೆಯು ಸದ್ಯ ಮಾರುಕಟ್ಟೆಯಲ್ಲಿ ಎಂಟ್ರಿ ಲೆವಲ್ ಬ್ರಿಯೋದಿಂದ ಹಿಡಿದು ಅಮೇಜ್, ಜಾಝ್, ಡಬ್ಲ್ಯುಆರ್‌ವಿ, ಬಿಆರ್‌ವಿ, ಸಿಟಿ, ಸಿವಿಕ್ ಮತ್ತು ಸಿಆರ್-ಸಿ ಕಾರುಗಳನ್ನು ಮಾರಾಟ ಮಾಡುತ್ತಿದ್ದು, ಇದರಲ್ಲಿ ಶೇ. 75ರಷ್ಟು ಮಾರಾಟ ಪ್ರಮಾಣವನ್ನು ಅಮೇಜ್ ಒಂದೇ ಮಾದರಿಯು ದಾಖಲಿಸುತ್ತಿದೆ. ಕಳೆದ ವರ್ಷ ಮೇ ಅವಧಿಯಲ್ಲಿ ಬಿಡುಗಡೆಯಾಗಿದ್ದ ನ್ಯೂ ಜನರೇಷನ್ ಅಮೇಜ್ ಆವೃತ್ತಿಯು ಗ್ರಾಹಕರನ್ನು ಆಕರ್ಷಿಸುವಲ್ಲಿ ಯಶಸ್ವಿಯಾಗಿದ್ದು, ಕಳೆದ 1 ವರ್ಷದ ಅವಧಿಯಲ್ಲಿ 93 ಸಾವಿರಕ್ಕೂ ಹೆಚ್ಚು ಅಮೇಜ್ ಕಾರುಗಳು ಮಾರಾಟಗೊಂಡಿವೆ.

ಹೋಂಡಾ ಕಾರುಗಳ ಮಾರಾಟದಲ್ಲಿ 'ಅಮೇಜ್' ಕಮಾಲ್..!

ಕಳೆದ ತಿಂಗಳು ಸಹ ಹೋಂಡಾ ಕಾರುಗಳ ಏಪ್ರಿಲ್ ಅವಧಿಯ ಮಾರಾಟ ಪಟ್ಟಿಯಲ್ಲೂ ಅಗ್ರಸ್ಥಾನದಲ್ಲಿರುವ ಅಮೇಜ್ ಕಂಪ್ಯಾಕ್ಟ್ ಸೆಡಾನ್ ಕಾರುಗಳು ಹೋಂಡಾ ಸಂಸ್ಥೆಗೆ ಭಾರೀ ಪ್ರಮಾಣದ ಆದಾಯ ತಂದುಕೊಟ್ಟಿದ್ದು, ಕಳೆದ ವಾರ ಬಿಡುಗಡೆ ಮಾಡಿರುವ ಅಮೇಜ್ ಮತ್ತೊಂದು ಹೊಸ ವೆರಿಯೆಂಟ್ ಮತ್ತಷ್ಟು ಬೇಡಿಕೆ ಗಿಟ್ಟಿಸಿಕೊಳ್ಳುವ ನೀರಿಕ್ಷೆಯಲ್ಲಿವೆ.

ಹೋಂಡಾ ಕಾರುಗಳ ಮಾರಾಟದಲ್ಲಿ 'ಅಮೇಜ್' ಕಮಾಲ್..!

ಈ ಹಿಂದೆ 2018ರ ಮೇ ನಲ್ಲಿ ವಿಎಕ್ಸ್ ಆವೃತ್ತಿಯನ್ನು ಮ್ಯಾನುವಲ್ ಗೇರ್‌ಬಾಕ್ಸ್ ಆವೃತ್ತಿಯಲ್ಲಿ ಮಾತ್ರವೇ ಬಿಡುಗಡೆ ಮಾಡಿದ್ದ ಹೋಂಡಾ ಸಂಸ್ಥೆಯು, ಈ ಬಾರಿ ಗ್ರಾಹಕರ ಆದ್ಯತೆಯೆಂತೆ ವಿಎಕ್ಸ್ ಆವೃತ್ತಿಯಲ್ಲಿ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ಒದಗಿಸಲಿದೆ. ಇದು ಆಟೋಮ್ಯಾಟಿಕ್ ವರ್ಷನ್ ಇಷ್ಟಪಡುವ ಗ್ರಾಹಕರ ಆಯ್ಕೆಗೆ ಸಹಕಾರಿಯಾಗಲಿದ್ದು, ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಹೊರತುಪಡಿಸಿ ತಾಂತ್ರಿಕವಾಗಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.

ಹೋಂಡಾ ಕಾರುಗಳ ಮಾರಾಟದಲ್ಲಿ 'ಅಮೇಜ್' ಕಮಾಲ್..!

ಆದರೂ ಅಮೇಜ್ ವಿಎಕ್ಸ್ ಆಟೋಮ್ಯಾಟಿಕ್ ವೆರಿಯೆಂಟ್ ಬೆಲೆಯಲ್ಲಿ ಇದೀಗ ಮತ್ತಷ್ಟು ಹೆಚ್ಚಳವಾಗಿದ್ದು, ವಿಎಕ್ಸ್ ಎಎಂಟಿ ಪೆಟ್ರೋಲ್ ಆವೃತ್ತಿಯ ಬೆಲೆಯನ್ನು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.8.56 ಲಕ್ಷಕ್ಕೆ ಮತ್ತು ವಿಎಕ್ಸ್ ಎಎಂಟಿ ಡೀಸೆಲ್ ಮಾದರಿಯ ಬೆಲೆಯನ್ನು ರೂ.9.56 ಲಕ್ಷಕ್ಕೆ ನಿಗದಿಪಡಿಸಲಾಗಿದ್ದು, ಮುಂಬರುವ ದಿನಗಳಲ್ಲಿ ಇದು ಹೋಂಡಾ ಸಂಸ್ಥೆಯ ಕಾರುಗಳ ಮಾರಾಟ ಪ್ರಮಾಣದಲ್ಲಿ ಮತ್ತಷ್ಟು ಏರಿಕೆಗೆ ಕಾರಣವಾಗಲಿದೆ.

ಹೋಂಡಾ ಕಾರುಗಳ ಮಾರಾಟದಲ್ಲಿ 'ಅಮೇಜ್' ಕಮಾಲ್..!

ಇನ್ನು ಅಮೇಜ್ ಕಾರುಗಳು 1.2-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್‌ನಲ್ಲಿ ಖರೀದಿಸಬಹುದಾಗಿದ್ದು, ಪೆಟ್ರೋಲ್ ಆವೃತ್ತಿಯು 89-ಬಿಎಚ್‌ಪಿ, 110-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದಲ್ಲಿ ಡಿಸೇಲ್ ಆವೃತ್ತಿಯು 99-ಬಿಎಚ್‌ಪಿ, 200-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲವು.

MOST READ: ಟಾಟಾ ನೆಕ್ಸಾನ್ ಕಾರು ಚಾಲಕನಿಗೆ ಹೆಲ್ಮೆಟ್ ಹಾಕಿಲ್ಲವೆಂದು ದಂಡ ಹಾಕಿದ ಟ್ರಾಫಿಕ್ ಪೊಲೀಸರು

ಹೋಂಡಾ ಕಾರುಗಳ ಮಾರಾಟದಲ್ಲಿ 'ಅಮೇಜ್' ಕಮಾಲ್..!

ಅಮೇಜ್ ಕಾರಿನ ಮೈಲೇಜ್

* ಮ್ಯಾನುವಲ್ ಗೇರ್‌ಬಾಕ್ಸ್ ಕಾರುಗಳು- ಪೆಟ್ರೋಲ್ ಆವೃತ್ತಿ- 19.5 ಕಿ.ಮೀ (ಪ್ರತಿ ಲೀಟರ್‌ಗೆ), ಡಿಸೇಲ್ ಆವೃತ್ತಿ- 27.8 ಕಿ.ಮಿ (ಪ್ರತಿ ಲೀಟರ್‌ಗೆ)

* ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಕಾರುಗಳು- ಪೆಟ್ರೋಲ್ ಆವೃತ್ತಿ- 19 ಕಿ.ಮೀ (ಪ್ರತಿ ಲೀಟರ್‌ಗೆ), ಡಿಸೇಲ್ ಆವೃತ್ತಿ- 23.8 ಕಿ.ಮಿ (ಪ್ರತಿ ಲೀಟರ್‌ಗೆ)

ಹೋಂಡಾ ಕಾರುಗಳ ಮಾರಾಟದಲ್ಲಿ 'ಅಮೇಜ್' ಕಮಾಲ್..!

ಖರೀದಿಗೆ ಲಭ್ಯವಿರುವ ಬಣ್ಣಗಳು

ಮಾರುಕಟ್ಟೆಯಲ್ಲಿ ಬೇಡಿಕೆಗೆ ಅನುಗುಣವಾಗಿ ಒಟ್ಟು 5 ಬಣ್ಣಗಳಲ್ಲಿ ಲಭ್ಯವಿರುವ ಹೊಸ ಅಮೇಜ್ ಕಾರುಗಳು ರೆಡಿಯೆಂಟ್ ರೆಡ್, ವೈಟ್ ಆರ್ಕಿಡ್ ಪರ್ಲ್, ಲೂನಾರ್ ಸಿಲ್ವರ್ ಮೆಟಾಲಿಕ್, ಗೊಲ್ಡನ್ ಬ್ರೌನ್ ಮೆಟಾಲಿಕ್ ಮತ್ತು ಮಾರ್ಡನ್ ಸ್ಟ್ರಿಲ್ ಮೆಟಾಲಿಕ್ ಬಣ್ಣಗಳಲ್ಲಿ ಖರೀದಿಸಬಹುದಾಗಿದೆ.

MOST READ: ಉಬರ್ ಟ್ಯಾಕ್ಸಿನಲ್ಲಿ ಇನ್ಮುಂದೆ ಮಹೀಂದ್ರಾ ಎಲೆಕ್ಟ್ರಿಕ್ ಕಾರುಗಳ ಸದ್ದು..!

ಹೋಂಡಾ ಕಾರುಗಳ ಮಾರಾಟದಲ್ಲಿ 'ಅಮೇಜ್' ಕಮಾಲ್..!

ಕಾರಿನ ವಿನ್ಯಾಸಗಳು

ಸ್ಪೋರ್ಟಿ ಲುಕ್ ಹೊಂದಿರುವ ಅಮೇಜ್ ಕಾರುಗಳು ಎರಡನೇ ತಲೆಮಾರಿನ ಶಾರ್ಪರ್ ಆಂಗಲ್ಸ್, ಬೋಲ್ಡರ್ ಡಿಸೈನ್ ಹಾಗೂ ಆಂಗ್ಯೂಲರ್ ಹೆಡ್‍‍ಲ್ಯಾಂಪ್‍‍ಗಳನ್ನು ಪಡೆದುಕೊಂಡಿದ್ದು, 15 ಇಂಚಿನ ಅಲಾಯ್ ವೀಲ್‍‍ಗಳು, ಹಿಂಭಾಗದ ವಿನ್ಯಾಸದಲ್ಲಿ ಹೊಸ ಪ್ರೇರಣೆಯ ಕ್ರೋಮ್ ಸ್ಟ್ರಿಪ್, ಸಿ ಟೈಪ್ ಟೈಲ್‍ ಲೈಟ್ಸ್ ಗಳನ್ನು ಪಡೆದಿದಿರುವುದು ಆಕರ್ಷಕವಾಗಿದೆ.

Article Published On: Thursday, May 2, 2019, 18:00 [IST]
English summary
Honda Sales Grow By 23 Per Cent In April 2019 — The Amaze Effect. Read in Kannada.
Read more on ಹೋಂಡಾ honda
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+