ಜೂನ್ ಅವಧಿಯ ಹೊಸ ಕಾರುಗಳ ಮಾರಾಟದಲ್ಲಿ ಹ್ಯುಂಡೈ ಸಂಸ್ಥೆಗೆ ಹಿನ್ನಡೆ

ಸದ್ಯ ಮಾರುಕಟ್ಟೆಯಲ್ಲಿ ಹೊಸ ಕಾರುಗಳ ಮಾರಾಟ ಪ್ರಕ್ರಿಯೆ ನಿಧಾನಗತಿ ಸಾಗುತ್ತಿದ್ದು, ಜೂನ್ ಅವಧಿಯಲ್ಲಿ ಹ್ಯುಂಡೈ ಸಂಸ್ಥೆ ಕೂಡಾ ತುಸು ಹಿನ್ನಡೆ ಅನುಭವಿಸಿದೆ. ಕಳೆದ ವರ್ಷದ ಜೂನ್ ಅವಧಿಗೂ ಮತ್ತು ಪ್ರಸಕ್ತ ವರ್ಷದ ಜೂನ್ ಅವಧಿಯ ಕಾರು ಮಾರಾಟದ ಪ್ರಮಾಣಕ್ಕೂ ಶೇ.7.3 ರಷ್ಟು ಇಳಿಕೆ ಕಂಡುಬಂದಿದ್ದು, ಇದರಲ್ಲಿ ಹೊಸದಾಗಿ ಬಿಡುಗಡೆಯಾಗಿರುವ ವೆನ್ಯೂ ಕಾರು ಮಾತ್ರವೇ ಅತಿ ಹೆಚ್ಚು ಮಾರಾಟದೊಂದಿಗೆ ಹ್ಯುಂಡೈ ಕಾರು ಮಾರಾಟದಲ್ಲಿ ಅಗ್ರಸ್ಥಾನಕ್ಕೇರಿದೆ.

ಜೂನ್ ಅವಧಿಯ ಹೊಸ ಕಾರುಗಳ ಮಾರಾಟದಲ್ಲಿ ಹ್ಯುಂಡೈ ಸಂಸ್ಥೆಗೆ ಹಿನ್ನಡೆ

ಮಾರುತಿ ಸುಜುಕಿ ನಂತರ 2ನೇ ಅತಿದೊಡ್ಡ ಕಾರು ಮಾರಾಟ ಸಂಸ್ಥೆಯಾಗಿರುವ ಹ್ಯುಂಡೈ ಸಂಸ್ಥೆಯು ಸದ್ಯ ಟಾಪ್ 10 ಕಾರು ಮಾರಾಟ ಪಟ್ಟಿಯಲ್ಲಿ ಒಟ್ಟು ನಾಲ್ಕು ಕಾರುಗಳನ್ನು ತನ್ನದಾಗಿಸಿಕೊಂಡಿದ್ದು, ಹೊಸದಾಗಿ ಬಿಡುಗಡೆಯಾಗಿರುವ ವೆನ್ಯೂ ಕಾರು ಮಾರುತಿ ಸುಜುಕಿ ಬ್ರೆಝಾ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಗೆ ಭರ್ಜರಿ ಪೈಪೋಟಿಯೊಂದಿಗೆ ಟಾಪ್ ಹತ್ತರಲ್ಲಿ ಆರನೇ ಸ್ಥಾನಕ್ಕೇರಿದೆ. ಇನ್ನುಳಿದಂತೆ ಗ್ರ್ಯಾಂಡ್ ಐ10, ಐ20 ಮತ್ತು ಕ್ರೆಟಾ ಕಾರುಗಳ ಸಹ ಮೊದಲ 10ರಲ್ಲಿ ಸ್ಥಾನ ಪಡೆದಿದ್ದು, ಜೂನ್ ಅವಧಿಯಲ್ಲಿ ಮಾತ್ರ ಹಿನ್ನಡೆ ಅನುಭವಿಸಿವೆ.

ಜೂನ್ ಅವಧಿಯ ಹೊಸ ಕಾರುಗಳ ಮಾರಾಟದಲ್ಲಿ ಹ್ಯುಂಡೈ ಸಂಸ್ಥೆಗೆ ಹಿನ್ನಡೆ

ಹ್ಯುಂಡೈ ಸಂಸ್ಥೆಯು ಜೂನ್ ಅವಧಿಯಲ್ಲಿ ಒಟ್ಟು 42,007 ಕಾರುಗಳನ್ನು ಮಾರಾಟ ಮಾಡಿದ್ದು, ಇದೇ ಅವಧಿಯಲ್ಲಿ ಕಳೆದ ವರ್ಷ 45,314 ಕಾರುಗಳನ್ನು ಮಾರಾಟ ಮಾಡಿತ್ತು. ಆದ್ರೆ 2019ರ ಆರಂಭದಿಂದಲೂ ಹೊಸ ಕಾರುಗಳ ಬೇಡಿಕೆಯಲ್ಲಿ ಕುಸಿಯುತ್ತಿರುವ ಪರಿಣಾಮ ಜೂನ್ ಅವಧಿಯ ಕಾರು ಮಾರಾಟದಲ್ಲಿ ಮಹೀಂದ್ರಾ ಹೊರತುಪಡಿಸಿ ಬಹುತೇಕ ಆಟೋ ಉತ್ಪಾದನಾ ಸಂಸ್ಥೆಗಳು ಹಿನ್ನಡೆ ಅನುಭವಿಸಿವೆ.

ಜೂನ್ ಅವಧಿಯ ಹೊಸ ಕಾರುಗಳ ಮಾರಾಟದಲ್ಲಿ ಹ್ಯುಂಡೈ ಸಂಸ್ಥೆಗೆ ಹಿನ್ನಡೆ

ಹೀಗಾಗಿ ಹ್ಯುಂಡೈ ಸಂಸ್ಥೆಯು ಸದ್ಯಕ್ಕೆ ಹೊಸ ಕಾರುಗಳ ಉತ್ಪಾದನೆಯಲ್ಲಿ ಕೆಲವು ಕಠಿಣ ನಿರ್ಧಾರಗಳನ್ನು ಕೈಗೊಂಡಿದ್ದು, ಬೇಡಿಕೆ ಇರುವ ವಾಹನಗಳ ಉತ್ಪಾದನೆ ಮಾತ್ರ ಹೆಚ್ಚಿನ ಆದ್ಯತೆ ನೀಡುತ್ತಿದೆ. ಜೊತೆಗೆ ಮುಂಬರುವ 2020ರ ಏಪ್ರಿಲ್ 1ರಿಂದ ಜಾರಿಗೆ ಬರಲಿರುವ ಬಿಎಸ್-6 ನಿಯಮದಂತೆ ಹೊಸ ಎಂಜಿನ್ ಉನ್ನತಿಕರಿಸುವ ಇರಾದೆಯಲ್ಲಿದ್ದು, ಸ್ಟಾಕ್ ಪ್ರಮಾಣದ ಮೇಲೆ ವಿಶೇಷ ರಿಯಾಯ್ತಿ ಘೋಷಣೆ ಮಾಡಿ ಬಿಎಸ್-6 ವಾಹನ ಉತ್ಪಾದನೆ ಚಾಲನೆ ನೀಡಲು ಸಿದ್ದತೆ ನಡೆಸಿದೆ.

ಜೂನ್ ಅವಧಿಯ ಹೊಸ ಕಾರುಗಳ ಮಾರಾಟದಲ್ಲಿ ಹ್ಯುಂಡೈ ಸಂಸ್ಥೆಗೆ ಹಿನ್ನಡೆ

ಇನ್ನು ಕಳೆದ ತಿಂಗಳ ಹಿಂದಷ್ಟೇ ಬಿಡುಗಡೆಯಾಗಿದ್ದ ಹ್ಯುಂಡೈ ಬಹುನೀರಿಕ್ಷಿತ ವೆನ್ಯೂ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಆಕರ್ಷಕ ಬೆಲೆ ಮತ್ತು ಫೀಚರ್ಸ್‌ಗಳಿಂದಾಗಿ ದಾಖಲೆ ಪ್ರಮಾಣದ ಮಾರಾಟಕ್ಕೆ ಕಾರಣವಾಗಿದೆ. ಒಂದೇ ದಿನದಲ್ಲಿ ಬರೋಬ್ಬರಿ ಸಾವಿರ ಕಾರು ಮಾರಾಟವಾದ ದಾಖಲೆ ವೆನ್ಯೂ ಹೆಸರಿನಲ್ಲಿದ್ದು, ಹೀಗಾಗಿ ಮುಂಬರುವ ದಿನಗಳಲ್ಲಿ ಮತ್ತಷ್ಟು ದಾಖಲೆ ಮಾರಾಟ ನೀರಿಕ್ಷೆಯಲ್ಲಿ ವೆನ್ಯೂ ಖರೀದಿಗೆ ಈಗಾಗಲೇ 35 ಸಾವಿರಕ್ಕೂ ಹೆಚ್ಚು ಕಾಯ್ದುಕುಳಿತಿದ್ದಾರೆ.

ವೆನ್ಯೂ ಸದ್ಯ ಹ್ಯುಂಡೈ ನಿರ್ಮಾಣದ ಇತರೆ ಕಾರುಗಳಿಂತಲೂ ಅತಿ ವಿನೂತನ ತಂತ್ರಜ್ಞಾನ ಸೌಲಭ್ಯಗಳನ್ನು ಹೊತ್ತು ಬಂದಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಒಟ್ಟು 4 ವೆರಿಯೆಂಟ್‌ಗಳಲ್ಲಿ ಲಭ್ಯವಿರುವ ಹೊಸ ವೆನ್ಯೂ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.6.50,000 ದಿಂದ ಟಾಪ್ ಎಂಡ್ ಆವೃತ್ತಿಯು ರೂ.11,10,500 ಬೆಲೆ ಪಡೆದುಕೊಂಡಿದೆ.

ಜೂನ್ ಅವಧಿಯ ಹೊಸ ಕಾರುಗಳ ಮಾರಾಟದಲ್ಲಿ ಹ್ಯುಂಡೈ ಸಂಸ್ಥೆಗೆ ಹಿನ್ನಡೆ

ವೆನ್ಯೂ ಕಾರಿನಲ್ಲಿ ಎರಡು ಪೆಟ್ರೋಲ್ ಎಂಜಿನ್ ಆಯ್ಕೆಗಳನ್ನು ಪಡೆದುಕೊಂಡಿದ್ದರೆ ಡಿಸೇಲ್ ಎಂಜಿನ್‌ನಲ್ಲಿ ಒಂದು ಆಯ್ಕೆಯನ್ನು ನೀಡಲಾಗಿದ್ದು, ಇ, ಎಸ್, ಎಸ್ಎಕ್ಸ್ ಮತ್ತು ಎಸ್ಎಕ್ಸ್(0) ವೆರಿಯೆಂಟ್‌ಗಳಲ್ಲಿ ಹೊಸ ವೆನ್ಯೂ ಖರೀದಿಗೆ ಲಭ್ಯವಿದೆ. ಇದರಲ್ಲಿ 1.2-ಲೀಟರ್ ಕಪ್ಪಾ ಪೆಟ್ರೋಲ್ ಎಂಜಿನ್ ಮತ್ತು 1.4-ಡೀಸೆಲ್ ಎಂಜಿನ್‌ಗಳು ಸಾಮಾನ್ಯ ಮಾದರಿಯ ಕಾರುಗಳಗಾಗಿ ಮಾರಾಟಗೊಳ್ಳಲಿದ್ದರೆ, ಕಡಿಮೆ ಎಂಜಿನ್ ಸಾಮಾರ್ಥ್ಯದ 1.0-ಲೀಟರ್ ಪೆಟ್ರೋಲ್ ಆವೃತ್ತಿಯು ಅತಿ ಹೆಚ್ಚು ಬಿಎಚ್‌ಪಿ ಉತ್ಪಾದನೆಯೊಂದಿಗ ವೆನ್ಯೂ ಟಾಪ್ ಎಂಡ್ ಮಾದರಿಯಾಗಿ ಹೊರಹೊಮ್ಮಿದೆ.

ಜೂನ್ ಅವಧಿಯ ಹೊಸ ಕಾರುಗಳ ಮಾರಾಟದಲ್ಲಿ ಹ್ಯುಂಡೈ ಸಂಸ್ಥೆಗೆ ಹಿನ್ನಡೆ

ಎಂಜಿನ್ ಪರ್ಫಾಮೆನ್ಸ್

ಐ20 ಕಾರಿನಿಂದ ಎರವಲು ಪಡೆಯಲಾದ 1.2-ಲೀಟರ್ ಪೆಟ್ರೋಲ್ ಎಂಜಿನ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 83-ಬಿಎಚ್‌ಪಿ, 115-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ, 1.4-ಲೀಟರ್ ಡೀಸೆಲ್ ಮಾದರಿಯು ಕ್ರೆಟಾದಿಂದ ಎರವಲು ಪಡೆಯಲಾದ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 89-ಬಿಎಚ್‌ಪಿ, 220-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.

ಜೂನ್ ಅವಧಿಯ ಹೊಸ ಕಾರುಗಳ ಮಾರಾಟದಲ್ಲಿ ಹ್ಯುಂಡೈ ಸಂಸ್ಥೆಗೆ ಹಿನ್ನಡೆ

ಹಾಗೆಯೇ ಟಾಪ್ ಎಂಡ್ ಮಾದರಿಯಾದ 1.0-ಲೀಟರ್ ತ್ರಿ ಸಿಲಿಂಡರ್ ಪೆಟ್ರೋಲ್ ಎಂಜಿನ್ ಮಾದರಿಯು 120-ಬಿಎಚ್‌ಪಿ ಮತ್ತು 170-ಎನ್ಎಂ ಟಾರ್ಕ್ ಉತ್ಪಾದನೆ ಮೂಲಕ ಪರ್ಫಾಮೆನ್ಸ್ ಪ್ರಿಯರಿಗಾಗಿಯೇ ವಿಶೇಷವಾಗಿ ಸಿದ್ದಗೊಂಡಿದ್ದು, ಇದರಲ್ಲಿ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಅಥವಾ 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಅನ್ನು ಆಯ್ಕೆ ಮಾಡಬಹುದಾಗಿದೆ.

ಜೂನ್ ಅವಧಿಯ ಹೊಸ ಕಾರುಗಳ ಮಾರಾಟದಲ್ಲಿ ಹ್ಯುಂಡೈ ಸಂಸ್ಥೆಗೆ ಹಿನ್ನಡೆ

ಬ್ಲೂ ಲಿಂಕ್ ಪ್ಯಾಕೇಜ್‌ನಲ್ಲಿ ಜಿಯೋ ಫೆನ್ಸ್, ಎರ್ಮಜೆನ್ಸಿ ಅಸಿಸ್ಟ್, ಕಾರ್ ಟ್ರಾಕಿಂಗ್ ಸೇರಿದಂತೆ ಹಲವಾರು ಸುರಕ್ಷಾ ಫೀಚರ್ಸ್‌ಗಳನ್ನು ನೀಡಲಾಗಿದ್ದು, ಸಿಗ್ನಿಚೆಕ್ ಕಾಸ್‌ಕ್ಲ್ಯಾಡಿಂಗ್ ಹೆಕ್ಸಾಗೊನಲ್ ಫ್ರಂಟ್ ಗ್ರಿಲ್, ಡ್ಯುಯಲ್ ಹೆಡ್‌ಲ್ಯಾಂಪ್ ಕ್ಲಸ್ಟರ್, ಸಣ್ಣ ಎಳೆಯಂತಿರುವ ಲೈಟ್ ಸ್ಟ್ರಿಪ್, ಹೆಡ್‌ಲ್ಯಾಂಪ್ ಕ್ಲಸ್ಟರ್ ಕೆಳಭಾಗದಲ್ಲಿ ಹೊಂದಿಕೊಂಡಂತಿರುವ ಎಲ್ಇಡಿ ಡಿಆರ್‌ಎಲ್ಎಸ್ ಮತ್ತು 16-ಇಂಚಿನ ಟೈರ್ ಸೌಲಭ್ಯವು ಎಸ್‌ಯುವಿ ಪ್ರಿಯರನ್ನು ಸೆಳೆಯಲಿವೆ.

More from DriveSpark

Article Published On: Tuesday, July 2, 2019, 11:14 [IST]
English summary
Hyundai records 7.3% decline in domestic car sales.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+