ಏಪ್ರಿಲ್ 17ರಂದು ಭಾರತದಲ್ಲಿ ಅನಾವರಣಗೊಳ್ಳಲಿದೆ ಹ್ಯುಂಡೈ ಹೊಸ ಕಾರು..!

ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾರಾಟ ವಿಭಾಗದಲ್ಲಿ ಗ್ರಾಹಕರ ಬೇಡಿಕೆ ಹೆಚ್ಚುತ್ತಿದ್ದು, ಮಾರುತಿ ಸುಜುಕಿ ಬ್ರೆಝಾ, ಮಹೀಂದ್ರಾ ಎಕ್ಸ್‌ಯುವಿ300, ನಿಸ್ಸಾನ್ ಕಿಕ್ಸ್ ಸೇರಿದಂತೆ ಹಲವು ಹೊಸ ಕಾರುಗಳು ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿವೆ. ಹೀಗಾಗಿ ಹ್ಯುಂಡೈ ಸಂಸ್ಥೆಯು ಸಹ ತನ್ನ ಬಹುನೀರಿಕ್ಷಿತ ಕಾರ್ಲಿನೋ ಕಾನ್ಸೆಪ್ಟ್ ಕಾರನ್ನು ಪರಿಚಯಿಸುತ್ತಿದ್ದು, ಮುಂದಿನ ತಿಂಗಳು 17ರಂದು ಹೊಸ ಕಾರು ಅನಾವರಣಗೊಳ್ಳಲು ಸಜ್ಜಾಗುತ್ತಿದೆ.

ಏಪ್ರಿಲ್ 17ರಂದು ಭಾರತದಲ್ಲಿ ಅನಾವರಣಗೊಳ್ಳಲಿದೆ ಹ್ಯುಂಡೈ ಹೊಸ ಕಾರು..!

ಕಾರ್ಲಿನೋ ಕಾನ್ಸೆಪ್ಟ್ ಕಾರು ಈಗಾಗಲೇ ಎಂಜಿನ್ ಕಾರ್ಯಕ್ಷಮತೆಯನ್ನು ಕುರಿತು ಸ್ಪಾಟ್ ಟೆಸ್ಟಿಂಗ್ ನಡೆಸುವಾಗ ಹಲವು ಬಾರಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದು, ಇದೀಗ ಬಿಡುಗಡೆ ಮಾಡಲಾಗಿರುವ ಟೀಸರ್‌ನಲ್ಲಿ ಹೊಸ ಕಾರು ಡ್ಯುಯಲ್ ಟೋನ್ ಬಣ್ಣ ಮತ್ತು ಸನ್‍ರೂಫ್ ಹೊಂದಿರುವುದು ಗ್ರಾಹಕರಲ್ಲಿ ಮತ್ತಷ್ಟು ಕುತೂಹಲ ಹುಟ್ಟುಹಾಕಿದೆ. ಈ ಮೂಲಕ ಮಹೀಂದ್ರಾ ಎಕ್ಸ್‌ಯುವಿ300 ಮತ್ತು ಮಾರುತಿ ಸುಜುಕಿ ಬ್ರೆಝಾ ಕಾರಿನ ಪ್ರಬಲ ಪೈಪೋಟಿ ನೀಡುವ ನಿರೀಕ್ಷೆಯಲ್ಲಿದೆ.

ಏಪ್ರಿಲ್ 17ರಂದು ಭಾರತದಲ್ಲಿ ಅನಾವರಣಗೊಳ್ಳಲಿದೆ ಹ್ಯುಂಡೈ ಹೊಸ ಕಾರು..!

ಹ್ಯುಂಡೈ ಸಂಸ್ಥೆಯು ಕ್ರೆಟಾ ಮತ್ತು ಕೊನಾ ಎಸ್‍‍ಯುವಿ ಕಾರುಗಳ ಭರ್ಜರಿ ಯಶಸ್ವಿ ನಂತರ ಕಾರ್ಲಿನೋ ಕಾರುಗಳ ಬಿಡುಗಡೆಗಾಗಿ ಯೋಜನೆ ರೂಪಿಸುತ್ತಿದ್ದು, ಹಲವು ವಿಶೇಷತೆಗಳಿಗಳಿಗೆ ಕಾರಣವಾಗಿರುವ ಹೊಸ ಕಾರು ಮಾರುಕಟ್ಟೆಗೆ ಲಗ್ಗೆಯಿಡುತ್ತಿರುವುದು ಮಧ್ಯಮ ವರ್ಗದ ಕಾರು ಪ್ರಿಯರಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ಏಪ್ರಿಲ್ 17ರಂದು ಭಾರತದಲ್ಲಿ ಅನಾವರಣಗೊಳ್ಳಲಿದೆ ಹ್ಯುಂಡೈ ಹೊಸ ಕಾರು..!

ಹ್ಯುಂಡೈ ಹೊಸ ಕಂಪ್ಯಾಕ್ಟ್ ಎಸ್‍‍ಯುವಿ ಅರ್ಬನ್ ಕಮ್ಯೂಟರ್ ವಿಭಾಗಕ್ಕಾಗಿಯೇ ವಿಶೇಷವಾಗಿ ವಿನ್ಯಾಸ ಮಾಡಲಾಗಿದ್ದು, ಕ್ರಾಸ್‍ ಓವರ್ ವಿನ್ಯಾಸದೊಂದಿಗೆ ಕ್ರೆಟಾ ಹಾಗೂ ಕೊನಾ ಕಾರುಗಳ ಮಧ್ಯದ ಕಾರು ಮಾದರಿಯಾಗಿ ಮಾರಾಟಗೊಳ್ಳಲಿದೆ.

ಏಪ್ರಿಲ್ 17ರಂದು ಭಾರತದಲ್ಲಿ ಅನಾವರಣಗೊಳ್ಳಲಿದೆ ಹ್ಯುಂಡೈ ಹೊಸ ಕಾರು..!

ಹೊಸ ಕಾರ್ಲಿನೋ ಕಾನ್ಸೆಪ್ಟ್ ಕಾರು ಉತ್ಪಾದನೆಗಾಗಿಯೇ ಪ್ರತ್ಯೇಕವಾದ ಪ್ಲ್ಯಾಟ್‍‍ಫಾರ್ಮ್ ಅನ್ನೇ ಸಿದ್ದಪಡಿಸಲಾಗಿದ್ದು, ಈ ಮೂಲಕ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುವ ವಿಶ್ವಾಸದಲ್ಲಿರುವ ಈ ಕಾರ್ಲಿನೋ ಕಾನ್ಸೆಪ್ಟ್ ಕಾರುಗಳು ಮಾರುತಿ ಸುಜುಕಿ ಬ್ರೆಝಾ, ಮಹೀಂದ್ರಾ ಎಕ್ಸ್‌ಯುವಿ300, ಟಾಟಾ ನೆಕ್ಸಾನ್ ಮತ್ತು ಫೋರ್ಡ್ ಇಕೊಸ್ಪೋರ್ಟ್ ಕಾರಿಗಳಿಗೆ ನೇರ ಪ್ರತಿಸ್ಪರ್ಧಿಸಲಾಗಲಿದೆ.

ಏಪ್ರಿಲ್ 17ರಂದು ಭಾರತದಲ್ಲಿ ಅನಾವರಣಗೊಳ್ಳಲಿದೆ ಹ್ಯುಂಡೈ ಹೊಸ ಕಾರು..!

ಪ್ರಸ್ತುತ ಮಾಹಿತಿಗಳ ಪ್ರಕಾರ, ಈ ಹೊಸ ಕಾರು ಇದೇ ತಿಂಗಳು ಅಥವಾ ಏಪ್ರಿಲ್ ಆರಂಭದಲ್ಲಿ ಯುಎಸ್ಎ ಮಾರುಕಟ್ಟೆಯಲ್ಲಿ ಮೊದಲು ಬಿಡುಗಡೆಗೊಳ್ಳಲಿದ್ದು, ತದನಂತರವಷ್ಟೇ ಭಾರತ ಸೇರಿದಂತೆ ಪ್ರಮುಖ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲೂ ಇದು ಬಿಡುಗಡೆಗೊಳ್ಳಲಿದೆಯೆಂತೆ.

ಏಪ್ರಿಲ್ 17ರಂದು ಭಾರತದಲ್ಲಿ ಅನಾವರಣಗೊಳ್ಳಲಿದೆ ಹ್ಯುಂಡೈ ಹೊಸ ಕಾರು..!

ಕಂಪ್ಯಾಕ್ಟ್ ಎಸ್‍‍ಯುವಿ ವಿನ್ಯಾಸ ಆಧಾರಿತ ಕಾರ್ಲಿನೊ ಪರಿಕಲ್ಪನೆಯನ್ನು ಮೊದಲು ಹ್ಯುಂಡೈ ಸಂಸ್ಥೆಯು 2016ರ ದೆಹಲಿ ಆಟೋ ಎಕ್ಸ್ ಪೋ ಮೇಳದಲ್ಲಿ ಪ್ರದರ್ಶನ ಮಾಡಿತ್ತು. ಆದ್ರೆ ಕಾರಣಾಂತರಗಳಿಂದ ಹೊಸ ಕಾರಿನ ಉತ್ಪಾದನಾ ಪ್ರಕ್ರಿಯೆಯನ್ನು ಮೂಂದುಡಿಕೆ ಮಾಡುತ್ತಾ ಬಂದಿದ್ದ ಹ್ಯುಂಡೈ ಇದೀಗ ಕಾರ್ಲಿನೋ ಬಿಡುಗಡೆ ಮಾಡುವ ಇರಾದೆಯಲ್ಲಿದೆ.

MOST READ: ಇನ್ಮುಂದೆ ಹೀಗೆಲ್ಲಾ ಮಾಡಿದ್ರೆ ನಿಮ್ಮ ವಾಹನ ನೋಂದಣಿ ರದ್ದಾಗುತ್ತೆ..!

ಏಪ್ರಿಲ್ 17ರಂದು ಭಾರತದಲ್ಲಿ ಅನಾವರಣಗೊಳ್ಳಲಿದೆ ಹ್ಯುಂಡೈ ಹೊಸ ಕಾರು..!

ಇನ್ನು ಕಾರ್ಲಿನೋ ಕಾನ್ಸೆಪ್ಟ್ ಕಾರುಗಳು ಮೂರು ಎಂಜಿನ್ ಆಯ್ಕೆ ಹೊಂದಿರಲಿದ್ದು, ಪೆಟ್ರೋಲ್ ಎಂಜಿನ್‌ನಲ್ಲಿ 1.0 ಲೀಟರ್ ತ್ರಿ ಸಿಲಿಂಡರ್ ಎಂಜಿನ್ ಮತ್ತು 1.4 ಲೀಟರ್ ಎಂಜಿನ್ ಹೊಂದಿರಲಿದ್ದು, ಹಾಗೆಯೇ 1.4-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಸಹ ಹೊಂದಿರಲಿದೆ.

1.4-ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ಸದ್ಯ ಮಾರುಕಟ್ಟೆಯಲ್ಲಿರುವ ವೆರ್ನಾ ಸೆಡಾನ್ ಮಾದರಿಯಿಂದ ಎರವಲು ಪಡೆಯಲಾಗಿದ್ದು, ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್ಇಡಿ ಟೈಲ್ ಲೈಟ್, 7 ಸ್ಪೀಡ್ ಡ್ಯುಯಲ್ ಕ್ಲಚ್ ಗೇರ್‌ಬಾಕ್ಸ್, ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಎಬಿಎಸ್, 4 ಏರ್‌ಬ್ಯಾಗ್ ಮತ್ತು ಲಾರ್ಜ್ ಟಚ್‌ಸ್ಕ್ರೀನ್ ಡಿಸ್‌ಪ್ಲೇಯೊಂದಿಗೆ ಹಲವು ಮಾದರಿಯ ಪ್ರೀಮಿಯಂ ಸೌಲಭ್ಯಗಳನ್ನು ಪಡೆದುಕೊಂಡಿರಲಿದೆ.

MOST READ: ರಾಂಗ್ ಸೈಡ್‌ನಲ್ಲಿ ಬಂದ ಕಾರು ಚಾಲಕನಿಗೆ ಬೆವರಿಳಿಸಿದ ಬೈಕ್ ರೈಡರ್..!

ಏಪ್ರಿಲ್ 17ರಂದು ಭಾರತದಲ್ಲಿ ಅನಾವರಣಗೊಳ್ಳಲಿದೆ ಹ್ಯುಂಡೈ ಹೊಸ ಕಾರು..!

ಬಿಡುಗಡೆಯ ಅವಧಿ ಮತ್ತು ಕಾರಿನ ಬೆಲೆಗಳು(ಅಂದಾಜು)

ಮುಂದಿನ ತಿಂಗಳು 17ರಂದು ಅನಾವರಣಗೊಳ್ಳಲಿರುವ ಹೊಸ ಕಾರು ಮೇ ಅಥವಾ ಜೂನ್ ಆರಂಭದಲ್ಲಿ ಬಿಡುಗಡೆಯಾಗಲಿದ್ದು, ಕಾರಿನ ಬೆಲೆಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.8 ಲಕ್ಷದಿಂದ ಟಾಪ್ ಎಂಡ್ ಮಾದರಿಗೆ ರೂ.12 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.

Article Published On: Tuesday, March 26, 2019, 17:10 [IST]
English summary
Hyundai India will unveil its new compact SUV, codenamed the Hyundai QXi, in India on April 17. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+