ಮಾರಾಟದಲ್ಲಿ ಹೊಸ ಮೈಲಿಗಲ್ಲು ತಲುಪಿದ ಹ್ಯುಂಡೈ ಕ್ರೆಟಾ

ದಕ್ಷಿಣ ಕೊರಿಯಾ ಮೂಲದ ವಾಹನ ತಯಾರಕ ಸಂಸ್ಥೆಯಾದ ಹ್ಯುಂಡೈ ತಮ್ಮ ಎಸ್‍ಯುವಿ ಕಾರಾದ ಕ್ರೆಟಾ ಕಾರಿನ ಮಾರಾಟದಲ್ಲಿ ಹೊಸ ಮೈಲಿಗಲ್ಲನ್ನು ತಲುಪಿದೆ. ಕೆಲವು ವರ್ಷಗಳ ಹಿಂದೆ ಬಿಡುಗಡೆಗೊಂಡ ಹ್ಯುಂಡೈ ಕ್ರೆಟಾ ಕಾರು ಇಲ್ಲಿಯವರೆಗು ಜಾಗತಿಕವಾಗಿ ಒಟ್ಟಾರೆಯಾಗಿ 5 ಲಕ್ಷಕ್ಕು ಅಧಿಕ ಕಾರುಗಳು ಮಾರಾಟಗೊಂಡಿದೆ. ಇದರಲ್ಲಿ 3,70,000 ಕಾರುಗಳು ಭಾರತದಲ್ಲಿ ಮಾರಾಟವಾಗಿದ್ದರೆ ಇನ್ನು 1,40,000 ಕಾರುಗಳನ್ನು ರಫ್ತು ಮಾಡಲಾಗಿದೆ.

ಮಾರಾಟದಲ್ಲಿ ಹೊಸ ಮೈಲಿಗಲ್ಲು ತಲುಪಿದ ಹ್ಯುಂಡೈ ಕ್ರೆಟಾ

ಇದಕ್ಕೆ ಅನುಗುಣವಾಗಿ ಕಳೆದ ವರ್ಷ ಹ್ಯುಂಡೈ ಇಂಡಿಯಾ ಸಂಸ್ಥೆಯು ತನ್ನ ಬಹುನೀರಿಕ್ಷಿತ ಕ್ರೇಟಾ ಫೇಸ್‌ಲಿಫ್ಟ್ ಎಸ್‌ಯುವಿ ಕಾರುಗಳನ್ನು ಬಿಡುಗಡೆಗೊಳಿಸಿದ್ದು, ಹೊಸ ಕಾರಿನ ಆರಂಭಿಕ ಬೆಲೆಯನ್ನು ದೆಹಲಿ ಎಕ್ಸ್‌ಶೋರಂ ಪ್ರಕಾರ ರೂ. 9.43 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಮಾದರಿಯ ಬೆಲೆಯನ್ನು ರೂ. 15.03 ಲಕ್ಷಕ್ಕೆ ನಿಗದಿಗೊಳಿಸಿದೆ.

ಮಾರಾಟದಲ್ಲಿ ಹೊಸ ಮೈಲಿಗಲ್ಲು ತಲುಪಿದ ಹ್ಯುಂಡೈ ಕ್ರೆಟಾ

ಹ್ಯುಂಡೈ ಸಂಸ್ಥೆಯು ಪ್ರಸ್ತುತ ಮಾರುಕಟ್ಟೆಯಲ್ಲಿ ಬೇಡಿಕೆಗೆ ಅನುಗುಣವಾಗಿ ಕ್ರೇಟಾ ಫೇಸ್‌ಲಿಫ್ಟ್ ಕಾರುಗಳನ್ನು ಬಿಡುಗಡೆಗೊಳಿಸಿದ್ದು, ಕಾರಿನ ಎಂಜಿನ್ ವಿಭಾಗವನ್ನು ಹೊರತುಪಡಿಸಿ ಹೊರ ಮತ್ತು ಒಳ ವಿನ್ಯಾಸದಲ್ಲಿ ಭಾರೀ ಬದಲಾವಣೆ ಪಡೆದುಕೊಂಡಿರುವುದು ಎಸ್‌ಯುವಿ ಪ್ರಿಯರ ಆಕರ್ಷಣೆಗೆ ಕಾರಣವಾಗಿದೆ.

ಮಾರಾಟದಲ್ಲಿ ಹೊಸ ಮೈಲಿಗಲ್ಲು ತಲುಪಿದ ಹ್ಯುಂಡೈ ಕ್ರೆಟಾ

ಹ್ಯುಂಡೈ ಕ್ರೇಟಾ ಫೇಸ್‌‌ಲಿಫ್ಟ್ ಕಾರುಗಳು ಪೆಟ್ರೋಲ್ ಎಂಜಿನ್ ಮತ್ತು ಡೀಸೆಲ್ ಎಂಜಿನ್ ಮಾದರಿಯಲ್ಲಿ ಖರೀದಿಗೆ ಲಭ್ಯವಿದ್ದು, ಇವುಗಳಲ್ಲಿ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಪೆಟ್ರೋಲ್ ಆವೃತ್ತಿಯಲ್ಲಿ 6 ವೆರಿಯೆಂಟ್‌ಗಳು ಮತ್ತು ಡೀಸೆಲ್ ಆವೃತ್ತಿಯಲ್ಲಿ 7 ವೆರಿಯೆಂಟ್‌ಗಳನ್ನು ಪರಿಚಯಿಸಲಾಗಿದೆ.

ಮಾರಾಟದಲ್ಲಿ ಹೊಸ ಮೈಲಿಗಲ್ಲು ತಲುಪಿದ ಹ್ಯುಂಡೈ ಕ್ರೆಟಾ

ಎಂಜಿನ್ ಸಾಮರ್ಥ್ಯ

ಈ ಹಿಂದಿನಂತೆಯೇ 1.4-ಲೀಟರ್ ಡೀಸೆಲ್, 1.6-ಲೀಟರ್ ಪೆಟ್ರೋಲ್ ಮತ್ತು 1.6-ಡೀಸೆಲ್ ಎಂಜಿನ್‌ಗಳನ್ನು ಹೊಂದಿದ್ದು, ಇದರಲ್ಲಿ 1.4-ಲೀಟರ್ ಪೆಟ್ರೋಲ್ ಎಂಜಿನ್‌ಗಳು 88.7-ಬಿಎಚ್‌ಪಿ, 1.6-ಲೀಟರ್ ಪೆಟ್ರೋಲ್ ಎಂಜಿನ್‌ಗಳು 121-ಬಿಎಚ್‌ಪಿ ಮತ್ತು 1.6-ಲೀಟರ್ 126-ಬಿಎಚ್‌ಪಿ ಉತ್ಪಾದನಾ ಗುಣ ಪಡೆದಿವೆ.

ಮಾರಾಟದಲ್ಲಿ ಹೊಸ ಮೈಲಿಗಲ್ಲು ತಲುಪಿದ ಹ್ಯುಂಡೈ ಕ್ರೆಟಾ

ಇದರಲ್ಲಿ 1.4-ಲೀಟರ್ ಪೆಟ್ರೋಲ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಪಡೆದಿದ್ದು, ಇನ್ನುಳಿದ 1.6-ಲೀಟರ್ ಪೆಟ್ರೋಲ್ ಹಾಗೂ ಡೀಸೆಲ್ ಎಂಜಿನ್ ಮಾದರಿಗಳಲ್ಲಿ 6-ಸ್ಪೀಡ್ ಆಟೋ ಮ್ಯಾಟಿಕ್ ಒದಗಿಸಲಾಗಿದೆ.

ಮಾರಾಟದಲ್ಲಿ ಹೊಸ ಮೈಲಿಗಲ್ಲು ತಲುಪಿದ ಹ್ಯುಂಡೈ ಕ್ರೆಟಾ

ಹೊಸ ಕಾರುಗಳ ಪರ್ಫಾಮೆನ್ಸ್ ಹೆಚ್ಚಿಸಲು ಕ್ಲಾಸ್ ಲೀಡಿಂಗ್ ಎನ್‌ವಿಹೆಚ್ ತಂತ್ರಜ್ಞಾನ ಬಳಕೆ ಮಾಡಿದ್ದು, ಇವು ಆರಾಮದಾಯಕ ಕಾರು ಚಾಲನೆಗೆ ಸಹಕಾರಿಯಾಗಿದೆ. ಆದ್ರೆ ಟಾಪ್ ಎಂಡ್ ಮಾದರಿಯಾದ ಎಸ್ಎಕ್ಸ್(ಒ) ಮಾದರಿಯಲ್ಲಿ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಬದಲಾಗಿ ಮ್ಯಾನುವಲ್ ಗೇರ್‌ಬಾಕ್ಸ್ ಹೊಂದಿರುವುದು ಗ್ರಾಹಕರ ಆಯ್ಕೆಗೆ ಕೊಂಚ ಹಿನ್ನಡೆಯಾಗಬಹುದು.

ಮಾರಾಟದಲ್ಲಿ ಹೊಸ ಮೈಲಿಗಲ್ಲು ತಲುಪಿದ ಹ್ಯುಂಡೈ ಕ್ರೆಟಾ

ಒಂದು ವೇಳೆ ಟಾಪ್ ಎಂಡ್ ಮಾದರಿಯಲ್ಲಿ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಪ್ರೇರಿತ ಆವೃತ್ತಿಯನ್ನು ಆಯ್ಕೆ ಮಾಡುವುದಾದ್ರೆ ಅದಕ್ಕೂ ಒಂದು ಅವಕಾಶವಿದ್ದು, ಇದಕ್ಕಾಗಿ ಎಲೆಕ್ಟ್ರಾನಿಕ್ ಸನ್‌ರೂಫ್ ಮತ್ತು ವೈರ್‌ಲೇಸ್ ಚಾರ್ಜಿಂಗ್ ಸೌಲಭ್ಯಗಳು ಕಳೆದುಕೊಳ್ಳಬೇಕಾಗುತ್ತೆ. ಇಲ್ಲವೇ ಈ ಸೌಲಭ್ಯಗಳು ಬೇಕೆ ಬೇಕು ಎಂದಲ್ಲಿ ಮ್ಯಾನುವಲ್ ಆವೃತ್ತಿಯನ್ನು ಆಯ್ಕೆ ಮಾಡುವುದು ಅನಿವಾರ್ಯ

ಮಾರಾಟದಲ್ಲಿ ಹೊಸ ಮೈಲಿಗಲ್ಲು ತಲುಪಿದ ಹ್ಯುಂಡೈ ಕ್ರೆಟಾ

ಇನ್ನು ಕಾರಿನ ಡಿಸೈನ್ ಕುರಿತು ಹೇಳುವುದಾದರೇ, ಹೊಸ ಕಾರುಗಳಲ್ಲಿ ವಿನ್ಯಾಸ ಮಾಡಲಾಗಿರುವ ಕಾಸ್ ಕ್ಲ್ಯಾಡಿಂಗ್ ಫ್ರಂಟ್ ಗ್ರಿಲ್, ನ್ಯೂ ಫ್ರಂಟ್ ಬಂಪರ್, ಹೊಸ ವಿನ್ಯಾಸ ಫಾಗ್ ಲ್ಯಾಂಪ್, ಸಿಲ್ವರ್ ಸ್ಕೀಡ್ ಪ್ಲೇಟ್, ಡ್ಯುಯಲ್ ಟೋನ್ ಇಂಟಿರಿಯರ್ ಸೌಲಭ್ಯ ಪಡೆದಿದೆ.

ಮಾರಾಟದಲ್ಲಿ ಹೊಸ ಮೈಲಿಗಲ್ಲು ತಲುಪಿದ ಹ್ಯುಂಡೈ ಕ್ರೆಟಾ

ಹೊಸ ಕಾರುಗಳಲ್ಲಿನ ರಿಯಲ್ ಬಂಪರ್ ಕೂಡಾ ಆಕರ್ಷಣೆಯಾಗಿದ್ದು, ಸುಧಾರಿತ ತಂತ್ರಜ್ಞಾನ ಪ್ರೇರಿತ 7-ಇಂಚಿನ್ ಇನ್ಪೋಟೈನ್‌ಮೆಂಟ್, ಬೆಸ್ ವೆರಿಯೆಂಟ್‌ಗಳಿಂದಲೇ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಡ್ರೈವರ್ ಸೈಡ್ ಸೀಟುಗಳು, ಆರ್ಮ್ ರೆಸ್ಟ್ ವಿನ್ಯಾಸವು ಗಮನ ಸೆಳೆಯುತ್ತೆ.

ಮಾರಾಟದಲ್ಲಿ ಹೊಸ ಮೈಲಿಗಲ್ಲು ತಲುಪಿದ ಹ್ಯುಂಡೈ ಕ್ರೆಟಾ

ಖರೀದಿಗೆ ಲಭ್ಯವಿರುವ ಬಣ್ಣಗಳು

ಒಟ್ಟು 7 ಬಣ್ಣಗಳಲ್ಲಿ ಖರೀದಿಗೆ ಲಭ್ಯವಿರುವ ಕ್ರೇಟಾ ಫೇಸ್‌ಲಿಫ್ಟ್ ಕಾರುಗಳನ್ನು ವೈಟ್, ಆರೇಂಜ್, ಬ್ಲ್ಯಾಕ್, ಸಿಲ್ವರ್ ಬ್ಲ್ಯೂ, ರೆಡ್, ವೈಟ್ ಆ್ಯಂಡ್ ಬ್ಲ್ಯಾಕ್(ಡ್ಯುಯಲ್ ಟೋನ್) ಮತ್ತು ಆರೇಂಜ್ ಆ್ಯಂಡ್ ಬ್ಲ್ಯಾಕ್ ಬಣ್ಣಗಳಲ್ಲಿ ಖರೀದಿ ಮಾಡಬಹುದು.

ಮಾರಾಟದಲ್ಲಿ ಹೊಸ ಮೈಲಿಗಲ್ಲು ತಲುಪಿದ ಹ್ಯುಂಡೈ ಕ್ರೆಟಾ

ಡ್ರೈವ್‌ಸ್ಪಾರ್ಕ್ ಅಭಿಪ್ರಾಯ

ಕ್ರೇಟಾ ಹೊಸ ಕಾರುಗಳು ಎಂಜಿನ್ ವಿಭಾಗದಲ್ಲಿ ಯಾವುದೇ ಪ್ರಮುಖ ಬದಲಾವಣೆ ಪಡೆಯದಿದ್ದರೂ ಕಾರಿನ ವಿನ್ಯಾಸದಲ್ಲಿ ಭಾರೀ ಬದಲಾವಣೆ ಹೊಂದಿದ್ದು, ಪ್ರಮುಖವಾಗಿ ಹೊಸ ಕಾರುಗಳಲ್ಲಿ ಒದಗಿಸಲಾಗಿರುವ ಪ್ರಿಮಿಯಂ ಸೌಲಭ್ಯಗಳ ಜೊತೆ ಎಲೆಕ್ಟ್ರಿಕ್ ಸನ್‌ರೂಫ್ ವ್ಯವಸ್ಥೆಯು ಪ್ರಮುಖ ಎಸ್‌ಯುವಿ ಮಾದರಿಗಳಾದ ಮಾರುತಿ ಎಸ್ ಕ್ರಾಸ್, ಟಾಟಾ ಹ್ಯಾರಿಯರ್, ನಿಸ್ಸಾನ್ ಕಿಕ್ಸ್, ರೆನಾಲ್ಟ್ ಡಸ್ಟರ್ ಮತ್ತು ಹೋಂಡಾ ಬಿಆರ್-ವಿ ಕಾರುಗಳಿಗೆ ತೀವ್ರ ಪೈಪೋಟಿ ನೀಡಲಿದೆ.

More from DriveSpark

Article Published On: Thursday, February 28, 2019, 14:31 [IST]
English summary
Hyundai Creta Crosses 5 Lakh Sales Milestone. Read In Kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+