ಮಹತ್ವದ ಬದಲಾವಣೆಯೊಂದಿಗೆ ಹ್ಯುಂಡೈ ಎಲಾಂಟ್ರಾ ಫೇಸ್‌ಲಿಫ್ಟ್ ಬಿಡುಗಡೆ

ಹ್ಯುಂಡೈ ಇಂಡಿಯಾ ಸಂಸ್ಥೆಯು ತನ್ನ ಜನಪ್ರಿಯ ಸೆಡಾನ್ ಆವೃತ್ತಿಯಾದ ಎಲಾಂಟ್ರಾ ಫೇಸ್‌ಲಿಫ್ಟ್ ಮಾದರಿಯನ್ನು ಬಿಡುಗಡೆ ಮಾಡಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 15.89 ಲಕ್ಷ ಬೆಲೆ ಪಡೆದುಕೊಂಡಿದೆ.

ಮಹತ್ವದ ಬದಲಾವಣೆಯೊಂದಿಗೆ ಹ್ಯುಂಡೈ ಎಲಾಂಟ್ರಾ ಫೇಸ್‌ಲಿಫ್ಟ್ ಬಿಡುಗಡೆ

ಎಲಾಂಟ್ರಾ ಫೇಸ್‌ಲಿಫ್ಟ್ ಆವೃತ್ತಿಯಲ್ಲಿ ಕೆಲವು ಮಹತ್ವದ ಬದಲಾವಣೆ ತಂದಿರುವ ಹ್ಯುಂಡೈ ಸಂಸ್ಥೆಯು 2020ರ ಏಪ್ರಿಲ್ 1ರಿಂದ ಜಾರಿಗೆ ಬರಲಿರುವ ಬಿಎಸ್-6 ನಿಯಮದಂತೆ ಎಂಜಿನ್ ಉನ್ನತೀಕರಿಸಿದ್ದು, ಹೊಸ ಕಾರನ್ನು ಕೇವಲ ಪೆಟ್ರೋಲ್ ಎಂಜಿನ್‌ನಲ್ಲಿ ಮಾತ್ರವೇ ಬಿಡುಗಡೆ ಮಾಡಲಾಗಿದೆ. ಗ್ರಾಹಕರ ಬೇಡಿಕೆಯ ಆಧಾರದ ಮೇಲೆ ಡೀಸೆಲ್ ಆವೃತ್ತಿಯನ್ನು ಕೈಬಿಡಲಾಗಿದ್ದು, ಎಲಾಂಟ್ರಾ ಕಾರುಗಳಲ್ಲಿ ಶೇ.96 ರಷ್ಟು ಗ್ರಾಹಕರು ಪೆಟ್ರೋಲ್ ಆವೃತ್ತಿಯ ಮೇಲೆಯೇ ಹೆಚ್ಚು ಆದ್ಯತೆ ನೀಡುತ್ತಿರುವ ಹಿನ್ನಲೆಯಲ್ಲಿ ಡೀಸೆಲ್ ಎಂಜಿನ್ ಸ್ಥಗಿತಗೊಳಿಸಲಾಗಿದೆ.

ಮಹತ್ವದ ಬದಲಾವಣೆಯೊಂದಿಗೆ ಹ್ಯುಂಡೈ ಎಲಾಂಟ್ರಾ ಫೇಸ್‌ಲಿಫ್ಟ್ ಬಿಡುಗಡೆ

ಹೀಗಾಗಿ ಪೆಟ್ರೋಲ್ ಎಂಜಿನ್‌ನಲ್ಲಿ ಮಾತ್ರವೇ ಖರೀದಿ ಲಭ್ಯವಿರುವ ಎಲಾಂಟ್ರಾ ಫೇಸ್‌ಲಿಫ್ಟ್ ಕಾರು ಎಸ್, ಎಸ್ಎಕ್ಸ್, ಎಸ್ಎಕ್ಸ್ ಎಟಿ ಮತ್ತು ಎಸ್ಎಕ್ಸ್(ಒ) ಎಟಿ ಎಂಬ ನಾಲ್ಕು ವೆರಿಯೆಂಟ್‌ಗಳನ್ನು ಹೊಂದಿದ್ದು, ದೆಹಲಿ ಎಕ್ಸ್‌ಶೋರೂಂ ಆರಂಭಿಕವಾಗಿ ರೂ.15.89 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಮಾದರಿಯು ರೂ.20.39 ಲಕ್ಷ ಬೆಲೆ ಹೊಂದಿದೆ.

ಮಹತ್ವದ ಬದಲಾವಣೆಯೊಂದಿಗೆ ಹ್ಯುಂಡೈ ಎಲಾಂಟ್ರಾ ಫೇಸ್‌ಲಿಫ್ಟ್ ಬಿಡುಗಡೆ

ಎಲಾಂಟ್ರಾ ಫೇಸ್‌ಲಿಫ್ಟ್ ವೆರಿಯೆಂಟ್‌ಗಳು ಮತ್ತು ಬೆಲೆ(ಎಕ್ಸ್‌ಶೋರೂಂ ಪ್ರಕಾರ)

ವೆರಿಯೆಂಟ್‌ಗಳು ಬೆಲೆ
ಎಸ್ ರೂ. 15.89 ಲಕ್ಷ

ಎಸ್ಎಕ್ಸ್

ರೂ. 18.49 ಲಕ್ಷ
ಎಸ್ಎಕ್ಸ್ ಎಟಿ ರೂ. 19.49 ಲಕ್ಷ
SX(O) AT ಎಸ್ಎಕ್ಸ್(ಒ) ಎಟಿ ರೂ. 20.39 ಲಕ್ಷ
ಮಹತ್ವದ ಬದಲಾವಣೆಯೊಂದಿಗೆ ಹ್ಯುಂಡೈ ಎಲಾಂಟ್ರಾ ಫೇಸ್‌ಲಿಫ್ಟ್ ಬಿಡುಗಡೆ

ಫೇಸ್‌ಲಿಫ್ಟ್ ಆವೃತ್ತಿ ಮೂಲಕ ಹಲವು ಎಲಾಂಟ್ರಾ ಕಾರಿನಲ್ಲಿ ಹಲವು ಹೊಸ ಬದಲಾವಣೆಗಳನ್ನು ಪರಿಚಯಿಸಲಾಗಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿನ ಎಲಾಂಟ್ರಾ ಕಾರಿಗಿಂತಲೂ ಹೊಸ ಕಾರಿನ ವಿನ್ಯಾಸ ಮತ್ತು ಎಂಜಿನ್ ವಿಭಾಗದಲ್ಲಿ ಮಹತ್ವದ ಬದಲಾವಣೆ ಪರಿಚಯಿಸಲಾಗಿದೆ. ಮರುವಿನ್ಯಾಸಗೊಳಿಸಲಾದ ಫ್ರಂಟ್ ಕಾಸ್‌ಕ್ಲಾಡಿಂಗ್ ಗ್ರಿಲ್, ನವೀಕೃತ ಹೆಡ್‌ಲ್ಯಾಂಪ್ ಕ್ಲಸ್ಟರ್, ಹೊಸ ಎಲ್ಇಡಿ ಡಿಆರ್‌ಎಲ್ಎಸ್, ತ್ರಿಕೋನಾಕಾರದ ಫಾಗ್ ಲ್ಯಾಂಪ್ ನೀಡಲಾಗಿದೆ.

ಮಹತ್ವದ ಬದಲಾವಣೆಯೊಂದಿಗೆ ಹ್ಯುಂಡೈ ಎಲಾಂಟ್ರಾ ಫೇಸ್‌ಲಿಫ್ಟ್ ಬಿಡುಗಡೆ

ಹಾಗೆಯೇ ಹೊಸ ಕಾರಿನ ಒಳಭಾಗದ ವಿನ್ಯಾಸ ಮತ್ತು ತಾಂತ್ರಿಕ ಸೌಲಭ್ಯಗಳಲ್ಲೂ ಕೆಲವು ಬದಲಾವಣೆಗಳನ್ನು ಪರಿಚಯಿಸಿರುವ ಹ್ಯುಂಡೈ ಸಂಸ್ಥೆಯು ಹೊಸದಾದ 0.8-ಇಂಚಿನ ಟಚ್‌ಸ್ಕೀನ್ ಇನ್ಪೋಟೈನ್‌ಮೆಂಟ್, ಆ್ಯಪಲ್ ಕಾರ್ ಪ್ಲೇ ಮತ್ತು ಆಂಡ್ರಾಯಿಡ್ ಆಟೋ, ಇನ್ಫಿನಿಟಿ ಸೌಂಡ್ ಸಿಸ್ಟಂ, ಟೈರ್ ಪ್ರೆಸರ್ ಮಾನಿಟರ್ ಸಿಸ್ಟಂ, ವೈರ್‌ಲೆಸ್ ಚಾರ್ಜರ್ ನೀಡಲಾಗಿದೆ.

ಮಹತ್ವದ ಬದಲಾವಣೆಯೊಂದಿಗೆ ಹ್ಯುಂಡೈ ಎಲಾಂಟ್ರಾ ಫೇಸ್‌ಲಿಫ್ಟ್ ಬಿಡುಗಡೆ

ಇದರೊಂದಿಗೆ ಪ್ರೀಮಿಯಂ ಫೀಚರ್ಸ್‌ಗಳಾದ ಡ್ಯುಯಲ್ ಜೋನ್ ಕ್ಲೈಮೆಟ್ ಕಂಟ್ರೊಲ್ ಸಿಸ್ಟಂ, ವೆಂಟಿಲೆಟೆಡ್ ಫ್ರಂಟ್ ಸೀಟ್, 10 ಹಂತದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಡ್ರೈವರ್ ಸೀಟ್, ಎಲೆಕ್ಟ್ರಿಕ್ ಸನ್‌ರೂಫ್, ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ಹ್ಯಾಂಡ್ ಫ್ರೀ ಟೈಲ್‌ಗೆಟ್, ಕ್ರೂಸ್ ಕಂಟ್ರೊಲ್ ಸೇರಿದಂತೆ ಹಲವು ಹೊಸ ಸೌಲಭ್ಯಗಳನ್ನು ನೀಡಲಾಗಿದೆ.

ಮಹತ್ವದ ಬದಲಾವಣೆಯೊಂದಿಗೆ ಹ್ಯುಂಡೈ ಎಲಾಂಟ್ರಾ ಫೇಸ್‌ಲಿಫ್ಟ್ ಬಿಡುಗಡೆ

ಸುರಕ್ಷತೆಗೂ ಹೊಸ ಕಾರಿನಲ್ಲಿ ಹೆಚ್ಚಿನ ಒತ್ತು ನೀಡಲಾಗಿದ್ದು, 33 ಸೆಫ್ಟಿ ಫೀಚರ್ಸ್ ಒಳಗೊಂಡ ಬ್ಲೂ ಲಿಂಕ್, ಸ್ಟ್ಯಾಂಡರ್ಡ್ ಸೆಫ್ಟಿ ಫೀಚರ್ಸ್‌ಗಳಾದ 6 ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ರಿಯರ್ ಪಾರ್ಕಿಂಗ್ ಕ್ಯಾಮೆರಾ, ಹೈ ಸ್ಟೀಡ್ ವಾರ್ನಿಂಗ್, ಸೀಟ್ ಬೆಲ್ಟ್ ರಿಮೆಂಡರ್, ಹಿಲ್ ಹೋಲ್ಡ್ ಅಸಿಸ್ಟ್ ಮತ್ತು ವೆಹಿಕಲ್ ಸ್ಟ್ಯಾಬಿಲಿಟಿ ಕಂಟ್ರೊಲ್ ಸೌಲಭ್ಯಗಳನ್ನು ನೀಡಲಾಗಿದೆ.

ಮಹತ್ವದ ಬದಲಾವಣೆಯೊಂದಿಗೆ ಹ್ಯುಂಡೈ ಎಲಾಂಟ್ರಾ ಫೇಸ್‌ಲಿಫ್ಟ್ ಬಿಡುಗಡೆ

ಎಂಜಿನ್ ಸಾಮರ್ಥ್ಯ

ಹೊಸ ಎಲಾಂಟ್ರಾ ಸೆಡಾನ್ ಆವೃತ್ತಿಯು ಈ ಬಾರಿ ಪೆಟ್ರೋಲ್ ಎಂಜಿನ್‌ನಲ್ಲಿ ಮಾತ್ರವೇ ಖರೀದಿಗೆ ಲಭ್ಯವಿದ್ದು, ಈ ಹಿಂದೆ ಇದ್ದ 2.0-ಲೀಟರ್ ಪೆಟ್ರೋಲ್ ಎಂಜಿನ್ ಅನ್ನೇ ಇದೀಗ ಬಿಎಸ್-6 ನಿಯಮಕ್ಕೆ ಅನುಗುಣವಾಗಿ ಉನ್ನತೀಕರಿಸಲಾಗಿದೆ. ಇದರಿಂದ ಹೊಸ ಎಂಜಿನ್ ಪರ್ಫಾಮೆನ್ಸ್ ಮತ್ತು ಮಾಲಿನ್ಯ ಹೊರಸೂಸುವಿಕೆ ಪ್ರಮಾಣದಲ್ಲಿ ಸಾಕಷ್ಟು ಸುಧಾರಣೆ ಕಂಡುಬಂದಿದೆ.

ಮಹತ್ವದ ಬದಲಾವಣೆಯೊಂದಿಗೆ ಹ್ಯುಂಡೈ ಎಲಾಂಟ್ರಾ ಫೇಸ್‌ಲಿಫ್ಟ್ ಬಿಡುಗಡೆ

ಹೊಸ ಕಾರು 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮತ್ತು 6-ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಸೌಲಭ್ಯದೊಂದಿಗೆ 152-ಬಿಎಚ್‌ಪಿ ಮತ್ತು 192-ಎನ್ಎಂ ಟಾರ್ಕ್ ಉತ್ಪಾದಿಸುವ ಮೂಲಕ ಪ್ರತಿಸ್ಪರ್ಧಿ ಕಾರು ಮಾದರಿಗಳಾದ ಹೋಂಡಾ ಸಿವಿಕ್, ಸ್ಕೋಡಾ ಒಕ್ಟಿವಿಯಾ ಮತ್ತು ಟೊಯೊಟಾ ಕರೊಲ್ಲಾ ಕಾರುಗಳಿಗೆ ಮತ್ತಷ್ಟು ಪೈಪೋಟಿ ನೀಡಲಿದೆ.

Most Read Articles

Kannada
English summary
New Hyundai Elantra Launched in India. Read in Kannada.
Story first published: Thursday, October 3, 2019, 14:55 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X