ತಮ್ಮ ಅಧಿಕೃತ ವೆಬ್‍ಸೈಟ್‍ನಿಂದ ಇಯಾನ್ ಕಾರನ್ನು ತೆಗೆದು ಹಾಕಿದ ಹ್ಯುಂಡೈ...!

ದಕ್ಷಿಣ ಕೊರಿಯಾ ಮೂಲದ ವಾಹನ ತಯಾರಕ ಸಂಸ್ಥೆಯಾದ ಹ್ಯುಂಡೈ ದೇಶಿಯ ಮಾರುಕಟ್ಟೆಯಲ್ಲಿ ಹಲವಾರು ವಾಹನಗಳನ್ನು ಬಿಡುಗಡೆ ಮಾಡಿ ತಮ್ಮ ಪ್ಯಾಸೆಂಜರ್ ಕಾರುಗಳಿಂದ ಜನಪ್ರೀಯತೆಯನ್ನು ಪಡೆದುಕೊಂಡಿದೆ. ಹ್ಯುಂಡೈ ಸಂಸ್ಥಯು ಈ ಹಿಂದೆಯೆ ದೇಶಿಯ ಮಾರುಕಟ್ಟೆಯಲ್ಲಿ ತಮ್ಮ ಇಯಾನ್ ಹ್ಯಾಚ್‍ಬ್ಯಾಕ್ ಕಾರಿನ ಮಾರಾಟವನ್ನು ಸ್ಥಗಿತಗೊಳಿಸುವುದರ ಬಗ್ಗೆ ಮಾಹಿತಿಯನ್ನು ನೀಡಿತ್ತು.

ತಮ್ಮ ಅಧಿಕೃತ ವೆಬ್‍ಸೈಟ್‍ನಿಂದ ಇಯಾನ್ ಕಾರನ್ನು ತೆಗೆದು ಹಾಕಿದ ಹ್ಯುಂಡೈ...!

ಇದೀಗ ಹ್ಯುಂಡೈ ಸಂಸ್ಥೆಯು ತಮ್ಮ ಇಯಾನ್ ಕಾರುನ್ನು ತಮ್ಮ ಅಧಿಕೃತ ವೆಬ್‍ಸೈಟ್‍ನಿಂದ ತೆಗೆದುಹಾಕಲಾಗಿದ್ದು, ಮಾರುಕಟ್ಟೆಯಲ್ಲಿ ಮಾರಾಟವನ್ನು ಸ್ಥಗಿತಗೊಳಿಸಲಾಗಿದೆ. ಹ್ಯುಂಡೈ ಸಂಸ್ಥೆಯಲ್ಲಿನ ಕಾರುಗಳಲ್ಲಿ ಎಂಟ್ರಿ ಲೆವಲ್ ಕಾರಾಗಿದ್ದ ಇಯಾನ್ ಕಾರಿನ ಸ್ಥಾನವನ್ನು ಇದೀಗ ಹೊಸದಾಗಿ ಬಿಡುಗಡೆಗೊಂಡ ಸ್ಯಾಂಟ್ರೋ ಕಾರು ಪಡೆದುಕೊಂಡಿದೆ.

ತಮ್ಮ ಅಧಿಕೃತ ವೆಬ್‍ಸೈಟ್‍ನಿಂದ ಇಯಾನ್ ಕಾರನ್ನು ತೆಗೆದು ಹಾಕಿದ ಹ್ಯುಂಡೈ...!

ಹ್ಯುಂಡೈ ಇಯಾನ್ ಕಾರುಗಳು ಮೊದಲ ಬಾರಿಗೆ 2011ರಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಪರಿಚಯಿಸಲಾಗಿದ್ದು, ಸಮರು 8 ವರ್ಷಗಳ ನಂತರ ಕಳಪೆ ಮಾರಾಟದ ಸಲುವಾಗಿ ಈ ಕಾರಿನ ಮಾರಾಟವನ್ನು ಸ್ಥಗಿತಗೊಳಿಸಲಾಗಿದೆ. ಬಿಡುಗಡೆಗೊಂಡ ಹೊಸತರಲ್ಲಿ ಹ್ಯುಂಡೈ ಇಯಾನ್ ಕಾರುಗಳು 814ಸಿಸಿ ಎಂಜಿನ್ ಸಹಾಯದಿಂದ 55ಬಿಹೆಚ್‍ಪಿ ಮತ್ತು 75ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಶಕ್ತಿಯನ್ನು ಪಡೆದುಕೊಂಡಿತ್ತು.

ತಮ್ಮ ಅಧಿಕೃತ ವೆಬ್‍ಸೈಟ್‍ನಿಂದ ಇಯಾನ್ ಕಾರನ್ನು ತೆಗೆದು ಹಾಕಿದ ಹ್ಯುಂಡೈ...!

ಆನಂತರ ಹ್ಯುಂಡೈ ಸಂಸ್ಥಯು ಇಯಾನ್ ಕಾರುಗಳಿಗೆ 1.0 ಲೀಟರ್ 3 ಸಿಲೆಂಡರ್ ಕಪ್ಪಾ ಎಂಜಿನ್ ಅನ್ನು 2014ರಲ್ಲಿ ನೀಡಲಾಗಿತ್ತು. ಈ ಎಂಜಿನ್ 65 ಬಿಹೆಚ್‍ಪಿ ಮತ್ತು 95ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಶಕ್ತಿಯನ್ನು ಪಡೆದುಕೊಂಡಿದ್ದು, ಎಂಜಿನ್ ಅನ್ನು 5 ಸ್ಪೀಡ್ ಮ್ಯಾನುವಲ್ ಗೇರ್‍‍ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ.

ತಮ್ಮ ಅಧಿಕೃತ ವೆಬ್‍ಸೈಟ್‍ನಿಂದ ಇಯಾನ್ ಕಾರನ್ನು ತೆಗೆದು ಹಾಕಿದ ಹ್ಯುಂಡೈ...!

ಸಧ್ಯಕ್ಕೆ ಸುಮಾರು 20 ವರ್ಷಗಳ ಬಳಿಕ ಮತ್ತೆ ಹ್ಯಾಚ್‍ಬ್ಯಾಕ್ ಕಾರು ಮಾರಾಟದಲ್ಲಿ ದೂಳೆಬ್ಬಿಸಲು ಬಂದ ಹ್ಯುಂಡೈ ಸ್ಯಾಂಟ್ರೋ ಮಾರುಕಟ್ಟೆಯಲ್ಲಿ ಈಗಾಗಲೆ ತನ್ನ ಕೈಚಳಕ ನಿರೂಪಿಸಿದೆ. ಅಕ್ಟೋಬರ್ 23, 2018ರಂದು ಬಿಡುಗಡೆಗೊಂಡಿದ್ದೂ, ಮಾರುಕಟ್ಟೆಯಲ್ಲಿ ಹೆಚ್ಚಾಗಿಯೆ ಸದ್ದು ಮಾಡುತ್ತಿದೆ. ಹ್ಯುಂಡೈ ಸ್ಯಾಂಟ್ರೋ ಕಾರಿನ ಬಗ್ಗೆ ತಿಳಿಯಲು ಮುಂದಕ್ಕೆ ಓದಿರಿ.

ತಮ್ಮ ಅಧಿಕೃತ ವೆಬ್‍ಸೈಟ್‍ನಿಂದ ಇಯಾನ್ ಕಾರನ್ನು ತೆಗೆದು ಹಾಕಿದ ಹ್ಯುಂಡೈ...!

ಹೊಸ ಸ್ಯಾಂಟ್ರೋ ಕಾರು ಪೆಟ್ರೋಲ್ ಎಂಜಿನ್ ಮತ್ತು ಸಿಎನ್‌ಜಿ ಇಂಧನ ಆಯ್ಕೆಯನ್ನು ಹೊಂದಿದ್ದು, ಟಾಲ್-ಬಾಯ್ ಡಿಸೈನ್ ಹೊಂದಿರುವ ಹೊಸ ಕಾರು ವ್ಯಯಕ್ತಿಕ ಬಳಕೆಯ ಕಾರುಗಳ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಳ್ಳುತ್ತಿದೆ. ಬಿಡುಗಡೆಯಾಗಿರುವ ಹೊಸ ಸ್ಯಾಂಟ್ರೋ ಕಾರು ಐದು ಪ್ರಮುಖ ವೆರಿಯೆಂಟ್‌ಗಳಲ್ಲಿ ಬಿಡುಗಡೆಯಾಗಿದ್ದು, ಸೌಲಭ್ಯಗಳಿಗೆ ಅನುಗುಣವಾಗಿ ಡಿ-ಲೈಟ್, ಎರಾ, ಮ್ಯಾಗ್ನಾ, ಸ್ಪೋರ್ಟ್ಜ್ ಮತ್ತು ಆಸ್ಟ್ರಾ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಾಗಿದೆ.

ತಮ್ಮ ಅಧಿಕೃತ ವೆಬ್‍ಸೈಟ್‍ನಿಂದ ಇಯಾನ್ ಕಾರನ್ನು ತೆಗೆದು ಹಾಕಿದ ಹ್ಯುಂಡೈ...!

ಎಂಜಿನ್ ಸಾಮರ್ಥ್ಯ

ನೆಕ್ಸ್ಟ್ ಜನರೇಷನ್ ಹ್ಯುಂಡೈ ಸ್ಯಾಂಟ್ರೊ ಕಾರು 1.1-ಲೀಟರ್ (1,100 ಸಿಸಿ) ಫೋರ್ ಸಿಲಿಂಡರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಎಎಂಟಿ ಆಯ್ಕೆಯೊಂದಿಗೆ 68-ಬಿಎಚ್‌ಪಿ ಮತ್ತು 99-ಎನ್ಎಂ ಟಾರ್ಕ್ ಉತ್ಪಾದಿಸಬಲ್ಲವು.

ತಮ್ಮ ಅಧಿಕೃತ ವೆಬ್‍ಸೈಟ್‍ನಿಂದ ಇಯಾನ್ ಕಾರನ್ನು ತೆಗೆದು ಹಾಕಿದ ಹ್ಯುಂಡೈ...!

ಇದಲ್ಲದೇ ಹೊಸ ಸ್ಯಾಂಟ್ರೋ ಕಾರಿನ ಮ್ಯಾಗ್ನಾ ಮತ್ತು ಸ್ಪೋರ್ಟ್ಜ್ ವೆರಿಯೆಂಟ್‌ಗಳಲ್ಲಿ ಸಿಎನ್‌ಜಿ ಇಂಧನ ಆಯ್ಕೆ ಲಭ್ಯವಿರಲಿದ್ದು, ಇದು ಅತ್ಯುತ್ತಮ ಮೈಲೇಜ್ ನೀಡಬಲ್ಲ ಕಾರು ಮಾದರಿಯಾಗಿ ಮತ್ತಷ್ಟು ಜನಪ್ರಿಯತೆ ಹೊಂದಲಿದೆ.

ತಮ್ಮ ಅಧಿಕೃತ ವೆಬ್‍ಸೈಟ್‍ನಿಂದ ಇಯಾನ್ ಕಾರನ್ನು ತೆಗೆದು ಹಾಕಿದ ಹ್ಯುಂಡೈ...!

ಮೈಲೇಜ್

ಹ್ಯುಂಡೈ ಸಂಸ್ಥೆಯ ಅಧಿಕೃತ ಮಾಹಿತಿ ಪ್ರಕಾರ ಪೆಟ್ರೋಲ್ ಎಂಜಿನ್ ಸ್ಯಾಂಟ್ರೋ ಕಾರುಗಳು ಪ್ರತಿ ಲೀಟರ್‌ಗೆ 20.3 ಕಿ.ಮಿ ಮೈಲೇಜ್ ನೀಡಿದ್ದಲ್ಲಿ ಸಿಎನ್‌ಜಿ ಇಂಧನ ಆಯ್ಕೆ ಸ್ಯಾಂಟ್ರೋ ಕಾರು ಪ್ರತಿ ಕೆಜಿ ಸಿಎನ್‌ಜಿಗೆ 30.5 ಕಿ.ಮಿ ಗರಿಷ್ಠ ಮೈಲೇಜ್ ನೀಡಲಿವೆ.

ತಮ್ಮ ಅಧಿಕೃತ ವೆಬ್‍ಸೈಟ್‍ನಿಂದ ಇಯಾನ್ ಕಾರನ್ನು ತೆಗೆದು ಹಾಕಿದ ಹ್ಯುಂಡೈ...!

ಲಭ್ಯವಿರುವ ಬಣ್ಣಗಳು

ಗ್ರೀನ್, ಫೈರ್ಲಿ ರೆಡ್, ಇಂಪಿರಿಯರ್ ಬ್ಲಿಜ್, ಮರಿಯನ್ ಬ್ಲ್ಯೂ, ಸ್ಟಾರ್ ಡಸ್ಟ್, ಟೈಫೂನ್ ಸಿಲ್ವರ್ ಮತ್ತು ಪೊಲಾರ್ ವೈಟ್ ಬಣ್ಣಗಳಲ್ಲಿ ಹೊಸ ಸ್ಯಾಂಟ್ರೋ ಲಭ್ಯವಾಗಲಿದೆ.

ತಮ್ಮ ಅಧಿಕೃತ ವೆಬ್‍ಸೈಟ್‍ನಿಂದ ಇಯಾನ್ ಕಾರನ್ನು ತೆಗೆದು ಹಾಕಿದ ಹ್ಯುಂಡೈ...!

ಜೊತೆಗೆ ಪ್ರಯಾಣಿಕ ಸುರಕ್ಷತೆಗಾಗಿ ಎಬಿಎಸ್, ಇಬಿಡಿ, ಡ್ರೈವರ್ ಸೈಡ್ ಏರ್‌ಬ್ಯಾಗ್ ಸೌಲಭ್ಯಗಳನ್ನು ಹೊಂದಿದ್ದು, ಟಾಪ್ ಎಂಡ್ ಮಾದರಿಯಲ್ಲಿ ಹೆಚ್ಚುವರಿಯಾಗಿ ಪ್ಯಾಸೆಂಜರ್ ಸೈಡ್ ಏರ್‌ಬ್ಯಾಗ್, ರಿವರ್ಸ್ ಪಾರ್ಕಿಂಗ್ ಸೆನ್ಸಾರ್, ಕ್ಯಾಮೆರಾ, ಸ್ಪೀಡ್ ಸೆಸ್ಸಿಂಗ್ ಆಟೋ ಡೋರ್ ಲಾಕ್ ಮತ್ತು ಸೆಂಟ್ರಲ್ ಲಾಕಿಂಗ್ ಸೌಲಭ್ಯಗಳನ್ನು ನೀಡಿರುವುದು ಗ್ರಾಹಕರ ಆಯ್ಕೆಯನ್ನು ಹೆಚ್ಚಿಸಿದೆ.

ತಮ್ಮ ಅಧಿಕೃತ ವೆಬ್‍ಸೈಟ್‍ನಿಂದ ಇಯಾನ್ ಕಾರನ್ನು ತೆಗೆದು ಹಾಕಿದ ಹ್ಯುಂಡೈ...!

ಈ ಮೂಲಕ ಎಂಟ್ರಿ ಲೆವಲ್ ಕಾರು ಮಾರಾಟದಲ್ಲಿ ಮಾರುತಿ ಸುಜುಕಿ ಸಂಸ್ಥೆಗೆ ತ್ರೀವ ಪೈಪೋಟಿ ನೀಡಲಿರುವ ಹ್ಯುಂಡೈ ಸಂಸ್ಥೆಯು ಮಾರುತಿ ಆಲ್ಟೊ 800, ಸೆಲೆರಿಯೊ ಮತ್ತು ಟಾಟಾ ಮೋಟಾರ್ಸ್ ನಿರ್ಮಾಣದ ಟಿಯಾಗೊ, ರೆನಾಲ್ಟ್ ಕ್ವಿಡ್ ಕಾರುಗಳ ಮಾರಾಟಕ್ಕೆ ಟಕ್ಕರ್ ನೀಡತ್ತಿದೆ.

Source: Motorbeam

Most Read Articles

Kannada
English summary
Hyundai Eon Discontinued In India. Read In Kannada
Story first published: Wednesday, March 27, 2019, 15:59 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X