Just In
Don't Miss!
- Lifestyle
'ಮಂಗಳವಾರದ ರಾಶಿಫಲ: ಮೇಷ-ಮೀನದವರೆಗಿನ ದಿನ ಭವಿಷ್ಯ '
- News
ಕೋವಿಡ್ ಲಸಿಕೆ ಪಡೆದುಕೊಂಡಿದ್ದ ಆರೋಗ್ಯ ಇಲಾಖೆ ಉದ್ಯೋಗಿ ಹೃದಯಾಘಾತದಿಂದ ಸಾವು
- Sports
ಐಎಸ್ಎಲ್: ಅಂಕ ಹಂಚಿಕೊಂಡ ಈಸ್ಟ್ ಬೆಂಗಾಲ್ ಮತ್ತು ಚೆನ್ನೈಯಿನ್
- Finance
ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆ, ಮೆಣಸು, ಕಾಫೀ ಜ. 18ರ ದರ
- Movies
ಶಿವಲಿಂಗಕ್ಕೆ ಅಪಮಾನ: ನಟಿಯ ವಿರುದ್ಧ ಮಾಜಿ ರಾಜ್ಯಪಾಲ ದೂರು
- Education
IIMB Recruitment 2021: ಪ್ರಾಜೆಕ್ಟ್ ಎಕ್ಸಿಕ್ಯುಟಿವ್- ಡೆವಲಪ್ಮೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಹ್ಯುಂಡೈ ಬಹುನೀರಿಕ್ಷಿತ ಗ್ರಾಂಡ್ ಐ10 ನಿಯೋಸ್ ಬಿಡುಗಡೆ
ಹ್ಯುಂಡೈ ಇಂಡಿಯಾ ಸಂಸ್ಥೆಯು ತನ್ನ ಜನಪ್ರಿಯ ಹ್ಯಾಚ್ಬ್ಯಾಕ್ ಮಾದರಿಯಾದ ಗ್ರಾಂಡ್ ಐ10 ಕಾರಿನ ನವೀಕೃತ ಆವೃತ್ತಿಯಾದ ಗ್ರಾಂಡ್ ಐ10 ನಿಯೋಸ್ ಬಿಡುಗಡೆ ಮಾಡಿದ್ದು, ಹೊಸ ಕಾರು ದೆಹಲಿ ಎಕ್ಸ್ಶೋರೂಂ ಪ್ರಕಾರ ರೂ.4.99 ಲಕ್ಷ ಆರಂಭಿಕ ಬೆಲೆಯೊಂದಿಗೆ ಖರೀದಿಗೆ ಲಭ್ಯವಾಗಿದೆ.

ಹೊಸ ತಲೆಮಾರಿನ ವೈಶಿಷ್ಟ್ಯತೆಗಳೊಂದಿಗೆ ರಸ್ತೆಗಿಳಿದಿರುವ ಗ್ರಾಂಡ್ ಐ10 ನಿಯೋಸ್ ಕಾರು ಹಳೆಯ ಆವೃತ್ತಿಗಿಂತಲೂ ಹೆಚ್ಚಿನ ಮಟ್ಟದ ಉದ್ದಳತೆಯನ್ನು ಹೊಂದಿದ್ದು, ನಿಯೋಸ್ ಪದಕ್ಕೆ ತಕ್ಕಂತೆ ಹೊಸ ಕಾರು ಹಲವಾರು ಬದಲಾವಣೆಗಳೊಂದಿಗೆ ಈ ಬಾರಿ ಮತ್ತಷ್ಟು ಗ್ರಾಹಕರನ್ನು ಸೆಳೆಯುವ ವಿಶ್ವಾಸದಲ್ಲಿದೆ. ಸದ್ಯ ಮಾರುಕಟ್ಟೆಯಲ್ಲಿ ಪ್ರಸ್ತುತ ತಲೆಮಾರಿನ ಗ್ರಾಂಡ್ ಐ10 ಮತ್ತು ಎಲೈಟ್ ಐ20 ನಡುವಿನ ಸ್ಥಾನ ಗಿಟ್ಟಿಸಿಕೊಂಡಿರುವ ಗ್ರಾಂಡ್ ಐ10 ನಿಯೋಸ್ ಆವೃತ್ತಿಯು ಇತರೆ ಹ್ಯಾಚ್ಬ್ಯಾಕ್ ಆವೃತ್ತಿಗಳಿಂತಲೂ ಅತಿಹೆಚ್ಚು ಪ್ರೀಮಿಯಂ ಸೌಲಭ್ಯಗಳನ್ನು ಪಡೆದಿದೆ.

ಗ್ರಾಂಡ್ ಐ10 ನಿಯೋಸ್ ಕಾರು ಎರಾ, ಮ್ಯಾಗ್ನಾ, ಸ್ಪೋರ್ಟ್ಜ್ ಮತ್ತು ಆಸ್ಟಾ ವೆರಿಯೆಂಟ್ಗಳಲ್ಲಿ ಖರೀದಿಗೆ ಲಭ್ಯವಿದ್ದು, ಆರಂಭಿಕ ಮಾದರಿಯಾದ ಎರಾ ಪೆಟ್ರೋಲ್ ಮ್ಯಾನುವಲ್ ಆವೃತ್ತಿಯು ದೆಹಲಿ ಎಕ್ಸ್ಶೋರೂಂ ಪ್ರಕಾರ ರೂ. 4.99 ಲಕ್ಷ ಬೆಲೆ ಹೊಂದಿದ್ದರೆ ಹೈ ಎಂಡ್ ಮಾದರಿಯಾದ ಆಸ್ಟಾ ಮ್ಯಾನುವಲ್ ಆವೃತ್ತಿಯು ಎಕ್ಸ್ಶೋರೂಂ ಪ್ರಕಾರ ರೂ.7.99 ಲಕ್ಷ ಬೆಲೆ ಪಡೆದಿದೆ.
ಗ್ರಾಂಡ್ ಐ10 ನಿಯೋಸ್ ಕಾರಿನ ದರ ಪಟ್ಟಿ(ಎಕ್ಸ್ಶೋರೂಂ ಪ್ರಕಾರ)
ಗ್ರಾಂಡ್ ಐ10 ನಿಯೋಸ್ | ಮಾದರಿಗಳು | ಎರಾ | ಮ್ಯಾಗ್ನಾ | ಸ್ಪೋರ್ಟ್ಜ್ | ಆಸ್ಟಾ |
1.2-ಲೀಟರ್ ಕಪ್ಪಾ ಪೆಟ್ರೋಲ್ | ಮ್ಯಾನುವಲ್ | 4.99 ಲಕ್ಷ | 5.84 ಲಕ್ಷ | 6.38 ಲಕ್ಷ | 7.13 ಲಕ್ಷ |
ಎಎಂಟಿ | - | 6.37 ಲಕ್ಷ | 6.98 ಲಕ್ಷ | - | |
ಡ್ಯುಯಲ್ ಟೋನ್ | - | - | 6.68 ಲಕ್ಷ | - | |
1.2-ಲೀಟರ್ ಯು2 ಸಿಆರ್ಡಿಐ ಡೀಸೆಲ್ | ಮ್ಯಾನುವಲ್ | - | 6.70 ಲಕ್ಷ | - | 7.99 ಲಕ್ಷ |
ಎಎಂಟಿ | - | - | 7.85 ಲಕ್ಷ | - |

ಪೆಟ್ರೋಲ್ ಮತ್ತು ಡೀಸೆಲ್ ಎರಡು ಮಾದರಿಗಳಲ್ಲೂ ಖರೀದಿಗೆ ಲಭ್ಯವಿರುವ ಗ್ರಾಂಡ್ ಐ10 ನಿಯೋಸ್ ಕಾರು ಹಳೆಯ ಆವೃತ್ತಿಗಿಂತಲೂ ಹೆಚ್ಚು ಸ್ಪೋರ್ಟಿ ಲುಕ್ ಪಡೆದುಕೊಂಡಿದ್ದು, ಮುಂಭಾಗದ ಗ್ರಿಲ್ ಡಿಸೈನ್ ಹೊಸ ಕಾರಿಗೆ ಹೆಚ್ಚಿನ ಮಟ್ಟದ ಪ್ರೀಮಿಯಂ ಲುಕ್ ನೀಡಿದೆ.

ಹ್ಯುಂಡೈ ಸಂಸ್ಥೆಯು ಇದೇ ಮೊದಲ ಬಾರಿಗೆ ಗ್ರಾಂಡ್ ಐ10 ನಿಯೋಸ್ ಮೂಲಕ ತನ್ನ ನವೀಕೃತ ಕಾರುಗಳ ಮಾದರಿಗಳಲ್ಲಿ ಬಿಎಸ್- 6 ಎಂಜಿನ್ ಜೋಡಣೆ ಚಾಲನೆ ನೀಡಿದ್ದು, ಹೊಸ ಕಾರು ಕೂಡಾ 2020ರ ಏಪ್ರಿಲ್ 1ರಿಂದ ಜಾರಿಗೆ ಬರಲಿರುವ ಹೊಸ ಮಾಲಿನ್ಯ ನಿಯಂತ್ರಣ ನಿಯಮದಂತೆಯೇ ಉನ್ನತೀಕರಣಗೊಂಡಿದೆ. ಇದರಿಂದ ಹೊಸ ಕಾರು ಎಂಜಿನ್ನಲ್ಲಿ ಮಾತ್ರವಲ್ಲದೇ ಪ್ರಯಾಣಿಕರ ಸುರಕ್ಷತೆಯಲ್ಲೂ ಹೆಚ್ಚಿನ ಮಟ್ಟದ ಬದಲಾವಣೆಯನ್ನು ಪಡೆದುಕೊಂಡಿದೆ.

ಎಂಜಿನ್ ಸಾಮಾರ್ಥ್ಯ
ಗ್ರಾಂಡ್ ಐ10 ನಿಯೋಸ್ ಕಾರು 1.2-ಲೀಟರ್ ಕಪ್ಪಾ ಪೆಟ್ರೋಲ್ ಎಂಜಿನ್ ಮೂಲಕ 81-ಬಿಎಚ್ಪಿ, 114-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 1.2-ಲೀಟರ್ ಸಿಆರ್ಡಿಐ ಡೀಸೆಲ್ ಎಂಜಿನ್ ಮೂಲಕ 76-ಬಿಎಚ್ಪಿ, 190-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದೆ.

ಹೊಸ ಕಾರಿನಲ್ಲಿ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಒಟ್ಟು 10 ವೆರಿಯೆಂಟ್ಗಳು ಆಯ್ಕೆಗೆ ಲಭ್ಯವಿದ್ದು, 5-ಸ್ಪೀಡ್ ಮ್ಯಾನುವಲ್ ಗೇರ್ಬಾಕ್ಸ್ ಮತ್ತು 5-ಸ್ಪೀಡ್ ಆಟೋಮ್ಯಾಟಿಕ್ ಗೇರ್ಬಾಕ್ಸ್ ಮೂಲಕ ಅತ್ಯುತ್ತಮ ಎಂಜಿನ್ ಕಾರ್ಯಕ್ಷಮತೆಯನ್ನು ಹೊಂದಿದೆ.

ಇನ್ನು ಹೊಸ ಕಾರಿನ ಒಳಾಂಗಣ ವಿನ್ಯಾಸವು ಈ ಬಾರಿ ಹ್ಯಾಚ್ಬ್ಯಾಕ್ ಪ್ರಿಯರ ಆಕರ್ಷಣೆ ಕಾರಣವಾಗಲಿದ್ದು, ಡ್ಯುಯಲ್ ಟೋನ್ ಲೇಔಟ್, ಸಾಫ್ಟ್ ಟಚ್ ಮೆಟಿರಿಯಲ್ಸ್, ಆ್ಯಪಲ್ ಕಾರ್ ಪ್ಲೇ ಮತ್ತು ಅಂಡ್ರಾಯಿಡ್ ಆಟೋ ಪ್ಲೇ ಪ್ರೇರಣೆಯ 8-ಇಂಚಿನ ಟಚ್ಸ್ಕ್ರೀನ್ ಇನ್ಪೋಟೈನ್ಮೆಂಟ್ ಜೋಡಿಸಲಾಗಿದೆ.

ಹಾಗೆಯೇ ಹೊಸ ಕಾರಿನಲ್ಲಿ ಡಿಜಿಟಲ್ ಇನ್ಟ್ರುಮೆಂಟ್ ಕ್ಲಸ್ಟರ್, ಸ್ಟಿರಿಂಗ್ ಮೌಟೆಂಡ್ ಕಂಟ್ರೋಲ್ಸ್, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, ರಿಯರ್ ಎಸಿ ವೆಂಟ್ಸ್ ಸೌಲಭ್ಯಗಳಿದ್ದು, ಪ್ರಯಾಣಿಕ ಸುರಕ್ಷತೆಗಾಗಿ ಡ್ಯುಯಲ್ ಏರ್ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ರಿವರ್ಸ್ ಪಾರ್ಕಿಂಗ್ ಸೆನ್ಸಾರ್, ಸೀಟ್ ಬೆಲ್ಟ್ ರಿಮೆಂಡರ್, ಹೈ ಸ್ಪೀಡ್ ವಾರ್ನಿಂಗ್, ISOFIX ಚೈಲ್ಡ್ ಸೀಟ್ ಒದಗಿಸಲಾಗಿದೆ.

ಪ್ರೀಮಿಯಂ ಲುಕ್ ಹೆಚ್ಚಿಸಲು ಟಾಪ್ ಎಂಡ್ ಮಾಡೆಲ್ಗಳಲ್ಲಿ 15-ಇಂಚಿನ ಡೈಮಂಡ್ ಕಟ್ ಅಲಾಯ್ ವೀಲ್ಹ್, ಲೆದರ್ ವ್ಯಾರ್ಪ್ ಸ್ಟಿರಿಂಗ್ ವೀಲ್ಹ್, ಶಾರ್ಕ್ ಫಿನ್ ಆಂಟೆನಾ, ಪ್ರೋಜೆಕ್ಟರ್ ಹೆಡ್ಲ್ಯಾಂಪ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ವೈರ್ಲೆಸ್ ಚಾರ್ಜಿಂಗ್, ಫುಶ್ ಬಟನ್ ಸ್ಟಾರ್ಟ್/ಸ್ಟಾಪ್, ರಿಯರ್ ಕ್ರೊಮ್ ಗಾರ್ನಿಶ್ ಮತ್ತು ಲಗೇಜ್ ಲ್ಯಾಂಪ್ ಸೌಲಭ್ಯಗಳನ್ನು ನೀಡಲಾಗಿದೆ.

ಈ ಮೂಲಕ ಹ್ಯಾಚ್ಬ್ಯಾಕ್ ಮಾದರಿಗಳಲ್ಲೇ ಹೆಚ್ಚಿನ ಮಟ್ಟದ ಪ್ರೀಮಿಯಂ ಸೌಲಭ್ಯಗಳನ್ನು ಹೊಂದಿರುವ ಅತ್ಯುತ್ತಮ ಕಾರು ಮಾದರಿ ಇದಾಗಿದ್ದು, ಹೊಸ ತಲೆಮಾರಿನ ಮಾರುತಿ ಸುಜುಕಿ ಸ್ವಿಫ್ಟ್ ಕಾರಿಗೆ ಇದು ಮತ್ತಷ್ಟು ಪ್ರಬಲ ಪೈಪೋಟಿಯಾಗಲಿದೆ ಎನ್ನಬಹುದು.