ಬಹಿರಂಗವಾಯ್ತು ಹ್ಯುಂಡೈ ಕೋನಾ ಎಲೆಕ್ಟ್ರಿಕ್ ಕಾರಿನ ಬಿಡುಗಡೆಯ ದಿನಾಂಕ..
ದೇಶದೆಲ್ಲೆಡೆ ಎಲೆಕ್ಟ್ರಿಕ್ ವಾಹನಗಳ ಬೇಡಿಕೆಯು ಹೆಚ್ಚುತ್ತಿದ್ದು, ಹಲವಾರು ವಾಹನ ತಯಾರಕ ಸಂಸ್ಥೆಗಳು ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ. ಈ ನಿಟ್ಟಿನಲ್ಲಿ ಹ್ಯುಂಡೈ ಸಂಸ್ಥೆಯು ತಮ್ಮ ಕೂಡಾ ಹೊಸ ಕೋನಾ ಎಲೆಕ್ಟ್ರಿಕ್ ಕಾರನ್ನು ಸಹ ಮಾರುಕಟ್ಟೆಗೆ ಪರಿಚಯಿಸಲಿದ್ದು, ಹೊಸ ಕಾರಿನ ಬಿಡುಗಡೆಯ ದಿನಾಂಕವನ್ನು ಇದೀಗ ಬಹಿರಂಗಪಡಿಸಿದೆ.

ಹೌದು, ದಕ್ಷಿಣ ಕೊರಿಯಾ ಮೂಲದ ವಾಹನ ತಯಾರಕ ಸಂಸ್ಥೆಯಾದ ಹ್ಯುಂಡೈ ದೇಶಿಯ ಮಾರುಕಟ್ಟೆಗೆ ತಮ್ಮ ಮೊದಲ ಎಲೆಕ್ಟ್ರಿಕ್ ಕಾರನ್ನು ಪರಿಚಯಿಸಲಿದ್ದು, ಎನ್‍ಡಿಟಿವಿ ಆಟೋ ವರದಿಯ ಪ್ರಕಾರ ಹ್ಯುಂಡೈ ಸಂಸ್ತೆಯು ಜುಲೈ 9, 2019ರಂದು ಕೋನಾ ಎಲೆಕ್ಟ್ರಿಕ್ ಕಾರನ್ನು ಬಿಡುಗಡೆ ಮಾಡಲಿದೆ. ಈ ಕಾರಿನ ಮೊದಲ ವಿಶೇಷತೆ ಏನೆಂದರೆ ಈ ಕಾರು ಸಂಪೂರ್ಣಾವಾಗಿ ನಮ್ಮ ದೇಶದಲ್ಲಿಯೆ ನಿರ್ಮಾಣ ಮಾಡಲಾಗುತ್ತಿದೆಯಂತೆ.

ಭಾರತದಲ್ಲಿ ಸದ್ಯ ತಮಿಳುನಾಡಿನ ಚೆನ್ನೈ ಬಳಿ ಒಂದೇ ಒಂದು ಕಾರು ಉತ್ಪಾದನಾ ಘಟಕವನ್ನು ಹೊಂದಿರುವ ಹ್ಯುಂಡೈ ಸಂಸ್ಥೆಯು ವಿವಿಧ ಸಂಸ್ಥೆಗಳ ಜೊತೆಗೂಡಿ ಬೀಡಿಭಾಗಗಳನ್ನು ಆಮದು ಮಾಡಿಕೊಳ್ಳುವ ಮೂಲಕ ಕಾರು ಮಾರಾಟ ಮಾಡುತ್ತಿದೆ. ಇದೀಗ ಇದೇ ಘಟಕವನ್ನು ವಿಸ್ತರಿಸಲು ನಿರ್ಧರಿಸಿರುವ ಹ್ಯುಂಡೈ, ಎಲೆಕ್ಟ್ರಿಕ್ ಕಾರುಗಳ ನಿರ್ಮಾಣಕ್ಕೂ ಸಹಕಾರಿಯಾಗುವಂತೆ ಹೊಸ ಪ್ಲ್ಯಾಟ್‌ಫಾರ್ಮ್ ಸಿದ್ದಗೊಳಿಸುತ್ತಿದೆ.

ಹ್ಯುಂಡೈ ಸಂಸ್ಥೆಯು ಜಾಗತಿಕ ಮಾರುಕಟ್ಟೆಗಳಲ್ಲಿ ಈಗಾಗಲೇ ಎಲೆಕ್ಟ್ರಿಕ್ ಕಾರುಗಳ ನಿರ್ಮಾಣಕ್ಕಾಗಿ ಹೊಸ ಘಟಕಗಳಿಗೆ ಚಾಲನೆ ನೀಡಿದ್ದು, ಭಾರತದಲ್ಲಿ ಅಭಿವೃದ್ಧಿಗೊಳಿಸಲು ನಿರ್ಧರಿಸುವ ಹೊಸ ಘಟಕದ ನಿರ್ಮಾಣಕ್ಕಾಗಿ ಹಂತ ಹಂತವಾಗಿ ಬರೋಬ್ಬರಿ 7 ಸಾವಿರ ಕೋಟಿ ಹೂಡಿಕೆ ಮಾಡಲಿದೆ.

ಇನ್ನು ಹ್ಯುಂಡೈ ಸಂಸ್ಥೆಯು ಭಾರತದಲ್ಲಿ ಬಿಡುಗಡೆ ಮಾಡಲಿರುವ ಹೊಸ ಎಲೆಕ್ಟ್ರಿಕ್ ಕಾರುಗಳ ಬಗ್ಗೆ ಈಗಾಗಲೇ ಮಾಹಿತಿ ಬಿಚ್ಚಿಟ್ಟಿದ್ದು, ಮೊದಲ ಹಂತವಾಗಿ ಕೊನಾ ಇವಿ ಕಾರು ಭಾರತೀಯ ರಸ್ತೆಗಳಲ್ಲಿ ಭಾರೀ ಜನಪ್ರಿಯತೆ ಸಾಧಿಸುವ ನಿರೀಕ್ಷೆಯಲ್ಲಿದೆ. ಇದಕ್ಕೆ ಕಾರಣ, ಕಾರುಗಳ ಬೆಲೆಯನ್ನು ತಗ್ಗಿಸಲು ಹೊಸ ಕೊನಾ ಕಾರನ್ನು ದೇಶಿಯ ಮಾರುಕಟ್ಟೆಯಲ್ಲೇ ಪೂರ್ಣ ಪ್ರಮಾಣದಲ್ಲಿ ಅಭಿವೃದ್ಧಿಗೊಳಿಸಲು ನಿರ್ಧರಿಸಿದ್ದು, ಇದಕ್ಕಾಗಿ ವಿವಿಧ ಸಂಸ್ಥೆಗಳ ಜೊತೆ ಒಪ್ಪಂದ ಮಾಡಿಕೊಂಡು ಸ್ಥಳೀಯವಾಗಿಯೇ ಬಿಡಿಭಾಗಗಳನ್ನು ಬಳಸಿಕೊಳ್ಳಲು ಯೋಜನೆ ರೂಪಿಸಿದೆ. ಇದರ ಜೊತೆ ಜೊತೆಗೆ ಎಲೆಕ್ಟ್ರಿಕ್ ವೆಹಿಕಲ್ ಬಿಡಿಭಾಗಗಳನ್ನು ನಿರ್ಮಾಣ ಕಾರ್ಯಕ್ಕೆ ಕೈ ಹಾಕುತ್ತಿರುವ ಹ್ಯುಂಡೈ ಸಂಸ್ಥೆಯು ಇದರಿಂದ ಭಾರೀ ಪ್ರಮಾಣದ ಆದಾಯದ ನೀರಿಕ್ಷೆಯಲ್ಲಿದೆ.

ಎರಡು ವಿಭಿನ್ನ ಪವರ್ ಟ್ರೈನ್ ಗಳಿಂದ ಸಿದ್ದವಾಗಿರುವ ಕೋನಾ ಕಾರು ಮಾದರಿಗಳು ಪ್ರತಿ ಚಾರ್ಜ್‌ಗೆ 299 ಕಿ.ಮೀ ಮತ್ತು 469 ಕಿ.ಮೀ.ವರೆಗೆ ಮೈಲೇಜ್ ಸಾಮರ್ಥ್ಯವನ್ನು ಹೊಂದಿದ್ದು, ಎಲೆಕ್ಟ್ರಿಕ್ ಕಾರು ಆವೃತ್ತಿಗಳಲ್ಲೇ ಅತಿ ಹೆಚ್ಚು ಬೇಡಿಕೆ ಪಡೆಯುವ ಎಲ್ಲಾ ಗುಣಲಕ್ಷಣಗಳು ಈ ಹೊಸ ಎಲೆಕ್ಟ್ರಿಕ್ ಕಾರಿನಲ್ಲಿವೆ.

ಮಾಹಿತಿಗಳ ಪ್ರಕಾರ, ಹ್ಯುಂಡೈ ಸಂಸ್ಥೆಯು ಕಾರಿನ ಎಲೆಕ್ಟ್ರಿಕ್ ಪವರ್ ಟ್ರೈನ್ ನಿರ್ಮಿಸಲು ಎಲ್‌ಜಿ ಕೆಮಿಕಲ್ಸ್ ಜೊತೆ ಕೈಜೋಡಿಸಿದ್ದು, ಇದೇ ಬ್ಯಾಟರಿಯನ್ನು ಚೆವಿ ಬೋಲ್ಟ್ ಹ್ಯಾಚ್ ಬ್ಯಾಕ್ ಕಾರಿನಲ್ಲೂ ಕೂಡಾ ಇರಿಸಲಾಗಿರಲಿದೆ ಎನ್ನಲಾಗಿದೆ. ಅಲ್ಲದೆ ಕೊನಾ ಇವಿ 39.2 ಕಿಲೋವ್ಯಾಟ್ಸ್ ಮತ್ತು 64 ಕಿಲೋವ್ಯಾಟ್ಸ್ ಬ್ಯಾಟರಿ ಪ್ಯಾಕ್‌ನ್ನು ಹೊಂದಿರಲಿದೆ.

ಹುಂಡೈ ಸಂಸ್ಥೆಯು ತನ್ನ ಮೊದಲ ಇವಿ ಕಾರನ್ನು 2019ರ ಸೆಪ್ಟೆಂಬರ್ ಹೊತ್ತಿಗೆ ಪರಿಚಯಿಸುವ ಇರಾದೆಯಲ್ಲಿದ್ದು, ಜೊತೆಗೆ ಲೋನಿಕ್ ಹೈಬ್ರಿಡ್ ಮತ್ತು ಎಲೆಕ್ಟ್ರಿಕ್ ಮಾದರಿಯನ್ನು 2018ರ ಆಟೋ ಎಕ್ಸ್ ಪೋನಲ್ಲಿ ಪ್ರದರ್ಶಿಸಲಾಗಿತ್ತು. ಹೀಗಾಗಿ ಹೈಬ್ರಿಡ್ ಕಾರನ್ನು ಭಾರತದಲ್ಲಿ ಪರಿಚಯಿಸುವ ಯಾವುದೇ ಸುಳಿವು ಇಲ್ಲಾವಾದರೂ ಎಲೆಕ್ಟ್ರಿಕ್ ಕಾರನ್ನು ಮಾತ್ರ ಭಾರತದಲ್ಲಿ ಪರಿಚಯಿಸುವುದು ಖಚಿತವಾಗಿದೆ.

ಬ್ಯಾಟರಿ ವೈಶಿಷ್ಟ್ಯತೆ ಕೋನಾ ಕಾರುಗಳಲ್ಲಿ ಎರಡು ಮಾದರಿಯ ಬ್ಯಾಟರಿ ಚಾಲಿತ ವಿಭಾಗಗಳಿದ್ದು, ಗ್ರಾಹಕರು ಬೇಡಿಕೆಗೆ ಅನುಗುಣವಾಗಿ 39. 2 ಕೆವಿ ಮತ್ತು 64 ಕೆವಿ ಬ್ಯಾಟರಿಯನ್ನು ಆಯ್ಕೆ ಮಾಡಬಹುದು. 39.2 ಕೆವಿ ಪ್ರೇರಿತ ಕೋನಾ ಕಾರುಗಳಿಗಿಂತಲೂ 64 ಕೆ.ವಿ ಪ್ರೇರಿತ ಕೋನಾ ಕಾರುಗಳು ಬೆಲೆಯಲ್ಲಿ ತುಸು ದುಬಾರಿ ಎನ್ನಿಸಲಿವೆ.

ಕೊನಾ ಕಾರುಗಳ ಬೆಲೆ(ಅಂದಾಜು)
ಅತ್ಯುತ್ತಮ ಬ್ಯಾಟರಿ ಬಳಕೆಯ ಜೊತೆ ಅಧಿಕ ಮೈಲೇಜ್ ರೇಂಜ್ ಹೊಂದಿರುವ ಕೊನಾ ಕಾರುಗಳ ಬೆಲೆಯು ರೂ.20 ಲಕ್ಷದಿಂದ ರೂ.25 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.


Click it and Unblock the Notifications








