ಹ್ಯುಂಡೈ ಕೋನಾ ಎಲೆಕ್ಟ್ರಿಕ್ ಖರೀದಿ ಮೇಲೆ ಜೀರೋ ಡೌನ್ ಪೇಮೆಂಟ್ ಆಫರ್

ಎಲೆಕ್ಟ್ರಿಕ್ ವಾಹನಗಳ ಖರೀದಿಯನ್ನು ಉತ್ತೇಜಿಸಲು ಕೇಂದ್ರ ಸರ್ಕಾರವು ಕಡಿಮೆ ಪ್ರಮಾಣದ ಜಿಎಸ್‌ಟಿ ಜೊತೆಗೆ ಸಬ್ಸಡಿ ಯೋಜನೆಗಳನ್ನು ಈಗಾಗಲೇ ಘೋಷಣೆ ಮಾಡಿದ್ದು, ವಾಹನ ಖರೀದಿಗೆ ಅನುಕೂಲಕರವಾಗುವಂತೆ ಸುಲಭ ಸಾಲ ಸೌಲಭ್ಯಗಳನ್ನು ನೀಡುತ್ತಿದೆ. ಇದೀಗ ಹ್ಯುಂಡೈ ಹೊಸ ಕಾರಿನ ಖರೀದಿ ಮೇಲೂ ವಿಶೇಷ ಸಾಲ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಜೀರೋ ಡೌನ್ ಪೇಮೆಂಟ್ ಆಫರ್ ನೀಡಲಾಗುತ್ತಿದೆ.

ಹ್ಯುಂಡೈ ಕೋನಾ ಎಲೆಕ್ಟ್ರಿಕ್ ಖರೀದಿ ಮೇಲೆ ಜೀರೋ ಡೌನ್ ಪೇಮೆಂಟ್ ಆಫರ್

ಹೌದು, ಹ್ಯುಂಡೈ ಕೋನಾ ಎಲೆಕ್ಟ್ರಿಕ್ ಕಾರು ಖರೀದಿಗೆ ಜೀರೋ ಡೌನ್ ಪೇಮೆಂಟ್ ಜೊತೆಗೆ 7 ವರ್ಷಗಳ ಕಾಲಾವಧಿಗಾಗಿ ಶೇ. 9.25 ಬಡ್ಡಿದರದಲ್ಲಿ ಸಾಲಸೌಲಭ್ಯಗಳನ್ನು ಘೋಷಣೆ ಮಾಡಲಾಗಿದ್ದು, ತನ್ನ ನೆಚ್ಚಿನ ಗ್ರಾಹಕರಿಗೆ ಇನ್ನು ಹಲವು ವಿಶೇಷ ಸೌಲಭ್ಯಗಳನ್ನು ನೀಡುವುದಾಗಿ ಐಸಿಐಸಿಐ ಖಾಸಗಿ ಬ್ಯಾಂಕ್ ಘೋಷಣೆ ಮಾಡಿದೆ. ಇದರೊಂದಿಗೆ ಎಲೆಕ್ಟ್ರಿಕ್ ಕಾರು ಖರೀದಿ ಮೇಲೆ ರೂ.1.50 ಲಕ್ಷದ ತನಕ ಆದಾಯ ತೆರಿಗೆಯನ್ನು ಉಳಿತಾಯ ಮಾಡಬಹುದಾಗಿದ್ದು, ಸಾಲಸೌಲಭ್ಯಗಳ ಸೇವೆಗಳ ಮೇಲೂ ಶೇ.50ರಷ್ಟು ಡಿಸ್ಕೌಂಟ್ ಅನ್ನು ನೀಡಲಾಗುತ್ತದೆ.

ಹ್ಯುಂಡೈ ಕೋನಾ ಎಲೆಕ್ಟ್ರಿಕ್ ಖರೀದಿ ಮೇಲೆ ಜೀರೋ ಡೌನ್ ಪೇಮೆಂಟ್ ಆಫರ್

ಇನ್ನು ಹ್ಯುಂಡೈ ಇಂಡಿಯಾ ಸಂಸ್ಥೆಯು ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಮೊದಲ ಎಲೆಕ್ಟ್ರಿಕ್ ಕಾರು ಮಾದರಿಯಾದ ಕೋನಾ ಎಲೆಕ್ಟ್ರಿಕ್ ಎಸ್‌ಯುವಿ ಆವೃತ್ತಿಯನ್ನು ಬಿಡುಗಡೆ ಮಾಡಿದ್ದು, ಐಷಾರಾಮಿ ಸೌಲಭ್ಯಗಳನ್ನು ಹೊಂದಿರುವ ಹೊಸ ಕಾರು ಅತ್ಯುತ್ತಮ ಮೈಲೇಜ್‌ನೊಂದಿಗೆ ಆಕರ್ಷಕ ಬೆಲೆಗಳಲ್ಲಿ ಮಾರುಕಟ್ಟೆಗೆ ಪ್ರವೇಶಿಸಿದೆ.

ಹ್ಯುಂಡೈ ಕೋನಾ ಎಲೆಕ್ಟ್ರಿಕ್ ಖರೀದಿ ಮೇಲೆ ಜೀರೋ ಡೌನ್ ಪೇಮೆಂಟ್ ಆಫರ್

ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 25.30 ಲಕ್ಷಕ್ಕೆ ಬಿಡುಗಡೆಗೊಂಡಿದ್ದ ಕೋನಾ ಎಲೆಕ್ಟ್ರಿಕ್ ಕಾರಿನ ಬೆಲೆಯಲ್ಲಿ ಇದೀಗ ರೂ. 1.40 ಲಕ್ಷ ಕಡಿತ ಮಾಡಲಾಗಿದ್ದು, ಈ ಬಗ್ಗೆ ಹ್ಯುಂಡೈ ಸಂಸ್ಥೆಯೇ ಅಧಿಕೃತ ಮಾಹಿತಿ ಹಂಚಿಕೊಂಡಿದೆ. ಜಿಟಿಎಸ್ ಪ್ರಮಾಣವನ್ನು ಶೇ.12ರಿಂದ ಶೇ.5ಕ್ಕೆ ಇಳಿಕೆ ಮಾಡಿರುವ ಹಿನ್ನೆಲೆಯಲ್ಲಿ ಕಾರಿನ ಬೆಲೆಯಲ್ಲಿ ಬದಲಾವಣೆ ತರಲಾಗಿದೆ.

ಹ್ಯುಂಡೈ ಕೋನಾ ಎಲೆಕ್ಟ್ರಿಕ್ ಖರೀದಿ ಮೇಲೆ ಜೀರೋ ಡೌನ್ ಪೇಮೆಂಟ್ ಆಫರ್

ಸದ್ಯಕ್ಕೆ ಹ್ಯುಂಡೈ ಸಂಸ್ಥೆಯು ಕೋನಾ ಎಲೆಕ್ಟ್ರಿಕ್ ಕಾರು ಮಾದರಿಯನ್ನು ದಕ್ಷಿಣ ಕೊರಿಯಾದಿಂದಲೇ ಆಮದು ಮಾಡಿಕೊಂಡು ಭಾರತದಲ್ಲಿ ಮಾರಾಟ ಮಾಡಲು ನಿರ್ಧರಿಸಿದ್ದು, ದೇಶಾದ್ಯಂತ ಕಾರ್ಯನಿರ್ವಹಣೆಯಲ್ಲಿರುವ ಆಯ್ದ ಹ್ಯುಂಡೈ ಡೀಲರ್ಸ್‌ಗಳಲ್ಲಿ ಮಾತ್ರವೇ ಕೋನಾ ಎಲೆಕ್ಟ್ರಿಕ್ ಕಾರು ಖರೀದಿಗೆ ಲಭ್ಯವಿರಲಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಎರಡು ಮಾದರಿಯ ಬ್ಯಾಟರಿ ಆಯ್ಕೆಯನ್ನು ಹೊಂದಿರುವ ಕೋನಾ ಎಲೆಕ್ಟ್ರಿಕ್ ಕಾರು 64kWh ಮತ್ತು 39.2kWh ಬ್ಯಾಟರಿ ವೈಶಿಷ್ಟ್ಯತೆಗಳನ್ನು ಹೊಂದಿದೆ. ಇದರಲ್ಲಿ ಸದ್ಯಕ್ಕೆ 39.2kWh ಬ್ಯಾಟರಿ ಸಾಮಾರ್ಥ್ಯ ಮಾದರಿಯನ್ನು ಮಾತ್ರವೇ ಭಾರತದಲ್ಲಿ ಬಿಡುಗಡೆ ಮಾಡಲಾಗಿದ್ದು, 52 ನಿಮಿಷಗಳಲ್ಲಿ ಶೇ.80 ರಷ್ಟು ಬ್ಯಾಟರಿ ಚಾರ್ಜ್‌ ಆಗಬಲ್ಲ ಫಾಸ್ಟ್ ಚಾರ್ಜರ್ ಸೌಲಭ್ಯ ಪಡೆದಿದೆ.

ಹ್ಯುಂಡೈ ಕೋನಾ ಎಲೆಕ್ಟ್ರಿಕ್ ಖರೀದಿ ಮೇಲೆ ಜೀರೋ ಡೌನ್ ಪೇಮೆಂಟ್ ಆಫರ್

ಹೋಂಡಾ ಸಿಟಿ ಮತ್ತು ಮಾರುತಿ ಸುಜುಕಿ ಸಿಯಾಜ್‌ಗೆ ಟಕ್ಕರ್ ನೀಡುತ್ತಿರುವ ಟೊಯೊಟಾ ಯಾರಿಸ್ ಖರೀದಿಗೆ ಈಗಲೇ ಟೆಸ್ಟ್ ಡ್ರೈವ್ ಮಾಡಿ..!

ಹೊಸ ಎಲೆಕ್ಟ್ರಿಕ್ ಕಾರು ಸಾಮಾರ್ಥ್ಯ ಕಾರುಗಳಂತೆಯೇ ಪರ್ಫಾಮೆನ್ಸ್‌ನಲ್ಲೂ ಉತ್ತಮ ಮುನ್ನಡೆ ಕಾಯ್ದುಕೊಂಡಿದ್ದು, 100kW ಫ್ರಂಟ್ ವೀಲ್ಹ್ ಮೋಟಾರ್ ಪವರ್ ಮೂಲಕ 131-ಬಿಎಚ್‌ಪಿ ಮತ್ತು 395-ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಕೇವಲ 9.7-ಸೇಕೆಂಡುಗಳಲ್ಲಿ ಸೊನ್ನೆಯಿಂದ 100ಕಿ.ಮಿ ವೇಗ ತಲುಪಬಲ್ಲದು.

ಹ್ಯುಂಡೈ ಕೋನಾ ಎಲೆಕ್ಟ್ರಿಕ್ ಖರೀದಿ ಮೇಲೆ ಜೀರೋ ಡೌನ್ ಪೇಮೆಂಟ್ ಆಫರ್

ಕೋನಾ ಕಾರು 155 ಕಿ.ಮಿ ಟಾಪ್ ಸ್ಪೀಡ್ ಸೌಲಭ್ಯವನ್ನು ಹೊಂದಿದ್ದು, ಪೂರ್ಣ ಪ್ರಮಾಣದಲ್ಲಿ ಬ್ಯಾಟರಿ ಚಾರ್ಜ್‌ ಆಗಲು ಕನಿಷ್ಠ 8 ಗಂಟೆ ತೆಗೆದುಕೊಳ್ಳಲಿದೆ. ಹೀಗಾಗಿ ಕೋನಾ ಕಾರಿನಲ್ಲಿ ಫಾಸ್ಟ್ ಚಾರ್ಜಿಂಗ್ ಸೌಲಭ್ಯವು ಆಕರ್ಷಕವಾಗಿದ್ದು, ಶೇ.80 ರಷ್ಟು ಚಾರ್ಜಿಂಗ್ ಮಾಡಲು ಕೇವಲ 52 ನಿಮಿಷ ತೆಗೆದುಕೊಳ್ಳುತ್ತದೆ.

ಹ್ಯುಂಡೈ ಕೋನಾ ಎಲೆಕ್ಟ್ರಿಕ್ ಖರೀದಿ ಮೇಲೆ ಜೀರೋ ಡೌನ್ ಪೇಮೆಂಟ್ ಆಫರ್

ಕೋನಾ ಕಾರು ಬೆಲೆ ದುಬಾರಿಯಾಗಿದ್ದರೂ ಸಹ ಉತ್ತಮ ಮೈಲೇಜ್ ಮತ್ತು ಪ್ರೀಮಿಯಂ ಫೀಚರ್ಸ್‌ಗಳಿಂದಾಗಿ ಖರೀದಿಗೆ ಉತ್ತಮ ಎನ್ನಿಸಲಿದ್ದು, ಸ್ಪೋರ್ಟಿ ವಿನ್ಯಾಸದ ಜೊತೆಗೆ ಕಾಸ್‌ಕ್ಲಾಡಿಂಗ್ ಫ್ರಂಟ್ ಗ್ರಿಲ್, ಬಾಡಿ ಕಲರ್ ಬಂಪರ್, ಸ್ಲಿಕ್ ಎಲ್ಇಡಿ ಟೈಲ್ ಲೈಟ್ಸ್, ಶಾರ್ಪ್ ಶೋಲ್ಡ್‌ರ್ ಲೈನ್ಸ್, ರಿಯರ್ ಸ್ಪಾಯ್ಲರ್ ನೀಡಿರುವುದು ಹೊಸ ಕಾರಿಗೆ ಮತ್ತಷ್ಟು ಆಕರ್ಷಣೆಯಾಗುವಂತೆ ಮಾಡಿದೆ.

ಹ್ಯುಂಡೈ ಕೋನಾ ಎಲೆಕ್ಟ್ರಿಕ್ ಖರೀದಿ ಮೇಲೆ ಜೀರೋ ಡೌನ್ ಪೇಮೆಂಟ್ ಆಫರ್

ಹೊರವಿನ್ಯಾಸದಲ್ಲಿ ಮಾತ್ರವಲ್ಲದೇ ಕಾರಿನ ಒಳಭಾಗದ ವಿನ್ಯಾಸವು ಸಹ ಎಲೆಕ್ಟ್ರಿಕ್ ಕಾರು ಖರೀದಿದಾರನ್ನು ಸೆಳೆಯುಲಿದ್ದು, ಬ್ಲ್ಯಾಕ್ ಥೀಮ್ ಡ್ಯಾಶ್‌ಬೋರ್ಡ್, ಹೋಂದಾಣಿಕೆ ಮಾಡಬಹುದಾದ 8-ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ, ಡಿಜಿಟಲ್ ಇನ್‌ಸ್ಟುಮೆಂಟ್ ಕ್ಲಸ್ಟರ್, ವೆಂಟಿಲೆಟೆಡ್ ಲೆದರ್ ಸೀಟುಗಳು, ಲೆದರ್ ಹೊದಿಕೆಯ ಸ್ಟಿರಿಂಗ್ ವೀಲ್ಹ್ ಮೌಂಟ್, 10 ಹಂತದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಲ್ಲ ಚಾಲಕನ ಸೀಟು ಮತ್ತು ಎಲೆಕ್ಟ್ರಿಕ್ ಸನ್‌ರೂಫ್ ಸೌಲಭ್ಯ ಈ ಕಾರಿನಲ್ಲಿದೆ.

ಹ್ಯುಂಡೈ ಕೋನಾ ಎಲೆಕ್ಟ್ರಿಕ್ ಖರೀದಿ ಮೇಲೆ ಜೀರೋ ಡೌನ್ ಪೇಮೆಂಟ್ ಆಫರ್

ಹಾಗೆಯೇ ಸುರಕ್ಷತೆಗೂ ಕೋನಾ ಕಾರಿನಲ್ಲಿ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಆರು ಏರ್‌ಬ್ಯಾಗ್‌ಗಳು, ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ತುರ್ತು ಕರೆ ಸೌಲಭ್ಯ, ಎಬಿಎಸ್ ಜೊತೆ ಇಬಿಡಿ, ರೀ ಜನರೇಟಿವ್ ಬ್ರೇಕಿಂಗ್ ಸಿಸ್ಟಂ, ಆಲ್ ವೀಲ್ಹ್ ಡಿಸ್ಕ್ ಬ್ರೇಕ್ ಮತ್ತು ವಿವಿಧ ಮಾದರಿಯ ಚಾಲನಾ ಅನುಭವಕ್ಕಾಗಿ ಇಕೋ, ಇಕೋ ಪ್ಲಸ್, ಕಂಫರ್ಟ್ ಮತ್ತು ಸ್ಪೋರ್ಟ್ ಡ್ರೈವ್ ಮೋಡ್‌ಗಳನ್ನು ಬದಲಿಸಿಕೊಳ್ಳಬಹುದಾಗಿದೆ.

Image Source: Team BHP

Article Published On: Wednesday, July 24, 2019, 13:48 [IST]
English summary
Hyundai Kona electric gets zero downpayment and 100 percentage road fund loans from ICICI bank. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+