ಹ್ಯುಂಡೈ ಕೋನಾ ಎಲೆಕ್ಟ್ರಿಕ್ ಕಾರಿನ ಬಿಡುಗಡೆಗೆ ಇನ್ನು ಕೆಲವೇ ದಿನಗಳು ಬಾಕಿ

ದಕ್ಷಿಣ ಕೊರಿಯಾ ಮೂಲದ ವಾಹನ ತಯಾರಕ ಸಂಸ್ಥೆಯಾದ ಹ್ಯುಂಡೈ ಇತ್ತೀಚೆಗೆ ತಮ್ಮ ವೆನ್ಯೂ ಎಸ್‍ಯುವಿ ಕಾರನ್ನು ಬಿಡುಗಡೆ ಮಾಡಲಾಗಿದ್ದು, ಮಾರುಕಟ್ಟೆಯಲ್ಲಿ ಹೆಚ್ಚಿನ ಮಟ್ಟದಲ್ಲಿ ಬುಕ್ಕಿಂಗ್ ಅನ್ನು ಪಡೆಯುತ್ತಿದೆ. ಹೀಗಿರುವಾಗ ಹ್ಯುಂಡೈ ಸಂಸ್ಥೆಯು ದೇಶಿಯ ಮಾರುಕಟ್ಟೆಯಲ್ಲಿ ತಮ್ಮ ಮೊದಲ ಎಲೆಕ್ಟ್ರಿಕ್ ಕಾರನಾಗಿ ಕೋನಾ ಎಲೆಕ್ಟ್ರಿಕ್ ಮಾದರಿಯನ್ನು ಬಿಡುಗಡೆ ಮಾಡಲಿದ್ದು, ಜುಲೈ 9 ರಂದು ಕಾರಿನ ಬೆಲೆಯ ಕುರಿತಾಗಿ ಮಾಹಿತಿಯನ್ನು ಹೊರ ಹಾಕಲಿದೆ.

ಹ್ಯುಂಡೈ ಕೋನಾ ಎಲೆಕ್ಟ್ರಿಕ್ ಕಾರಿನ ಬಿಡುಗಡೆಗೆ ಇನ್ನು ಕೆಲವೇ ದಿನಗಳು ಬಾಕಿ

ಹ್ಯುಂಡೈ ಕೋನಾ ಎಲೆಕ್ಟ್ರಿಕ್ ಕಾರು ಈಗಾಗಲೇ ಅಂತರಾಷ್ಟ್ರೀಯ ಮಾರಕಟ್ಟೆಯಲ್ಲಿ ಮಾರಾಟವಾಗುತ್ತಿದ್ದು, ದೇಶಿಯ ಮಾರಕಟ್ಟೆಗೆ ಸಿಬಿಯು (ಕಂಪ್ಲೀಟ್ಲಿ ಬ್ಯುಲ್ಡ್ ಯೂನಿಟ್) ಮಾರ್ಗದಲ್ಲಿ ಕಾಲಿಡಲಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಹ್ಯುಂಡೈ ಕೋನಾ ಎಲೆಕ್ಟ್ರಿಕ್ ಕಾರು ಎರಡು ವೇರಿಯೆಂಟ್‍ನಲ್ಲಿ ಲಭ್ಯವಿದ್ದು, ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗುವ ಕಾರು ಯಾವ ವೇರಿಯೆಂಟ್ ಎಂಬ ಮಾಹಿತಿ ಇನ್ನು ಲಭ್ಯವಾಗಲಿಲ್ಲ.

ಹ್ಯುಂಡೈ ಕೋನಾ ಎಲೆಕ್ಟ್ರಿಕ್ ಕಾರಿನ ಬಿಡುಗಡೆಗೆ ಇನ್ನು ಕೆಲವೇ ದಿನಗಳು ಬಾಕಿ

ಎರಡು ವಿಭಿನ್ನ ಪವರ್ ಟ್ರೈನ್ ಗಳಿಂದ ಸಿದ್ದವಾಗಿರುವ ಕೋನಾ ಕಾರು ಮಾದರಿಗಳು ಪ್ರತಿ ಚಾರ್ಜ್‌ಗೆ 300 ಕಿ.ಮೀ ನಿಂದ ಹೈ ಎಂಡ್ ಮಾದರಿಯು 400 ಕಿ.ಮೀ.ವರೆಗೆ ಮೈಲೇಜ್ ಸಾಮರ್ಥ್ಯವನ್ನು ಹೊಂದಿದ್ದು, ಎಲೆಕ್ಟ್ರಿಕ್ ಕಾರು ಆವೃತ್ತಿಗಳಲ್ಲೇ ಅತಿ ಹೆಚ್ಚು ಬೇಡಿಕೆ ಪಡೆಯುವ ಎಲ್ಲಾ ಗುಣಲಕ್ಷಣಗಳು ಈ ಹೊಸ ಕಾರಿನಲ್ಲಿವೆ.

ಹ್ಯುಂಡೈ ಕೋನಾ ಎಲೆಕ್ಟ್ರಿಕ್ ಕಾರಿನ ಬಿಡುಗಡೆಗೆ ಇನ್ನು ಕೆಲವೇ ದಿನಗಳು ಬಾಕಿ

ಮಾಹಿತಿಗಳ ಪ್ರಕಾರ, ಹ್ಯುಂಡೈ ಸಂಸ್ಥೆಯು ಕಾರಿನ ಎಲೆಕ್ಟ್ರಿಕ್ ಪವರ್ ಟ್ರೈನ್ ನಿರ್ಮಿಸಲು ಎಲ್‌ಜಿ ಕೆಮಿಕಲ್ಸ್ ಜೊತೆ ಕೈಜೋಡಿಸಿದ್ದು, ಇದೇ ಬ್ಯಾಟರಿಯನ್ನು ಚೆವಿ ಬೋಲ್ಟ್ ಹ್ಯಾಚ್ ಬ್ಯಾಕ್ ಕಾರಿನಲ್ಲೂ ಕೂಡಾ ಇರಿಸಲಾಗಿರಲಿದೆ ಎನ್ನಲಾಗಿದೆ.

ಹ್ಯುಂಡೈ ಕೋನಾ ಎಲೆಕ್ಟ್ರಿಕ್ ಕಾರಿನ ಬಿಡುಗಡೆಗೆ ಇನ್ನು ಕೆಲವೇ ದಿನಗಳು ಬಾಕಿ

ಬ್ಯಾಟರಿ ವೈಶಿಷ್ಟ್ಯತೆ

ಕೋನಾ ಕಾರುಗಳಲ್ಲಿ ಎರಡು ಮಾದರಿಯ ಬ್ಯಾಟರಿ ಚಾಲಿತ ವಿಭಾಗಗಳಿದ್ದು, ಗ್ರಾಹಕರು ಬೇಡಿಕೆಗೆ ಅನುಗುಣವಾಗಿ 39. 2 ಕೆವಿ ಮತ್ತು 64 ಕೆವಿ ಬ್ಯಾಟರಿಯನ್ನು ಆಯ್ಕೆ ಮಾಡಬಹುದು. 39.2 ಕೆವಿ ಪ್ರೇರಿತ ಕೋನಾ ಕಾರುಗಳಿಗಿಂತಲೂ 64 ಕೆ.ವಿ ಪ್ರೇರಿತ ಕೋನಾ ಕಾರುಗಳು ಬೆಲೆಯಲ್ಲಿ ತುಸು ದುಬಾರಿ ಎನ್ನಿಸಲಿವೆ.

ಹ್ಯುಂಡೈ ಕೋನಾ ಎಲೆಕ್ಟ್ರಿಕ್ ಕಾರಿನ ಬಿಡುಗಡೆಗೆ ಇನ್ನು ಕೆಲವೇ ದಿನಗಳು ಬಾಕಿ

ಇನ್ನು ಹ್ಯುಂಡೈ ಸಂಸ್ಥೆಯು ಜಾಗತಿಕ ಮಾರುಕಟ್ಟೆಗಳಲ್ಲಿ ಈಗಾಗಲೇ ಎಲೆಕ್ಟ್ರಿಕ್ ಕಾರುಗಳ ನಿರ್ಮಾಣಕ್ಕಾಗಿ ಹೊಸ ಘಟಕಗಳಿಗೆ ಚಾಲನೆ ನೀಡಿದ್ದು, ಭಾರತದಲ್ಲಿ ಅಭಿವೃದ್ಧಿಗೊಳಿಸಲು ನಿರ್ಧರಿಸುವ ಹೊಸ ಎಲೆಕ್ಟ್ರಿಕ್ ಕಾರು ನಿರ್ಮಾಣ ಘಟಕದ ಸ್ಥಾಪನೆಗಾಗಿ ಹಂತ ಹಂತವಾಗಿ ಬರೋಬ್ಬರಿ ರೂ. 7 ಸಾವಿರ ಕೋಟಿ ಹೂಡಿಕೆ ಮಾಡುತ್ತಿದೆ.

ಹ್ಯುಂಡೈ ಕೋನಾ ಎಲೆಕ್ಟ್ರಿಕ್ ಕಾರಿನ ಬಿಡುಗಡೆಗೆ ಇನ್ನು ಕೆಲವೇ ದಿನಗಳು ಬಾಕಿ

ಭಾರತದಲ್ಲಿ ಸದ್ಯ ತಮಿಳುನಾಡಿನ ಚೆನ್ನೈ ಬಳಿ ಒಂದೇ ಒಂದು ಕಾರು ಉತ್ಪಾದನಾ ಘಟಕವನ್ನು ಹೊಂದಿರುವ ಹ್ಯುಂಡೈ ಸಂಸ್ಥೆಯು ವಿವಿಧ ಸಂಸ್ಥೆಗಳ ಜೊತೆಗೂಡಿ ಬೀಡಿಭಾಗಗಳನ್ನು ಆಮದು ಮಾಡಿಕೊಳ್ಳುವ ಮೂಲಕ ಕಾರು ಮಾರಾಟ ಮಾಡುತ್ತಿದೆ.

ಹ್ಯುಂಡೈ ಕೋನಾ ಎಲೆಕ್ಟ್ರಿಕ್ ಕಾರಿನ ಬಿಡುಗಡೆಗೆ ಇನ್ನು ಕೆಲವೇ ದಿನಗಳು ಬಾಕಿ

ಇದೀಗ ಇದೇ ಘಟಕವನ್ನು ವಿಸ್ತರಿಸಲು ನಿರ್ಧರಿಸಿರುವ ಹ್ಯುಂಡೈ, ಎಲೆಕ್ಟ್ರಿಕ್ ಕಾರುಗಳ ನಿರ್ಮಾಣಕ್ಕೂ ಸಹಕಾರಿಯಾಗುವಂತೆ ಹೊಸ ಪ್ಲ್ಯಾಟ್‌ಫಾರ್ಮ್ ಸಿದ್ದಗೊಳಿಸುತ್ತಿದ್ದು, ಕೊನಾ ಸೇರಿದಂತೆ ಇನ್ನು ಮೂರು ವಿವಿಧ ಮಾದರಿಯ ಎಲೆಕ್ಟ್ರಿಕ್ ಕಾರುಗಳನ್ನು ಇಲ್ಲಿಯೇ ನಿರ್ಮಾಣ ಮಾಡಿ ವಿದೇಶಿ ಮಾರುಕಟ್ಟೆಗಳಿಗೂ ಇಲ್ಲಿಂದಲೇ ರಫ್ತು ಮಾಡುವ ಯೋಜನೆಯಲ್ಲಿದೆ.

ಹ್ಯುಂಡೈ ಕೋನಾ ಎಲೆಕ್ಟ್ರಿಕ್ ಕಾರಿನ ಬಿಡುಗಡೆಗೆ ಇನ್ನು ಕೆಲವೇ ದಿನಗಳು ಬಾಕಿ

ಕೊನಾ ಕಾರುಗಳ ಬೆಲೆ(ಅಂದಾಜು)

ಅತ್ಯುತ್ತಮ ಬ್ಯಾಟರಿ ಬಳಕೆಯ ಜೊತೆ ಅಧಿಕ ಮೈಲೇಜ್ ರೇಂಜ್ ಹೊಂದಿರುವ ಕೊನಾ ಕಾರುಗಳ ಬೆಲೆಯು ಭಾರತದಲ್ಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.18 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.22 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.

More from DriveSpark

Article Published On: Monday, July 1, 2019, 17:40 [IST]
English summary
Hyundai Kona Electric Listed On The Indian Official Website Before Launch. Read In Kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+