ಜಿಎಸ್‌ಟಿ ಬದಲಾವಣೆ: ಹ್ಯುಂಡೈ ಕೋನಾ ಇವಿ ಬೆಲೆಯಲ್ಲಿ ರೂ.1.40 ಲಕ್ಷ ಕಡಿತ..!

ಕಳೆದ ವಾರವಷ್ಟೇ ಹ್ಯುಂಡೈ ಇಂಡಿಯಾ ಸಂಸ್ಥೆಯು ತನ್ನ ಬಹುನೀರಿಕ್ಷಿತ ಕೋನಾ ಎಲೆಕ್ಟ್ರಿಕ್ ಕಾರನ್ನು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 25.30 ಲಕ್ಷಕ್ಕೆ ಬಿಡುಗಡೆ ಮಾಡಿತ್ತು. ಆದರೆ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ತೆಗೆದುಕೊಳ್ಳಲಾದ ಕೆಲವು ನಿರ್ಣಯಗಳ ಪರಿಣಾಮ ಕೋನಾ ಎಲೆಕ್ಟ್ರಿಕ್ ಕಾರಿನ ಬೆಲೆಯಲ್ಲಿ ಇದೀಗ ರೂ. 1.40 ಲಕ್ಷ ಕಡಿತವಾಗಿರುವ ಬಗ್ಗೆ ಹ್ಯುಂಡೈ ಸಂಸ್ಥೆಯೇ ಅಧಿಕೃತ ಮಾಹಿತಿ ಹಂಚಿಕೊಂಡಿದೆ.

ಜಿಎಸ್‌ಟಿ ಬದಲಾವಣೆ: ಹ್ಯುಂಡೈ ಕೋನಾ ಇವಿ ಬೆಲೆಯಲ್ಲಿ ರೂ.1.40 ಲಕ್ಷ ಕಡಿತ..!

ಕಳೆದ ವಾರ ಕೇಂದ್ರ ಸರ್ಕಾರದ ಹೊಸ ಬಜೆಟ್ ಮಂಡನೆಯಲ್ಲಿ ಎಲೆಕ್ಟ್ರಿಕ್ ಕಾರುಗಳ ಮೇಲೆ ವಿಧಿಸಲಾಗುವ ಜಿಟಿಎಸ್ ಪ್ರಮಾಣವನ್ನು ಶೇ.12ರಿಂದ ಶೇ.5ಕ್ಕೆ ಇಳಿಕೆ ಮಾಡಿರುವುದಾಗಿ ಘೋಷಣೆ ಮಾಡಲಾಗಿತ್ತು. ಆದರೆ ಈ ವೇಳೆ ಎಲೆಕ್ಟ್ರಿಕ್ ವಾಹನಗಳ ಬೆಲೆ ಆಧಾರ ಮೇಲೆ ಜಿಎಸ್‌ಟಿ ಇಳಿಕೆ ಮಾಡಲಾಗಿದೆಯ್ಯಾ ಅಥವಾ ಎಲ್ಲಾ ಎಲೆಕ್ಟ್ರಿಕ್ ವಾಹನ ಮಾದರಿಗಳ ಮೇಲೂ ಏಕರೀತಿಯ ಬೆಲೆ ಇಳಿಕೆ ಮಾಡಲಾಗಿದೆ ಎಂಬ ಮಾಹಿತಿಯನ್ನು ಸ್ಪಷ್ಟವಾಗಿ ತಿಳಿಸಿರಲಿಲ್ಲ.

ಜಿಎಸ್‌ಟಿ ಬದಲಾವಣೆ: ಹ್ಯುಂಡೈ ಕೋನಾ ಇವಿ ಬೆಲೆಯಲ್ಲಿ ರೂ.1.40 ಲಕ್ಷ ಕಡಿತ..!

ಎಲೆಕ್ಟ್ರಿಕ್ ವಾಹನಗಳ ಮೇಲೆ ಜಿಎಸ್‌ಟಿ ಇಳಿಕೆ ಕುರಿತಂತೆ ಮತ್ತೊಂದು ಸುತ್ತಿನ ಮಾತುಕತೆ ನಂತರ ಆಟೋ ಉತ್ಪಾದನಾ ಸಂಸ್ಥೆಗಳ ಪ್ರಶ್ನೆಗಳಿಗೆ ಸ್ಪಷ್ಟನೀಡಿರುವ ಜಿಎಸ್‌ಟಿ ಕೌನ್ಸಿಲ್ ಸಭೆಯು ಎಲೆಕ್ಟ್ರಿಕ್ ವಾಹನಗಳ ಖರೀದಿಯನ್ನು ಉತ್ತೇಜಿಸುವ ಉದ್ದೇಶದಿಂದ ಪ್ರತಿಯೊಂದು ಎಲೆಕ್ಟ್ರಿಕ್ ವಾಹನಗಳ ಮೇಲೂ ಶೇ.5 ರಷ್ಟು ಜಿಎಸ್‌ಟಿ ಅನ್ವಯವಾಗಲಿದೆ ಎಂದಿದೆ.

ಜಿಎಸ್‌ಟಿ ಬದಲಾವಣೆ: ಹ್ಯುಂಡೈ ಕೋನಾ ಇವಿ ಬೆಲೆಯಲ್ಲಿ ರೂ.1.40 ಲಕ್ಷ ಕಡಿತ..!

ಇದರಿಂದ ಹ್ಯುಂಡೈ ಸಂಸ್ಥೆಯು ಜಿಎಸ್‌ಟಿ ಕೌನ್ಸಿಲ್ ಸಭೆಯ ನಿರ್ಣಯದಂತೆ ಕೋನಾ ಎಲೆಕ್ಟ್ರಿಕ್ ಕಾರಿನ ಬೆಲೆಯಲ್ಲಿ ರೂ. 1.40 ಲಕ್ಷ ಬೆಲೆ ಇಳಿಕೆ ಮಾಡಿದ್ದು, ಎಲೆಕ್ಟ್ರಿಕ್ ವಾಹನವನ್ನು ಖರೀದಿಸುವ ಗ್ರಾಹಕರು ರೂ. 1.50 ಲಕ್ಷದ ತನಕ ತೆರಿಗೆ ವಿನಾಯ್ತಿ ಲಾಭವನ್ನು ಸಹ ಪಡೆದುಕೊಳ್ಳಬಹುದಾಗಿ ಹ್ಯುಂಡೈ ಸಂಸ್ಥೆಯು ಗ್ರಾಹಕರಿಗೆ ಮಾಹಿತಿ ನೀಡಿದೆ.

ಜಿಎಸ್‌ಟಿ ಬದಲಾವಣೆ: ಹ್ಯುಂಡೈ ಕೋನಾ ಇವಿ ಬೆಲೆಯಲ್ಲಿ ರೂ.1.40 ಲಕ್ಷ ಕಡಿತ..!

ಇನ್ನು 2030ರ ವೇಳೆಗೆ ದೇಶದಲ್ಲಿ ಶೇ.100 ರಷ್ಟು ಎಲೆಕ್ಟ್ರಿಕ್ ಮತ್ತು ಹೈಬ್ರಿಡ್ ವಾಹನಗಳು ಮಾತ್ರವೇ ಸಂಚರಿಸಬೇಕು ಎನ್ನುವ ಗುರಿಯೊಂದಿಗೆ ಆಟೋ ಉದ್ಯಮದಲ್ಲಿ ಭಾರೀ ಬದಲಾವಣೆ ತರಲಾಗುತ್ತಿದ್ದು, ಮಾಲಿನ್ಯಕ್ಕೆ ಪ್ರಮುಖ ಕಾರಣವಾಗಿರುವ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳನ್ನು ತಗ್ಗಿಸಿ ಎಲೆಕ್ಟ್ರಿಕ್ ವಾಹನಗಳತ್ತ ಹೆಚ್ಚು ಗಮನಹರಿಸಲಾಗುತ್ತಿದೆ. ಹೀಗಾಗಿ ಕೇಂದ್ರ ಸರ್ಕಾರದ ಬೃಹತ್ ಯೋಜನೆಯಂತೆ ಬಹುತೇಕ ಆಟೋ ಉತ್ಪಾದನಾ ಸಂಸ್ಥೆಗಳು ಸಾಂಪ್ರದಾಯಿಕ ವಾಹನಗಳ ಉತ್ಪಾದನೆ ಜೊತೆಗೆ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಮೇಲೂ ವಿಶೇಷ ಆದ್ಯತೆ ನೀಡುತ್ತಿದ್ದು, ಹ್ಯುಂಡೈ ಸಂಸ್ಥೆಯು ಇದೇ ನಿಟ್ಟಿನಲ್ಲಿ ರೂಪಿಸಿ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದೆ.

ಜಿಎಸ್‌ಟಿ ಬದಲಾವಣೆ: ಹ್ಯುಂಡೈ ಕೋನಾ ಇವಿ ಬೆಲೆಯಲ್ಲಿ ರೂ.1.40 ಲಕ್ಷ ಕಡಿತ..!

ಹ್ಯುಂಡೈ ಸಂಸ್ಥೆಯು ಈಗಾಗಲೇ ಯುರೋಪಿನ ಮಾರುಕಟ್ಟೆಗಳಲ್ಲಿ ತನ್ನ ಹೊಸ ಎಲೆಕ್ಟ್ರಿಕ್ ಕಾರು ಮಾದರಿಗಳ ಮಾರಾಟಕ್ಕೆ ಚಾಲನೆ ನೀಡಿದ್ದು, ಇದೀಗ ಮೊದಲ ಬಾರಿಗೆ ಭಾರತದಲ್ಲೂ ಸಹ ಕೋನಾ ಕಾರನ್ನು ಉತ್ತಮ ಬ್ಯಾಟರಿ ಸಾಮರ್ಥ್ಯದೊಂದಿಗೆ ಬಿಡುಗಡೆಗೊಳಿಸಿದೆ.

ಜಿಎಸ್‌ಟಿ ಬದಲಾವಣೆ: ಹ್ಯುಂಡೈ ಕೋನಾ ಇವಿ ಬೆಲೆಯಲ್ಲಿ ರೂ.1.40 ಲಕ್ಷ ಕಡಿತ..!

ಸದ್ಯಕ್ಕೆ ಹ್ಯುಂಡೈ ಸಂಸ್ಥೆಯು ಕೋನಾ ಎಲೆಕ್ಟ್ರಿಕ್ ಕಾರು ಮಾದರಿಯನ್ನು ದಕ್ಷಿಣ ಕೊರಿಯಾದಿಂದಲೇ ಆಮದು ಮಾಡಿಕೊಂಡು ಭಾರತದಲ್ಲಿ ಮಾರಾಟ ಮಾಡಲು ನಿರ್ಧರಿಸಿದ್ದು, ದೇಶಾದ್ಯಂತ ಕಾರ್ಯನಿರ್ವಹಣೆಯಲ್ಲಿರುವ ಆಯ್ದ ಹ್ಯುಂಡೈ ಡೀಲರ್ಸ್‌ಗಳಲ್ಲಿ ಮಾತ್ರವೇ ಕೋನಾ ಎಲೆಕ್ಟ್ರಿಕ್ ಕಾರು ಖರೀದಿಗೆ ಲಭ್ಯವಿರಲಿದೆ.

ಜಿಎಸ್‌ಟಿ ಬದಲಾವಣೆ: ಹ್ಯುಂಡೈ ಕೋನಾ ಇವಿ ಬೆಲೆಯಲ್ಲಿ ರೂ.1.40 ಲಕ್ಷ ಕಡಿತ..!

ಕೋನಾ ಬ್ಯಾಟರಿ ಸಾಮರ್ಥ್ಯ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಎರಡು ಮಾದರಿಯ ಬ್ಯಾಟರಿ ಆಯ್ಕೆಯನ್ನು ಹೊಂದಿರುವ ಕೋನಾ ಎಲೆಕ್ಟ್ರಿಕ್ ಕಾರು 64kWh ಮತ್ತು 39.2kWh ಬ್ಯಾಟರಿ ವೈಶಿಷ್ಟ್ಯತೆಗಳನ್ನು ಹೊಂದಿದೆ. ಇದರಲ್ಲಿ ಸದ್ಯಕ್ಕೆ 39.2kWh ಬ್ಯಾಟರಿ ಸಾಮಾರ್ಥ್ಯ ಮಾದರಿಯನ್ನು ಮಾತ್ರವೇ ಭಾರತದಲ್ಲಿ ಬಿಡುಗಡೆ ಮಾಡಲಾಗಿದ್ದು, 52 ನಿಮಿಷಗಳಲ್ಲಿ ಶೇ.80 ರಷ್ಟು ಬ್ಯಾಟರಿ ಚಾರ್ಜ್‌ ಆಗಬಲ್ಲ ಫಾಸ್ಟ್ ಚಾರ್ಜರ್ ಸೌಲಭ್ಯ ಪಡೆದಿದೆ.

ಜಿಎಸ್‌ಟಿ ಬದಲಾವಣೆ: ಹ್ಯುಂಡೈ ಕೋನಾ ಇವಿ ಬೆಲೆಯಲ್ಲಿ ರೂ.1.40 ಲಕ್ಷ ಕಡಿತ..!

ಹೊಸ ಎಲೆಕ್ಟ್ರಿಕ್ ಕಾರು ಸಾಮಾರ್ಥ್ಯ ಕಾರುಗಳಂತೆಯೇ ಪರ್ಫಾಮೆನ್ಸ್‌ನಲ್ಲೂ ಉತ್ತಮ ಮುನ್ನಡೆ ಕಾಯ್ದುಕೊಂಡಿದ್ದು, 100kW ಫ್ರಂಟ್ ವೀಲ್ಹ್ ಮೋಟಾರ್ ಪವರ್ ಮೂಲಕ 131-ಬಿಎಚ್‌ಪಿ ಮತ್ತು 395-ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಕೇವಲ 9.7-ಸೇಕೆಂಡುಗಳಲ್ಲಿ ಸೊನ್ನೆಯಿಂದ 100ಕಿ.ಮಿ ವೇಗ ತಲುಪಬಲ್ಲದು.

ಜಿಎಸ್‌ಟಿ ಬದಲಾವಣೆ: ಹ್ಯುಂಡೈ ಕೋನಾ ಇವಿ ಬೆಲೆಯಲ್ಲಿ ರೂ.1.40 ಲಕ್ಷ ಕಡಿತ..!

ಕೋನಾ ಕಾರು 155 ಕಿ.ಮಿ ಟಾಪ್ ಸ್ಪೀಡ್ ಸೌಲಭ್ಯವನ್ನು ಹೊಂದಿದ್ದು, ಪೂರ್ಣ ಪ್ರಮಾಣದಲ್ಲಿ ಬ್ಯಾಟರಿ ಚಾರ್ಜ್‌ ಆಗಲು ಕನಿಷ್ಠ 8 ಗಂಟೆ ತೆಗೆದುಕೊಳ್ಳಲಿದೆ. ಹೀಗಾಗಿ ಕೋನಾ ಕಾರಿನಲ್ಲಿ ಫಾಸ್ಟ್ ಚಾರ್ಜಿಂಗ್ ಸೌಲಭ್ಯವು ಆಕರ್ಷಕವಾಗಿದ್ದು, ಶೇ.80 ರಷ್ಟು ಚಾರ್ಜಿಂಗ್ ಮಾಡಲು ಕೇವಲ 52 ನಿಮಿಷ ತೆಗೆದುಕೊಳ್ಳುತ್ತದೆ.

ಜಿಎಸ್‌ಟಿ ಬದಲಾವಣೆ: ಹ್ಯುಂಡೈ ಕೋನಾ ಇವಿ ಬೆಲೆಯಲ್ಲಿ ರೂ.1.40 ಲಕ್ಷ ಕಡಿತ..!

ಕೋನಾ ಕಾರು ಬೆಲೆ ದುಬಾರಿಯಾಗಿದ್ದರೂ ಸಹ ಉತ್ತಮ ಮೈಲೇಜ್ ಮತ್ತು ಪ್ರೀಮಿಯಂ ಫೀಚರ್ಸ್‌ಗಳಿಂದಾಗಿ ಖರೀದಿಗೆ ಉತ್ತಮ ಎನ್ನಿಸಲಿದ್ದು, ಸ್ಪೋರ್ಟಿ ವಿನ್ಯಾಸದ ಜೊತೆಗೆ ಕಾಸ್‌ಕ್ಲಾಡಿಂಗ್ ಫ್ರಂಟ್ ಗ್ರಿಲ್, ಬಾಡಿ ಕಲರ್ ಬಂಪರ್, ಸ್ಲಿಕ್ ಎಲ್ಇಡಿ ಟೈಲ್ ಲೈಟ್ಸ್, ಶಾರ್ಪ್ ಶೋಲ್ಡ್‌ರ್ ಲೈನ್ಸ್, ರಿಯರ್ ಸ್ಪಾಯ್ಲರ್ ನೀಡಿರುವುದು ಹೊಸ ಕಾರಿಗೆ ಮತ್ತಷ್ಟು ಆಕರ್ಷಣೆಯಾಗುವಂತೆ ಮಾಡಿದೆ.

ಜಿಎಸ್‌ಟಿ ಬದಲಾವಣೆ: ಹ್ಯುಂಡೈ ಕೋನಾ ಇವಿ ಬೆಲೆಯಲ್ಲಿ ರೂ.1.40 ಲಕ್ಷ ಕಡಿತ..!

ಹೊರವಿನ್ಯಾಸದಲ್ಲಿ ಮಾತ್ರವಲ್ಲದೇ ಕಾರಿನ ಒಳಭಾಗದ ವಿನ್ಯಾಸವು ಸಹ ಎಲೆಕ್ಟ್ರಿಕ್ ಕಾರು ಖರೀದಿದಾರನ್ನು ಸೆಳೆಯುಲಿದ್ದು, ಬ್ಲ್ಯಾಕ್ ಥೀಮ್ ಡ್ಯಾಶ್‌ಬೋರ್ಡ್, ಹೋಂದಾಣಿಕೆ ಮಾಡಬಹುದಾದ 8-ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ, ಡಿಜಿಟಲ್ ಇನ್‌ಸ್ಟುಮೆಂಟ್ ಕ್ಲಸ್ಟರ್, ವೆಂಟಿಲೆಟೆಡ್ ಲೆದರ್ ಸೀಟುಗಳು, ಲೆದರ್ ಹೊದಿಕೆಯ ಸ್ಟಿರಿಂಗ್ ವೀಲ್ಹ್ ಮೌಂಟ್, 10 ಹಂತದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಲ್ಲ ಚಾಲಕನ ಸೀಟು ಮತ್ತು ಎಲೆಕ್ಟ್ರಿಕ್ ಸನ್‌ರೂಫ್ ಸೌಲಭ್ಯ ಈ ಕಾರಿನಲ್ಲಿದೆ.

ಜಿಎಸ್‌ಟಿ ಬದಲಾವಣೆ: ಹ್ಯುಂಡೈ ಕೋನಾ ಇವಿ ಬೆಲೆಯಲ್ಲಿ ರೂ.1.40 ಲಕ್ಷ ಕಡಿತ..!

ಹಾಗೆಯೇ ಸುರಕ್ಷತೆಗೂ ಕೋನಾ ಕಾರಿನಲ್ಲಿ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಆರು ಏರ್‌ಬ್ಯಾಗ್‌ಗಳು, ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ತುರ್ತು ಕರೆ ಸೌಲಭ್ಯ, ಎಬಿಎಸ್ ಜೊತೆ ಇಬಿಡಿ, ರೀ ಜನರೇಟಿವ್ ಬ್ರೇಕಿಂಗ್ ಸಿಸ್ಟಂ, ಆಲ್ ವೀಲ್ಹ್ ಡಿಸ್ಕ್ ಬ್ರೇಕ್ ಮತ್ತು ವಿವಿಧ ಮಾದರಿಯ ಚಾಲನಾ ಅನುಭವಕ್ಕಾಗಿ ಇಕೋ, ಇಕೋ ಪ್ಲಸ್, ಕಂಫರ್ಟ್ ಮತ್ತು ಸ್ಪೋರ್ಟ್ ಡ್ರೈವ್ ಮೋಡ್‌ಗಳನ್ನು ಬದಲಿಸಿಕೊಳ್ಳಬಹುದಾಗಿದೆ.

Article Published On: Monday, July 15, 2019, 20:07 [IST]
English summary
The Hyundai Kona Electric May Witness A Rs 1.40 Lakh Price Drop. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+