ಜಿಟಿಎಸ್ ದರದಲ್ಲಿ ಇಳಿಕೆ- ಹ್ಯುಂಡೈ ಕೋನಾ ಬೆಲೆಯಲ್ಲಿ ಭಾರೀ ಕಡಿತ

ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ಹಲವಾರು ಮಹತ್ವದ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಎಲೆಕ್ಟ್ರಿಕ್ ವಾಹನಗಳನ್ನು ಉತ್ಪಾದಿಸುವ ಮತ್ತು ಖರೀದಿಸುವ ಗ್ರಾಹಕರಿಗೂ ಕೂಡಾ ವಿವಿಧ ಹೊಸ ಯೋಜನೆಗಳನ್ನು ಘೋಷಿಸಿದೆ. ಇದರಲ್ಲಿ ಪ್ರಮುಖವಾಗಿ ಜಿಎಸ್‌ಟಿ ದರ ಇಳಿಕೆಯು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವ ಗ್ರಾಹಕರಿಗೆ ವರದಾನವಾಗಿದ್ದು, ಹ್ಯುಂಡೈ, ಟಾಟಾ ಸೇರಿದಂತೆ ಪ್ರಮುಖ ಎಲೆಕ್ಟ್ರಿಕ್ ವಾಹನ ಉತ್ಪಾದನಾ ಸಂಸ್ಥೆಗಳು ತಮ್ಮ ಎಲೆಕ್ಟ್ರಿಕ್ ಕಾರುಗಳ ಬೆಲೆಗಳನ್ನು ಕಡಿತಗೊಳಿಸಿವೆ.

ಜಿಟಿಎಸ್ ದರದಲ್ಲಿ ಇಳಿಕೆ- ಹ್ಯುಂಡೈ ಕೋನಾ ಬೆಲೆಯಲ್ಲಿ ಭಾರೀ ಕಡಿತ

ಹೆಚ್ಚುತ್ತಿರುವ ಮಾಲಿನ್ಯ ಪ್ರಮಾಣವನ್ನು ತಗ್ಗಿಸಲು ಡೀಸೆಲ್ ಮತ್ತು ಪೆಟ್ರೋಲ್ ವಾಹನಗಳ ಮಾರಾಟದ ಮೇಲೆ ಹೆಚ್ಚಿನ ಮಟ್ಟದ ಸೆಸ್ ಸೇರಿದಂತೆ ದುಬಾರಿ ನೋಂದಣಿ ಶುಲ್ಕ ವಿಧಿಸುತ್ತಿರುವ ಕೇಂದ್ರ ಸರ್ಕಾರವು ಅದಕ್ಕೆ ಪರ್ಯಾಯವಾಗಿ ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸಲು ಕ್ರಮಕೈಗೊಳ್ಳುತ್ತಿದೆ. ಈ ಹಿಂದೆ ಫೇಮ್ ಯೋಜನೆಯ ಮೂಲಕ ಸಬ್ಸಡಿ ಯೋಜನೆಯನ್ನು ಘೋಷಿಸಿದ್ದ ಕೇಂದ್ರವು ಈ ಬಾರಿ ಜಿಎಸ್‌ಟಿ ಪ್ರಮಾಣದಲ್ಲಿ ಭಾರೀ ಕಡಿತ ಮಾಡಿರುವುದು ಹೊಸ ಬದಲಾವಣೆಗೆ ಕಾರಣವಾಗಿದೆ.

ಜಿಟಿಎಸ್ ದರದಲ್ಲಿ ಇಳಿಕೆ- ಹ್ಯುಂಡೈ ಕೋನಾ ಬೆಲೆಯಲ್ಲಿ ಭಾರೀ ಕಡಿತ

ಎಲೆಕ್ಟ್ರಿಕ್ ವಾಹನಗಳ ಮೇಲೆ ಈ ಹಿಂದೆ ವಿಧಿಸಲಾಗುತ್ತಿದ್ದ ಜಿಎಸ್‌ಟಿ ಪ್ರಮಾಣವನ್ನು ನೀತಿ ಆಯೋಗದ ಶಿಫಾರಸ್ಸು ಮೇರೆಗೆ ಶೇ.12ರಿಂದ ಶೇ.5ಕ್ಕೆ ಇಳಿಕೆ ಮಾಡಲಾಗಿದ್ದು, ಇದು ಎಲೆಕ್ಟ್ರಿಕ್ ವಾಹನಗಳನ್ನು ಉತ್ಪಾದಿಸುವ ಸಂಸ್ಥೆಗಳ ಜೊತೆಗೆ ಎಲೆಕ್ಟ್ರಕ್ ವಾಹನ ಖರೀದಿದಾರರಿಗೂ ಸಾಕಷ್ಟು ಸಹಕಾರಿಯಾಗಲಿದೆ.

ಜಿಟಿಎಸ್ ದರದಲ್ಲಿ ಇಳಿಕೆ- ಹ್ಯುಂಡೈ ಕೋನಾ ಬೆಲೆಯಲ್ಲಿ ಭಾರೀ ಕಡಿತ

ಕೇಂದ್ರ ಸರ್ಕಾರದ ಹೊಸ ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿರುವ ಜಿಎಸ್‌ಟಿ ದರ ಕಡಿತ ಯೋಜನೆಯನ್ನು ಅಗಸ್ಟ್ 1ರಿಂದಲೇ ಅನ್ವಯವಾಗುವಂತೆ ಜಾರಿಗೆ ತರಲಾಗಿದ್ದು, ಪ್ರಮುಖ ಎಲೆಕ್ಟ್ರಿಕ್ ವಾಹನಗಳ ಬೆಲೆಯಲ್ಲಿ ಶೇ.5 ರಿಂದ ಶೇ.8 ರಷ್ಟು ಬೆಲೆ ಇಳಿಕೆಯಾಗಿವೆ.

ಜಿಟಿಎಸ್ ದರದಲ್ಲಿ ಇಳಿಕೆ- ಹ್ಯುಂಡೈ ಕೋನಾ ಬೆಲೆಯಲ್ಲಿ ಭಾರೀ ಕಡಿತ

ಕಳೆದ ತಿಂಗಳ ಹ್ಯುಂಡೈ ಇಂಡಿಯಾ ಸಂಸ್ಥೆಯು ತನ್ನ ಬಹುನೀರಿಕ್ಷಿತ ಕೋನಾ ಎಲೆಕ್ಟ್ರಿಕ್ ಕಾರನ್ನು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 25.30 ಲಕ್ಷಕ್ಕೆ ಬಿಡುಗಡೆ ಮಾಡಿತ್ತು. ಇದೀಗ ಜಿಎಸ್‌ಟಿ ಕೌನ್ಸಿಲ್ ತೆಗೆದುಕೊಂಡ ಕೆಲವು ಮಹತ್ವದ ನಿರ್ಣಯದಿಂದಾಗಿ ಕೋನಾ ಎಲೆಕ್ಟ್ರಿಕ್ ಕಾರಿನ ಬೆಲೆಯಲ್ಲಿ ಭಾರೀ ಕಡಿತವಾಗಿದ್ದು, ಬಿಡುಗಡೆಯ ಸಂದರ್ಭದಲ್ಲಿ ನೀಡಲಾಗಿದ್ದ ರೂ. 25.30 ಲಕ್ಷ ಬೆಲೆಯು ಇದೀಗ ರೂ.23.71 ಲಕ್ಷಕ್ಕೆ ಇಳಿಕೆಯಾಗಿದೆ. ಅಂದರೆ, 1.59 ಲಕ್ಷ ಇಳಿಕೆಯಾಗಿದ್ದು, ಹೊಸ ಆದೇಶದಿಂದಾಗಿ ಎಲೆಕ್ಟ್ರಿಕ್ ವಾಹನ ಖರೀದಿದಾರರು ಮತ್ತು ಎಲೆಕ್ಟ್ರಿಕ್ ವಾಹನ ಉತ್ಪಾದನಾ ಸಂಸ್ಥೆಗಳು ಇದಕ್ಕೆ ಹರ್ಷ ವ್ಯಕ್ತಪಡಿಸಿವೆ.

ಜಿಟಿಎಸ್ ದರದಲ್ಲಿ ಇಳಿಕೆ- ಹ್ಯುಂಡೈ ಕೋನಾ ಬೆಲೆಯಲ್ಲಿ ಭಾರೀ ಕಡಿತ

ಹೊಸ ಯೋಜನೆಯಿಂದಾಗಿ ಎಲೆಕ್ಟ್ರಿಕ್ ವಾಹನ ಬೆಲೆ ಕಡಿಮೆಯಾಗಿ ಮಾರಾಟ ಪ್ರಮಾಣವು ಹೆಚ್ಚಲಿದ್ದು, ಡೀಸೆಲ್ ಮತ್ತು ಪೆಟ್ರೋಲ್ ವಾಹನಗಳ ಮೇಲೆ ಗ್ರಿನ್ ಸೆಸ್ ಹೆಚ್ಚಾಗುವುದರಿಂದ ಎಲೆಕ್ಟ್ರಿಕ್ ವಾಹನಗಳಿಗೂ ಇದು ಪೂರಕವಾಗಿದೆ.

ಜಿಟಿಎಸ್ ದರದಲ್ಲಿ ಇಳಿಕೆ- ಹ್ಯುಂಡೈ ಕೋನಾ ಬೆಲೆಯಲ್ಲಿ ಭಾರೀ ಕಡಿತ

ಇವಿ ಖರೀದಿ ಮೇಲೆ ತೆರಿಗೆ ವಿನಾಯ್ತಿ..!

ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವ ಗ್ರಾಹಕರಿಗೆ ತೆರಿಗೆ ವಿನಾಯ್ತಿ ಸಹ ನೀಡಿದ್ದು, ಬರೋಬ್ಬರಿ 1.5 ಲಕ್ಷದವರೆಗೆ ತೆರಿಗೆ ವಿನಾಯ್ತಿಯನ್ನು ಪಡೆದುಕೊಳ್ಳಬಹುದಾಗಿದೆ. ಜೊತೆಗೆ ಈ ಹಿಂದಿನ ಫೇಮ್ 2 ಯೋಜನೆ ಅಡಿಯಲ್ಲಿ ಘೋಷಣೆ ಮಾಡಲಾಗಿರುವ ಸಬ್ಸಡಿ ಯೋಜನೆಯನ್ನು ಸಹ ಮುಂದುವರಿಸಲಾಗಿದೆ.

ಜಿಟಿಎಸ್ ದರದಲ್ಲಿ ಇಳಿಕೆ- ಹ್ಯುಂಡೈ ಕೋನಾ ಬೆಲೆಯಲ್ಲಿ ಭಾರೀ ಕಡಿತ

ಈ ಹಿಂದೆ 2018ರಲ್ಲಿ ಘೋಷಣೆ ಮಾಡಲಾಗಿರುವ ಫೇಮ್ 2 ಯೋಜನೆಯಲ್ಲಿ ಎಲೆಕ್ಟ್ರಿಕ್ ವಾಹನಗಳ ಅಭಿವೃದ್ಧಿ ಮತ್ತು ಬೆಳವಣಿಗಾಗಿ ರೂ. 10 ಸಾವಿರ ಕೋಟಿ ಮೀಸಲು ಇರಿಸಲಾಗಿದ್ದು, 2018-19, 2019-20 ಮತ್ತು 2020-21ರ ಆರ್ಥಿಕ ವರ್ಷದ ಅವಧಿಗಾಗಿ ಈ ಮೀಸಲು ಹಣವನ್ನು ಖರ್ಚು ಮಾಡಲು ನಿರ್ಧರಿಸಲಾಗಿದೆ.

ಜಿಟಿಎಸ್ ದರದಲ್ಲಿ ಇಳಿಕೆ- ಹ್ಯುಂಡೈ ಕೋನಾ ಬೆಲೆಯಲ್ಲಿ ಭಾರೀ ಕಡಿತ

ಫೇಮ್ 2 ಯೋಜನೆ ಅಡಿ ಸಬ್ಸಡಿ ಸೇರಿದಂತೆ ಎಲೆಕ್ಟ್ರಿಕ್ ಚಾರ್ಜಿಂಗ್ ಸ್ಟೆಷನ್‌ಗಳ ನಿರ್ಮಾಣಕ್ಕಾಗಿ ಹೆಚ್ಚಿನ ಮಟ್ಟದಲ್ಲಿ ಹಣ ವಿನಿಯೋಗ ಮಾಡಲಾಗುತ್ತಿದ್ದು, ಇದೀಗ ಜಿಟಿಎಸ್ ತಗ್ಗಿಸಿರುವುದು ಇವಿ ವಾಹನಗಳನ್ನು ಖರೀದಿಸುವ ಗ್ರಾಹಕರಿಗೆ ಇದು ಮತ್ತಷ್ಟು ಸಹಕಾರಿಯಾಗಿಲಿದೆ.

ಜಿಟಿಎಸ್ ದರದಲ್ಲಿ ಇಳಿಕೆ- ಹ್ಯುಂಡೈ ಕೋನಾ ಬೆಲೆಯಲ್ಲಿ ಭಾರೀ ಕಡಿತ

ಈ ಮೂಲಕ 2030ರ ವೇಳೆಗೆ ಶೇ.100 ರಷ್ಟು ವಾಹನಗಳನ್ನು ರಸ್ತೆಗಿಳಿಸಬೇಕೆಂಬ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗೆ ಹೊಸ ಬಜೆಟ್ ಪೂರಕವಾಗಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿರುವ ಎಲೆಕ್ಟ್ರಿಕ್ ಸ್ಕೂಟರ್ ಬೆಲೆಗಳಲ್ಲಿ ರೂ.8 ಸಾವಿರದಿಂದ ರೂ.12 ಸಾವಿರ ಬೆಲೆ ಇಳಿಕೆಯಾಗಲಿದೆ.

Article Published On: Saturday, August 3, 2019, 11:24 [IST]
English summary
Hyundai Announces Reduction In Price For Kona Electric — Details And New Prices.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+