Just In
Don't Miss!
- News
ರೈತರು 2024ರವರೆಗೂ ಪ್ರತಿಭಟನೆ ನಡೆಸಲು ಸಿದ್ಧರಿದ್ದಾರೆ:ಭಾರತೀಯ ಕಿಸಾನ್ ಯೂನಿಯನ್
- Finance
Gold, Silver Rate: ಪ್ರಮುಖ ನಗರಗಳಲ್ಲಿ ಜ. 17ರ ಚಿನ್ನ, ಬೆಳ್ಳಿ ದರ
- Sports
ಐಎಸ್ಎಲ್: ಜೆಮ್ಷೆಡ್ಪುರಕ್ಕೆ ಆಘಾತ ನೀಡಿದ ನಾರ್ಥ್ಈಸ್ಟ್
- Movies
ಹರ ಜಾತ್ರೆಯಲ್ಲಿ ಪುನೀತ್ ರಾಜ್ ಕುಮಾರ್; ಅಪ್ಪು ಹಾಡು ಕೇಳಿ ಸಂಭ್ರಮಿಸಿದ ಅಭಿಮಾನಿಗಳು
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಜುಲೈ 9ರಂದು ಹ್ಯುಂಡೈ ಮೊದಲ ಎಲೆಕ್ಟ್ರಿಕ್ ಕಾರು ಕೊನಾ ಬಿಡುಗಡೆ ಪಕ್ಕಾ..!
ಹ್ಯುಂಡೈ ಸಂಸ್ಥೆಯು ದೇಶಿಯ ಮಾರುಕಟ್ಟೆಯಲ್ಲಿ ತನ್ನ ಜನಪ್ರಿಯ ಎಲೆಕ್ಟ್ರಿಕ್ ಕಾರು ಕೊನಾ ಬಿಡುಗಡೆ ಮಾಹಿತಿಯನ್ನು ಹಂಚಿಕೊಂಡಿದ್ದು, ಹೊಸ ಕಾರುನ್ನು ಅತಿ ಕಡಿಮೆ ಬೆಲೆಗಳಲ್ಲಿ ಅತ್ಯುತ್ತಮ ಮೈಲೇಜ್ ಸಾಮರ್ಥ್ಯದೊಂದಿಗೆ ರಸ್ತೆಗಿಳಿಸುವ ಸುಳಿವು ನೀಡಿದೆ.

ಹೌದು, ದೇಶಾದ್ಯಂತ ಎಲೆಕ್ಟ್ರಿಕ್ ವಾಹನಗಳ ಬಳಕೆ ಅತಿ ಅವಶ್ಯಕವಾಗಿ ಪರಿಣಮಿಸಿದ್ದು, ಬಹುತೇಕ ಕಾರು ಉತ್ಪಾದನಾ ಸಂಸ್ಥೆಗಳು ಮುಂದಿನ ಕೆಲವೇ ದಿನಗಳಲ್ಲಿ ತಮ್ಮ ಬಹುನೀರಿಕ್ಷಿತ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡುತ್ತಿವೆ. ಇವುಗಳಲ್ಲಿ ಹ್ಯುಂಡೈ ನಿರ್ಮಾಣದ ಕೊನಾ ಕೂಡಾ ಸಾಕಷ್ಟು ನೀರಿಕ್ಷೆ ಹುಟ್ಟುಹಾಕಿದ್ದು, ಮುಂದಿನ ತಿಂಗಳು ಜುಲೈ 9ರಂದು ಹೊಸ ಎಲೆಕ್ಟ್ರಿಕ್ ಕಾರನ್ನು ಬಿಡುಗಡೆ ಮಾಡುತ್ತಿರುವ ಹ್ಯುಂಡೈ ಹಿರಿಯ ಅಧಿಕಾರಿಗಳೇ ಮಾಹಿತಿ ಹಂಚಿಕೊಂಡಿದ್ದಾರೆ.

ಸದ್ಯ ಕಾರು ಮಾರಾಟದಲ್ಲಿ ಮಾರುತಿ ಸುಜುಕಿ ನಂತರ ಎರಡನೇ ಸ್ಥಾನದಲ್ಲಿರುವ ಹ್ಯುಂಡೈ ಸಂಸ್ಥೆಯು ಭವಿಷ್ಯದ ವಾಹನ ಮಾದರಿಗಳ ಅಭಿವೃದ್ಧಿ ಮತ್ತು ಮಾರಾಟ ಮೇಲೆ ಹೆಚ್ಚಿನ ಆಸಕ್ತಿ ವಹಿಸಿದ್ದು, ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಹೊಸ ಸಂಚಲನ ಸೃಷ್ಠಿಸುವ ನಿಟ್ಟಿನಲ್ಲಿ ತನ್ನ ಬಹುನೀರಿಕ್ಷಿತ ಕೊನಾ ಎಸ್‌ಯುವಿ ಕಾರನ್ನು ಬಿಡುಗಡೆ ಮಾಡುತ್ತಿದೆ.

ಕೊನಾ ಎಲೆಕ್ಟ್ರಿಕ್ ಮಾದರಿಯನ್ನು ಈಗಾಗಲೇ ದೇಶಾದ್ಯಂತ ರೋಡ್ ಟೆಸ್ಟ್ ನಡೆಸಿರುವ ಹ್ಯುಂಡೈ ಸಂಸ್ಥೆಯು ಅತಿ ಕಡಿಮೆ ಬೆಲೆಯಲ್ಲಿ ಉತ್ತಮ ಮೈಲೇಜ್ ಪ್ರೇರಿತ ಕೊನಾ ಕಾರನ್ನು ಬಿಡುಗಡೆಗೊಳಿಸುವ ಸುಳಿವು ನೀಡಿದ್ದು, ಸಾಂಪ್ರದಾಯಿಕ ಕಾರು ಮಾದರಿಗಳಂತೆ ಇದು ಕೂಡಾ ಮಾರಾಟದಲ್ಲಿ ಮುಂಚೂಣಿ ಸಾಧಿಸುವ ನೀರಿಕ್ಷೆಯಲ್ಲಿದೆ.

ಎರಡು ವಿಭಿನ್ನ ಪವರ್ ಟ್ರೈನ್ ಗಳಿಂದ ಸಿದ್ದವಾಗಿರುವ ಕೋನಾ ಕಾರು ಮಾದರಿಗಳು ಪ್ರತಿ ಚಾರ್ಜ್‌ಗೆ 300 ಕಿ.ಮೀ ನಿಂದ ಹೈ ಎಂಡ್ ಮಾದರಿಯು 400 ಕಿ.ಮೀ.ವರೆಗೆ ಮೈಲೇಜ್ ಸಾಮರ್ಥ್ಯವನ್ನು ಹೊಂದಿದ್ದು, ಎಲೆಕ್ಟ್ರಿಕ್ ಕಾರು ಆವೃತ್ತಿಗಳಲ್ಲೇ ಅತಿ ಹೆಚ್ಚು ಬೇಡಿಕೆ ಪಡೆಯುವ ಎಲ್ಲಾ ಗುಣಲಕ್ಷಣಗಳು ಈ ಹೊಸ ಕಾರಿನಲ್ಲಿವೆ.
ಮಾಹಿತಿಗಳ ಪ್ರಕಾರ, ಹ್ಯುಂಡೈ ಸಂಸ್ಥೆಯು ಕಾರಿನ ಎಲೆಕ್ಟ್ರಿಕ್ ಪವರ್ ಟ್ರೈನ್ ನಿರ್ಮಿಸಲು ಎಲ್‌ಜಿ ಕೆಮಿಕಲ್ಸ್ ಜೊತೆ ಕೈಜೋಡಿಸಿದ್ದು, ಇದೇ ಬ್ಯಾಟರಿಯನ್ನು ಚೆವಿ ಬೋಲ್ಟ್ ಹ್ಯಾಚ್ ಬ್ಯಾಕ್ ಕಾರಿನಲ್ಲೂ ಕೂಡಾ ಇರಿಸಲಾಗಿರಲಿದೆ ಎನ್ನಲಾಗಿದೆ.

ಬ್ಯಾಟರಿ ವೈಶಿಷ್ಟ್ಯತೆ
ಕೋನಾ ಕಾರುಗಳಲ್ಲಿ ಎರಡು ಮಾದರಿಯ ಬ್ಯಾಟರಿ ಚಾಲಿತ ವಿಭಾಗಗಳಿದ್ದು, ಗ್ರಾಹಕರು ಬೇಡಿಕೆಗೆ ಅನುಗುಣವಾಗಿ 39. 2 ಕೆವಿ ಮತ್ತು 64 ಕೆವಿ ಬ್ಯಾಟರಿಯನ್ನು ಆಯ್ಕೆ ಮಾಡಬಹುದು. 39.2 ಕೆವಿ ಪ್ರೇರಿತ ಕೋನಾ ಕಾರುಗಳಿಗಿಂತಲೂ 64 ಕೆ.ವಿ ಪ್ರೇರಿತ ಕೋನಾ ಕಾರುಗಳು ಬೆಲೆಯಲ್ಲಿ ತುಸು ದುಬಾರಿ ಎನ್ನಿಸಲಿವೆ.

ಇನ್ನು ಹ್ಯುಂಡೈ ಸಂಸ್ಥೆಯು ಜಾಗತಿಕ ಮಾರುಕಟ್ಟೆಗಳಲ್ಲಿ ಈಗಾಗಲೇ ಎಲೆಕ್ಟ್ರಿಕ್ ಕಾರುಗಳ ನಿರ್ಮಾಣಕ್ಕಾಗಿ ಹೊಸ ಘಟಕಗಳಿಗೆ ಚಾಲನೆ ನೀಡಿದ್ದು, ಭಾರತದಲ್ಲಿ ಅಭಿವೃದ್ಧಿಗೊಳಿಸಲು ನಿರ್ಧರಿಸುವ ಹೊಸ ಎಲೆಕ್ಟ್ರಿಕ್ ಕಾರು ನಿರ್ಮಾಣ ಘಟಕದ ಸ್ಥಾಪನೆಗಾಗಿ ಹಂತ ಹಂತವಾಗಿ ಬರೋಬ್ಬರಿ ರೂ. 7 ಸಾವಿರ ಕೋಟಿ ಹೂಡಿಕೆ ಮಾಡುತ್ತಿದೆ.

ಭಾರತದಲ್ಲಿ ಸದ್ಯ ತಮಿಳುನಾಡಿನ ಚೆನ್ನೈ ಬಳಿ ಒಂದೇ ಒಂದು ಕಾರು ಉತ್ಪಾದನಾ ಘಟಕವನ್ನು ಹೊಂದಿರುವ ಹ್ಯುಂಡೈ ಸಂಸ್ಥೆಯು ವಿವಿಧ ಸಂಸ್ಥೆಗಳ ಜೊತೆಗೂಡಿ ಬೀಡಿಭಾಗಗಳನ್ನು ಆಮದು ಮಾಡಿಕೊಳ್ಳುವ ಮೂಲಕ ಕಾರು ಮಾರಾಟ ಮಾಡುತ್ತಿದೆ.

ಇದೀಗ ಇದೇ ಘಟಕವನ್ನು ವಿಸ್ತರಿಸಲು ನಿರ್ಧರಿಸಿರುವ ಹ್ಯುಂಡೈ, ಎಲೆಕ್ಟ್ರಿಕ್ ಕಾರುಗಳ ನಿರ್ಮಾಣಕ್ಕೂ ಸಹಕಾರಿಯಾಗುವಂತೆ ಹೊಸ ಪ್ಲ್ಯಾಟ್‌ಫಾರ್ಮ್ ಸಿದ್ದಗೊಳಿಸುತ್ತಿದ್ದು, ಕೊನಾ ಸೇರಿದಂತೆ ಇನ್ನು ಮೂರು ವಿವಿಧ ಮಾದರಿಯ ಎಲೆಕ್ಟ್ರಿಕ್ ಕಾರುಗಳನ್ನು ಇಲ್ಲಿಯೇ ನಿರ್ಮಾಣ ಮಾಡಿ ವಿದೇಶಿ ಮಾರುಕಟ್ಟೆಗಳಿಗೂ ಇಲ್ಲಿಂದಲೇ ರಫ್ತು ಮಾಡುವ ಯೋಜನೆಯಲ್ಲಿದೆ.
MOST READ: ನಿಮ್ಮ ವಾಹನಗಳ ಮೈಲೇಜ್ ಕಡಿತವಾಗುತ್ತಿರುವುದಕ್ಕೆ ಅಸಲಿ ಕಾರಣ ಏನು ಗೊತ್ತಾ?

ಕೊನಾ ಕಾರುಗಳ ಬೆಲೆ(ಅಂದಾಜು)
ಅತ್ಯುತ್ತಮ ಬ್ಯಾಟರಿ ಬಳಕೆಯ ಜೊತೆ ಅಧಿಕ ಮೈಲೇಜ್ ರೇಂಜ್ ಹೊಂದಿರುವ ಕೊನಾ ಕಾರುಗಳ ಬೆಲೆಯು ಭಾರತದಲ್ಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.18 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.22 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.