ಜುಲೈ 9ರಂದು ಬಿಡುಗಡೆಯಾಗಲಿರುವ ಹ್ಯುಂಡೈ ಕೊನಾ ಎಲೆಕ್ಟ್ರಿಕ್ ಕಾರಿನ ಸ್ಪೆಷಲ್ ಏನು?

ಹ್ಯುಂಡೈ ಸಂಸ್ಥೆಯು ಭಾರತದಲ್ಲಿ ಕಳೆದ ವಾರವಷ್ಟೇ ತನ್ನ ವೆನ್ಯೂ ಕಾರನ್ನು ಬಿಡುಗಡೆಗೊಳಿಸಿ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಇದೀಗ ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲೂ ಸಂಚಲನಕ್ಕೆ ಕಾರಣವಾಗಿರುವ ಕೊನಾ ಕಾರನ್ನು ಬಿಡುಗಡೆ ಮಾಡುತ್ತಿದೆ.

ಜುಲೈ 9ರಂದು ಬಿಡುಗಡೆಯಾಗಲಿರುವ ಹ್ಯುಂಡೈ ಕೊನಾ ಎಲೆಕ್ಟ್ರಿಕ್ ಕಾರಿನ ಸ್ಪೆಷಲ್ ಏನು?

ದೇಶಾದ್ಯಂತ ಎಲೆಕ್ಟ್ರಿಕ್ ವಾಹನಗಳ ಬಳಕೆ ಅತಿಅವಶ್ಯಕವಾಗಿ ಪರಿಣಮಿಸಿದ್ದು, ಬಹುತೇಕ ಕಾರು ಉತ್ಪಾದನಾ ಸಂಸ್ಥೆಗಳು ಮುಂದಿನ ಕೆಲವೇ ದಿನಗಳಲ್ಲಿ ತಮ್ಮ ಬಹುನೀರಿಕ್ಷಿತ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡುತ್ತಿವೆ. ಇವುಗಳಲ್ಲಿ ಹ್ಯುಂಡೈ ನಿರ್ಮಾಣದ ಕೊನಾ ಕೂಡಾ ಸಾಕಷ್ಟು ನೀರಿಕ್ಷೆ ಹುಟ್ಟುಹಾಕಿದ್ದು, ಜುಲೈ 9ರಂದು ಬಿಡುಗಡೆಯಾಗಲಿರುವ ಹೊಸ ಕಾರಿನ ವಿಶೇಷತೆ ಬಗೆಗೆ ಇಲ್ಲಿ ಸಂಪೂರ್ಣ ಮಾಹಿತಿ ಹಂಚಿಕೊಳ್ಳಲಾಗಿದೆ.

ಜುಲೈ 9ರಂದು ಬಿಡುಗಡೆಯಾಗಲಿರುವ ಹ್ಯುಂಡೈ ಕೊನಾ ಎಲೆಕ್ಟ್ರಿಕ್ ಕಾರಿನ ಸ್ಪೆಷಲ್ ಏನು?

ಸದ್ಯ ಕಾರು ಮಾರಾಟದಲ್ಲಿ ಮಾರುತಿ ಸುಜುಕಿ ನಂತರ ಎರಡನೇ ಸ್ಥಾನದಲ್ಲಿರುವ ಹ್ಯುಂಡೈ ಸಂಸ್ಥೆಯು ಭವಿಷ್ಯ ವಾಹನ ಮಾದರಿಗಳ ಅಭಿವೃದ್ಧಿ ಮತ್ತು ಮಾರಾಟ ಮೇಲೆ ಹೆಚ್ಚಿನ ಆಸಕ್ತಿ ವಹಿಸಿದ್ದು, ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಹೊಸ ಸಂಚಲನ ಸೃಷ್ಠಿಸುವ ನಿಟ್ಟಿನಲ್ಲಿ ತನ್ನ ಬಹುನೀರಿಕ್ಷಿತ ಕೊನಾ ಎಸ್‌ಯುವಿ ಕಾರನ್ನು ಬಿಡುಗಡೆ ಮಾಡುತ್ತಿದೆ.

ಜುಲೈ 9ರಂದು ಬಿಡುಗಡೆಯಾಗಲಿರುವ ಹ್ಯುಂಡೈ ಕೊನಾ ಎಲೆಕ್ಟ್ರಿಕ್ ಕಾರಿನ ಸ್ಪೆಷಲ್ ಏನು?

ಕೊನಾ ಎಲೆಕ್ಟ್ರಿಕ್ ಮಾದರಿಯನ್ನು ಈಗಾಗಲೇ ದೇಶಾದ್ಯಂತ ರೋಡ್ ಟೆಸ್ಟ್ ನಡೆಸಿರುವ ಹ್ಯುಂಡೈ ಸಂಸ್ಥೆಯು ಅತಿ ಕಡಿಮೆ ಬೆಲೆಯಲ್ಲಿ ಉತ್ತಮ ಮೈಲೇಜ್ ಪ್ರೇರಿತ ಕೊನಾ ಕಾರನ್ನು ಬಿಡುಗಡೆಗೊಳಿಸುವ ಸುಳಿವು ನೀಡಿದ್ದು, ಸಾಂಪ್ರದಾಯಿಕ ಕಾರು ಮಾದರಿಗಳಂತೆ ಇದು ಕೂಡಾ ಮಾರಾಟದಲ್ಲಿ ಮುಂಚೂಣಿ ಸಾಧಿಸುವ ನೀರಿಕ್ಷೆಯಲ್ಲಿದೆ.

ಜುಲೈ 9ರಂದು ಬಿಡುಗಡೆಯಾಗಲಿರುವ ಹ್ಯುಂಡೈ ಕೊನಾ ಎಲೆಕ್ಟ್ರಿಕ್ ಕಾರಿನ ಸ್ಪೆಷಲ್ ಏನು?

ಎರಡು ವಿಭಿನ್ನ ಪವರ್ ಟ್ರೈನ್ ಗಳಿಂದ ಸಿದ್ದವಾಗಿರುವ ಕೋನಾ ಕಾರು ಮಾದರಿಗಳು ಪ್ರತಿ ಚಾರ್ಜ್‌ಗೆ 299 ಕಿ.ಮೀ ಮತ್ತು ಹೈ ಎಂಡ್ ಮಾದರಿಯು 469 ಕಿ.ಮೀ.ವರೆಗೆ ಮೈಲೇಜ್ ಸಾಮರ್ಥ್ಯವನ್ನು ಹೊಂದಿದ್ದು, ಎಲೆಕ್ಟ್ರಿಕ್ ಕಾರು ಆವೃತ್ತಿಗಳಲ್ಲೇ ಅತಿ ಹೆಚ್ಚು ಬೇಡಿಕೆ ಪಡೆಯುವ ಎಲ್ಲಾ ಗುಣಲಕ್ಷಣಗಳು ಈ ಹೊಸ ಕಾರಿನಲ್ಲಿವೆ.

ಮಾಹಿತಿಗಳ ಪ್ರಕಾರ, ಹ್ಯುಂಡೈ ಸಂಸ್ಥೆಯು ಕಾರಿನ ಎಲೆಕ್ಟ್ರಿಕ್ ಪವರ್ ಟ್ರೈನ್ ನಿರ್ಮಿಸಲು ಎಲ್‌ಜಿ ಕೆಮಿಕಲ್ಸ್ ಜೊತೆ ಕೈಜೋಡಿಸಿದ್ದು, ಇದೇ ಬ್ಯಾಟರಿಯನ್ನು ಚೆವಿ ಬೋಲ್ಟ್ ಹ್ಯಾಚ್ ಬ್ಯಾಕ್ ಕಾರಿನಲ್ಲೂ ಕೂಡಾ ಇರಿಸಲಾಗಿರಲಿದೆ ಎನ್ನಲಾಗಿದೆ.

ಜುಲೈ 9ರಂದು ಬಿಡುಗಡೆಯಾಗಲಿರುವ ಹ್ಯುಂಡೈ ಕೊನಾ ಎಲೆಕ್ಟ್ರಿಕ್ ಕಾರಿನ ಸ್ಪೆಷಲ್ ಏನು?

ಬ್ಯಾಟರಿ ವೈಶಿಷ್ಟ್ಯತೆ

ಕೋನಾ ಕಾರುಗಳಲ್ಲಿ ಎರಡು ಮಾದರಿಯ ಬ್ಯಾಟರಿ ಚಾಲಿತ ವಿಭಾಗಗಳಿದ್ದು, ಗ್ರಾಹಕರು ಬೇಡಿಕೆಗೆ ಅನುಗುಣವಾಗಿ 39. 2 ಕೆವಿ ಮತ್ತು 64 ಕೆವಿ ಬ್ಯಾಟರಿಯನ್ನು ಆಯ್ಕೆ ಮಾಡಬಹುದು. 39.2 ಕೆವಿ ಪ್ರೇರಿತ ಕೋನಾ ಕಾರುಗಳಿಗಿಂತಲೂ 64 ಕೆ.ವಿ ಪ್ರೇರಿತ ಕೋನಾ ಕಾರುಗಳು ಬೆಲೆಯಲ್ಲಿ ತುಸು ದುಬಾರಿ ಎನ್ನಿಸಲಿವೆ.

ಜುಲೈ 9ರಂದು ಬಿಡುಗಡೆಯಾಗಲಿರುವ ಹ್ಯುಂಡೈ ಕೊನಾ ಎಲೆಕ್ಟ್ರಿಕ್ ಕಾರಿನ ಸ್ಪೆಷಲ್ ಏನು?

ಇನ್ನು ಹ್ಯುಂಡೈ ಸಂಸ್ಥೆಯು ಜಾಗತಿಕ ಮಾರುಕಟ್ಟೆಗಳಲ್ಲಿ ಈಗಾಗಲೇ ಎಲೆಕ್ಟ್ರಿಕ್ ಕಾರುಗಳ ನಿರ್ಮಾಣಕ್ಕಾಗಿ ಹೊಸ ಘಟಕಗಳಿಗೆ ಚಾಲನೆ ನೀಡಿದ್ದು, ಭಾರತದಲ್ಲಿ ಅಭಿವೃದ್ಧಿಗೊಳಿಸಲು ನಿರ್ಧರಿಸುವ ಹೊಸ ಎಲೆಕ್ಟ್ರಿಕ್ ಕಾರು ನಿರ್ಮಾಣ ಘಟಕದ ಸ್ಥಾಪನೆಗಾಗಿ ಹಂತ ಹಂತವಾಗಿ ಬರೋಬ್ಬರಿ ರೂ. 7 ಸಾವಿರ ಕೋಟಿ ಹೂಡಿಕೆ ಮಾಡುತ್ತಿದೆ.

ಜುಲೈ 9ರಂದು ಬಿಡುಗಡೆಯಾಗಲಿರುವ ಹ್ಯುಂಡೈ ಕೊನಾ ಎಲೆಕ್ಟ್ರಿಕ್ ಕಾರಿನ ಸ್ಪೆಷಲ್ ಏನು?

ಭಾರತದಲ್ಲಿ ಸದ್ಯ ತಮಿಳುನಾಡಿನ ಚೆನ್ನೈ ಬಳಿ ಒಂದೇ ಒಂದು ಕಾರು ಉತ್ಪಾದನಾ ಘಟಕವನ್ನು ಹೊಂದಿರುವ ಹ್ಯುಂಡೈ ಸಂಸ್ಥೆಯು ವಿವಿಧ ಸಂಸ್ಥೆಗಳ ಜೊತೆಗೂಡಿ ಬೀಡಿಭಾಗಗಳನ್ನು ಆಮದು ಮಾಡಿಕೊಳ್ಳುವ ಮೂಲಕ ಕಾರು ಮಾರಾಟ ಮಾಡುತ್ತಿದೆ.

ಜುಲೈ 9ರಂದು ಬಿಡುಗಡೆಯಾಗಲಿರುವ ಹ್ಯುಂಡೈ ಕೊನಾ ಎಲೆಕ್ಟ್ರಿಕ್ ಕಾರಿನ ಸ್ಪೆಷಲ್ ಏನು?

ಇದೀಗ ಇದೇ ಘಟಕವನ್ನು ವಿಸ್ತರಿಸಲು ನಿರ್ಧರಿಸಿರುವ ಹ್ಯುಂಡೈ, ಎಲೆಕ್ಟ್ರಿಕ್ ಕಾರುಗಳ ನಿರ್ಮಾಣಕ್ಕೂ ಸಹಕಾರಿಯಾಗುವಂತೆ ಹೊಸ ಪ್ಲ್ಯಾಟ್‌ಫಾರ್ಮ್ ಸಿದ್ದಗೊಳಿಸುತ್ತಿದ್ದು, ಕೊನಾ ಸೇರಿದಂತೆ ಇನ್ನು ಮೂರು ವಿವಿಧ ಮಾದರಿಯ ಎಲೆಕ್ಟ್ರಿಕ್ ಕಾರುಗಳನ್ನು ಇಲ್ಲಿಯೇ ನಿರ್ಮಾಣ ಮಾಡಿ ವಿದೇಶಿ ಮಾರುಕಟ್ಟೆಗಳಿಗೂ ಇಲ್ಲಿಂದಲೇ ರಫ್ತು ಮಾಡುವ ಯೋಜನೆಯಲ್ಲಿದೆ.

ಜುಲೈ 9ರಂದು ಬಿಡುಗಡೆಯಾಗಲಿರುವ ಹ್ಯುಂಡೈ ಕೊನಾ ಎಲೆಕ್ಟ್ರಿಕ್ ಕಾರಿನ ಸ್ಪೆಷಲ್ ಏನು?

ಕೊನಾ ಕಾರುಗಳ ಬೆಲೆ(ಅಂದಾಜು)

ಅತ್ಯುತ್ತಮ ಬ್ಯಾಟರಿ ಬಳಕೆಯ ಜೊತೆ ಅಧಿಕ ಮೈಲೇಜ್ ರೇಂಜ್ ಹೊಂದಿರುವ ಕೊನಾ ಕಾರುಗಳ ಬೆಲೆಯು ಭಾರತದಲ್ಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.16 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.22 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.

Most Read Articles

Kannada
English summary
Hyundai to launch electric SUV 'Kona' in India in July.
Story first published: Friday, May 31, 2019, 18:08 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X