ಹ್ಯುಂಡೈ ಕೋನಾ ಎಲೆಕ್ಟ್ರಿಕ್ ಕಾರು ಬಿಡುಗಡೆ- ಬೆಲೆ ದುಬಾರಿಯಾದ್ರು ಹೆಚ್ಚು ಮೈಲೇಜ್..!

ಹ್ಯುಂಡೈ ಇಂಡಿಯಾ ಸಂಸ್ಥೆಯು ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಮೊದಲ ಎಲೆಕ್ಟ್ರಿಕ್ ಕಾರು ಮಾದರಿಯಾದ ಕೋನಾ ಎಲೆಕ್ಟ್ರಿಕ್ ಎಸ್‌ಯುವಿ ಆವೃತ್ತಿಯನ್ನು ಬಿಡುಗಡೆ ಮಾಡಿದ್ದು, ಐಷಾರಾಮಿ ಸೌಲಭ್ಯಗಳನ್ನು ಹೊಂದಿರುವ ಹೊಸ ಕಾರು ಅತ್ಯುತ್ತಮ ಮೈಲೇಜ್‌ನೊಂದಿಗೆ ಆಕರ್ಷಕ ಬೆಲೆಗಳಲ್ಲಿ ಮಾರುಕಟ್ಟೆಗೆ ಪ್ರವೇಶಿಸಿದೆ.

ಹ್ಯುಂಡೈ ಕೋನಾ ಎಲೆಕ್ಟ್ರಿಕ್ ಕಾರು ಬಿಡುಗಡೆ- ಬೆಲೆ ದುಬಾರಿಯಾದ್ರು ಹೆಚ್ಚು ಮೈಲೇಜ್..!

2030ರ ವೇಳೆಗೆ ದೇಶದಲ್ಲಿ ಶೇ.100 ರಷ್ಟು ಎಲೆಕ್ಟ್ರಿಕ್ ಮತ್ತು ಹೈಬ್ರಿಡ್ ವಾಹನಗಳು ಮಾತ್ರವೇ ಸಂಚರಿಸಬೇಕು ಎನ್ನುವ ಗುರಿಯೊಂದಿಗೆ ಆಟೋ ಉದ್ಯಮದಲ್ಲಿ ಭಾರೀ ಬದಲಾವಣೆ ತರಲಾಗುತ್ತಿದ್ದು, ಮಾಲಿನ್ಯಕ್ಕೆ ಪ್ರಮುಖ ಕಾರಣವಾಗಿರುವ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳನ್ನು ತಗ್ಗಿಸಿ ಎಲೆಕ್ಟ್ರಿಕ್ ವಾಹನಗಳತ್ತ ಹೆಚ್ಚು ಗಮನಹರಿಸಲಾಗುತ್ತಿದೆ. ಹೀಗಾಗಿ ಕೇಂದ್ರ ಸರ್ಕಾರದ ಬೃಹತ್ ಯೋಜನೆಯಂತೆ ಬಹುತೇಕ ಆಟೋ ಉತ್ಪಾದನಾ ಸಂಸ್ಥೆಗಳು ಸಾಂಪ್ರದಾಯಿಕ ವಾಹನಗಳ ಉತ್ಪಾದನೆ ಜೊತೆಗೆ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಮೇಲೂ ವಿಶೇಷ ಆದ್ಯತೆ ನೀಡುತ್ತಿದ್ದು, ಹ್ಯುಂಡೈ ಸಂಸ್ಥೆಯು ಇದೇ ನಿಟ್ಟಿನಲ್ಲಿ ರೂಪಿಸಿ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದೆ.

ಹ್ಯುಂಡೈ ಕೋನಾ ಎಲೆಕ್ಟ್ರಿಕ್ ಕಾರು ಬಿಡುಗಡೆ- ಬೆಲೆ ದುಬಾರಿಯಾದ್ರು ಹೆಚ್ಚು ಮೈಲೇಜ್..!

ಹ್ಯುಂಡೈ ಸಂಸ್ಥೆಯು ಈಗಾಗಲೇ ಯುರೋಪಿನ ಮಾರುಕಟ್ಟೆಗಳಲ್ಲಿ ತನ್ನ ಹೊಸ ಎಲೆಕ್ಟ್ರಿಕ್ ಕಾರು ಮಾದರಿಗಳ ಮಾರಾಟಕ್ಕೆ ಚಾಲನೆ ನೀಡಿದ್ದು, ಇದೀಗ ಮೊದಲ ಬಾರಿಗೆ ಭಾರತದಲ್ಲೂ ಸಹ ಕೋನಾ ಕಾರನ್ನು ಉತ್ತಮ ಬ್ಯಾಟರಿ ಸಾಮರ್ಥ್ಯದೊಂದಿಗೆ ಬಿಡುಗಡೆಗೊಳಿಸಿದೆ.

ಹ್ಯುಂಡೈ ಕೋನಾ ಎಲೆಕ್ಟ್ರಿಕ್ ಕಾರು ಬಿಡುಗಡೆ- ಬೆಲೆ ದುಬಾರಿಯಾದ್ರು ಹೆಚ್ಚು ಮೈಲೇಜ್..!

ಸದ್ಯಕ್ಕೆ ಹ್ಯುಂಡೈ ಸಂಸ್ಥೆಯು ಕೋನಾ ಎಲೆಕ್ಟ್ರಿಕ್ ಕಾರು ಮಾದರಿಯನ್ನು ದಕ್ಷಿಣ ಕೊರಿಯಾದಿಂದಲೇ ಆಮದು ಮಾಡಿಕೊಂಡು ಭಾರತದಲ್ಲಿ ಮಾರಾಟ ಮಾಡಲು ನಿರ್ಧರಿಸಿದ್ದು, ದೇಶಾದ್ಯಂತ ಕಾರ್ಯನಿರ್ವಹಣೆಯಲ್ಲಿರುವ ಆಯ್ದ ಹ್ಯುಂಡೈ ಡೀಲರ್ಸ್‌ಗಳಲ್ಲಿ ಮಾತ್ರವೇ ಕೋನಾ ಎಲೆಕ್ಟ್ರಿಕ್ ಕಾರು ಖರೀದಿಗೆ ಲಭ್ಯವಿರಲಿದೆ.

ಹ್ಯುಂಡೈ ಕೋನಾ ಎಲೆಕ್ಟ್ರಿಕ್ ಕಾರು ಬಿಡುಗಡೆ- ಬೆಲೆ ದುಬಾರಿಯಾದ್ರು ಹೆಚ್ಚು ಮೈಲೇಜ್..!

ಕೋನಾ ಬ್ಯಾಟರಿ ಸಾಮರ್ಥ್ಯ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಎರಡು ಮಾದರಿಯ ಬ್ಯಾಟರಿ ಆಯ್ಕೆಯನ್ನು ಹೊಂದಿರುವ ಕೋನಾ ಎಲೆಕ್ಟ್ರಿಕ್ ಕಾರು 64kWh ಮತ್ತು 39.2kWh ಬ್ಯಾಟರಿ ವೈಶಿಷ್ಟ್ಯತೆಗಳನ್ನು ಹೊಂದಿದೆ. ಇದರಲ್ಲಿ ಸದ್ಯಕ್ಕೆ 39.2kWh ಬ್ಯಾಟರಿ ಸಾಮಾರ್ಥ್ಯ ಮಾದರಿಯನ್ನು ಮಾತ್ರವೇ ಭಾರತದಲ್ಲಿ ಬಿಡುಗಡೆ ಮಾಡಲಾಗಿದ್ದು, 52 ನಿಮಿಷಗಳಲ್ಲಿ ಶೇ.80 ರಷ್ಟು ಬ್ಯಾಟರಿ ಚಾರ್ಜ್‌ ಆಗಬಲ್ಲ ಫಾಸ್ಟ್ ಚಾರ್ಜರ್ ಸೌಲಭ್ಯ ಈ ಕಾರಿನಲ್ಲಿದೆ.

ಹ್ಯುಂಡೈ ಕೋನಾ ಎಲೆಕ್ಟ್ರಿಕ್ ಕಾರು ಬಿಡುಗಡೆ- ಬೆಲೆ ದುಬಾರಿಯಾದ್ರು ಹೆಚ್ಚು ಮೈಲೇಜ್..!

ಮೈಲೇಜ್(ಪ್ರತಿ ಚಾರ್ಜ್‌ಗೆ)

ಕೋನಾ ಎಲೆಕ್ಟ್ರಿಕ್ ಕಾರು 39.2kWh ಬ್ಯಾಟರಿ ಸಾಮರ್ಥ್ಯದೊಂದಿಗೆ ಪ್ರತಿ ಚಾರ್ಜ್‌ಗೆ ಗರಿಷ್ಠ 452 ಕಿ.ಮಿ ಮೈಲೇಜ್ ಹಿಂದಿರುಗಿಸಬಲ್ಲ ವೈಶಿಷ್ಟ್ಯತೆಯನ್ನು ಹೊಂದಿದ್ದು, ಎಲೆಕ್ಟ್ರಿಕ್ ವಾಹನಗಳ ಮೈಲೇಜ್ ಪ್ರಮಾಣಕ್ಕೆ ಪ್ರಮಾಣ ಪತ್ರ ಒದಗಿಸುವ ಎಆರ್‌ಎಐ ಸಂಸ್ಥೆಯೇ ಕೋನಾ ಎಲೆಕ್ಟ್ರಿಕ್ ಕಾರಿನ ಮೈಲೇಜ್ ಪ್ರಮಾಣವನ್ನು ಪ್ರಮಾಣಿಕರಿಸಿದೆ.

ಹ್ಯುಂಡೈ ಕೋನಾ ಎಲೆಕ್ಟ್ರಿಕ್ ಕಾರು ಬಿಡುಗಡೆ- ಬೆಲೆ ದುಬಾರಿಯಾದ್ರು ಹೆಚ್ಚು ಮೈಲೇಜ್..!

ಇನ್ನು ಹ್ಯುಂಡೈ ಹೊಸ ಎಲೆಕ್ಟ್ರಿಕ್ ಕಾರು ಸಾಮಾರ್ಥ್ಯ ಕಾರುಗಳಂತೆಯೇ ಪರ್ಫಾಮೆನ್ಸ್‌ನಲ್ಲೂ ಉತ್ತಮ ಮುನ್ನಡೆ ಕಾಯ್ದುಕೊಂಡಿದ್ದು, 100kW ಫ್ರಂಟ್ ವೀಲ್ಹ್ ಮೋಟಾರ್ ಪವರ್ ಮೂಲಕ 131-ಬಿಎಚ್‌ಪಿ ಮತ್ತು 395-ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಕೇವಲ 9.7-ಸೇಕೆಂಡುಗಳಲ್ಲಿ ಸೊನ್ನೆಯಿಂದ 100ಕಿ.ಮಿ ವೇಗ ತಲುಪಬಲ್ಲದು.

ಹ್ಯುಂಡೈ ಕೋನಾ ಎಲೆಕ್ಟ್ರಿಕ್ ಕಾರು ಬಿಡುಗಡೆ- ಬೆಲೆ ದುಬಾರಿಯಾದ್ರು ಹೆಚ್ಚು ಮೈಲೇಜ್..!

ಕೋನಾ ಕಾರು 155 ಕಿ.ಮಿ ಟಾಪ್ ಸ್ಪೀಡ್ ಸೌಲಭ್ಯವನ್ನು ಹೊಂದಿದ್ದು, ಪೂರ್ಣ ಪ್ರಮಾಣದಲ್ಲಿ ಬ್ಯಾಟರಿ ಚಾರ್ಜ್‌ ಆಗಲು ಕನಿಷ್ಠ 8 ಗಂಟೆ ತೆಗೆದುಕೊಳ್ಳಲಿದೆ. ಹೀಗಾಗಿ ಕೋನಾ ಕಾರಿನಲ್ಲಿ ಫಾಸ್ಟ್ ಚಾರ್ಜಿಂಗ್ ಸೌಲಭ್ಯವು ಆಕರ್ಷಕವಾಗಿದ್ದು, ಶೇ.80 ರಷ್ಟು ಚಾರ್ಜಿಂಗ್ ಮಾಡಲು ಕೇವಲ 52 ನಿಮಿಷ ತೆಗೆದುಕೊಳ್ಳುತ್ತದೆ.

ಹ್ಯುಂಡೈ ಕೋನಾ ಎಲೆಕ್ಟ್ರಿಕ್ ಕಾರು ಬಿಡುಗಡೆ- ಬೆಲೆ ದುಬಾರಿಯಾದ್ರು ಹೆಚ್ಚು ಮೈಲೇಜ್..!

ಕಾರಿನ ಉದ್ದಳತೆ

ಕ್ರೆಟಾ ಕಾರಿಗಿಂತಲೂ ತುಸು ಕಡಿಮೆ ಉದ್ದಳತೆ ಹೊಂದಿರುವ ಕೋನಾ ಎಲೆಕ್ಟ್ರಿಕ್ ಕಾರು ಹಲವು ಪ್ರೀಮಿಯಂ ಸೌಲಭ್ಯಗಳನ್ನು ಹೊತ್ತು ಬಂದಿದ್ದು, 4,180-ಎಂಎಂ ಉದ್ದ, 1,800-ಎಂಎಂ ಅಗಲ, 1,570-ಎಂಎಂ ಎತ್ತರ ಮತ್ತು 2,600-ಎಂಎಂ ವೀಲ್ಹ್‌ಬೇಸ್‌ನೊಂದಿಗೆ 332-ಲೀಟರ್ ಸಾಮರ್ಥ್ಯದ ಲಗೇಜ್ ಸ್ಪೆಸ್ ಪಡೆದುಕೊಂಡಿದೆ.

ಹ್ಯುಂಡೈ ಕೋನಾ ಎಲೆಕ್ಟ್ರಿಕ್ ಕಾರು ಬಿಡುಗಡೆ- ಬೆಲೆ ದುಬಾರಿಯಾದ್ರು ಹೆಚ್ಚು ಮೈಲೇಜ್..!

ಕೋನಾ ಕಾರಿನ ಬೆಲೆ(ಎಕ್ಸ್‌ಶೋರೂಂ)

ಹ್ಯುಂಡೈ ಸಂಸ್ಥೆಯು ಸದ್ಯ ವಿದೇಶಿ ಮಾರುಕಟ್ಟೆಗಳಿಂದ ಕೋನಾ ಆಮದು ಮಾಡಿಕೊಂಡು ಭಾರತದಲ್ಲಿ ಮಾರಾಟ ಮಾಡುತ್ತಿರುವುದರಿಂದ ಹೊಸ ಕಾರು ತುಸು ದುಬಾರಿ ಎನ್ನಿಸಲಿದ್ದು, ಕಾರಿನ ಬೆಲೆಯನ್ನು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 25.30 ಲಕ್ಷಕ್ಕೆ ನಿಗದಿಪಡಿಸಲಾಗಿದೆ. ಮುಂಬರುವ ದಿನಗಳಲ್ಲಿ ಬೇಡಿಕೆ ಹೆಚ್ಚಿದ ನಂತರವಷ್ಟೇ ಭಾರತದಲ್ಲೇ ಪೂರ್ಣ ಪ್ರಮಾಣದಲ್ಲಿ ಕೋನಾ ಉತ್ಪಾದನೆಗೆ ಚಾಲನೆ ಸಿಗಲಿದ್ದು, ತದನಂತರವಷ್ಟೇ ಬೆಲೆ ತಗ್ಗಲಿದೆ ಎನ್ನಬಹುದು.

ಹ್ಯುಂಡೈ ಕೋನಾ ಎಲೆಕ್ಟ್ರಿಕ್ ಕಾರು ಬಿಡುಗಡೆ- ಬೆಲೆ ದುಬಾರಿಯಾದ್ರು ಹೆಚ್ಚು ಮೈಲೇಜ್..!

ಕಾರಿನ ವೈಶಿಷ್ಟ್ಯತೆಗಳು

ಕೋನಾ ಕಾರು ಬೆಲೆ ದುಬಾರಿಯಾಗಿದ್ದರೂ ಸಹ ಉತ್ತಮ ಮೈಲೇಜ್ ಮತ್ತು ಪ್ರೀಮಿಯಂ ಫೀಚರ್ಸ್‌ಗಳಿಂದಾಗಿ ಖರೀದಿಗೆ ಉತ್ತಮ ಎನ್ನಿಸಲಿದ್ದು, ಸ್ಪೋರ್ಟಿ ವಿನ್ಯಾಸದ ಜೊತೆಗೆ ಕಾಸ್‌ಕ್ಲಾಡಿಂಗ್ ಫ್ರಂಟ್ ಗ್ರಿಲ್, ಬಾಡಿ ಕಲರ್ ಬಂಪರ್, ಸ್ಲಿಕ್ ಎಲ್ಇಡಿ ಟೈಲ್ ಲೈಟ್ಸ್, ಶಾರ್ಪ್ ಶೋಲ್ಡ್‌ರ್ ಲೈನ್ಸ್, ರಿಯರ್ ಸ್ಪಾಯ್ಲರ್ ನೀಡಿರುವುದು ಹೊಸ ಕಾರಿಗೆ ಮತ್ತಷ್ಟು ಆಕರ್ಷಣೆಯಾಗುವಂತೆ ಮಾಡಿದೆ.

ಹ್ಯುಂಡೈ ಕೋನಾ ಎಲೆಕ್ಟ್ರಿಕ್ ಕಾರು ಬಿಡುಗಡೆ- ಬೆಲೆ ದುಬಾರಿಯಾದ್ರು ಹೆಚ್ಚು ಮೈಲೇಜ್..!

ಹೊರವಿನ್ಯಾಸದಲ್ಲಿ ಮಾತ್ರವಲ್ಲದೇ ಕಾರಿನ ಒಳಭಾಗದ ವಿನ್ಯಾಸವು ಸಹ ಎಲೆಕ್ಟ್ರಿಕ್ ಕಾರು ಖರೀದಿದಾರನ್ನು ಸೆಳೆಯುಲಿದ್ದು, ಬ್ಲ್ಯಾಕ್ ಥೀಮ್ ಡ್ಯಾಶ್‌ಬೋರ್ಡ್, ಹೋಂದಾಣಿಕೆ ಮಾಡಬಹುದಾದ 8-ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ, ಡಿಜಿಟಲ್ ಇನ್‌ಸ್ಟುಮೆಂಟ್ ಕ್ಲಸ್ಟರ್, ವೆಂಟಿಲೆಟೆಡ್ ಲೆದರ್ ಸೀಟುಗಳು, ಲೆದರ್ ಹೊದಿಕೆಯ ಸ್ಟಿರಿಂಗ್ ವೀಲ್ಹ್ ಮೌಂಟ್, 10 ಹಂತದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಲ್ಲ ಚಾಲಕನ ಸೀಟು ಮತ್ತು ಎಲೆಕ್ಟ್ರಿಕ್ ಸನ್‌ರೂಫ್ ಸೌಲಭ್ಯ ಈ ಕಾರಿನಲ್ಲಿದೆ.

ಹ್ಯುಂಡೈ ಕೋನಾ ಎಲೆಕ್ಟ್ರಿಕ್ ಕಾರು ಬಿಡುಗಡೆ- ಬೆಲೆ ದುಬಾರಿಯಾದ್ರು ಹೆಚ್ಚು ಮೈಲೇಜ್..!

ಸುರಕ್ಷತೆಗೂ ಕೋನಾ ಕಾರಿನಲ್ಲಿ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಆರು ಏರ್‌ಬ್ಯಾಗ್‌ಗಳು, ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ತುರ್ತು ಕರೆ ಸೌಲಭ್ಯ, ಎಬಿಎಸ್ ಜೊತೆ ಇಬಿಡಿ, ರೀ ಜನರೇಟಿವ್ ಬ್ರೇಕಿಂಗ್ ಸಿಸ್ಟಂ, ಆಲ್ ವೀಲ್ಹ್ ಡಿಸ್ಕ್ ಬ್ರೇಕ್ ಮತ್ತು ವಿವಿಧ ಮಾದರಿಯ ಚಾಲನಾ ಅನುಭವಕ್ಕಾಗಿ ಇಕೋ, ಇಕೋ ಪ್ಲಸ್, ಕಂಫರ್ಟ್ ಮತ್ತು ಸ್ಪೋರ್ಟ್ ಡ್ರೈವ್ ಮೋಡ್‌ಗಳನ್ನು ಬದಲಿಸಿಕೊಳ್ಳಬಹುದಾಗಿದೆ.

Most Read Articles

Kannada
English summary
New Hyundai Kona EV Launched In India — Prices Start At Rs 25.30 Lakh. Read in Kannada.
Story first published: Tuesday, July 9, 2019, 17:05 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X