ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಹ್ಯುಂಡೈ ಕೊನಾ ಎಲೆಕ್ಟ್ರಿಕ್ ಕಾರು ಪಡೆದ ರೇಟಿಂಗ್ ಎಷ್ಟು ಗೊತ್ತಾ?

ಹೊಸ ವಾಹನಗಳ ಉತ್ಪಾದನಾ ಗುಣಮಟ್ಟದಲ್ಲಿ ಭಾರೀ ಬದಲಾವಣೆ ತರುತ್ತಿರುವ ಆಟೋ ಉತ್ಪಾದನಾ ಸಂಸ್ಥೆಗಳು ಪ್ರಯಾಣಿಕರ ಸುರಕ್ಷತೆಯತ್ತ ಹೆಚ್ಚಿನ ಗಮನಹರಿಸುತ್ತಿವೆ. ಹ್ಯುಂಡೈ ಕೂಡಾ ತನ್ನ ಜನಪ್ರಿಯ ಕಾರುಗಳಲ್ಲಿ ಪ್ರಯಾಣಿಕ ಪರವಾದ ಅತ್ಯುತ್ತಮ ಸುರಕ್ಷಾ ಸೌಲಭ್ಯಗಳನ್ನು ಜೋಡಣೆ ಮಾಡುತ್ತಿದ್ದು, ಆಸ್ಟ್ರೇಲಿಯನ್ ನ್ಯೂ ಕಾರ್ ಅಸಿಸ್‌ಮೆಂಟ್ ಪ್ರೋಗ್ರಾಂ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಗಮನಸೆಳೆದಿದೆ.

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಹ್ಯುಂಡೈ ಕೊನಾ ಎಲೆಕ್ಟ್ರಿಕ್ ಕಾರು ಪಡೆದ ರೇಟಿಂಗ್ ಎಷ್ಟು ಗೊತ್ತಾ?

ಹೆಚ್ಚುತ್ತಿರುವ ರಸ್ತೆ ಅಪಘಾತಗಳಲ್ಲಿ ಪ್ರಾಣಹಾನಿಯನ್ನು ಪರಿಣಾಮಕಾರಿಯಾಗಿ ತಗ್ಗಿಸುವ ಉದ್ದೇಶದಿಂದ ಹೊಸ ಕಾರುಗಳಲ್ಲಿ ಕೆಲವು ಸುರಕ್ಷಾ ಸೌಲಭ್ಯಗಳನ್ನು ಕಡ್ಡಾಯಗೊಳಿಸಲಾಗುತ್ತಿದ್ದು, ಉತ್ಪಾದನಾ ಗುಣಮಟ್ಟ ಮತ್ತು ಸುರಕ್ಷಾ ಫೀಚರ್ಸ್‌ಗಳ ಆಧಾರದ ಮೇಲೆ ಕ್ರ್ಯಾಶ್ ಟೆಸ್ಟಿಂಗ್ ರೇಟಿಂಗ್ ನೀಡಲಾಗುತ್ತಿದೆ. ಇದರಲ್ಲಿ ಆಸ್ಟ್ರೇಲಿಯನ್ ನ್ಯೂ ಕಾರ್ ಅಸಿಸ್‌ಮೆಂಟ್ ಪ್ರೋಗ್ರಾಂ ಕೂಡಾ ಕಾರುಗಳ ಸುರಕ್ಷತೆ ಬಗೆಗೆ ಟೆಸ್ಟಿಂಗ್ ನಡೆಸುತ್ತಿದ್ದು, ಹ್ಯುಂಡೈ ಕೊನಾ ಎಲೆಕ್ಟ್ರಿಕ್ ಉತ್ತಮ ಪ್ರದರ್ಶನ ತೋರಿದೆ.

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಹ್ಯುಂಡೈ ಕೊನಾ ಎಲೆಕ್ಟ್ರಿಕ್ ಕಾರು ಪಡೆದ ರೇಟಿಂಗ್ ಎಷ್ಟು ಗೊತ್ತಾ?

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ 5 ಸ್ಟಾರ್ ಪಡೆದರೆ ಅದು ಹೆಚ್ಚು ಸುರಕ್ಷಿತ ಕಾರು ಎಂದರ್ಥ. ಜೊತೆಗೆ 4, 3, 2, 1, 0 ಸ್ಟಾರ್ ರೇಟಿಂಗ್ ಬಂದಲ್ಲಿ ಅನುಕ್ರಮವಾಗಿ ಉತ್ತಮ, ಖರೀದಿಗೆ ಯೋಗ್ಯ, ಸಾಧರಣ, ಅಸುರಕ್ಷಿತ ಕಾರು ಮಾದರಿ ಎಂದು ಕರೆಯಲಾಗುತ್ತದೆ. ಇದರಲ್ಲಿ ಇದೀಗ ಕೊನಾ ಕಾರು 5 ಸ್ಟಾರ್ ರೇಟಿಂಗ್ ಪಡೆಯುವ ಮೂಲಕ ಅತ್ಯುತ್ತಮ ಎಲೆಕ್ಟ್ರಿಕ್ ಕಾರು ಮಾದರಿಯಾಗಿ ಹೊರಹೊಮ್ಮಿದೆ.

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಹ್ಯುಂಡೈ ಕೊನಾ ಎಲೆಕ್ಟ್ರಿಕ್ ಕಾರು ಪಡೆದ ರೇಟಿಂಗ್ ಎಷ್ಟು ಗೊತ್ತಾ?

ಇನ್ನು #SAFERCARSFORINDIA ಅಭಿಯಾನದಡಿ ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಹೊಸ ಕಾರುಗಳ ಸುರಕ್ಷೆ ಕುರಿತಂತೆ ಕ್ರ್ಯಾಶ್ ಟೆಸ್ಟಿಂಗ್‌ಗಳನ್ನು ಹಮ್ಮಿಕೊಂಡಿರುವ ಗ್ಲೋಬಲ್ ಎನ್‌ಸಿಎಪಿ ಸಂಸ್ಥೆಯು ಜನಪ್ರಿಯ ಸಂಸ್ಥೆಯ ಕಾರುಗಳ ಅಸಲಿಯತ್ತು ಬಯಲು ಮಾಡುತ್ತಿದೆ.

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಹ್ಯುಂಡೈ ಕೊನಾ ಎಲೆಕ್ಟ್ರಿಕ್ ಕಾರು ಪಡೆದ ರೇಟಿಂಗ್ ಎಷ್ಟು ಗೊತ್ತಾ?

ಪ್ರತಿ ಹೊಸ ಕಾರು ಮಾದರಿಗಳಿಗೂ ಸುರಕ್ಷೆ ವಿಚಾರವಾಗಿ ಜಾಗತಿಕ ಪ್ರಮಾಣ ಪತ್ರದ ಅವಶ್ಯಕತೆಯಿದ್ದು, ಹ್ಯುಂಡೈ ಕೊನಾ ಕಾರು ಪಡೆದುಕೊಂಡಿರುವ ಉತ್ತಮ ರೇಟಿಂಗ್‌ನಿಂದಾಗಿ ಸುರಕ್ಷತೆಯಲ್ಲಿ ಯಾವುದೇ ರಾಜಿ ಮಾಡಿಕೊಂಡಿಲ್ಲ ಎಂಬುವುದು ಖಾತ್ರಿಯಾಗಿದೆ. ಹಾಗೆಯೇ ಹ್ಯುಂಡೈ ಕೊನಾ ಕಾರು ಪ್ರತಿ ಚಾರ್ಜ್‌ಗೆ 452ಕಿ.ಮಿ ಮೈಲೇಜ್ ಹೊಂದಿದ್ದು, ಅತಿ ಕಡಿಮೆ ನಿರ್ವಹಣಾ ವೆಚ್ಚದ ಮೂಲಕ ಕಾರು ಖರೀದಿದಾರರ ಗಮನಸೆಳೆಯುತ್ತಿದೆ.

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಹ್ಯುಂಡೈ ಕೊನಾ ಎಲೆಕ್ಟ್ರಿಕ್ ಕಾರು ಪಡೆದ ರೇಟಿಂಗ್ ಎಷ್ಟು ಗೊತ್ತಾ?

ಕೊನಾ ಕಾರು 39.2kWh ಬ್ಯಾಟರಿ ಸಾಮರ್ಥ್ಯದೊಂದಿಗೆ ಪ್ರತಿ ಚಾರ್ಜ್‌ಗೆ ಗರಿಷ್ಠ 452 ಕಿ.ಮಿ ಮೈಲೇಜ್ ಹಿಂದಿರುಗಿಸಬಲ್ಲ ವೈಶಿಷ್ಟ್ಯತೆಯನ್ನು ಹೊಂದಿದ್ದು, ಎಲೆಕ್ಟ್ರಿಕ್ ವಾಹನಗಳ ಮೈಲೇಜ್ ಪ್ರಮಾಣಕ್ಕೆ ಪ್ರಮಾಣ ಪತ್ರ ಒದಗಿಸುವ ಎಆರ್‌ಎಐ ಸಂಸ್ಥೆಯೇ ಕೋನಾ ಮೈಲೇಜ್ ಪ್ರಮಾಣವನ್ನು ಪ್ರಮಾಣಿಕರಿಸಿದೆ.

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಹ್ಯುಂಡೈ ಕೊನಾ ಎಲೆಕ್ಟ್ರಿಕ್ ಕಾರು ಪಡೆದ ರೇಟಿಂಗ್ ಎಷ್ಟು ಗೊತ್ತಾ?

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಎರಡು ಮಾದರಿಯ ಬ್ಯಾಟರಿ ಆಯ್ಕೆಯನ್ನು ಹೊಂದಿರುವ ಕೋನಾ ಎಲೆಕ್ಟ್ರಿಕ್ ಕಾರು 64kWh ಮತ್ತು 39.2kWh ಬ್ಯಾಟರಿ ವೈಶಿಷ್ಟ್ಯತೆಗಳನ್ನು ಹೊಂದಿದೆ. ಇದರಲ್ಲಿ ಸದ್ಯಕ್ಕೆ 39.2kWh ಬ್ಯಾಟರಿ ಸಾಮಾರ್ಥ್ಯ ಮಾದರಿಯನ್ನು ಮಾತ್ರವೇ ಭಾರತದಲ್ಲಿ ಬಿಡುಗಡೆ ಮಾಡಲಾಗಿದ್ದು, 52 ನಿಮಿಷಗಳಲ್ಲಿ ಶೇ.80 ರಷ್ಟು ಬ್ಯಾಟರಿ ಚಾರ್ಜ್‌ ಆಗಬಲ್ಲ ಫಾಸ್ಟ್ ಚಾರ್ಜರ್ ಸೌಲಭ್ಯ ಈ ಕಾರಿನಲ್ಲಿದೆ.

MOST READ: ನಮ್ಮ ಬೆಂಗಳೂರಿನಲ್ಲಿ ಮೊದಲ ಡಿಜಿಟಲ್ ಶೋರೂಂ ಆರಂಭಿಸಿದ ಎಂಜಿ ಮೋಟಾರ್

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಹ್ಯುಂಡೈ ಕೊನಾ ಎಲೆಕ್ಟ್ರಿಕ್ ಕಾರು ಪಡೆದ ರೇಟಿಂಗ್ ಎಷ್ಟು ಗೊತ್ತಾ?

ಹ್ಯುಂಡೈ ಹೊಸ ಎಲೆಕ್ಟ್ರಿಕ್ ಕಾರು ಸಾಮಾರ್ಥ್ಯ ಕಾರುಗಳಂತೆಯೇ ಪರ್ಫಾಮೆನ್ಸ್‌ನಲ್ಲೂ ಉತ್ತಮ ಮುನ್ನಡೆ ಕಾಯ್ದುಕೊಂಡಿದ್ದು, 100kW ಫ್ರಂಟ್ ವೀಲ್ಹ್ ಮೋಟಾರ್ ಪವರ್ ಮೂಲಕ 131-ಬಿಎಚ್‌ಪಿ ಮತ್ತು 395-ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಕೇವಲ 9.7-ಸೇಕೆಂಡುಗಳಲ್ಲಿ ಸೊನ್ನೆಯಿಂದ 100ಕಿ.ಮಿ ವೇಗ ತಲುಪಬಲ್ಲದು.

MOST READ: ಸ್ಟಾರ್ ನಟಿಗೆ ಸಿಕ್ತು ಬರೋಬ್ಬರಿ 11 ಕೋಟಿ ಮೌಲ್ಯದ ರೋಲ್ಸ್ ರಾಯ್ಸ್ ಕಾರ್ ಗಿಫ್ಟ್

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಹ್ಯುಂಡೈ ಕೊನಾ ಎಲೆಕ್ಟ್ರಿಕ್ ಕಾರು ಪಡೆದ ರೇಟಿಂಗ್ ಎಷ್ಟು ಗೊತ್ತಾ?

ಕೋನಾ ಕಾರು 155 ಕಿ.ಮಿ ಟಾಪ್ ಸ್ಪೀಡ್ ಸೌಲಭ್ಯವನ್ನು ಹೊಂದಿದ್ದು, ಪೂರ್ಣ ಪ್ರಮಾಣದಲ್ಲಿ ಬ್ಯಾಟರಿ ಚಾರ್ಜ್‌ ಆಗಲು ಕನಿಷ್ಠ 8 ಗಂಟೆ ತೆಗೆದುಕೊಳ್ಳಲಿದೆ. ಹೀಗಾಗಿ ಕೋನಾ ಕಾರಿನಲ್ಲಿ ಫಾಸ್ಟ್ ಚಾರ್ಜಿಂಗ್ ಸೌಲಭ್ಯವು ಆಕರ್ಷಕವಾಗಿದ್ದು, ಶೇ.80 ರಷ್ಟು ಚಾರ್ಜಿಂಗ್ ಮಾಡಲು ಕೇವಲ 52 ನಿಮಿಷ ತೆಗೆದುಕೊಳ್ಳುತ್ತದೆ.

MOST READ: ರೋಡ್ ಟ್ಯಾಕ್ಸ್‌ನಲ್ಲಿ ಭರ್ಜರಿ ಇಳಿಕೆ- ಹೆಚ್ಚಳಗೊಂಡ ಹೊಸ ವಾಹನಗಳ ಮಾರಾಟ..!

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಹ್ಯುಂಡೈ ಕೊನಾ ಎಲೆಕ್ಟ್ರಿಕ್ ಕಾರು ಪಡೆದ ರೇಟಿಂಗ್ ಎಷ್ಟು ಗೊತ್ತಾ?

ಕ್ರೆಟಾ ಕಾರಿಗಿಂತಲೂ ತುಸು ಕಡಿಮೆ ಉದ್ದಳತೆ ಹೊಂದಿರುವ ಕೋನಾ ಎಲೆಕ್ಟ್ರಿಕ್ ಕಾರು ಹಲವು ಪ್ರೀಮಿಯಂ ಸೌಲಭ್ಯಗಳನ್ನು ಹೊತ್ತು ಬಂದಿದ್ದು, 4,180-ಎಂಎಂ ಉದ್ದ, 1,800-ಎಂಎಂ ಅಗಲ, 1,570-ಎಂಎಂ ಎತ್ತರ ಮತ್ತು 2,600-ಎಂಎಂ ವೀಲ್ಹ್‌ಬೇಸ್‌ನೊಂದಿಗೆ 332-ಲೀಟರ್ ಸಾಮರ್ಥ್ಯದ ಲಗೇಜ್ ಸ್ಪೆಸ್ ಪಡೆದುಕೊಂಡಿದೆ.

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಹ್ಯುಂಡೈ ಕೊನಾ ಎಲೆಕ್ಟ್ರಿಕ್ ಕಾರು ಪಡೆದ ರೇಟಿಂಗ್ ಎಷ್ಟು ಗೊತ್ತಾ?

ಹ್ಯುಂಡೈ ಸಂಸ್ಥೆಯು ಸದ್ಯ ವಿದೇಶಿ ಮಾರುಕಟ್ಟೆಗಳಿಂದ ಕೋನಾ ಆಮದು ಮಾಡಿಕೊಂಡು ಭಾರತದಲ್ಲಿ ಮಾರಾಟ ಮಾಡುತ್ತಿರುವುದರಿಂದ ಹೊಸ ಕಾರು ತುಸು ದುಬಾರಿ ಎನ್ನಿಸಲಿದ್ದು, ಕಾರಿನ ಬೆಲೆಯನ್ನು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 23.90 ಲಕ್ಷಕ್ಕೆ ನಿಗದಿಪಡಿಸಲಾಗಿದೆ. ಹಾಗೆಯೇ ಹೊಸ ಕಾರಿನ ಮೇಲೆ ರೂ.1.50 ತೆರಿಗೆ ವಿನಾಯ್ತಿ ಸಹ ಸಿಗಲಿದ್ದು, ಬ್ಯಾಟರಿ ಮೇಲೆ 8 ವರ್ಷಗಳ ವಾರಂಟಿ ನೀಡಲಾಗಿದೆ.

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಹ್ಯುಂಡೈ ಕೊನಾ ಎಲೆಕ್ಟ್ರಿಕ್ ಕಾರು ಪಡೆದ ರೇಟಿಂಗ್ ಎಷ್ಟು ಗೊತ್ತಾ?

ಕೋನಾ ಕಾರು ಬೆಲೆ ದುಬಾರಿಯಾಗಿದ್ದರೂ ಸಹ ಉತ್ತಮ ಮೈಲೇಜ್ ಮತ್ತು ಪ್ರೀಮಿಯಂ ಫೀಚರ್ಸ್‌ಗಳಿಂದಾಗಿ ಖರೀದಿಗೆ ಉತ್ತಮ ಎನ್ನಿಸಲಿದ್ದು, ಸ್ಪೋರ್ಟಿ ವಿನ್ಯಾಸದ ಜೊತೆಗೆ ಕಾಸ್‌ಕ್ಲಾಡಿಂಗ್ ಫ್ರಂಟ್ ಗ್ರಿಲ್, ಬಾಡಿ ಕಲರ್ ಬಂಪರ್, ಸ್ಲಿಕ್ ಎಲ್ಇಡಿ ಟೈಲ್ ಲೈಟ್ಸ್, ಶಾರ್ಪ್ ಶೋಲ್ಡ್‌ರ್ ಲೈನ್ಸ್, ರಿಯರ್ ಸ್ಪಾಯ್ಲರ್ ನೀಡಿರುವುದು ಹೊಸ ಕಾರಿಗೆ ಮತ್ತಷ್ಟು ಆಕರ್ಷಣೆಯಾಗುವಂತೆ ಮಾಡಿದೆ.

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಹ್ಯುಂಡೈ ಕೊನಾ ಎಲೆಕ್ಟ್ರಿಕ್ ಕಾರು ಪಡೆದ ರೇಟಿಂಗ್ ಎಷ್ಟು ಗೊತ್ತಾ?

ಹೊರವಿನ್ಯಾಸದಲ್ಲಿ ಮಾತ್ರವಲ್ಲದೇ ಕಾರಿನ ಒಳಭಾಗದ ವಿನ್ಯಾಸವು ಸಹ ಎಲೆಕ್ಟ್ರಿಕ್ ಕಾರು ಖರೀದಿದಾರನ್ನು ಸೆಳೆಯುಲಿದ್ದು, ಬ್ಲ್ಯಾಕ್ ಥೀಮ್ ಡ್ಯಾಶ್‌ಬೋರ್ಡ್, ಹೋಂದಾಣಿಕೆ ಮಾಡಬಹುದಾದ 8-ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ, ಡಿಜಿಟಲ್ ಇನ್‌ಸ್ಟುಮೆಂಟ್ ಕ್ಲಸ್ಟರ್, ವೆಂಟಿಲೆಟೆಡ್ ಲೆದರ್ ಸೀಟುಗಳು, ಲೆದರ್ ಹೊದಿಕೆಯ ಸ್ಟಿರಿಂಗ್ ವೀಲ್ಹ್ ಮೌಂಟ್, 10 ಹಂತದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಲ್ಲ ಚಾಲಕನ ಸೀಟು ಮತ್ತು ಎಲೆಕ್ಟ್ರಿಕ್ ಸನ್‌ರೂಫ್ ಸೌಲಭ್ಯ ಈ ಕಾರಿನಲ್ಲಿದೆ.

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಹ್ಯುಂಡೈ ಕೊನಾ ಎಲೆಕ್ಟ್ರಿಕ್ ಕಾರು ಪಡೆದ ರೇಟಿಂಗ್ ಎಷ್ಟು ಗೊತ್ತಾ?

ಸುರಕ್ಷತೆಗೂ ಕೋನಾ ಕಾರಿನಲ್ಲಿ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಆರು ಏರ್‌ಬ್ಯಾಗ್‌ಗಳು, ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ತುರ್ತು ಕರೆ ಸೌಲಭ್ಯ, ಎಬಿಎಸ್ ಜೊತೆ ಇಬಿಡಿ, ರೀ ಜನರೇಟಿವ್ ಬ್ರೇಕಿಂಗ್ ಸಿಸ್ಟಂ, ಆಲ್ ವೀಲ್ಹ್ ಡಿಸ್ಕ್ ಬ್ರೇಕ್ ಮತ್ತು ವಿವಿಧ ಮಾದರಿಯ ಚಾಲನಾ ಅನುಭವಕ್ಕಾಗಿ ಇಕೋ, ಇಕೋ ಪ್ಲಸ್, ಕಂಫರ್ಟ್ ಮತ್ತು ಸ್ಪೋರ್ಟ್ ಡ್ರೈವ್ ಮೋಡ್‌ಗಳನ್ನು ಬದಲಿಸಿಕೊಳ್ಳಬಹುದಾಗಿದೆ.

More from DriveSpark

Article Published On: Saturday, November 2, 2019, 17:29 [IST]
English summary
Hyundai Kona EV Safety Rating in ANCAP Crash Tests. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+