ಮಾರುತಿ ಎರ್ಟಿಗಾ ಪ್ರತಿಸ್ಪರ್ಧಿ ಹ್ಯುಂಡೈ ಎಂಪಿವಿ ಕಾರಿನ ಬಿಡುಗಡೆ ಮಾಹಿತಿ ಬಹಿರಂಗ

ಪ್ಯಾಸೆಂಜರ್ ಕಾರು ಮಾರಾಟದಲ್ಲಿ ಮುಂಚೂಣಿ ಸಾಧಿಸಿರುವ ಹ್ಯುಂಡೈ ಸಂಸ್ಥೆಯು ದೇಶದ 2ನೇ ಅತಿದೊಡ್ಡ ಕಾರು ಮಾರಾಟ ಸಂಸ್ಥೆಯಾಗಿ ಹೊರಹೊಮ್ಮಿದ್ದು, ಮಾರುಕಟ್ಟೆಯಲ್ಲಿ ಬೇಡಿಕೆಗೆ ಅನುಗುಣವಾಗಿ ಮತ್ತಷ್ಟು ಹೊಸ ಕಾರು ಉತ್ಪನ್ನಗಳನ್ನು ಪರಿಚಯಿಸುವ ಇರಾದೆಯಲ್ಲಿದೆ.

ಮಾರುತಿ ಎರ್ಟಿಗಾ ಪ್ರತಿಸ್ಪರ್ಧಿ ಹ್ಯುಂಡೈ ಎಂಪಿವಿ ಕಾರಿನ ಬಿಡುಗಡೆ ಮಾಹಿತಿ ಬಹಿರಂಗ

ಹೌದು, ಹ್ಯುಂಡೈ ಇಂಡಿಯಾ ಇತ್ತೀಚೆಗೆ ವೆನ್ಯೂ ಮತ್ತು ಗ್ರಾಂಡ್ ಐ10 ನಿಯೋಸ್ ಎನ್ನುವ ಎರಡು ಕಾರು ಮಾದರಿಗಳನ್ನು ಪರಿಚಯಿಸಿದ ಬೆನ್ನಲ್ಲೇ ಇದೇ ಮೊದಲ ಬಾರಿಗೆ ಎಂಪಿವಿ ವಿಭಾಗದತ್ತ ಕಣ್ಣಿಟ್ಟಿದೆ. ಎಂಪಿವಿ ವಿಭಾಗದಲ್ಲಿ ಸದ್ಯ ಭಾರೀ ಬೇಡಿಕೆ ಹೊಂದಿರುವ ಮಾರುತಿ ಸುಜುಕಿ ಎರ್ಟಿಗಾ, ಮಹೀಂದ್ರಾ ಮರಾಜೋ ಮತ್ತು ಟೊಯೊಟಾ ಇನೋವಾ ಕ್ರಿಸ್ಟಾ ಕಾರುಗಳಿಗೆ ಪೈಪೋಟಿಯಾಗಿ ಹೊಸ ಎಂಪಿವಿ ಕಾರನ್ನು ಅಭಿವೃದ್ದಿಪಡಿಸುತ್ತಿರುವ ಬಗ್ಗೆ ಹ್ಯುಂಡೈ ಸುಳಿವು ನೀಡಿದೆ.

ಮಾರುತಿ ಎರ್ಟಿಗಾ ಪ್ರತಿಸ್ಪರ್ಧಿ ಹ್ಯುಂಡೈ ಎಂಪಿವಿ ಕಾರಿನ ಬಿಡುಗಡೆ ಮಾಹಿತಿ ಬಹಿರಂಗ

ಹೊಸ ಎಂಪಿವಿ ಕಾರು ಅಭಿವೃದ್ದಿಪಡಿಸುವುದಕ್ಕೂ ಮುನ್ನ ಮಾರುಕಟ್ಟೆ ಅಧ್ಯಯನಕ್ಕೆ ಮುಂದಾಗಿರುವ ಹ್ಯುಂಡೈ ಸಂಸ್ಥೆಯು ಸಂಭಾವ್ಯ ಗ್ರಾಹಕರ ಅಭಿಪ್ರಾಯವನ್ನು ಸಂಗ್ರಹಿಸುತ್ತಿದ್ದು, ಕಾರು ಖರೀದಿದಾರರ ಅಭಿರುಚಿಗಳ ಆಧಾರದ ಮೇಲೆ ಹೊಸ ಕಾರನ್ನು ಸಿದ್ದಪಡಿಸಲಿದೆ.

ಮಾರುತಿ ಎರ್ಟಿಗಾ ಪ್ರತಿಸ್ಪರ್ಧಿ ಹ್ಯುಂಡೈ ಎಂಪಿವಿ ಕಾರಿನ ಬಿಡುಗಡೆ ಮಾಹಿತಿ ಬಹಿರಂಗ

ಮಾಹಿತಿಗಳ ಪ್ರಕಾರ, ಹ್ಯುಂಡೈ ನಿದ್ದಪಡಿಸಲಿರುವ ಹೊಸ ಎಂಪಿವಿ ಆವೃತ್ತಿಯು ಪ್ರಸ್ತುತ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಮಾರುತಿ ಸುಜುಕಿ ಎರ್ಟಿಗಾ ಮತ್ತು ಮಹೀಂದ್ರಾ ಮರಾಜೋ ಕಾರುಗಳಿಂತಲೂ ತುಸು ಹೆಚ್ಚಿನ ಉದ್ದಳತೆ ಹೊಂದಿರಲಿದ್ದು, ಆಕರ್ಷಕ ಬೆಲೆಗಳೊಂದಿಗೆ ಟೊಯೊಟಾ ಇನೋವಾ ಕ್ರಿಸ್ಟಾ ಖರೀದಿದಾರರನ್ನು ಸಹ ತನ್ನತ್ತ ಸೆಳೆಯುವ ಯೋಜನೆಯಲ್ಲಿದೆ.

ಮಾರುತಿ ಎರ್ಟಿಗಾ ಪ್ರತಿಸ್ಪರ್ಧಿ ಹ್ಯುಂಡೈ ಎಂಪಿವಿ ಕಾರಿನ ಬಿಡುಗಡೆ ಮಾಹಿತಿ ಬಹಿರಂಗ

ಎಂಪಿವಿ ಕಾರುಗಳ ಮಾರಾಟದಲ್ಲಿ ಸದ್ಯಕ್ಕೆ ಭಾರೀ ಬೇಡಿಕೆ ಹೊಂದಿರುವ ಇನೋವಾ ಕ್ರಿಸ್ಟಾ ಕಾರು ದುಬಾರಿ ಬೆಲೆಯಲ್ಲೂ ಅಧಿಕ ಪ್ರಮಾಣದ ಮಾರಾಟ ಹೊಂದಿದ್ದು, ಇನೋವಾ ಕ್ರಿಸ್ಟಾ ಖರೀದಿಯು ಕಷ್ಟ ಎನ್ನುವಂತಹ ಗ್ರಾಹಕರು ಎರ್ಟಿಗಾ ಮತ್ತು ಮರಾಜೋದತ್ತ ಮುಖ ಮಾಡುತ್ತಾರೆ. ಹೀಗಿರುವಾಗ ಹ್ಯುಂಡೈ ಸಂಸ್ಥೆಯು ಇನೋವಾ ಕ್ರಿಸ್ಟಾ ಮತ್ತು ಎರ್ಟಿಗಾ ಕಾರಿನ ನಡುವೆ ಸ್ಥಾನ ತುಂಬಲು ಮುಂದಾಗಿದ್ದು, ಮರಾಜೋ ಕಾರಿಗೂ ಪೈಪೋಟಿ ನೀಡುವಂತಹ ಬೆಲೆ ಪಟ್ಟಿಯನ್ನು ಸಿದ್ದಪಡಿಸುತ್ತಿದೆ.

ಮಾರುತಿ ಎರ್ಟಿಗಾ ಪ್ರತಿಸ್ಪರ್ಧಿ ಹ್ಯುಂಡೈ ಎಂಪಿವಿ ಕಾರಿನ ಬಿಡುಗಡೆ ಮಾಹಿತಿ ಬಹಿರಂಗ

ಅಂದರೆ, ಹ್ಯುಂಡೈ ಸಂಸ್ಥೆಯು ಬಿಡುಗಡೆ ಮಾಡಲಿರುವ ಹೊಸ ಎಂಪಿವಿ ಕಾರು ಎರ್ಟಿಗಾ ಮತ್ತು ಮರಾಜೋ ಕಾರಿಗಿಂತಲೂ ತುಸು ದುಬಾರಿ ಎನ್ನಿಸಿದರೂ ಸಹ ಇನೋವಾ ಕ್ರಿಸ್ಟಾ ಖರೀದಿ ಮಾಡಬೇಕೆಂಬ ಗ್ರಾಹಕರಿಗೆ ಉತ್ತಮ ಆಯ್ಕೆಯಾಗಲಿದ್ದು, ಉತ್ತಮ ಒಳಾಂಗಣ ಸೌಲಭ್ಯದೊಂದಿಗೆ 7 ಸೀಟರ್ ವಿನ್ಯಾಸ ಪಡೆದುಕೊಂಡಿರಲಿದೆ.

ಮಾರುತಿ ಎರ್ಟಿಗಾ ಪ್ರತಿಸ್ಪರ್ಧಿ ಹ್ಯುಂಡೈ ಎಂಪಿವಿ ಕಾರಿನ ಬಿಡುಗಡೆ ಮಾಹಿತಿ ಬಹಿರಂಗ

ಹಾಗೆಯೇ ಹೊಸ ಕಾರಿನ ಎಂಜಿನ್‌ನಲ್ಲೂ ಮಹತ್ವದ ಬದಲಾವಣೆ ಪಡೆದುಕೊಳ್ಳಲಿರುವ ಹ್ಯುಂಡೈ ಹೊಸ ಎಂಪಿವಿ ಕಾರು ಬಿಎಸ್-6 ಎಂಜಿನ್ ಪ್ರೇರಿತ ಡೀಸೆಲ್ ಮತ್ತು ಪೆಟ್ರೋಲ್ ಆಯ್ಕೆಯೊಂದಿಗೆ ಮಾರುಕಟ್ಟೆಗೆ ಪ್ರವೇಶಿಸಿದೆ.

MOST READ: ಹೊಸ ವಾಹನಗಳ ಖರೀದಿ ಹೆಚ್ಚಿಸಲು ರೋಡ್ ಟ್ಯಾಕ್ಸ್‌ನಲ್ಲಿ ಭರ್ಜರಿ ಕಡಿತ

ಮಾರುತಿ ಎರ್ಟಿಗಾ ಪ್ರತಿಸ್ಪರ್ಧಿ ಹ್ಯುಂಡೈ ಎಂಪಿವಿ ಕಾರಿನ ಬಿಡುಗಡೆ ಮಾಹಿತಿ ಬಹಿರಂಗ

ಮತ್ತೊಂದು ಪ್ರಮುಖ ವಿಚಾರ ಅಂದರೆ, 2020ರ ಏಪ್ರಿಲ್ 1ರಿಂದ ಜಾರಿಗೆ ಬರುತ್ತಿರುವ ಬಿಎಸ್-6 ನಿಯಮದನ್ವಯ ಬಹುತೇಕ ಕಾರು ಉತ್ಪಾದನಾ ಸಂಸ್ಥೆಗಳು ಸಣ್ಣ ಮಾದರಿಯ ಡೀಸೆಲ್ ಎಂಜಿನ್ ಕಾರುಗಳ ಮಾರಾಟವನ್ನೇ ನಿಲ್ಲಿಸುತ್ತಿದ್ದು, ಬಿಎಸ್-6 ನಿಯಮಕ್ಕೆ ಉನ್ನತೀಕರಿಸಿದರೂ ಸಹ ಬೆಲೆ ಹೆಚ್ಚಳವಾಗಿ ಗ್ರಾಹಕರನ್ನು ಕಳೆದುಕೊಳ್ಳುವ ಭೀತಿಯಿಂದ ಡೀಸೆಲ್ ಕಾರುಗಳ ಮಾರಾಟವನ್ನೇ ಸ್ಥಗಿತಗೊಳಿಸುವುದಾಗಿ ಘೋಷಿಸಿವೆ.

MOST READ: ಕಾರಿನ ಬಣ್ಣಗಳನ್ನು ಆಯ್ಕೆ ಮಾಡಿಕೊಳ್ಳುವಾಗ ಈ ಅಂಶಗಳನ್ನು ಪರಿಗಣಿಸಲೇಬೇಕು..!

ಮಾರುತಿ ಎರ್ಟಿಗಾ ಪ್ರತಿಸ್ಪರ್ಧಿ ಹ್ಯುಂಡೈ ಎಂಪಿವಿ ಕಾರಿನ ಬಿಡುಗಡೆ ಮಾಹಿತಿ ಬಹಿರಂಗ

ಇಂತಹ ಕಠಿಣ ಪರಿಸ್ಥಿತಿಯಲ್ಲೂ ಡೀಸೆಲ್ ಎಂಜಿನ್ ಕಾರುಗಳನ್ನು ಹೊಸ ನಿಯಮಕ್ಕೆ ಉನ್ನತೀಕರಿಸಿ ಮಾರಾಟವನ್ನು ಮುಂದುವರಿಸುವುದಾಗಿ ಘೋಷಿಸಿರುವ ಹ್ಯುಂಡೈ ಸಂಸ್ಥೆ ಮಾತ್ರ ದುಬಾರಿ ಬೆಲೆಯಾದರೂ ಸರಿ ಡೀಸೆಲ್ ಎಂಜಿನ್ ಕಾರುಗಳ ಮಾರಾಟವನ್ನು ಸದ್ಯಕ್ಕೆ ನಿಲ್ಲಿಸುವುದಿಲ್ಲ ಎಂದಿದೆ.

MOST READ: 2020ಕ್ಕೆ ರಸ್ತೆಗಿಳಿಯಲಿದೆ ಜೀಪ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರು

ಮಾರುತಿ ಎರ್ಟಿಗಾ ಪ್ರತಿಸ್ಪರ್ಧಿ ಹ್ಯುಂಡೈ ಎಂಪಿವಿ ಕಾರಿನ ಬಿಡುಗಡೆ ಮಾಹಿತಿ ಬಹಿರಂಗ

ಇದರಿಂದ ಸದ್ಯ ಎಂಪಿವಿ ವಿಭಾಗದಲ್ಲಿ ಹೆಚ್ಚು ಬೇಡಿಕೆಯಿರುವ ಎಂಪಿವಿ ಕಾರುಗಳ ಅಭಿವೃದ್ದಿಗೆ ಮುಂದಾಗಿರುವ ಹ್ಯುಂಡೈ ಸಂಸ್ಥೆಯು ಹೊಸ ಕಾರನ್ನು ರೂ.13 ಲಕ್ಷದಿಂದ ರೂ.16 ಲಕ್ಷ ಬೆಲೆ ಅಂತರದಲ್ಲಿ ಎರ್ಟಿಗಾ ಕಾರಿಗಿಂತಲೂ ಉತ್ತಮ ಸ್ಥಳಾವಕಾಶ ಹೊಂದಿರುವ ಎಂಪಿವಿ ಆವೃತ್ತಿಯನ್ನು ಬಿಡುಗಡೆ ಮಾಡುತ್ತಿದ್ದು, ಹೊಸ ಕಾರು ಪೆಟ್ರೋಲ್ ಮತ್ತು ಡೀಸೆಲ್ ಆಯ್ಕೆಯೊಂದಿಗೆ 2020ರ ಕೊನೆಯಲ್ಲಿ ಇಲ್ಲವೇ 2021ರ ಆರಂಭದಲ್ಲಿ ಮಾರುಕಟ್ಟೆ ಪ್ರವೇಶಿಸುವುದು ಬಹುತೇಕ ಖಚಿತ ಎನ್ನಲಾಗಿದೆ.

Source:rushlane

Most Read Articles

Kannada
English summary
South Korean car maker, Hyunda Motors is planning to launch new MPV car in India by 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X