ಕ್ರೆಟಾ ಎಸ್‌ಯುವಿ ಮಾದರಿಯಲ್ಲೇ ಬಿಡುಗಡೆಗೊಳ್ಳಲಿದೆ ಹ್ಯುಂಡೈ ಕಾರ್ಲಿನೋ

ಕಾರು ಮಾರಾಟದಲ್ಲಿ ಹ್ಯುಂಡೈ ಮತ್ತು ಮಾರುತಿ ಸುಜುಕಿ ನಡುವೆ ಸಾಕಷ್ಟು ಪೈಪೋಟಿ ಇದ್ದು, ಟಾಪ್ 10ರ ಪಟ್ಟಿಯಲ್ಲಿ ಒಟ್ಟು ಆರು ಸ್ಥಾನಗಳಲ್ಲಿ ಮಾರುತಿ ಸುಜುಕಿ ಕಾರುಗಳಿದ್ದಲ್ಲಿ ಹ್ಯುಂಡೈ ನಿರ್ಮಾಣದ ನಾಲ್ಕು ಕಾರುಗಳು ಸ್ಥಾನ ಪಡೆದಿವೆ. ಹೀಗಾಗಿ ಎರಡು ಸಂಸ್ಥೆಗಳ ನಡುವೆ ತೀವ್ರ ಪೈಪೋಟಿ ಇದ್ದು, ಇದೀಗ ಬಿಡುಗಡೆಗೆ ಸಜ್ಜಾಗಿರುವ ಹ್ಯುಂಡೈ ಕಾರ್ಲಿನೋ ಕಾರು ಭಾರೀ ನೀರಿಕ್ಷೆ ಹುಟ್ಟುಹಾಕಿದೆ.

ಕ್ರೆಟಾ ಎಸ್‌ಯುವಿ ಮಾದರಿಯಲ್ಲೇ ಬಿಡುಗಡೆಗೊಳ್ಳಲಿದೆ ಹ್ಯುಂಡೈ ಕಾರ್ಲಿನೋ

ಕಂಪ್ಯಾಕ್ಟ್ ಎಸ್‌ಯುವಿ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆಗೆ ಸಿದ್ಧಗೊಂಡಿರುವ ಕಾರ್ಲಿನೋ ಕಾರು ಈಗಾಗಲೇ ಭಾರತದಲ್ಲಿ ಬಿಡುಗಡೆಯ ಉದ್ದೇಶಕ್ಕಾಗಿ ಹಲವು ಬಾರಿ ಎಂಜಿನ್ ಕಾರ್ಯಕ್ಷಮತೆಯ ಕುರಿತಾಗಿ ಸ್ಪಾಟ್ ಟೆಸ್ಟಿಂಗ್ ನಡೆಸಿದ್ದು, ನಿನ್ನೆಯು ಕೂಡಾ ಚೆನ್ನೈ ಬಳಿ ಸ್ಪಾಟ್ ಟೆಸ್ಟಿಂಗ್ ನಡೆಸುವ ಮೂಲಕ ಮುಂದಿನ ಕೆಲವೇ ದಿನಗಳಲ್ಲಿ ಬಿಡುಗಡೆಯ ಸುಳಿವು ನೀಡಿದೆ.

ಕ್ರೆಟಾ ಎಸ್‌ಯುವಿ ಮಾದರಿಯಲ್ಲೇ ಬಿಡುಗಡೆಗೊಳ್ಳಲಿದೆ ಹ್ಯುಂಡೈ ಕಾರ್ಲಿನೋ

ಹ್ಯುಂಡೈ ಸಂಸ್ಥೆಯು ಕ್ರೆಟಾ ಮತ್ತು ಕೊನಾ ಎಸ್‍‍ಯುವಿ ಕಾರುಗಳ ಭರ್ಜರಿ ಯಶಸ್ವಿ ನಂತರ ಕಾರ್ಲಿನೋ ಕಾರುಗಳ ಬಿಡುಗಡೆಗಾಗಿ ಯೋಜನೆ ರೂಪಿಸುತ್ತಿದ್ದು, ಹಲವು ವಿಶೇಷತೆಗಳಿಗಳಿಗೆ ಕಾರಣವಾಗಿರುವ ಹೊಸ ಕಾರು ಮಾರುಕಟ್ಟೆಗೆ ಲಗ್ಗೆಯಿಡುತ್ತಿರುವುದು ಮಧ್ಯಮ ವರ್ಗದ ಕಾರು ಪ್ರಿಯರಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ಕ್ರೆಟಾ ಎಸ್‌ಯುವಿ ಮಾದರಿಯಲ್ಲೇ ಬಿಡುಗಡೆಗೊಳ್ಳಲಿದೆ ಹ್ಯುಂಡೈ ಕಾರ್ಲಿನೋ

ಹ್ಯುಂಡೈ ಹೊಸ ಕಂಪ್ಯಾಕ್ಟ್ ಎಸ್‍‍ಯುವಿ ಅರ್ಬನ್ ಕಮ್ಯೂಟರ್ ವಿಭಾಗಕ್ಕಾಗಿಯೇ ವಿಶೇಷವಾಗಿ ವಿನ್ಯಾಸ ಮಾಡಲಾಗಿದ್ದು, ಕ್ರಾಸ್‍ ಓವರ್ ವಿನ್ಯಾಸದೊಂದಿಗೆ ಕ್ರೆಟಾ ಹಾಗೂ ಕೊನಾ ಕಾರುಗಳ ಮಧ್ಯದ ಕಾರು ಮಾದರಿಯಾಗಿ ಮಾರಾಟಗೊಳ್ಳಲಿದೆ.

ಕ್ರೆಟಾ ಎಸ್‌ಯುವಿ ಮಾದರಿಯಲ್ಲೇ ಬಿಡುಗಡೆಗೊಳ್ಳಲಿದೆ ಹ್ಯುಂಡೈ ಕಾರ್ಲಿನೋ

ಹೊಸ ಕಾರಿನ ಎಂಜಿನ್ ಕುರಿತಾಗಿ ಈಗಾಗಲೇ ಹಲವು ಸುತ್ತಿನ ಸ್ಪಾಟ್ ನಡೆಯುತ್ತಿದ್ದು, ಹ್ಯುಂಡೈ ಸಂಸ್ಥೆಯು ಈ ಹೊಸ ಕಾರಿಗಾಗಿ ಪ್ರತ್ಯೇಕವಾದ ಪ್ಲ್ಯಾಟ್‍‍ಫಾರ್ಮ್ ಅನ್ನೇ ಸಿದ್ದಪಡಿಸಿದೆ. ಈ ಮೂಲಕ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುವ ವಿಶ್ವಾಸದಲ್ಲಿರುವ ಈ ಕಾರ್ಲಿನೋ ಕಾರುಗಳು ಮಾರುತಿ ಸುಜುಕಿ ಬ್ರೆಝಾ, ಟಾಟಾ ನೆಕ್ಸಾನ್ ಮತ್ತು ಫೋರ್ಡ್ ಇಕೊಸ್ಪೋರ್ಟ್ ಕಾರಿಗಳಿಗೆ ನೇರ ಪ್ರತಿಸ್ಪರ್ಧಿಸಲಾಗಲಿದೆ.

ಕ್ರೆಟಾ ಎಸ್‌ಯುವಿ ಮಾದರಿಯಲ್ಲೇ ಬಿಡುಗಡೆಗೊಳ್ಳಲಿದೆ ಹ್ಯುಂಡೈ ಕಾರ್ಲಿನೋ

ಪ್ರಸ್ತುತ ಮಾಹಿತಿಗಳ ಪ್ರಕಾರ, ಈ ಹೊಸ ಕಾರು 2020ರ ಮಾರ್ಚ್ ಆರಂಭದಲ್ಲಿ ಯುಎಸ್ ಮಾರುಕಟ್ಟೆಯಲ್ಲಿ ಮೊದಲು ಬಿಡುಗಡೆಗೊಳ್ಳಲಿದ್ದು, ತದನಂತರವಷ್ಟೇ ಭಾರತ ಸೇರಿದಂತೆ ಪ್ರಮುಖ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲೂ ಈ ಕಾರು ಬಿಡುಗಡೆಗೊಳ್ಳಲಿದೆ.

ಕ್ರೆಟಾ ಎಸ್‌ಯುವಿ ಮಾದರಿಯಲ್ಲೇ ಬಿಡುಗಡೆಗೊಳ್ಳಲಿದೆ ಹ್ಯುಂಡೈ ಕಾರ್ಲಿನೋ

ಕಂಪ್ಯಾಕ್ಟ್ ಎಸ್‍‍ಯುವಿ ವಿನ್ಯಾಸ ಆಧಾರಿತ ಕಾರ್ಲಿನೊ ಪರಿಕಲ್ಪನೆಯನ್ನು ಮೊದಲು ಹ್ಯುಂಡೈ ಸಂಸ್ಥೆಯು 2016ರ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶಿಸಲಾಗಿತ್ತು. ಆದ್ರೆ ಕಾರಣಾಂತರಗಳಿಂದ ಹೊಸ ಕಾರಿನ ಉತ್ಪಾದನಾ ಪ್ರಕ್ರಿಯೆಯನ್ನು ಮೂಂದುಡಿಕೆ ಮಾಡುತ್ತಾ ಬಂದಿದ್ದ ಹ್ಯುಂಡೈ ಇದೀಗ ಕಾರ್ಲಿನೋ ಬಿಡುಗಡೆ ಮಾಡುವ ಇರಾದೆಯಲ್ಲಿದೆ.

ಕ್ರೆಟಾ ಎಸ್‌ಯುವಿ ಮಾದರಿಯಲ್ಲೇ ಬಿಡುಗಡೆಗೊಳ್ಳಲಿದೆ ಹ್ಯುಂಡೈ ಕಾರ್ಲಿನೋ

ಇದಲ್ಲದೇ ಹ್ಯುಂಡೈ ಸಂಸ್ಥೆಯ ಕ್ಯೂಎಕ್ಸ್ಐ ಹೆಸರಿನ ಮತ್ತೊಂದು ಹೊಸ ಕಾರು ಮಾದರಿಯನ್ನು 2019ರ ಅಂತ್ಯದಲ್ಲಿ ಬಿಡುಗಡೆಗೊಳಿಸುವ ಯೋಜನೆಯಲ್ಲಿದ್ದು, ಅದೇ ಕಾರಿನ ಎಂಜಿನ್ ಮಾದರಿಯನ್ನು ಕಾರ್ಲಿನೋ ಕಾರಗಳಲ್ಲೂ ಬಳಕೆ ಮಾಡಲಾಗಿದೆ ಎನ್ನಲಾಗಿದೆ.

MOST READ: ಅಯ್ಯೋ ದೇವರೇ.. ಜಿಪಿಎಸ್ ನಂಬಿಕೊಂಡು ಹೋದ್ರೆ ಹೀಗಾ ಆಗೋದು..!

ಕ್ರೆಟಾ ಎಸ್‌ಯುವಿ ಮಾದರಿಯಲ್ಲೇ ಬಿಡುಗಡೆಗೊಳ್ಳಲಿದೆ ಹ್ಯುಂಡೈ ಕಾರ್ಲಿನೋ

ಇದರಿಂದಾಗಿ ಕಾರ್ಲಿನೋ ಕಾರುಗಳು 1.0 ಲೀಟರ್ ಟಿ-ಜಿಡಿಐ ಪೆಟ್ರೋಲ್ ಎಂಜಿನ್ ಮತ್ತು 1.4 ಲೀಟರ್ ಡೀಸೆಲ್ ಎಂಜಿನ್ ಅನ್ನು ಪಡೆದುಕೊಳ್ಳುವ ಸಾಧ್ಯತೆಗಳಿದ್ದು, ಕ್ರೆಟಾ ಮತ್ತು ಗ್ರ್ಯಾಂಡ್ ಐ10 ನಿಂದಲೂ ಹಲವಾರು ಫೀಚರ್ಸ್‌ಗಳನ್ನು ಹೊಸ ಕಾರಿನಲ್ಲಿ ಎರವಲು ಪಡೆದುಕೊಳ್ಳಲಾಗಿದೆಯೆಂತೆ.

ಕ್ರೆಟಾ ಎಸ್‌ಯುವಿ ಮಾದರಿಯಲ್ಲೇ ಬಿಡುಗಡೆಗೊಳ್ಳಲಿದೆ ಹ್ಯುಂಡೈ ಕಾರ್ಲಿನೋ

ಬಿಡುಗಡೆಯ ಅವಧಿ ಮತ್ತು ಕಾರಿನ ಬೆಲೆಗಳು(ಅಂದಾಜು)

2019ರ ಮಾರ್ಚ್ ಅಂತ್ಯಕ್ಕೆ ಯುಎಸ್ಎ ಮಾರುಕಟ್ಟೆಯಲ್ಲಿ ಬಿಡುಗಡೆಯಾಗುವ ಹೊಸ ಕಾರ್ಲಿನೋ ಕಾರುಗಳು ಭಾರತದಲ್ಲಿ 2019ರ ಕೊನೆಯಲ್ಲಿ ಇಲ್ಲವೇ 2020ರ ಆರಂಭದಲ್ಲಿ ಅವಧಿಯಲ್ಲಿ ಬಿಡುಗಡೆಯಾಗುವ ನೀರಿಕ್ಷೆಗಳಿದ್ದು, ಕಾರಿನ ಬೆಲೆಯು ಎಕ್ಸ್‌ಶೋರೂಂ ಪ್ರಕಾರ ರೂ.7 ಲಕ್ಷದಿಂದ ರೂ.11 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.

MOST READ: ಅಚ್ಚರಿಯಾದ್ರು ಸತ್ಯ - ಈ ಕಾರು ಚಲಿಸಲ್ಲ, ನಡ್ಕೊಂಡೆ ಹೋಗುತ್ತಂತೆ..!

ಕ್ರೆಟಾ ಎಸ್‌ಯುವಿ ಮಾದರಿಯಲ್ಲೇ ಬಿಡುಗಡೆಗೊಳ್ಳಲಿದೆ ಹ್ಯುಂಡೈ ಕಾರ್ಲಿನೋ

ಡ್ರೈವ್‍ಸ್ಪಾರ್ಕ್ ಅಭಿಪ್ರಾಯ

ಹತ್ತು ಹಲವು ವಿಶೇಷತೆಗಳೊಂದಿಗೆ ಬಿಡುಗಡೆಯಾಗುತ್ತಿರುವ ಹ್ಯುಂಡೈ ಕಾರ್ಲಿನೋ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳು ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳ ವಿಭಾಗದಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳುವ ಎಲ್ಲಾ ಗುಣಲಕ್ಷಣಗಳನ್ನು ಹೊಂದಿದ್ದು, ಟಾಪ್ 10ರ ಪಟ್ಟಿಯಲ್ಲಿ ಸ್ಥಾನ ಪಡೆದುಕೊಳ್ಳುವಲ್ಲಿ ಯಾವುದೇ ಅನುಮಾನವಿಲ್ಲ.

Article Published On: Tuesday, January 8, 2019, 17:37 [IST]
English summary
New Hyundai Compact-SUV's Spy Pics Prove That It Looks A Lot Similar To The Creta. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+