ಮುಂದಿನ 2 ವರ್ಷದೊಳಗೆ 6 ಹೊಸ ಎಸ್‌ಯುವಿಗಳನ್ನು ಪರಿಚಯಿಸಲಿದೆ ಹ್ಯುಂಡೈ
ಮಾರುತಿ ಸುಜುಕಿ ನಂತರ ಭಾರತದಲ್ಲಿ 2ನೇ ಅತಿ ದೊಡ್ಡ ಕಾರು ಉತ್ಪಾದನಾ ಸಂಸ್ಥೆಯಾಗಿ ಹೊರಹೊಮ್ಮಿರುವ ಹ್ಯುಂಡೈ ಸಂಸ್ಥೆಯು ಮುಂದಿನ 2 ವರ್ಷದೊಳಗಾಗಿ 6 ಹೊಸ ಎಸ್‌ಯುವಿ ಕಾರುಗಳನ್ನು ಪರಿಚಯಿಸುವ ಇರಾದೆಯಲ್ಲಿದ್ದು, ಮೊದಲ ಹಂತದಲ್ಲಿ ಬಿಡುಗಡೆಯಾಗಲಿರುವ ಸಬ್ ಕಂಪ್ಯಾಕ್ಟ್ ಎಸ್‌ಯುವಿ ವೆನ್ಯೂ ಮತ್ತು ಕೊನಾ ಎಲೆಕ್ಟ್ರಿಕ್ ಕಾರು ಭಾರೀ ನೀರಿಕ್ಷೆ ಹುಟ್ಟುಹಾಕಿವೆ.

ಹ್ಯುಂಡೈ ಹೊಸ ಎಸ್‌ಯುವಿ ಕಾರುಗಳ ಬಿಡುಗಡೆ ಕುರಿತಂತೆ ಎಕಾನಮಿಕ್ ಟೈಮ್ಸ್ ಆಟೋ ಸುದ್ದಿಸಂಸ್ಥೆಯು ವರದಿ ಮಾಡಿದ್ದು, 2019ರ ಮೇ ಅವಧಿಯಲ್ಲಿ ವೆನ್ಯೂ ಮತ್ತು ಅಗಸ್ಟ್ ಹೊತ್ತಿಗೆ ಕೊನಾ ಬಿಡುಗಡೆಯಾಗಲಿವೆಯೆಂತೆ. ಹಾಗೆಯೇ 2020ರ ಅವಧಿಯಲ್ಲಿ ನೆಕ್ಸ್ ಜನರೇಷನ್ ಕ್ರೆಟಾ, ಐ20 ಕ್ರಾಸ್ ಹ್ಯಾಚ್‌ಬ್ಯಾಕ್ ಬಿಡುಗಡೆಯಾಗಿದ್ದಲ್ಲಿ 2021ರ ಆರಂಭದಲ್ಲಿ ನೆಕ್ಸ್ ಜನರೇಷನ್ ಸಾಂತಾ ಫೆ, 7 ಸೀಟರ್ ಕ್ರೆಟಾ ಎಸ್‌ಯುವಿ ಕಾರುಗಳ ಸಹ ಭಾರತದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿವೆ ಎಂದಿದೆ.

ಹ್ಯುಂಡೈ ಹೊಸ ಎಸ್‌ಯುವಿ ಕಾರುಗಳ ಬಿಡುಗಡೆ ಕುರಿತಂತೆ ಎಕಾನಮಿಕ್ ಟೈಮ್ಸ್ ಆಟೋ ಸುದ್ದಿಸಂಸ್ಥೆಯು ವರದಿ ಮಾಡಿದ್ದು, 2019ರ ಮೇ ಅವಧಿಯಲ್ಲಿ ವೆನ್ಯೂ ಮತ್ತು ಅಗಸ್ಟ್ ಹೊತ್ತಿಗೆ ಕೊನಾ ಬಿಡುಗಡೆಯಾಗಲಿವೆಯೆಂತೆ. ಹಾಗೆಯೇ 2020ರ ಅವಧಿಯಲ್ಲಿ ನೆಕ್ಸ್ ಜನರೇಷನ್ ಕ್ರೆಟಾ, ಐ20 ಕ್ರಾಸ್ ಹ್ಯಾಚ್‌ಬ್ಯಾಕ್ ಬಿಡುಗಡೆಯಾಗಿದ್ದಲ್ಲಿ 2021ರ ಆರಂಭದಲ್ಲಿ ನೆಕ್ಸ್ ಜನರೇಷನ್ ಸಾಂತಾ ಫೆ, 7 ಸೀಟರ್ ಕ್ರೆಟಾ ಎಸ್‌ಯುವಿ ಕಾರುಗಳ ಸಹ ಭಾರತದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿವೆ ಎಂದಿದೆ.

ಇದರಲ್ಲಿ ಸದ್ಯ ಬಿಡುಗಡೆಯಾಗಲಿರುವ ವೆನ್ಯೂ ಕಾರು ಸಾಕಷ್ಟು ಕುತೂಹಲ ಹುಟ್ಟುಹಾಕಿದ್ದು, ಹಲವು ವಿಶೇಷತೆಗಳಿಗಳಿಗೆ ಕಾರಣವಾಗಿರುವ ಹೊಸ ಕಾರು ಮಾರುಕಟ್ಟೆಗೆ ಲಗ್ಗೆಯಿಡುತ್ತಿರುವುದು ಮಧ್ಯಮ ವರ್ಗದ ಕಾರು ಪ್ರಿಯರ ಆಕರ್ಷಣೆಗೆ ಕಾರಣವಾಗಿದೆ. ವೆನ್ಯೂ ಕಾರು ಡ್ಯುಯಲ್ ಟೋನ್ ಬಣ್ಣ ಮತ್ತು ಸನ್‍ರೂಫ್ ಪಡೆದುಕೊಳ್ಳುವ ಮೂಲಕ ಗ್ರಾಹಕರಲ್ಲಿ ಮತ್ತಷ್ಟು ಕುತೂಹಲ ಹುಟ್ಟುಹಾಕಿದ್ದು, ಮಹೀಂದ್ರಾ ಎಕ್ಸ್‌ಯುವಿ300 ಮತ್ತು ಮಾರುತಿ ಸುಜುಕಿ ಬ್ರೆಝಾ ಕಾರುಗಳಿಗೆ ಪ್ರಬಲ ಪೈಪೋಟಿ ನೀಡುವ ನಿರೀಕ್ಷೆಯಲ್ಲಿದೆ.

ಹ್ಯುಂಡೈ ಹೊಸ ಸಬ್ ಕಂಪ್ಯಾಕ್ಟ್ ಎಸ್‍ಯುವಿ ಕಾರು ಅರ್ಬನ್ ಕಮ್ಯೂಟರ್ ವಿಭಾಗಕ್ಕಾಗಿಯೇ ವಿಶೇಷವಾಗಿ ವಿನ್ಯಾಸ ಮಾಡಲಾಗಿದ್ದು, ಕ್ರಾಸ್ ಓವರ್ ವಿನ್ಯಾಸ ಹೊಂದಿರುವ ವೆನ್ಯೂ ಕಾರು ಐ20 ಮತ್ತು ಕ್ರೆಟಾ ಕಾರುಗಳ ಮಧ್ಯದ ಕಾರು ಆವೃತ್ತಿಯಾಗಗಿ ಮಾರಾಟಗೊಳ್ಳಲಿದೆ.

ಎಂಜಿನ್ ಸಾಮರ್ಥ್ಯ
ವೆನ್ಯೂ ಕಾರುಗಳು ಒಟ್ಟು ಮೂರು ಎಂಜಿನ್ ಆಯ್ಕೆಯೊಂದಿಗೆ ಖರೀದಿಗೆ ಲಭ್ಯವಾಗುತ್ತಿದ್ದು, ಪೆಟ್ರೋಲ್ ಎಂಜಿನ್‌ನಲ್ಲಿ 1.0 ಲೀಟರ್ ತ್ರಿ ಸಿಲಿಂಡರ್ ಎಂಜಿನ್ ಮತ್ತು 1.4 ಲೀಟರ್ ಎಂಜಿನ್ ಹೊಂದಿರಲಿದೆ. ಹಾಗೆಯೇ 1.4-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಸಹ ಹೊಂದಿರಲಿದೆ.

1.4-ಲೀಟರ್ ಪೆಟ್ರೋಲ್ ಎಂಜಿನ್ ಮಾದರಿಯು ಸದ್ಯ ಮಾರುಕಟ್ಟೆಯಲ್ಲಿರುವ ವೆರ್ನಾ ಸೆಡಾನ್ ಕಾರಿನಿಂದ ಎರವಲು ಪಡೆಯಲಾಗಿದ್ದು, ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್ಇಡಿ ಟೈಲ್ ಲೈಟ್, 6 ಸ್ಪೀಡ್ ಡ್ಯುಯಲ್ ಕ್ಲಚ್ ಗೇರ್‌ಬಾಕ್ಸ್, ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಎಬಿಎಸ್, 4 ಏರ್‌ಬ್ಯಾಗ್, ಸನ್‌ರೂಫ್, ಡ್ಯುಯಲ್ ಟೋನ್ ಬಾಡಿ ಕಲರ್, ಡ್ಯುಯಲ್ ಟೋನ್ ಇಂಟಿರಿಯರ್, ರಿಯರ್ ವ್ಯೂ ಕ್ಯಾಮೆರಾ, ಪಾರ್ಕಿಂಗ್ ಸೆನ್ಸಾರ್, ಸ್ಮಾರ್ಟ್ ಕೆನೆಕ್ಟಿವಿಟಿ, ಜಿಯೋ ಫೆನ್ಸ್, ಆ್ಯಂಟಿ ಥೆಫ್ಟ್ ಮತ್ತು ಲಾರ್ಜ್ ಟಚ್‌ಸ್ಕ್ರೀನ್ ಡಿಸ್‌ಪ್ಲೇಯೊಂದಿಗೆ ಹಲವು ಮಾದರಿಯ ಪ್ರೀಮಿಯಂ ಸೌಲಭ್ಯಗಳನ್ನು ಪಡೆದುಕೊಂಡಿರಲಿದೆ.

ಕಾರಿನ ಬೆಲೆಗಳು(ಅಂದಾಜು)
ಹೊಸ ವೆನ್ಯೂ ಕಾರು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಒಟ್ಟು ಆರು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ಹೊಸ ಕಾರಿನ ಬೆಲೆಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 7.40 ಲಕ್ಷದಿಂದ ಟಾಪ್ ಎಂಡ್ ಮಾದರಿಗೆ ರೂ.11 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.
MOST READ: ರಾಂಗ್ ಸೈಡ್‌ನಲ್ಲಿ ಬಂದ ಕಾರು ಚಾಲಕನಿಗೆ ಬೆವರಿಳಿಸಿದ ಬೈಕ್ ರೈಡರ್..!

ಇನ್ನು ಹ್ಯುಂಡೈ ಸಂಸ್ಥೆಯು ಭಾರತದಲ್ಲಿ ಬಿಡುಗಡೆ ಮಾಡಲಿರುವ ಹೊಸ ಎಲೆಕ್ಟ್ರಿಕ್ ಕಾರುಗಳ ಬಗ್ಗೆ ಈಗಾಗಲೇ ಮಾಹಿತಿ ಬಿಚ್ಚಿಟ್ಟಿದ್ದು, ಮೊದಲ ಹಂತವಾಗಿ ಕೊನಾ ಇವಿ ಕಾರು ಭಾರತೀಯ ರಸ್ತೆಗಳಲ್ಲಿ ಭಾರೀ ಜನಪ್ರಿಯತೆ ಸಾಧಿಸುವ ನಿರೀಕ್ಷೆಯಲ್ಲಿದೆ. ಎರಡು ವಿಭಿನ್ನ ಪವರ್ ಟ್ರೈನ್ ಗಳಿಂದ ಸಿದ್ದವಾಗಿರುವ ಕೊನಾ ಕಾರು ಮಾದರಿಗಳು ಪ್ರತಿ ಚಾರ್ಜ್‌ಗೆ 299 ಕಿ.ಮೀ ಮತ್ತು 469 ಕಿ.ಮೀ.ವರೆಗೆ ಮೈಲೇಜ್ ಸಾಮರ್ಥ್ಯವನ್ನು ಹೊಂದಿದ್ದು, ಎಲೆಕ್ಟ್ರಿಕ್ ಕಾರು ಆವೃತ್ತಿಗಳಲ್ಲೇ ಅತಿ ಹೆಚ್ಚು ಬೇಡಿಕೆ ಪಡೆಯುವ ಎಲ್ಲಾ ಗುಣಲಕ್ಷಣಗಳು ಈ ಹೊಸ ಎಲೆಕ್ಟ್ರಿಕ್ ಕಾರಿನಲ್ಲಿವೆ.

ಮಾಹಿತಿಗಳ ಪ್ರಕಾರ, ಹ್ಯುಂಡೈ ಸಂಸ್ಥೆಯು ಕಾರಿನ ಎಲೆಕ್ಟ್ರಿಕ್ ಪವರ್ ಟ್ರೈನ್ ನಿರ್ಮಿಸಲು ಎಲ್‌ಜಿ ಕೆಮಿಕಲ್ಸ್ ಜೊತೆ ಕೈಜೋಡಿಸಿದ್ದು, ಇದೇ ಬ್ಯಾಟರಿಯನ್ನು ಚೆವಿ ಬೋಲ್ಟ್ ಹ್ಯಾಚ್ ಬ್ಯಾಕ್ ಕಾರಿನಲ್ಲೂ ಕೂಡಾ ಇರಿಸಲಾಗಿರಲಿದೆ ಎನ್ನಲಾಗಿದೆ. ಅಲ್ಲದೆ ಕೊನಾ ಇವಿ 39.2 ಕಿಲೋವ್ಯಾಟ್ಸ್ ಮತ್ತು 64 ಕಿಲೋವ್ಯಾಟ್ಸ್ ಬ್ಯಾಟರಿ ಪ್ಯಾಕ್‌ನ್ನು ಹೊಂದಿರಲಿದೆ. 39.2 ಕೆವಿ ಬ್ಯಾಟರಿ ಪ್ರೇರಿಕ ಕೊನಾ ಕಾರುಗಳು ಪೂರ್ಣಪ್ರಮಾಣದಲ್ಲಿ ಚಾರ್ಜಿಂಗ್‌ಗೊಳ್ಳಲು 6 ತಾಸು 10 ನಿಮಿಷ ಸಮಯ ತೆಗೆದುಕೊಳ್ಳವುದಲ್ಲದೇ 54 ನಿಮಿಷಗಳಲ್ಲಿ ಶೇ.80ರಷ್ಟು ಚಾರ್ಜಿಂಗ್ ಮಾಡಬಹುದು.

ಹಾಗೆಯೇ 64 ಕೆವಿ ಬ್ಯಾಟರಿ ಪ್ರೇರಿತ ಕೊನಾ ಕಾರುಗಳು ಸಹ ಪೂರ್ಣಪ್ರಮಾಣದ ಚಾರ್ಜಿಂಗ್‌ಗಾಗಿ 9 ತಾಸು 40 ನಿಮಿಷ ಸಮಯ ತೆಗೆದುಕೊಂಡರೇ, ಕೆವಲ 54 ನಿಮಿಷಗಳಲ್ಲಿ ಶೇ.80ರಷ್ಟು ಚಾರ್ಜಿಂಗ್ ಮಾಡಬಹುದು.
ಸದ್ಯಕ್ಕೆ ಹೊಸ ಕೊನಾ ಕಾರುಗಳನ್ನು ಸಿಕೆಡಿ ಮೂಲಕ ಆಮದು ಮಾಡಿಕೊಂಡು ಚೆನ್ನೈನಲ್ಲಿ ಕಾರು ಉತ್ಪಾದನಾ ಘಟಕದಲ್ಲಿ ಬಿಡಿಭಾಗಗಳ ಜೋಡಣೆ ನಡೆಯಲಿದ್ದು, ಕಾರಿನ ಬೆಲೆಯು ರೂ.15 ಲಕ್ಷದಿಂದ ರೂ.22 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.
Source: ET Auto


Click it and Unblock the Notifications








