ಬಿಎಸ್-6 ಎಫೆಕ್ಟ್- ಹ್ಯುಂಡೈ ವೆನ್ಯೂ‌ನಲ್ಲಿ 1.5-ಲೀಟರ್ ಡೀಸೆಲ್ ಎಂಜಿನ್ ಪಕ್ಕಾ..!

2020ರ ಏಪ್ರಿಲ್ 1ರಿಂದ ಕಡ್ಡಾಯವಾಗಿ ಜಾರಿಗೆ ಬರುತ್ತಿರುವ ಬಿಎಸ್-6 ನಿಯಮದಂತೆ ಬಹುತೇಕ ಆಟೋ ಉತ್ಪಾದನಾ ಸಂಸ್ಥೆಗಳು ತಮ್ಮ ಜನಪ್ರಿಯ ವಾಹನಗಳನ್ನು ಹೊಸ ನಿಯಮದಂತೆ ಉನ್ನತಿಕರಿಸುತ್ತಿದ್ದು, ಹ್ಯುಂಡೈ ಕೂಡಾ ವೆನ್ಯೂ ಎಂಜಿನ್ ಆಯ್ಕೆಯಲ್ಲಿ ಮಹತ್ವದ ಬದಲಾವಣೆಗೆ ಮುಂದಾಗಿದೆ.

ಬಿಎಸ್-6 ಎಫೆಕ್ಟ್- ಹ್ಯುಂಡೈ ವೆನ್ಯೂ‌ನಲ್ಲಿ 1.5-ಲೀಟರ್ ಡೀಸೆಲ್ ಎಂಜಿನ್ ಪಕ್ಕಾ..!

ಬಿಎಸ್-6 ನಿಯಮದಿಂದಾಗಿ ಪ್ರಸ್ತುತ ಮಾರುಕಟ್ಟೆಯಲ್ಲಿರುವ ಹಲವು ಡೀಸೆಲ್ ಎಂಜಿನ್ ಕಾರುಗಳಿಗೆ ಸಂಕಷ್ಟ ಎದುರಾಗಿದ್ದು, ಹೊಸ ನಿಯಮಗಳಿಗೆ ಅನುಗುಣವಾಗಿ ಎಂಜಿನ್ ಉನ್ನತಿಕರಿಸಬೇಕು ಇಲ್ಲವೇ ಮಾರಾಟವನ್ನು ಸ್ಥಗಿತಗೊಳಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಹ್ಯುಂಡೈ ಸಂಸ್ಥೆಯು ವೆನ್ಯೂ ಕಾರಿನಲ್ಲಿ ನೀಡಲಾಗಿರುವ ಡೀಸೆಲ್ ಎಂಜಿನ್ ಮಾದರಿಯನ್ನು ಸ್ಥಗಿತಗೊಳಿಸಿ ಹೊಸ ಎಂಜಿನ್ ಆಯ್ಕೆ ನೀಡಲು ಮುಂದಾಗಿದ್ದು, ನೆಕ್ಸ್ಟ್ ಜನರೇಷನ್ ಕ್ರೆಟಾದಲ್ಲಿ ಬಳಕೆ ಮಾಡಲು ಉದ್ದೇಶಿಸಿರುವ 1.5-ಲೀಟರ್ ಡೀಸೆಲ್ ಎಂಜಿನ್ ಅನ್ನು ವೆನ್ಯೂನಲ್ಲೂ ಜೋಡಿಸಲು ನಿರ್ಧರಿಸಿದೆ.

ಬಿಎಸ್-6 ಎಫೆಕ್ಟ್- ಹ್ಯುಂಡೈ ವೆನ್ಯೂ‌ನಲ್ಲಿ 1.5-ಲೀಟರ್ ಡೀಸೆಲ್ ಎಂಜಿನ್ ಪಕ್ಕಾ..!

ಹ್ಯುಂಡೈ ಸಂಸ್ಥೆಯು ಸದ್ಯ ಮಾರುಕಟ್ಟೆಯಲ್ಲಿ 1.2-ಲೀಟರ್ ಡೀಸೆಲ್, 1.4-ಲೀಟರ್ ಡೀಸೆಲ್ ಮತ್ತು 1.6-ಲೀಟರ್ ಡೀಸೆಲ್ ಎಂಜಿನ್‌ಗಳನ್ನು ಮಾರಾಟ ಮಾಡುತ್ತಿದ್ದು, ಬಿಎಸ್-6 ನಿಯಮಕ್ಕೆ ಉನ್ನತೀಕರಣ ಮಾಡಲು ಸಾಧ್ಯವಿಲ್ಲದ 1.4-ಲೀಟರ್ ಮತ್ತು 1.6-ಲೀಟರ್ ಎಂಜಿನ್ ಕೈಬಿಟ್ಟು ಹೊಸದಾಗಿ 1.5-ಲೀಟರ್ ಡೀಸೆಲ್ ಎಂಜಿನ್ ಮಾದರಿಯನ್ನು ಅಭಿವೃದ್ಧಿಗೊಳಿಸಲಾಗುತ್ತಿದೆ.

ಬಿಎಸ್-6 ಎಫೆಕ್ಟ್- ಹ್ಯುಂಡೈ ವೆನ್ಯೂ‌ನಲ್ಲಿ 1.5-ಲೀಟರ್ ಡೀಸೆಲ್ ಎಂಜಿನ್ ಪಕ್ಕಾ..!

1.5-ಲೀಟರ್ ಡೀಸೆಲ್ ಎಂಜಿನ್ ಮಾದರಿಯನ್ನು ಈ ಮೊದಲು ನೆಕ್ಸ್ಟ್ ಜನರೇಷನ್ ಕ್ರೆಟಾ ಮತ್ತು ಐ20 ಕಾರುಗಳಲ್ಲಿ ಅಳವಡಿಸಲು ನಿರ್ಧರಿಸಿದ್ದ ಹ್ಯುಂಡೈ ಸಂಸ್ಥೆಯು ಇದೀಗ ವೆನ್ಯೂ ಕಾರಿನಲ್ಲೂ ಇದೇ ಎಂಜಿನ್ ಮಾದರಿಯನ್ನು ಒದಗಿಸಲು ಮುಂದಾಗಿದ್ದು, ವೆನ್ಯೂ ಕಾರು ಮತ್ತಷ್ಟು ಬಲಿಷ್ಠತೆಯೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದೆ.

ಬಿಎಸ್-6 ಎಫೆಕ್ಟ್- ಹ್ಯುಂಡೈ ವೆನ್ಯೂ‌ನಲ್ಲಿ 1.5-ಲೀಟರ್ ಡೀಸೆಲ್ ಎಂಜಿನ್ ಪಕ್ಕಾ..!

ಸದ್ಯ ಬಿಎಸ್-6 ನಿಯಮಗಳಿಗೆ ಅನುಗುಣವಾಗಿ ಉನ್ನತೀಕರಣ ಸಾಧ್ಯವಿಲ್ಲದ ಹಲವಾರು ಜನಪ್ರಿಯ ಕಾರುಗಳು ಮಾರುಕಟ್ಟೆಯಿಂದ ನಿರ್ಗಮಿಸಲು ಸಜ್ಜಾಗುತ್ತಿದ್ದು, ಹ್ಯುಂಡೈ ಮಾತ್ರ ದುಬಾರಿ ವೆಚ್ಚದಲ್ಲೂ ಹೊಸ ಡೀಸೆಲ್ ಎಂಜಿನ್ ಮಾದರಿಯನ್ನು ಅಭಿವೃದ್ದಿಗೊಳಿಸಿ ಮಾರಾಟಕ್ಕೆ ಸಿದ್ದಗೊಳಿಸುತ್ತಿದೆ. ಹೊಸ ಎಂಜಿನ್ ಮಾದರಿಯು ಅತ್ಯುತ್ತಮ ಎಂಜಿನ್ ಕಾರ್ಯಕ್ಷಮತೆಯೊಂದಿಗೆ ಮೈಲೇಜ್ ಹಾಗೂ ಮಾಲಿನ್ಯ ಹೊರಸೂಸುವಿಕೆಯಲ್ಲಿ ಸುಧಾರಣೆ ಕಂಡಿದೆ.

ಬಿಎಸ್-6 ಎಫೆಕ್ಟ್- ಹ್ಯುಂಡೈ ವೆನ್ಯೂ‌ನಲ್ಲಿ 1.5-ಲೀಟರ್ ಡೀಸೆಲ್ ಎಂಜಿನ್ ಪಕ್ಕಾ..!

ಇನ್ನು ಪ್ರಸ್ತುತ ಮಾರುಕಟ್ಟೆಯಲ್ಲಿ ಖರೀದಿಗೆ ಲಭ್ಯವಿರುವ ವೆನ್ಯೂ ಕಾರು 1.2-ಲೀಟರ್ ಪೆಟ್ರೋಲ್, 1.4-ಲೀಟರ್ ಡೀಸೆಲ್ ಮತ್ತು 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 6.50 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.11.11 ಲಕ್ಷ ಬೆಲೆ ಪಡೆದುಕೊಂಡಿದೆ.

ಬಿಎಸ್-6 ಎಫೆಕ್ಟ್- ಹ್ಯುಂಡೈ ವೆನ್ಯೂ‌ನಲ್ಲಿ 1.5-ಲೀಟರ್ ಡೀಸೆಲ್ ಎಂಜಿನ್ ಪಕ್ಕಾ..!

ಐ20 ಕಾರಿನಿಂದ ಎರವಲು ಪಡೆಯಲಾದ 1.2-ಲೀಟರ್ ಪೆಟ್ರೋಲ್ ಎಂಜಿನ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 83-ಬಿಎಚ್‌ಪಿ, 115-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ, 1.4-ಲೀಟರ್ ಡೀಸೆಲ್ ಮಾದರಿಯು ಕ್ರೆಟಾದಿಂದ ಎರವಲು ಪಡೆಯಲಾದ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 89-ಬಿಎಚ್‌ಪಿ, 220-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.

MOST READ:ಕಿಯಾ ಮೋಟಾರ್ಸ್ ಬಹುನೀರಿಕ್ಷಿತ ಸೆಲ್ಟೊಸ್ ಬಿಡುಗಡೆ

ಬಿಎಸ್-6 ಎಫೆಕ್ಟ್- ಹ್ಯುಂಡೈ ವೆನ್ಯೂ‌ನಲ್ಲಿ 1.5-ಲೀಟರ್ ಡೀಸೆಲ್ ಎಂಜಿನ್ ಪಕ್ಕಾ..!

ಹಾಗೆಯೇ ಟಾಪ್ ಎಂಡ್ ಮಾದರಿಯಾದ 1.0-ಲೀಟರ್ ತ್ರಿ ಸಿಲಿಂಡರ್ ಪೆಟ್ರೋಲ್ ಎಂಜಿನ್ ಮಾದರಿಯು 120-ಬಿಎಚ್‌ಪಿ ಮತ್ತು 170-ಎನ್ಎಂ ಟಾರ್ಕ್ ಉತ್ಪಾದನೆ ಮೂಲಕ ಪರ್ಫಾಮೆನ್ಸ್ ಪ್ರಿಯರಿಗಾಗಿಯೇ ವಿಶೇಷವಾಗಿ ಸಿದ್ದಗೊಂಡಿದ್ದು, ಇದರಲ್ಲಿ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಅಥವಾ 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಅನ್ನು ಆಯ್ಕೆ ಮಾಡಬಹುದಾಗಿದೆ.

MOST READ: ಹೊಸ ಕಾರುಗಳ ನೋಂದಣಿ ಮೇಲಿನ ಶುಲ್ಕ ಹೆಚ್ಚಳಕ್ಕೆ ಕೊನೆಗೂ ಬ್ರೇಕ್..!

ಬಿಎಸ್-6 ಎಫೆಕ್ಟ್- ಹ್ಯುಂಡೈ ವೆನ್ಯೂ‌ನಲ್ಲಿ 1.5-ಲೀಟರ್ ಡೀಸೆಲ್ ಎಂಜಿನ್ ಪಕ್ಕಾ..!

ವೆನ್ಯೂ ತಾಂತ್ರಿಕ ವೈಶಿಷ್ಟ್ಯತೆ ಹ್ಯುಂಡೈ ವೆನ್ಯೂ ಕಾರಿನಲ್ಲಿ 33 ಫೀಚರ್ಸ್‌ಗಳನ್ನು ಹೊಂದಿರುವ ಬ್ಯೂ ಲಿಂಕ್ ಕನೆಕ್ಟಿವಿಟಿ ಸೌಲಭ್ಯವನ್ನು ಜೋಡಿಸಲಾಗಿದ್ದು, ಪ್ಯಾಕೇಜ್ ಮಾದರಿಯನ್ನು ಹೊಂದಿರುವ ಈ ಸೌಲಭ್ಯವು ಹೊಸ ಕಾರಿಗೆ ಗರಿಷ್ಠ ಸುರಕ್ಷತೆಯ ಜೊತೆಗೆ ಕಾರು ಪ್ರಯಾಣವನ್ನು ಸುಖವಾಗಿಸಲು ಹಲವು ಮಾಹಿತಿಗಳನ್ನು ನೀಡಲಿದೆ.

MOST READ: ಜನಪ್ರಿಯ ಡೀಸೆಲ್ ಕಾರುಗಳ ಮೇಲೆ ಭರ್ಜರಿ ಆಫರ್ ಘೋಷಿಸಿದ ಮಾರುತಿ ಸುಜುಕಿ

ಬಿಎಸ್-6 ಎಫೆಕ್ಟ್- ಹ್ಯುಂಡೈ ವೆನ್ಯೂ‌ನಲ್ಲಿ 1.5-ಲೀಟರ್ ಡೀಸೆಲ್ ಎಂಜಿನ್ ಪಕ್ಕಾ..!

ಇದಲ್ಲದೇ ಹೊಸ ಕಾರಿನ ಒಳಾಂಗಣ ವಿನ್ಯಾಸದ ಬಗೆಗೆ ಹೇಳುವುದಾದರೇ, 5-ಸೀಟರ್ ಸೌಲಭ್ಯ ಹೊಂದಿರುವ ವೆನ್ಯೂ ಕಾರು ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ಪಡೆದಿದ್ದು, ಬ್ಲ್ಯಾಕ್ ಡ್ಯಾಶ್‌ಬೋರ್ಡ್ ಮತ್ತು ಕ್ಯಾಬಿನ್, 8-ಇಂಚಿನ ಇನ್ಪೋಟೈನ್‌ಮೆಂಟ್ ಡಿಸ್ಪೈ, ಸೆಂಟರ್ ಕನ್ಸೊಲ್, ಡ್ಯಾಶ್‌ಬೋರ್ಡ್ ಸುತ್ತಲೂ ಸಿಲ್ವರ್ ಎಕ್ಸೆಂಟ್, ಉತ್ತಮ ದರ್ಜೆಯ ಲೆದರ್ ಸೀಟುಗಳು, ವೈರ್‌ಲೆಸ್ ಚಾರ್ಚಿಂಗ್ ಪಾಯಿಂಟ್ ಮತ್ತು ಎಲೆಕ್ಟ್ರಿಕ್ ಸನ್‌ರೂಫ್ ಸೌಲಭ್ಯವಿದೆ.

ಬಿಎಸ್-6 ಎಫೆಕ್ಟ್- ಹ್ಯುಂಡೈ ವೆನ್ಯೂ‌ನಲ್ಲಿ 1.5-ಲೀಟರ್ ಡೀಸೆಲ್ ಎಂಜಿನ್ ಪಕ್ಕಾ..!

ಪ್ರೀಮಿಯಂ ಸೌಲಭ್ಯಗಳ ಜೊತೆಗೆ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಕ್ರೂಸ್ ಕಂಟ್ರೋಲ್, ಫ್ರಂಟ್ ವೀಲ್ಹ್ ಡಿಸ್ಕ್ ಬ್ರೇಕ್, ಆರು ಏರ್‌ಬ್ಯಾಗ್, ಹಿಲ್ ಅಸಿಸ್ಟ್ ಕಂಟ್ರೋಲ್, ಬ್ರೇಕ್ ಅಸಿಸ್ಟ್ ಕಂಟ್ರೋಲ್, ಎಬಿಎಸ್, ಇಬಿಡಿ, ಇಎಸ್‌ಸಿ, ವಿಎಸ್ಎಂ, ಸ್ಪೀಡ್ ಸೆನ್ಸಾರಿಂಗ್ ಆಟೋ ಡೋರ್ ಲಾಕ್, ISOFIX ಸೀಟ್, ಹೊಂದಿರುವ ವೆನ್ಯೂ ಕಾರು ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳಲ್ಲೇ ವಿಶೇಷ ಎನ್ನಿಸಲಿದೆ.

Most Read Articles

Kannada
English summary
Hyundai Venue 1.5-Litre Diesel Engine Variant Launch Confirmed For Before BS-VI Deadline.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X