ಬುಕ್ಕಿಂಗ್‍ನಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಸಿದ ಹ್ಯುಂಡೈ ವೆನ್ಯೂ
ಇತ್ತೀಚೆಗೆ ಬಿಡುಗಡೆಯಾದ ಹ್ಯುಂಡೈ ವೆನ್ಯೂ ಎಸ್‍ಯುವಿಯು ದಾಖಲೆಯ ಪ್ರಮಾಣದಲ್ಲಿ ಬುಕ್ಕಿಂಗ್ ದಾಖಲಿಸಿದೆ. ಹ್ಯುಂಡೈ ವೆನ್ಯೂ 1 ಲಕ್ಷ ಬುಕ್ಕಿಂಗ್ ಅನ್ನು ದಾಖಲಿಸಿದ್ದು, ಬುಕ್ಕಿಂಗ್ ಅನ್ನು ಸ್ಥಗಿತಗೊಳಿಸುವುದಾಗಿ ಹ್ಯುಂಡೈ ಮೋಟಾರ್ಸ್ ಇಂಡಿಯಾ ಹೇಳಿದೆ.

ಹ್ಯುಂಡೈ ವೆನ್ಯೂ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಏಳು ತಿಂಗಳಲ್ಲಿ ಬುಕ್ಕಿಂಗ್‍ನಲ್ಲಿ ಹೊಸ ಮೈಲಿಗಲ್ಲನ್ನು ಸ್ಥಾಪಿಸಿದೆ. ಹ್ಯುಂಡೈ ಕಂಪನಿಯು ಈ ಕಾಂಪ್ಯಾಕ್ಟ್ ಎಸ್‍ಯುವಿಯನ್ನು ಭಾರತದಲ್ಲಿ ಅಭಿವೃದ್ದಿಪಡಿಸಿದ್ದು, ಇತರ ದೇಶಗಳಿಗೆ ರಫ್ತು ಮಾಡುತ್ತಿದೆ.

ಈ ಹ್ಯುಂಡೈ ವೆನ್ಯೂವನ್ನು ಭಾರತ, ನೇಪಾಳ, ಭೂತಾನ್ ಮತ್ತು ಮಾರಿಷ್ ದೇಶಗಳಲ್ಲಿ ಮಾರಾಟ ಮಾಡಲಾಗುತ್ತಿದೆ. ಹ್ಯುಂಡೈ ವೆನ್ಯೂ ಎಸ್‍ಯುವಿಯನ್ನು ಶೀಘ್ರದಲ್ಲೇ ದಕ್ಷಿಣ ಆಫ್ರಿಕಾಕ್ಕೆ ರಫ್ತು ಮಾಡಲಾಗುವುದು ಎಂದು ಕಂಪನಿ ಹೇಳಿದೆ.

ವೆನ್ಯೂ ದೇಶಿಯ ಮಾರುಕಟ್ಟೆಯಲ್ಲಿರುವ ಹ್ಯುಂಡೈ ಕಂಪನಿಯ ಮೊದಲ ಕಾಂಪ್ಯಾಕ್ಟ್ ಎಸ್‍ಯುವಿಯಾಗಿದೆ. ಕಂಪನಿಯ ಬ್ಲೂ ಲಿಂಕ್ ಕನೆಕ್ಟಿವಿಟಿ ತಂತ್ರಜ್ಞಾನವನ್ನು ಹೊಂದಿದ ಭಾರತದ ಮೊದಲ ಎಸ್‍ಯುವಿಯಾಗಿದೆ.

ಭಾರತದ ಎಕ್ಸ್ ಶೋರೂಂ ದರದಂತೆ ಹ್ಯುಂಡೈ ವೆನ್ಯೂ ಕಾರಿನ ಆರಂಭಿಕ ಬೆಲೆಯು ರೂ.6.5 ಲಕ್ಷಗಳಾಗಿದೆ. ಹ್ಯುಂಡೈ ವೆನ್ಯೂ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದ ಮೊದಲ ಎಸ್‍ಯುವಿಯಾಗಿದೆ.

ಹ್ಯುಂಡೈ ವೆನ್ಯೂ ಹಲವಾರು ವಿನೂತನ ಫೀಚರ್ಸ್‍ಗಳನ್ನು ಹೊಂದಿರುವ ಎಸ್‍ಯುವಿಯಾಗಿದೆ. ಹ್ಯುಂಡೈ ಮೋಟಾರ್ಸ್ ಕಂಪನಿಗೆ ದೇಶಿಯ ಮಾರುಕಟ್ಟೆಯಲ್ಲಿ ವೆನ್ಯೂ ಎಸ್‍ಯುವಿಗೆ ಹೆಚ್ಚಿನ ಪ್ರತಿಕ್ರಿಯೆಯನ್ನು ಲಭಿಸಿದೆ.

ವೆನ್ಯೂ ಕಾರಿನಲ್ಲಿ ಎರಡು ಪೆಟ್ರೋಲ್ ಎಂಜಿನ್ ಆಯ್ಕೆಗಳಿದ್ದು, ಡಿಸೇಲ್ ಎಂಜಿನ್‌ನಲ್ಲಿ ಒಂದು ಆಯ್ಕೆಯನ್ನು ನೀಡಲಾಗಿದೆ. ಇ, ಎಸ್, ಎಸ್ಎಕ್ಸ್ ಮತ್ತು ಎಸ್ಎಕ್ಸ್(0) ಎಂಬ ನಾಲ್ಕು ಮಾದರಿಗಳಲ್ಲಿ ವೆನ್ಯೂ ಎಸ್‍ಯುವಿಯನ್ನು ಮಾರಾಟ ಮಾಡಲಾಗುತ್ತದೆ.
MOST READ: ಬೈಕ್ ಚಲಾಯಿಸಿದ್ದು ಮಗ, ದಂಡ ಬಿದ್ದಿದ್ದು ಅಪ್ಪನಿಗೆ..!

ಎಂಜಿನ್‍ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಅನ್ನು ಅಳವಡಿಸಲಾಗಿದೆ. ಇನ್ನೂ 1.4-ಲೀಟರ್ ಡೀಸೆಲ್ ಎಂಜಿನ್ 89 ಬಿಎಚ್‌ಪಿ ಪವರ್ ಮತ್ತು 220 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್‍ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಅನ್ನು ಅಳವಡಿಸಲಾಗಿದೆ.

ಟಾಪ್ ಎಂಡ್ ಮಾದರಿ 1.0 ಲೀಟರ್ ಮೂರು ಸಿಲಿಂಡರ್ ಪೆಟ್ರೋಲ್ ಎಂಜಿನ್ 120 ಬಿಎಚ್‌ಪಿ ಪವರ್ ಮತ್ತು 170-ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್‍ನೊಂದಿಗೆ 6 ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮತ್ತು 7-ಸ್ಪೀಡ್ ಡಿಸಿಟಿ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ನೀಡಲಾಗಿದೆ.

ಈ ಎಸ್‍ಯುವಿಯಲ್ಲಿ ಬ್ಲೂ ಲಿಂಕ್ ಪ್ಯಾಕೇಜ್, ಎರ್ಮಜೆನ್ಸಿ ಅಸಿಸ್ಟ್, ಕಾರು ಟ್ರಾಕಿಂಗ್ ಸೇರಿದಂತೆ ಹಲವಾರು ಸುರಕ್ಷಾ ಫೀಚರ್ಸ್‌ಗಳನ್ನು ನೀಡಲಾಗಿದೆ. ಈ ಎಸ್‍ಯುವಿಯ ಮುಂಭಾಗದಲ್ಲಿ ಗ್ರಿಲ್, ಡ್ಯುಯಲ್ ಹೆಡ್‌ಲ್ಯಾಂಪ್ ಕ್ಲಸ್ಟರ್, ಲೈಟ್ ಸ್ಟ್ರಿಪ್, ಹೆಡ್‌ಲ್ಯಾಂಪ್ ಕ್ಲಸ್ಟರ್, ಎಲ್ಇಡಿ ಡಿಆರ್‌ಎಲ್ ಮತ್ತು 16-ಇಂಚಿನ ಟಯರ್‍ಗಳನ್ನು ಅಳವಡಿಸಲಾಗಿದೆ.

ಈ ಎಸ್‍ಯುವಿಯ ಇಂಟಿರಿಯರ್‍ನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳಿದ್ದು, ಬ್ಲ್ಯಾಕ್ ಡ್ಯಾಶ್‌ಬೋರ್ಡ್, 8-ಇಂಚಿನ ಇನ್ಪೋಟೇನ್‍ಮೆಂಟ್ ಡಿಸ್‍ಪ್ಲೇ, ಸೆಂಟರ್ ಕನ್ಸೊಲ್, ಡ್ಯಾಶ್‌ಬೋರ್ಡ್ ಸುತ್ತಲೂ ಸಿಲ್ವರ್ ಎಕ್ಸೆಂಟ್, ಲೆದರ್ ಸೀಟುಗಳು, ವೈರ್‌ಲೆಸ್ ಚಾರ್ಜಿಂಗ್ ಪಾಯಿಂಟ್ ಮತ್ತು ಎಲೆಕ್ಟ್ರಿಕ್ ಸನ್‌ರೂಫ್‍ಗಳನ್ನು ಒಳಗೊಂಡಿದೆ.

ದೇಶಿಯ ಮಾರುಕಟ್ಟೆಯಲ್ಲಿ ಹ್ಯುಂಡೈ ವೆನ್ಯೂ ಹೆಚ್ಚು ಮಾರಾಟವಾಗುತ್ತಿರುವ ಎಸ್‍ಯುವಿಗಳಲ್ಲಿ ಒಂದಾಗಿದೆ. ಹ್ಯುಂಡೈ ವೆನ್ಯೂ ವಿನೂತನ ಫೀಚರ್ಸ್‍ಗಳ ಮೂಲಕ ಹೆಚ್ಚಿನ ಗ್ರಾಹಕರನ್ನು ಸೆಳೆಯುವಲ್ಲಿ ಯಶ್ವಸಿಯಾಗಿದೆ. ಹ್ಯುಂಡೈ ವೆನ್ಯೂ ಎಸ್‍ಯುವಿಯು ದಾಖಲೆಯ ಪ್ರಮಾಣದಲ್ಲಿ ಬುಕ್ಕಿಂಗ್ ದಾಖಲಿಸಿದೆ.


Click it and Unblock the Notifications








