Just In
Don't Miss!
- News
ಕೊಟ್ಟ ಮಾತು ಉಳಿಸಿಕೊಂಡ ಬೈಡನ್, ಸಂಪುಟದಲ್ಲಿ ಭಾರತೀಯರೇ ಮಿಂಚಿಂಗ್
- Sports
ಐಎಸ್ಎಲ್: ಜೆಮ್ಷೆಡ್ಪುರಕ್ಕೆ ಆಘಾತ ನೀಡಿದ ನಾರ್ಥ್ಈಸ್ಟ್
- Movies
ಹರ ಜಾತ್ರೆಯಲ್ಲಿ ಪುನೀತ್ ರಾಜ್ ಕುಮಾರ್; ಅಪ್ಪು ಹಾಡು ಕೇಳಿ ಸಂಭ್ರಮಿಸಿದ ಅಭಿಮಾನಿಗಳು
- Finance
ಸಿಲಿಂಡರ್ ಬುಕ್ ಮಾಡಿದ ಎರಡು ಗಂಟೆಯೊಳಗೆ ಮನೆ ಬಾಗಿಲಿಗೆ ಡೆಲಿವರಿ
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಹೊಸ ಹ್ಯುಂಡೈ ವೆನ್ಯೂ ಕಾರು ಖರೀದಿಗಾಗಿ ಬುಕ್ಕಿಂಗ್ ಪ್ರಾರಂಭ
ಹ್ಯುಂಡೈ ಸಂಸ್ಥೆಯು ತಮ್ಮ ಹೊಸ ವೆನ್ಯೂ ಕಾಂಪ್ಯಾಕ್ಟ್ ಎಸ್‍ಯುವಿ ಕಾರನನ್ನು ಇದೇ ಮೇ 21 ರಂದು ಬಿಡುಗಡೆ ಮಾಡಲಿದ್ದು, ಇದೀಗ ಬುಕ್ಕಿಂಗ್ ಅನ್ನು ಪ್ರಾರಂಭಿಸಲಾಗಿದೆ. ಹ್ಯುಂಡೈ ಸಂಸ್ಥೆಯು ಪ್ರತೀ ತಿಂಗಳೂ ಸಮರು 100 ಸಾವಿರ ವೆನ್ಯೂ ಕಾರುಗಳನ್ನು ಮಾರಟ ಮಾಡುವ ಯೋಜನೆಯಲಿಲ್ದೆ. ಆಸಕ್ತ ಗ್ರಾಹಕರು ನಿಮ್ಮ ಸಮೀಪದಲ್ಲಿರುವ ಹ್ಯುಂಡೈ ಡೀಲರ್‍ನ ಬಳಿ ರೂ. 21 ಸಾವಿರ ಮುಂಗಡವಾಗಿ ಪಾವತಿಸಿ ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದೆ. ಹಾಗು ಬುಕ್ಕಿಂಗ್ ಪ್ರಕ್ರಿಯೆಯು ಮೇ 20ರವರು ಇರಲಿದೆ.

ಸದ್ಯ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ನಂತರ ಕಾರು ಮಾರಾಟದಲ್ಲಿ 2ನೇ ಸ್ಥಾನದಲ್ಲಿರುವ ಹ್ಯುಂಡೈ ಸಂಸ್ಥೆಯು ಟಾಪ್ 10ರ ಪಟ್ಟಿಯಲ್ಲಿ ಒಟ್ಟು ಮೂರು ಕಾರುಗಳನ್ನು ಮಾರಾಟ ಮಾಡುತ್ತಿದೆ. ಇದೇ ಟಾಪ್ 10ರ ಪಟ್ಟಿಯಲ್ಲಿ ಒಟ್ಟು ಆರು ಕಾರುಗಳನ್ನು ತನ್ನದಾಗಿಸಿಕೊಂಡಿರುವ ಮಾರುತಿ ಸುಜುಕಿಗೆ ಹೊಸದಾಗಿ ಬರುತ್ತಿರುವ ವೆನ್ಯೂ ಭಾರೀ ಪೈಪೋಟಿ ನೀಡುವ ಸುಳಿವು ನೀಡಿದ್ದು, ಪ್ರತಿ ತಿಂಗಳು ಕನಿಷ್ಠ 10 ಸಾವಿರ ವೆನ್ಯೂ ಕಾರುಗಳನ್ನು ಮಾರಾಟ ಮಾಡುವ ನೀರಿಕ್ಷೆಯಲ್ಲಿದೆ.

ಹೀಗಾಗಿ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿರುವ ಮಾರುತಿ ಸುಜುಕಿ ಬ್ರೆಝಾ, ಮಹೀಂದ್ರಾ ಎಕ್ಸ್‌ಯುವಿ 300, ಟಾಟಾ ನೆಕ್ಸಾನ್, ಫೋರ್ಡ್ ಇಕೋ ಸ್ಪೋರ್ಟ್ ಕಾರುಗಳಿಗೆ ತೀವ್ರ ಪೈಪೋಟಿ ನೀಡಲಿರುವ ವೆನ್ಯೂ ಕಾರು ಸದ್ಯ ಮಾರುಕಟ್ಟೆಯಲ್ಲಿರುವ ಕ್ರೆಟಾ ಕಾರಿನಂತೆಯೇ ಹೊಸ ಸಂಚಲನಕ್ಕೆ ಕಾರಣವಾಗಿದೆ.

ಜೊತೆಗೆ ವೆನ್ಯೂ ಕಾರಿನಲ್ಲಿ ಅಳವಡಿಸಲಾಗಿರುವ ಬ್ಲ್ಯೂ ಲಿಂಕ್ ತಂತ್ರಜ್ಞಾನವು ಕಾರು ಮಾರಾಟದಲ್ಲಿ ಹ್ಯುಂಡೈಗೆ ವರದಾನವಾಗಲಿದ್ದು, ಜಿಯೋ ಫೆನ್ಸ್ ಸೌಲಭ್ಯವು ಕೂಡಾ ಕಾರಿಗೆ ಮತ್ತಷ್ಟು ಭದ್ರತೆ ನೀಡಲಿದೆ. ಒಂದು ನೀರ್ದಿಷ್ಟ ಪ್ರದೇಶವನ್ನು ಬ್ಯೂ ಲಿಂಕ್ ಮೂಲಕ ಗುರುತು ಮಾಡಿಟ್ಟಲ್ಲಿ ಆ ಪ್ರದೇಶವನ್ನು ದಾಟಿ ನಿಮ್ಮ ಕಾರು ಹೊರಹೊದಲ್ಲಿ ನಿಮ್ಮನ್ನು ತಕ್ಷಣವೇ ಎಚ್ಚರಿಸುವಂತಹ ತಂತ್ರಜ್ಞಾನ ಇದಾಗಿದೆ.

ಜೊತೆಗೆ ರಿಯರ್ ಟೈಮ್ ವೆಹಿಕಲ್ ಟ್ರ್ಯಾಕಿಂಗ್ ಮೂಲಕ ಕಳ್ಳತನವಾದ ಕಾರನ್ನು ಕೆಲವೇ ನಿಮಿಷಗಳಲ್ಲಿ ಪತ್ತೆ ಮಾಡಬಹುದಾಗಿದ್ದು, ರಿಮೋಟ್ ಮೂಲಕವೇ ಎಂಜಿನ್ ಸ್ಟಾರ್ಟ್/ಸ್ಟಾಪ್, ಲಾಕ್/ಅನ್‌ಲಾಕ್, ಹಾರ್ನ್ ಮತ್ತು ಲೈಟ್ ಕಂಟ್ರೋಲ್, ಫೈಂಡ್ ಮೈ ಕಾರ್ ಲೋಕೇಷನ್, ಶೇರ್ ಮೈ ಕಾರ್ ಮತ್ತು ರಿಯರ್ ಟೈಮ್ ಮೂಲಕ ಟ್ರಾಫಿಕ್ ಇನ್‌ಫಾರ್ಮೆಷನ್ ಪಡೆದುಕೊಳ್ಳಬಹುದಾದ ಸೌಲಭ್ಯ ಈ ಕಾರಿನಲ್ಲಿದೆ.

ವೆನ್ಯೂ ಕಾರುಗಳು ಒಟ್ಟು ಮೂರು ಎಂಜಿನ್ ಆಯ್ಕೆಯೊಂದಿಗೆ ಖರೀದಿಗೆ ಲಭ್ಯವಾಗುತ್ತಿದ್ದು, ಪೆಟ್ರೋಲ್ ಎಂಜಿನ್‌ನಲ್ಲಿ 1.0 ಲೀಟರ್ ತ್ರಿ ಸಿಲಿಂಡರ್ ಎಂಜಿನ್ ಮತ್ತು 1.4 ಲೀಟರ್ ಎಂಜಿನ್ ಹೊಂದಿರಲಿದೆ. ಹಾಗೆಯೇ 1.4-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಸಹ ಹೊಂದಿರಲಿದೆ.

ಇನ್ನು ಹೊಸ ಕಾರಿನಲ್ಲಿ ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್ಇಡಿ ಟೈಲ್ ಲೈಟ್, 6 ಸ್ಪೀಡ್ ಡ್ಯುಯಲ್ ಕ್ಲಚ್ ಗೇರ್‌ಬಾಕ್ಸ್, ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಎಬಿಎಸ್, 4 ಏರ್‌ಬ್ಯಾಗ್, ಸನ್‌ರೂಫ್, ಡ್ಯುಯಲ್ ಟೋನ್ ಬಾಡಿ ಕಲರ್, ಡ್ಯುಯಲ್ ಟೋನ್ ಇಂಟಿರಿಯರ್, ರಿಯರ್ ವ್ಯೂ ಕ್ಯಾಮೆರಾ, ಪಾರ್ಕಿಂಗ್ ಸೆನ್ಸಾರ್, ಸ್ಮಾರ್ಟ್ ಕೆನೆಕ್ಟಿವಿಟಿ ಮತ್ತು ಲಾರ್ಜ್ ಟಚ್‌ಸ್ಕ್ರೀನ್ ಡಿಸ್‌ಪ್ಲೇಯೊಂದಿಗೆ ಹಲವು ಮಾದರಿಯ ಪ್ರೀಮಿಯಂ ಸೌಲಭ್ಯಗಳನ್ನು ಪಡೆದುಕೊಂಡಿರಲಿದೆ.

ಕಾರಿನ ಬೆಲೆಗಳು(ಅಂದಾಜು)
ಹೊಸ ವೆನ್ಯೂ ಕಾರು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಒಟ್ಟು ಆರು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ಹೊಸ ಕಾರಿನ ಬೆಲೆಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 7.50 ಲಕ್ಷದಿಂದ ಟಾಪ್ ಎಂಡ್ ಮಾದರಿಗೆ ರೂ.10 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.