Just In
- 6 min ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- 40 min ago ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
- 48 min ago ಹ್ಯುಂಡೈನ ಈ ಕಾರಿಗೆ ಭಾರತದಲ್ಲಿ ಭರ್ಜರಿ ಡಿಸ್ಕೌಂಟ್: ಇದಕ್ಕಿಂತ ಉತ್ತಮ ಆಫರ್ ಸದ್ಯಕ್ಕಿಲ್ಲ!
- 58 min ago ರೈತರ ವಿಶ್ವಾಸದೊಂದಿಗೆ 40 ಲಕ್ಷ ಟ್ರ್ಯಾಕ್ಟರ್ ಮಾರಾಟ ಮೈಲಿಗಲ್ಲು ಸಾಧಿಸಿದ ಮಹೀಂದ್ರಾ
Don't Miss!
- News Lok Sabha Election 2024: ಈ 6 ಜಿಲ್ಲೆಗಳಲ್ಲಿ 0% ಮತದಾನ-ಎಲ್ಲಿ ಹಾಗೂ ಕಾರಣ ಏನು?
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Movies ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ; ಸುಮಲತಾ ಅಂಬರೀಶ್ ಪ್ರತಿಕ್ರಿಯೆ
- Lifestyle 5 ನಿಮಿಷದಲ್ಲಿ ಪಾತ್ರೆಯನ್ನು ಹೊಳೆಯುವಂತೆ ಮಾಡಿ..! ಸುಲಭದ ಟಿಪ್ಸ್ ಇಲ್ಲಿದೆ
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹ್ಯುಂಡೈ ವೆನ್ಯೂ ನಿಯಂತ್ರಣಕ್ಕೆ ಒಂದು ಸ್ಮಾರ್ಟ್ಫೋನ್ ಸಾಕು..!
ಕಳೆದ ತಿಂಗಳು ಬಿಡುಗಡೆಯಾಗಿರುವ ಹ್ಯುಂಡೈ ವೆನ್ಯೂ ಕಂಪ್ಯಾಕ್ಟ್ ಮಾದರಿಯು ಸದ್ಯ ಮಾರುಕಟ್ಟೆಯಲ್ಲಿ ಭಾರೀ ಸದ್ದು ಮಾಡುತ್ತಿದ್ದು, ಹೊಸ ಕಾರಿನಲ್ಲಿರುವ ಸ್ಮಾರ್ಟ್ ಫೋನ್ ಕನೆಕ್ಟಿವಿಟಿ ಸೇರಿದಂತೆ ಹಲವು ಪ್ರೀಮಿಯಂ ಫೀಚರ್ಸ್ಗಳು ವೆನ್ಯೂ ಭರ್ಜರಿ ಮಾರಾಟಕ್ಕೆ ಪ್ರಮುಖ ಕಾರಣವಾಗಿದೆ.
ಕಂಪ್ಯಾಕ್ಟ್ ಎಸ್ಯುವಿ ವೈಶಿಷ್ಟ್ಯತೆಯ ಹ್ಯುಂಡೈ ವೆನ್ಯೂ ಕಾರು ಮಾದರಿಯು ಸದ್ಯ ಮಾರುತಿ ಸುಜುಕಿ ಬ್ರೆಝಾ ಕಾರಿಗೆ ಭಾರೀ ಪೈಪೋಟಿ ನೀಡುತ್ತಿದ್ದು, ಹೊಸ ಕಾರಿನಲ್ಲಿರುವ ಪ್ರೀಮಿಯಂ ಫೀಚರ್ಸ್ಗಳು ಗ್ರಾಹಕರ ಆಕರ್ಷಣೆಗೆ ಕಾರಣವಾಗಿವೆ. ಬೆಲೆಯಲ್ಲಿ ತುಸು ದುಬಾರಿ ಎನ್ನಿಸಿದರೂ ಸಹ ಕಂಪ್ಯಾಕ್ಟ್ ಎಸ್ಯುವಿ ಕಾರುಗಳಲ್ಲೇ ಅತಿ ವಿನೂತನ ಎಂಜಿನ್ ಸೌಲಭ್ಯ ಹೊಂದಿರುವ ವೆನ್ಯೂ ಕಾರು ಸದ್ಯ ಕಾರು ಮಾರಾಟದಲ್ಲಿ ಅಗ್ರಸ್ಥಾನದತ್ತ ಮುನ್ನುಗ್ಗುತ್ತಿದೆ.
ವೆನ್ಯೂ ಕಾರಿನಲ್ಲಿ ಜೋಡಣೆ ಮಾಡಲಾಗಿರುವ ಆ್ಯಪಲ್ ಕಾರ್ ಪ್ಲೇ ಮತ್ತು ಸ್ಮಾರ್ಟ್ ಫೋನ್ ಕನೆಕ್ವಿಟಿ ಸೌಲಭ್ಯವು ಸಾಕಷ್ಟು ಸದ್ದು ಮಾಡುತ್ತಿದ್ದು, ಹ್ಯುಂಡೈ ಬ್ಲೂಲಿಂಕ್ ಆ್ಯಪ್ ಮೂಲಕವೇ ಕಾರಿನ ಬಹುತೇಕ ತಾಂತ್ರಿಕ ಸೌಲಭ್ಯಗಳನ್ನು ನಿಯಂತ್ರಣ ಮಾಡಬಹುದು.
ಇನ್ನು ವೆನ್ಯೂ ಕಾರು ಸದ್ಯ ಹ್ಯುಂಡೈ ನಿರ್ಮಾಣದ ಇತರೆ ಕಾರುಗಳಿಂತಲೂ ಅತಿ ವಿನೂತನ ತಂತ್ರಜ್ಞಾನ ಸೌಲಭ್ಯಗಳನ್ನು ಹೊತ್ತು ಬಂದಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಒಟ್ಟು 4 ವೆರಿಯೆಂಟ್ಗಳಲ್ಲಿ ಲಭ್ಯವಿರುವ ಹೊಸ ಕಾರು ದೆಹಲಿ ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ ರೂ .6.50 ಲಕ್ಷದಿಂದ ಟಾಪ್ ಎಂಡ್ ಆವೃತ್ತಿಯು ರೂ.11,10,500 ಬೆಲೆ ಪಡೆದುಕೊಂಡಿದೆ.
ವೆನ್ಯೂ ಕಾರಿನಲ್ಲಿ ಎರಡು ಪೆಟ್ರೋಲ್ ಎಂಜಿನ್ ಆಯ್ಕೆಗಳನ್ನು ಪಡೆದುಕೊಂಡಿದ್ದರೆ ಡಿಸೇಲ್ ಎಂಜಿನ್ನಲ್ಲಿ ಒಂದು ಆಯ್ಕೆಯನ್ನು ನೀಡಲಾಗಿದ್ದು, ಇ, ಎಸ್, ಎಸ್ಎಕ್ಸ್ ಮತ್ತು ಎಸ್ಎಕ್ಸ್(0) ವೆರಿಯೆಂಟ್ಗಳಲ್ಲಿ ಹೊಸ ವೆನ್ಯೂ ಕಾರು ಖರೀದಿಗೆ ಲಭ್ಯವಿದೆ.
ಇದರಲ್ಲಿ 1.2-ಲೀಟರ್ ಕಪ್ಪಾ ಪೆಟ್ರೋಲ್ ಎಂಜಿನ್ ಮತ್ತು 1.4-ಡೀಸೆಲ್ ಎಂಜಿನ್ಗಳು ಸಾಮಾನ್ಯ ಮಾದರಿಯ ಕಾರುಗಳಗಾಗಿ ಮಾರಾಟಗೊಳ್ಳಲಿದ್ದರೆ, ಕಡಿಮೆ ಎಂಜಿನ್ ಸಾಮಾರ್ಥ್ಯದ 1.0-ಲೀಟರ್ ಪೆಟ್ರೋಲ್ ಆವೃತ್ತಿಯು ಅತಿ ಹೆಚ್ಚು ಬಿಎಚ್ಪಿ ಉತ್ಪಾದನೆಯೊಂದಿಗ ವೆನ್ಯೂ ಟಾಪ್ ಎಂಡ್ ಮಾದರಿಯಾಗಿ ಹೊರಹೊಮ್ಮಿದೆ.
ಎಂಜಿನ್ ಪರ್ಫಾಮೆನ್ಸ್
ಐ20 ಕಾರಿನಿಂದ ಎರವಲು ಪಡೆಯಲಾದ 1.2-ಲೀಟರ್ ಪೆಟ್ರೋಲ್ ಎಂಜಿನ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಗೇರ್ಬಾಕ್ಸ್ನೊಂದಿಗೆ 83-ಬಿಎಚ್ಪಿ, 115-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ, 1.4-ಲೀಟರ್ ಡೀಸೆಲ್ ಮಾದರಿಯು ಕ್ರೆಟಾದಿಂದ ಎರವಲು ಪಡೆಯಲಾದ 6-ಸ್ಪೀಡ್ ಮ್ಯಾನುವಲ್ ಗೇರ್ಬಾಕ್ಸ್ನೊಂದಿಗೆ 89-ಬಿಎಚ್ಪಿ, 220-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.
ಹಾಗೆಯೇ ಟಾಪ್ ಎಂಡ್ ಮಾದರಿಯಾದ 1.0-ಲೀಟರ್ ತ್ರಿ ಸಿಲಿಂಡರ್ ಪೆಟ್ರೋಲ್ ಎಂಜಿನ್ ಮಾದರಿಯು 120-ಬಿಎಚ್ಪಿ ಮತ್ತು 170-ಎನ್ಎಂ ಟಾರ್ಕ್ ಉತ್ಪಾದನೆ ಮೂಲಕ ಪರ್ಫಾಮೆನ್ಸ್ ಪ್ರಿಯರಿಗಾಗಿಯೇ ವಿಶೇಷವಾಗಿ ಸಿದ್ದಗೊಂಡಿದ್ದು, ಇದರಲ್ಲಿ 6-ಸ್ಪೀಡ್ ಮ್ಯಾನುವಲ್ ಗೇರ್ಬಾಕ್ಸ್ ಅಥವಾ 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್ಬಾಕ್ಸ್ ಅನ್ನು ಆಯ್ಕೆ ಮಾಡಬಹುದಾಗಿದೆ.
ವೆನ್ಯೂ ತಾಂತ್ರಿಕ ವೈಶಿಷ್ಟ್ಯತೆ
ಹ್ಯುಂಡೈ ವೆನ್ಯೂ ಕಾರಿನಲ್ಲಿ 33 ಫೀಚರ್ಸ್ಗಳನ್ನು ಹೊಂದಿರುವ ಬ್ಯೂ ಲಿಂಕ್ ಕನೆಕ್ಟಿವಿಟಿ ಸೌಲಭ್ಯವನ್ನು ಜೋಡಿಸಲಾಗಿದ್ದು, ಪ್ಯಾಕೇಜ್ ಮಾದರಿಯನ್ನು ಹೊಂದಿರುವ ಈ ಸೌಲಭ್ಯವು ಹೊಸ ಕಾರಿಗೆ ಗರಿಷ್ಠ ಸುರಕ್ಷತೆಯ ಜೊತೆಗೆ ಕಾರು ಪ್ರಯಾಣವನ್ನು ಸುಖವಾಗಿಸಲು ಹಲವು ಮಾಹಿತಿಗಳನ್ನು ನೀಡಲಿದೆ.
ಬ್ಲೂ ಲಿಂಕ್ ಪ್ಯಾಕೇಜ್ನಲ್ಲಿ ಜಿಯೋ ಫೆನ್ಸ್, ಎರ್ಮಜೆನ್ಸಿ ಅಸಿಸ್ಟ್, ಕಾರ್ ಟ್ರಾಕಿಂಗ್ ಸೇರಿದಂತೆ ಹಲವಾರು ಸುರಕ್ಷಾ ಫೀಚರ್ಸ್ಗಳನ್ನು ನೀಡಲಾಗಿದ್ದು, ಸಿಗ್ನಿಚೆಕ್ ಕಾಸ್ಕ್ಲ್ಯಾಡಿಂಗ್ ಹೆಕ್ಸಾಗೊನಲ್ ಫ್ರಂಟ್ ಗ್ರಿಲ್, ಡ್ಯುಯಲ್ ಹೆಡ್ಲ್ಯಾಂಪ್ ಕ್ಲಸ್ಟರ್, ಸಣ್ಣ ಎಳೆಯಂತಿರುವ ಲೈಟ್ ಸ್ಟ್ರಿಪ್, ಹೆಡ್ಲ್ಯಾಂಪ್ ಕ್ಲಸ್ಟರ್ ಕಳೆಭಾಗದಲ್ಲಿ ಹೊಂದಿಕೊಂಡಂತಿರುವ ಎಲ್ಇಡಿ ಡಿಆರ್ಎಲ್ಎಸ್ ಮತ್ತು 16-ಇಂಚಿನ ಟೈರ್ ಸೌಲಭ್ಯವು ಎಸ್ಯುವಿ ಪ್ರಿಯರನ್ನು ಸೆಳೆಯಲಿವೆ.
ಇನ್ನು ಹೊಸ ಕಾರಿನ ಒಳಾಂಗಣ ವಿನ್ಯಾಸದ ಬಗೆಗೆ ಹೇಳುವುದಾದರೇ, 5-ಸೀಟರ್ ಸೌಲಭ್ಯ ಹೊಂದಿರುವ ವೆನ್ಯೂ ಕಾರು ಹಲವಾರು ಪ್ರೀಮಿಯಂ ಫೀಚರ್ಸ್ಗಳನ್ನು ಪಡೆದಿದ್ದು, ಬ್ಲ್ಯಾಕ್ ಡ್ಯಾಶ್ಬೋರ್ಡ್ ಮತ್ತು ಕ್ಯಾಬಿನ್, 8-ಇಂಚಿನ ಇನ್ಪೋಟೈನ್ಮೆಂಟ್ ಡಿಸ್ಪೈ, ಸೆಂಟರ್ ಕನ್ಸೊಲ್, ಡ್ಯಾಶ್ಬೋರ್ಡ್ ಸುತ್ತಲೂ ಸಿಲ್ವರ್ ಎಕ್ಸೆಂಟ್, ಉತ್ತಮ ದರ್ಜೆಯ ಲೆದರ್ ಸೀಟುಗಳು, ವೈರ್ಲೆಸ್ ಚಾರ್ಚಿಂಗ್ ಪಾಯಿಂಟ್ ಮತ್ತು ಎಲೆಕ್ಟ್ರಿಕ್ ಸನ್ರೂಫ್ ಸೌಲಭ್ಯವಿದೆ.
MOST READ: ಆರ್ಥಿಕವಾಗಿ ಹೊರೆಯಾದ ಸ್ಟಾಕ್- ಖರೀದಿಯಾಗದೇ ಉಳಿದ ರೂ.35 ಸಾವಿರ ಕೋಟಿ ಮೌಲ್ಯದ ಕಾರುಗಳು..!
ಹೊಸ ಕಾರಿನಲ್ಲಿ ಪ್ರೀಮಿಯಂ ಸೌಲಭ್ಯಗಳ ಜೊತೆಗೆ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಕ್ರೂಸ್ ಕಂಟ್ರೋಲ್, ಫ್ರಂಟ್ ವೀಲ್ಹ್ ಡಿಸ್ಕ್ ಬ್ರೇಕ್, ಆರು ಏರ್ಬ್ಯಾಗ್, ಹಿಲ್ ಅಸಿಸ್ಟ್ ಕಂಟ್ರೋಲ್, ಬ್ರೇಕ್ ಅಸಿಸ್ಟ್ ಕಂಟ್ರೋಲ್, ಎಬಿಎಸ್, ಇಬಿಡಿ, ಇಎಸ್ಸಿ, ವಿಎಸ್ಎಂ, ಸ್ಪೀಡ್ ಸೆನ್ಸಾರಿಂಗ್ ಆಟೋ ಡೋರ್ ಲಾಕ್, ISOFIX ಸೀಟ್, ಹೊಂದಿರುವ ವೆನ್ಯೂ ಕಾರು ಕಂಪ್ಯಾಕ್ಟ್ ಎಸ್ಯುವಿ ಕಾರುಗಳಲ್ಲೇ ವಿಶೇಷ ಎನ್ನಿಸಲಿದೆ.
ಖರೀದಿಗೆ ಲಭ್ಯವಿರುವ ಬಣ್ಣಗಳು
ವೆನ್ಯೂ ಕಾರು ಒಟ್ಟು 10 ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದ್ದು, 7 ಸಿಂಗಲ್ ಟೋನ್ ಮತ್ತು 3 ಡ್ಯುಯಲ್ ಟೋನ್ ಬಣ್ಣಗಳ ಆಯ್ಕೆಯನ್ನು ಪಡೆದಿದೆ. ಸಿಂಗಲ್ ಟೋನ್ನಲ್ಲಿ ಪೊಲಾರ್ ವೈಟ್, ಸಿಲ್ವರ್, ಫ್ಲೆರಿ ರೆಡ್, ಡೆನಿಮ್ ಬ್ಲ್ಯೂ, ಲಾವಾ ಆರೆಂಜ್, ಸ್ಟಾರ್ ಡಸ್ಟ್, ಡೀಪ್ ಫಾರೆಸ್ಟ್ ಮತ್ತು ಡ್ಯುಯಲ್ ಟೋನ್ನಲ್ಲಿ ಡೆನಿಮ್ ಬ್ಲ್ಯೂ ಜೊತೆ ಪೊಲಾರ್ ವೈಟ್ ರೂಫ್, ಪೊಲಾರ್ ವೈಟ್ ಜೊತೆ ಬ್ಲ್ಯಾಕ್ ರೂಫ್ ಮತ್ತು ಲಾವಾ ಆರೇಂಜ್ ಜೊತೆ ಬ್ಲ್ಯಾಕ್ ರೂಫ್ ನೀಡಲಾಗಿದೆ.