ಬಿಡುಗಡೆಯ ಹಿನ್ನೆಲೆಯಲ್ಲಿ ಡೀಲರ್ಸ್ ಯಾರ್ಡ್ ತಲುಪಿದ ಹ್ಯುಂಡೈ ವೆನ್ಯೂ

ಇದೇ ತಿಂಗಳು ಮೇ 21ಕ್ಕೆ ಭಾರತದಲ್ಲಿ ಹ್ಯುಂಡೈ ಹೊಚ್ಚ ಹೊಸ ಕಾರು ಮಾದರಿ ವೆನ್ಯೂ ಬಿಡುಗಡೆಯಾಗುತ್ತಿದ್ದು, ಹೊಸ ಕಾರುಗಳು ಈಗಾಗಲೇ ಭಾರತದ ಪ್ರಮುಖ ಡೀಲರ್ಸ್ ಯಾರ್ಡ್‌ಗಳಲ್ಲಿ ಸ್ಟಾಕ್ ಮಾಡುತ್ತಿರುವುದು ಕಂಡುಬಂದಿದೆ.

ಬಿಡುಗಡೆಯ ಹಿನ್ನೆಲೆಯಲ್ಲಿ ಡೀಲರ್ಸ್ ಯಾರ್ಡ್ ತಲುಪಿದ ಹ್ಯುಂಡೈ ವೆನ್ಯೂ

ಹ್ಯುಂಡೈ ವೆನ್ಯೂ ಕಾರು ಖರೀದಿಗಾಗಿ ಈಗಾಗಲೇ ಬುಕ್ಕಿಂಗ್ ಪ್ರಕ್ರಿಯೆಯು ಆರಂಭವಾಗಿದ್ದು, ಬುಕ್ಕಿಂಗ್ ಆರಂಭವಾದ ಕೇವಲ 15 ದಿನಗಳ ಅವಧಿಯಲ್ಲಿ 10ಕ್ಕೂ ಸಾವಿರಕ್ಕೂ ಹೆಚ್ಚು ಗ್ರಾಹಕರು ರೂ. 50 ಸಾವಿರ ಮುಂಗಡ ಪಾವತಿ ಬುಕ್ಕಿಂಗ್ ಮಾಡಿದ್ದಾರೆ. ಹೀಗಾಗಿ ಬಿಡುಗಡೆಯ ಮುನ್ನವೇ ಭಾರೀ ಸದ್ದು ಮಾಡುತ್ತಿರುವ ವೆನ್ಯೂ ಕಾರು ಕಂಪ್ಯಾಕ್ಟ್ ಎಸ್‌ಯುವಿ ಮಾದರಿಗಳಾದ ಮಾರುತಿ ಸುಜುಕಿ ಬ್ರೆಝಾ ಮತ್ತು ಮಹೀಂದ್ರಾ ಎಕ್ಸ್‌ಯುವಿ300 ಕಾರುಗಳಿಗೆ ತೀವ್ರ ಪೈಪೋಟಿ ನೀಡಲಿದೆ.

ಬಿಡುಗಡೆಯ ಹಿನ್ನೆಲೆಯಲ್ಲಿ ಡೀಲರ್ಸ್ ಯಾರ್ಡ್ ತಲುಪಿದ ಹ್ಯುಂಡೈ ವೆನ್ಯೂ

ವೆನ್ಯೂ ಕಾರುಗಳು ಒಟ್ಟು ಮೂರು ಎಂಜಿನ್ ಆಯ್ಕೆಯೊಂದಿಗೆ ಖರೀದಿಗೆ ಲಭ್ಯವಾಗುತ್ತಿದ್ದು, ಎಂಟ್ರಿ ಲೆವಲ್‌ನಲ್ಲಿ 1.0-ಲೀಟರ್ ತ್ರಿ ಸಿಲಿಂಡರ್ ಎಂಜಿನ್ ಮಾರಾಟವಾಗಲಿದ್ದರೆ, ಟಾಪ್ ಎಂಡ್ ಮಾದರಿಯಲ್ಲಿ 1.4 ಲೀಟರ್ ಪೆಟ್ರೋಲ್ ಎಂಜಿನ್ ಮತ್ತು 1.4-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಸಹ ಹೊಂದಿರಲಿದೆ.

ಬಿಡುಗಡೆಯ ಹಿನ್ನೆಲೆಯಲ್ಲಿ ಡೀಲರ್ಸ್ ಯಾರ್ಡ್ ತಲುಪಿದ ಹ್ಯುಂಡೈ ವೆನ್ಯೂ

ಈ ಮೂರು ಎಂಜಿನ್ ಮಾದರಿಗಳಲ್ಲಿ ಡೀಸೆಲ್ ಎಂಜಿನ್‌ಗಿಂತ ಪೆಟ್ರೋಲ್ ಆವೃತ್ತಿಗಳ ಮೇಲೆ ಹೆಚ್ಚಿನ ಒತ್ತು ನೀಡಿರುವ ಹ್ಯುಂಡೈ ಸಂಸ್ಥೆಯು ಒಟ್ಟು 13 ವೆರಿಯೆಂಟ್‌ಗಳನ್ನು ಒದಗಿಸಲಿದ್ದು, 7 ಸಾಮಾನ್ಯ ಮಾದರಿಯ ಬಣ್ಣಗಳ ಆಯ್ಕೆ ಹಾಗೂ 3 ಡ್ಯುಯಲ್ ಟೋನ್ ಬಣ್ಣಗಳಲ್ಲಿ ಆಯ್ಕೆಯಲ್ಲಿ ವೆನ್ಯೂ ಲಭ್ಯವಿರಲಿದೆಯೆಂತೆ.

ಬಿಡುಗಡೆಯ ಹಿನ್ನೆಲೆಯಲ್ಲಿ ಡೀಲರ್ಸ್ ಯಾರ್ಡ್ ತಲುಪಿದ ಹ್ಯುಂಡೈ ವೆನ್ಯೂ

ಹೀಗಾಗಿ ಹೊಸ ಕಾರಿನ ಬೆಲೆಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 7.50 ಲಕ್ಷದಿಂದ ಟಾಪ್ ಎಂಡ್ ಮಾದರಿಗೆ ರೂ.10 ಲಕ್ಷ ಇರಬಹುದೆಂದು ಅಂದಾಜಿಸಲಾಗಿದ್ದು, ಮಾರುತಿ ಸುಜುಕಿ ಬ್ರೆಝಾ ಮತ್ತು ಮಹೀಂದ್ರಾ ಎಕ್ಸ್‌ಯುವಿ 300 ಕಾರಿಗೆ ಪೈಪೋಟಿಯಾಗಿ ಹಲವಾರು ಹೊಸ ವೈಶಿಷ್ಟ್ಯತೆಗಳನ್ನು ವೆನ್ಯೂ ಕಾರಿನಲ್ಲಿ ಒದಗಿಸಿರುವುದು ಈಗಾಗಲೇ ಬಹಿರಂಗವಾಗಿದೆ.

ಬಿಡುಗಡೆಯ ಹಿನ್ನೆಲೆಯಲ್ಲಿ ಡೀಲರ್ಸ್ ಯಾರ್ಡ್ ತಲುಪಿದ ಹ್ಯುಂಡೈ ವೆನ್ಯೂ

ಜೊತೆಗೆ ವೆನ್ಯೂ ಕಾರಿನಲ್ಲಿ ಅಳವಡಿಸಲಾಗಿರುವ ಬ್ಲ್ಯೂ ಲಿಂಕ್ ತಂತ್ರಜ್ಞಾನವು ಕಾರು ಮಾರಾಟದಲ್ಲಿ ಹ್ಯುಂಡೈಗೆ ವರದಾನವಾಗಲಿದ್ದು, ಜಿಯೋ ಫೆನ್ಸ್ ಸೌಲಭ್ಯವು ಕೂಡಾ ಕಾರಿಗೆ ಮತ್ತಷ್ಟು ಭದ್ರತೆ ನೀಡಲಿದೆ. ಒಂದು ನೀರ್ದಿಷ್ಟ ಪ್ರದೇಶವನ್ನು ಬ್ಯೂ ಲಿಂಕ್ ಮೂಲಕ ಗುರುತು ಮಾಡಿಟ್ಟಲ್ಲಿ ಆ ಪ್ರದೇಶವನ್ನು ದಾಟಿ ನಿಮ್ಮ ಕಾರು ಹೊರಹೊದಲ್ಲಿ ನಿಮ್ಮನ್ನು ತಕ್ಷಣವೇ ಎಚ್ಚರಿಸುವಂತಹ ತಂತ್ರಜ್ಞಾನ ಇದಾಗಿದೆ.

ಬಿಡುಗಡೆಯ ಹಿನ್ನೆಲೆಯಲ್ಲಿ ಡೀಲರ್ಸ್ ಯಾರ್ಡ್ ತಲುಪಿದ ಹ್ಯುಂಡೈ ವೆನ್ಯೂ

ಹಾಗೆಯೇ ರಿಯರ್ ಟೈಮ್ ವೆಹಿಕಲ್ ಟ್ರ್ಯಾಕಿಂಗ್ ಮೂಲಕ ಕಳ್ಳತನವಾದ ಕಾರನ್ನು ಕೆಲವೇ ನಿಮಿಷಗಳಲ್ಲಿ ಪತ್ತೆ ಮಾಡಬಹುದಾಗಿದ್ದು, ರಿಮೋಟ್ ಮೂಲಕವೇ ಎಂಜಿನ್ ಸ್ಟಾರ್ಟ್/ಸ್ಟಾಪ್, ಲಾಕ್/ಅನ್‌ಲಾಕ್, ಹಾರ್ನ್ ಮತ್ತು ಲೈಟ್ ಕಂಟ್ರೋಲ್, ಫೈಂಡ್ ಮೈ ಕಾರ್ ಲೋಕೇಷನ್, ಶೇರ್ ಮೈ ಕಾರ್ ಮತ್ತು ರಿಯರ್ ಟೈಮ್ ಮೂಲಕ ಟ್ರಾಫಿಕ್ ಇನ್‌ಫಾರ್ಮೆಷನ್ ಪಡೆದುಕೊಳ್ಳಬಹುದಾದ ಸೌಲಭ್ಯ ಈ ಕಾರಿನಲ್ಲಿದೆ.

ಬಿಡುಗಡೆಯ ಹಿನ್ನೆಲೆಯಲ್ಲಿ ಡೀಲರ್ಸ್ ಯಾರ್ಡ್ ತಲುಪಿದ ಹ್ಯುಂಡೈ ವೆನ್ಯೂ

ಇನ್ನು ಹೊಸ ಕಾರಿನಲ್ಲಿ ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್ಇಡಿ ಟೈಲ್ ಲೈಟ್, 6 ಸ್ಪೀಡ್ ಡ್ಯುಯಲ್ ಕ್ಲಚ್ ಗೇರ್‌ಬಾಕ್ಸ್, ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಎಬಿಎಸ್, 4 ಏರ್‌ಬ್ಯಾಗ್, ಸನ್‌ರೂಫ್, ಡ್ಯುಯಲ್ ಟೋನ್ ಬಾಡಿ ಕಲರ್, ಡ್ಯುಯಲ್ ಟೋನ್ ಇಂಟಿರಿಯರ್, ರಿಯರ್ ವ್ಯೂ ಕ್ಯಾಮೆರಾ, ಪಾರ್ಕಿಂಗ್ ಸೆನ್ಸಾರ್, ಸ್ಮಾರ್ಟ್ ಕೆನೆಕ್ಟಿವಿಟಿ ಮತ್ತು ಲಾರ್ಜ್ ಟಚ್‌ಸ್ಕ್ರೀನ್ ಡಿಸ್‌ಪ್ಲೇಯೊಂದಿಗೆ ಹಲವು ಮಾದರಿಯ ಪ್ರೀಮಿಯಂ ಸೌಲಭ್ಯಗಳನ್ನು ಪಡೆದುಕೊಂಡಿರಲಿದೆ.

MOST READ: ಹೊಸ ಕಾರು ವಿತರಣೆಯಲ್ಲಿ ವಿಳಂಬ- ಜೀಪ್ ಡೀಲರ್ಸ್‌ಗೆ ಬಿತ್ತು ರೂ. 50 ಸಾವಿರ ದಂಡ..!

ಬಿಡುಗಡೆಯ ಹಿನ್ನೆಲೆಯಲ್ಲಿ ಡೀಲರ್ಸ್ ಯಾರ್ಡ್ ತಲುಪಿದ ಹ್ಯುಂಡೈ ವೆನ್ಯೂ

ಈ ಮೂಲಕ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿರುವ ಮಾರುತಿ ಸುಜುಕಿ ಬ್ರೆಝಾ, ಮಹೀಂದ್ರಾ ಎಕ್ಸ್‌ಯುವಿ 300, ಟಾಟಾ ನೆಕ್ಸಾನ್, ಫೋರ್ಡ್ ಇಕೋ ಸ್ಪೋರ್ಟ್ ಕಾರುಗಳಿಗೆ ತೀವ್ರ ಪೈಪೋಟಿ ನೀಡಲಿರುವ ವೆನ್ಯೂ ಕಾರು ಸದ್ಯ ಮಾರುಕಟ್ಟೆಯಲ್ಲಿರುವ ಕ್ರೆಟಾ ಕಾರಿನಂತೆಯೇ ಹೊಸ ಸಂಚಲನಕ್ಕೆ ಕಾರಣವಾಗಿದೆ.

Image Courtesy: Gagan Choudhary

Most Read Articles

Kannada
English summary
Hyundai Venue Starts Arriving At Dealerships A Week Ahead Of Its Launch In India. Read in Kannada.
Story first published: Wednesday, May 15, 2019, 19:42 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X