ಭಾರೀ ಸಂಖ್ಯೆಯ ಬುಕ್ಕಿಂಗ್ ಪಡೆದ ಹ್ಯುಂಡೈ ವೆನ್ಯೂ

ಕೊರಿಯ ಮೂಲದ ಕಾರು ಉತ್ಪಾದನ ಕಂಪನಿಯಾದ ಹ್ಯುಂಡೈ ತನ್ನ ವೆನ್ಯೂ ಎಸ್‍‍ಯು‍ವಿಯನ್ನು ಬಿಡುಗಡೆಗೊಳಿಸಿದ ಆರು ತಿಂಗಳಲ್ಲಿ 80 ಸಾವಿರ ಕ್ಕೂ ಹೆಚ್ಚು ಯು‍‍ನಿ‍ಟ್‍ಗಳ ಬುಕ್ಕಿಂಗ್ ಅನ್ನು ದಾಖಲಿಸಿದೆ. ಕಳೆದ ಮೇ ತಿಂಗಳಲ್ಲಿ ಬಿಡುಗಡೆಯಾದ ಹ್ಯುಂಡೈ ವೆನ್ಯೂ ದೇಶಿಯ ಮಾರುಕಟ್ಟೆಯ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆಯನ್ನು ಪಡೆಯುತ್ತಿದೆ.

ಭಾರೀ ಸಂಖ್ಯೆಯ ಬುಕ್ಕಿಂಗ್ ಪಡೆದ ಹ್ಯುಂಡೈ ವೆನ್ಯೂ

ಭಾರತದ ಎಕ್ಸ್ ಶೋರೂಂ ಪ್ರಕಾರ ಹ್ಯುಂಡೈ ವೆನ್ಯೂ ಕಾರಿಗೆ ಪ್ರಾರಂಭಿಕ ಬೆಲೆಯು ರೂ.6.5 ಲಕ್ಷಗಳಾಗಿದೆ. ಹ್ಯುಂಡೈ ವೆನ್ಯೂ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದ ಮೊದಲ ಎಸ್‍‍ಯು‍ವಿಯಾಗಿದೆ. ಹ್ಯುಂಡೈ ವೆನ್ಯೂ ಹಲವಾರು ವಿನೂತನ ಫೀಚರ್ಸ್‍ಗಳನ್ನು ಹೊಂದಿರುವ ಎಸ್‍‍ಯುವಿಯಾಗಿದೆ.

ಭಾರೀ ಸಂಖ್ಯೆಯ ಬುಕ್ಕಿಂಗ್ ಪಡೆದ ಹ್ಯುಂಡೈ ವೆನ್ಯೂ

ಹ್ಯುಂಡೈ ಮೋಟಾರ್ಸ್ ಕಂಪನಿಗೆ ದೇಶಿಯ ಮಾರುಕಟ್ಟೆಯಲ್ಲಿ ವೆನ್ಯೂ ಎಸ್‍‍ಯುವಿಗೆ ಹೆಚ್ಚಿನ ಪ್ರತಿಕ್ರಿಯೆಯನ್ನು ಲಭಿಸಿದೆ. ಕಾಂಪ್ಯಾಕ್ಟ್ ಎಸ್‍‍ಯುವಿಯು ಬಿ‍ಡುಗಡೆಯಾದ ಎರಡು ತಿಂಗಳಲ್ಲಿ ಮಾರಾಟದಲ್ಲಿ ಅಗ್ರಸ್ಥಾನವನ್ನು ಪಡೆದುಕೊಂಡಿತ್ತು. ಪ್ರಸ್ತುತ ಹ್ಯುಂಡೈ ವೆನ್ಯೂ ದೇಶಿಯ ಮಾರುಕಟ್ಟೆಯಲ್ಲಿ ಕಿಯಾ ಸೆಲ್ಟೋಸ್ ಮತ್ತು ಮಾರುತಿ ಸುಜುಕಿ ವಿಟಾರಾ ಬ್ರಿಝಾ ಪೈಪೋಟಿಯಿಂದಾಗಿ ಹೆಚ್ಚು ಮಾರಾಟವಾದ ಎಸ್‍ಯು‍ವಿಗಳ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಕುಸಿದಿದೆ.

ಭಾರೀ ಸಂಖ್ಯೆಯ ಬುಕ್ಕಿಂಗ್ ಪಡೆದ ಹ್ಯುಂಡೈ ವೆನ್ಯೂ

ವೆನ್ಯೂ ಕಾರಿನಲ್ಲಿ ಎರಡು ಪೆಟ್ರೋಲ್ ಎಂಜಿನ್ ಆಯ್ಕೆಗಳನ್ನು ಹೊಂದಿದ್ದರೆ, ಇನ್ನೂ ಡಿಸೇಲ್ ಎಂಜಿನ್‌ನಲ್ಲಿ ಒಂದು ಆಯ್ಕೆಯನ್ನು ನೀಡಲಾಗಿದೆ. ಇ, ಎಸ್, ಎಸ್ಎಕ್ಸ್ ಮತ್ತು ಎಸ್ಎಕ್ಸ್(0) ಎಂಬ ನಾಲ್ಕು ರೂಪಾಂತರಗಳಲ್ಲಿ ವೆನ್ಯೂ ಲಭ್ಯವಿದೆ. ಇದರಲ್ಲಿ 1.2-ಲೀಟರ್ ಪೆಟ್ರೋಲ್ ಎಂಜಿನ್ ಮತ್ತು 1.4-ಡೀಸೆಲ್ ಎಂಜಿನ್‌ಗಳು ಹೊಂದಿದರೆ, 1.0-ಲೀಟರ್ ಪೆಟ್ರೋಲ್ ವೆನ್ಯೂ ಟಾಪ್ ಎಂಡ್ ಮಾದರಿಯಾಗಿದೆ.

ಭಾರೀ ಸಂಖ್ಯೆಯ ಬುಕ್ಕಿಂಗ್ ಪಡೆದ ಹ್ಯುಂಡೈ ವೆನ್ಯೂ

ವೆನ್ಯೂ ಕಾಂಪ್ಯಾಕ್ಟ್ ಎಸ್‍‍ಯುವಿನಲ್ಲಿ 1.2-ಲೀಟರ್ ಪೆಟ್ರೋಲ್ ಎಂಜಿನ್ 83 ಬಿಎಚ್‌ಪಿ ಪವರ್ ಮತ್ತು 115 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಎಂಜಿನ್‍‍ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ ಅನ್ನು ಅಳವಡಿಸಲಾಗಿದೆ. ಇನ್ನೂ 1.4-ಲೀಟರ್ ಡೀಸೆಲ್ ಎಂಜಿನ್ 89 ಬಿಎಚ್‌ಪಿ ಪವರ್ ಮತ್ತು 220 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಎಂಜಿನ್‍‍ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ ಅನ್ನು ಅಳವಡಿಸಲಾಗಿದೆ.

ಭಾರೀ ಸಂಖ್ಯೆಯ ಬುಕ್ಕಿಂಗ್ ಪಡೆದ ಹ್ಯುಂಡೈ ವೆನ್ಯೂ

ಟಾಪ್ ಎಂಡ್ ಮಾದರಿ 1.0 ಲೀಟರ್ ತ್ರಿ ಸಿಲಿಂಡರ್ ಪೆಟ್ರೋಲ್ ಎಂಜಿನ್ 120 ಬಿಎಚ್‌ಪಿ ಪವರ್ ಮತ್ತು 170-ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್‍‍ನೊಂದಿಗೆ 6 ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮತ್ತು 7-ಸ್ಪೀಡ್ ಡಿಸಿಟಿ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ನೀಡಲಾಗಿದೆ.

MOST READ: ಬೈಕ್ ಚಲಾಯಿಸಿದ್ದು ಮಗ, ದಂಡ ಬಿದ್ದಿದ್ದು ಅಪ್ಪನಿಗೆ..!

ಭಾರೀ ಸಂಖ್ಯೆಯ ಬುಕ್ಕಿಂಗ್ ಪಡೆದ ಹ್ಯುಂಡೈ ವೆನ್ಯೂ

ಈ ಎಸ್‍‍ಯುವಿನಲ್ಲಿ ಬ್ಲೂ ಲಿಂಕ್ ಪ್ಯಾಕೇಜ್‌, ಎರ್ಮಜೆನ್ಸಿ ಅಸಿಸ್ಟ್, ಕಾರು ಟ್ರಾಕಿಂಗ್ ಸೇರಿದಂತೆ ಹಲವಾರು ಸುರಕ್ಷಾ ಫೀಚರ್ಸ್‌ಗಳನ್ನು ನೀಡಲಾಗಿದೆ. ಈ ಎಸ್‍‍ಯುವಿಯ ಮುಂಭಾಗದಲ್ಲಿ ಗ್ರಿಲ್, ಡ್ಯುಯಲ್ ಹೆಡ್‌ಲ್ಯಾಂಪ್ ಕ್ಲಸ್ಟರ್, ಲೈಟ್ ಸ್ಟ್ರಿಪ್, ಹೆಡ್‌ಲ್ಯಾಂಪ್ ಕ್ಲಸ್ಟರ್, ಎಲ್ಇಡಿ ಡಿಆರ್‌ಎಲ್ ಮತ್ತು 16-ಇಂಚಿನ ಟಯರ್ ಅನ್ನು ಅಳವಡಿಸಲಾಗಿದೆ.

MOST READ: ಬೈಕ್ ಸವಾರನ ಪ್ರಾಣ ಉಳಿಸಿದ ಆಪಲ್ ವಾಚ್..!

ಭಾರೀ ಸಂಖ್ಯೆಯ ಬುಕ್ಕಿಂಗ್ ಪಡೆದ ಹ್ಯುಂಡೈ ವೆನ್ಯೂ

ಈ ಎಸ್‍‍ಯುವಿಯ ಇಂಟಿರಿಯರ್‍‍ನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ಹೊಂದಿದ್ದು, ಬ್ಲ್ಯಾಕ್ ಡ್ಯಾಶ್‌ಬೋರ್ಡ್, 8-ಇಂಚಿನ ಇನ್ಪೋಟೇನ್‍‍ಮೆಂಟ್ ಡಿಸ್‍‍ಪ್ಲೇ, ಸೆಂಟರ್ ಕನ್ಸೊಲ್, ಡ್ಯಾಶ್‌ಬೋರ್ಡ್ ಸುತ್ತಲೂ ಸಿಲ್ವರ್ ಎಕ್ಸೆಂಟ್, ಲೆದರ್ ಸೀಟುಗಳು, ವೈರ್‌ಲೆಸ್ ಚಾರ್ಚಿಂಗ್ ಪಾಯಿಂಟ್ ಮತ್ತು ಎಲೆಕ್ಟ್ರಿಕ್ ಸನ್‌ರೂಫ್ ಅನ್ನು ಒಳಗೊಂಡಿದೆ.

MOST READ: ವಾಹನ ಸವಾರರಿಗೆ ಸಿಹಿ ಸುದ್ದಿ ನೀಡಿದ ಸಚಿವ ನಿತಿನ್ ಗಡ್ಕರಿ ..!

ಭಾರೀ ಸಂಖ್ಯೆಯ ಬುಕ್ಕಿಂಗ್ ಪಡೆದ ಹ್ಯುಂಡೈ ವೆನ್ಯೂ

ದೇಶಿಯ ಮಾರುಕಟ್ಟೆಯಲ್ಲಿ ಹ್ಯುಂಡೈ ವೆನ್ಯೂ ಹೆಚ್ಚು ಮಾರಾಟವಾಗುತ್ತಿರುವ ಎಸ್‍‍ಯುವಿಗಳಲ್ಲಿ ಒಂದಾಗಿದೆ. ಹ್ಯುಂಡೈ ವೆನ್ಯೂ ವಿನೂತನ ಫೀಚರ್ಸ್‍‍ಗಳ ಮೂಲಕ ಹೆಚ್ಚಿನ ಗ್ರಾಹಕರನ್ನು ಸೆಳೆಯುವಲ್ಲಿ ಯಶ್ವಸಿಯಾಗಿದೆ. ಹ್ಯುಂಡೈ ವೆನ್ಯೂ ದೇಶಿಯ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ವಿಟಾರಾ ಬ್ರಿಝಾ, ಫೋರ್ಡ್ ಇಕೋಸ್ಪೋರ್ಟ್, ಮಹಿಂದ್ರಾ ಎಕ್ಸ್​ಯುವಿ 300 ಮತ್ತು ಟಾಟಾ ನೆಕ್ಸಾನ್ ಕಾರುಗಳಿಗೆ ಪೈಪೋಟಿಯನ್ನು ನೀಡುತ್ತದೆ.

Most Read Articles

Kannada
English summary
Hyundai Venue Registers Over 80,000 Bookings In Just Six Months Since Launch - Read in Kannada
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X