ಮೇ 17ರಂದು ಬಿಡುಗಡೆಯಾಗಲಿರುವ ಹ್ಯುಂಡೈ ವೆನ್ಯೂ ಸ್ಪೆಷಾಲಿಟಿ ಏನು?

ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾರಾಟ ವಿಭಾಗದಲ್ಲಿ ಮಾರುತಿ ಸುಜುಕಿ ಬ್ರೆಝಾ, ಮಹೀಂದ್ರಾ ಎಕ್ಸ್‌ಯುವಿ300, ನಿಸ್ಸಾನ್ ಕಿಕ್ಸ್ ಸೇರಿದಂತೆ ಹಲವು ಹೊಸ ಕಾರುಗಳಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಹ್ಯುಂಡೈ ಸಂಸ್ಥೆಯು ಸಹ ತನ್ನ ಬಹುನೀರಿಕ್ಷಿತ ವೆನ್ಯೂ ಕಂಪ್ಯಾಕ್ಟ್ ಎಸ್‌ಯುವಿ ಕಾರನ್ನು ಮುಂದಿನ ತಿಂಗಳು ಮೇ 17ಕ್ಕೆ ಬಿಡುಗಡೆಗೊಳಿಸುವ ಸುಳಿವು ನೀಡಿದೆ.

ಮೇ 17ರಂದು ಬಿಡುಗಡೆಯಾಗಲಿರುವ ಹ್ಯುಂಡೈ ವೆನ್ಯೂ ಸ್ಪೆಷಾಲಿಟಿ ಏನು?

ಹ್ಯುಂಡೈ ಬಿಡುಗಡೆ ಮಾಡಲಾಗಿರುವ ಹೊಸ ಕಾರಿನ ಅಧಿಕೃತ ಹೆಸರನ್ನು ವೆನ್ಯೂ ಎಂದು ಈಗಾಗಲೇ ಅಧಿಕೃತವಾಗಿ ಘೋಷಣೆ ಮಾಡಿದ್ದು, ಇದೇ ತಿಂಗಳು 17ರಂದು ಅಮೆರಿಕದಲ್ಲಿ ನಡೆಯಲಿರುವ ನ್ಯೂಯಾರ್ಕ್ ಆಟೋಮೇಳದಲ್ಲಿ ಹೊಸ ಕಾರನ್ನ ಅನಾವರಣಗೊಳಿಸುವ ಮೂಲಕ ಮುಂದಿನ ತಿಂಗಳು ಮೇ 17ರಂದು ಬಿಡುಗಡೆ ಮಾಡುವ ಬಗ್ಗೆ ಹ್ಯುಂಡೈ ಸಂಸ್ಥೆಯೇ ಮಾಹಿತಿ ನೀಡಿರುವುದಾಗಿ ಕೆಲವು ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

ಮೇ 17ರಂದು ಬಿಡುಗಡೆಯಾಗಲಿರುವ ಹ್ಯುಂಡೈ ವೆನ್ಯೂ ಸ್ಪೆಷಾಲಿಟಿ ಏನು?

ಇನ್ನು ಬಿಡುಗಡೆಯಾಗಲಿರುವ ವೆನ್ಯೂ ಕಾರು ಡ್ಯುಯಲ್ ಟೋನ್ ಬಣ್ಣ ಮತ್ತು ಸನ್‍ರೂಫ್ ಪಡೆದುಕೊಳ್ಳುವ ಮೂಲಕ ಗ್ರಾಹಕರಲ್ಲಿ ಮತ್ತಷ್ಟು ಕುತೂಹಲ ಹುಟ್ಟುಹಾಕಿದ್ದು, ಮಹೀಂದ್ರಾ ಎಕ್ಸ್‌ಯುವಿ300 ಮತ್ತು ಮಾರುತಿ ಸುಜುಕಿ ಬ್ರೆಝಾ ಕಾರುಗಳಿಗೆ ಪ್ರಬಲ ಪೈಪೋಟಿ ನೀಡುವ ನಿರೀಕ್ಷೆಯಲ್ಲಿದೆ.

ಮೇ 17ರಂದು ಬಿಡುಗಡೆಯಾಗಲಿರುವ ಹ್ಯುಂಡೈ ವೆನ್ಯೂ ಸ್ಪೆಷಾಲಿಟಿ ಏನು?

ಹ್ಯುಂಡೈ ಸಂಸ್ಥೆಯು ಕ್ರೆಟಾ ಕಾರಿನ ಮಾರಾಟದಲ್ಲಿ ಯಶಸ್ವಿಯಾದ ನಂತರ ವೆನ್ಯೂ ಕಾರು ಬಿಡುಗಡೆಗಾಗಿ ಯೋಜನೆ ರೂಪಿಸುತ್ತಿದ್ದು, ಹಲವು ವಿಶೇಷತೆಗಳಿಗಳಿಗೆ ಕಾರಣವಾಗಿರುವ ಹೊಸ ಕಾರು ಮಾರುಕಟ್ಟೆಗೆ ಲಗ್ಗೆಯಿಡುತ್ತಿರುವುದು ಮಧ್ಯಮ ವರ್ಗದ ಕಾರು ಪ್ರಿಯರ ಆಕರ್ಷಣೆಗೆ ಕಾರಣವಾಗಿದೆ.

ಮೇ 17ರಂದು ಬಿಡುಗಡೆಯಾಗಲಿರುವ ಹ್ಯುಂಡೈ ವೆನ್ಯೂ ಸ್ಪೆಷಾಲಿಟಿ ಏನು?

ಹ್ಯುಂಡೈ ಹೊಸ ಕಂಪ್ಯಾಕ್ಟ್ ಎಸ್‍‍ಯುವಿ ಕಾರು ಅರ್ಬನ್ ಕಮ್ಯೂಟರ್ ವಿಭಾಗಕ್ಕಾಗಿಯೇ ವಿಶೇಷವಾಗಿ ವಿನ್ಯಾಸ ಮಾಡಲಾಗಿದ್ದು, ಕ್ರಾಸ್‍ ಓವರ್ ವಿನ್ಯಾಸ ಹೊಂದಿರುವ ವೆನ್ಯೂ ಕಾರು ಕ್ರೆಟಾ ಮತ್ತು ಕೊನಾ ಕಾರುಗಳ ಮಧ್ಯದ ಕಾರು ಆವೃತ್ತಿಯಾಗಗಿ ಮಾರಾಟಗೊಳ್ಳಲಿದೆ.

ಮೇ 17ರಂದು ಬಿಡುಗಡೆಯಾಗಲಿರುವ ಹ್ಯುಂಡೈ ವೆನ್ಯೂ ಸ್ಪೆಷಾಲಿಟಿ ಏನು?

ಹೊಸ ವೆನ್ಯೂ ಕಾರು ಉತ್ಪಾದನೆಗಾಗಿಯೇ ಈಗಾಗಲೇ ಪ್ರತ್ಯೇಕವಾದ ಪ್ಲ್ಯಾಟ್‍‍ಫಾರ್ಮ್ ಅನ್ನೇ ಸಿದ್ದಪಡಿಸಲಾಗಿದ್ದು, ಈ ಮೂಲಕ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುವ ವಿಶ್ವಾಸದಲ್ಲಿರುವ ಈ ಹೊಸ ಕಾರು ಮಾರುತಿ ಸುಜುಕಿ ಬ್ರೆಝಾ, ಮಹೀಂದ್ರಾ ಎಕ್ಸ್‌ಯುವಿ300, ಟಾಟಾ ನೆಕ್ಸಾನ್ ಮತ್ತು ಫೋರ್ಡ್ ಇಕೊಸ್ಪೋರ್ಟ್ ಕಾರಿಗಳಿಗೆ ನೇರ ಪ್ರತಿಸ್ಪರ್ಧಿಸಲಾಗಲಿದೆ.

ಮೇ 17ರಂದು ಬಿಡುಗಡೆಯಾಗಲಿರುವ ಹ್ಯುಂಡೈ ವೆನ್ಯೂ ಸ್ಪೆಷಾಲಿಟಿ ಏನು?

ಪ್ರಸ್ತುತ ಮಾಹಿತಿಗಳ ಪ್ರಕಾರ, ಈ ಹೊಸ ಕಾರು ಇದೇ ತಿಂಗಳು 17ರಂದು ಅನಾವರಣಗೊಂಡ ನಂತರ ಮೇ ಆರಂಭದಲ್ಲಿ ಯುಎಸ್ಎ ಮಾರುಕಟ್ಟೆಯಲ್ಲಿ ಮೊದಲು ಬಿಡುಗಡೆಗೊಳ್ಳಲಿದ್ದು, ತದನಂತರವಷ್ಟೇ ಮೇ 17ರಂದು ಭಾರತ ಸೇರಿದಂತೆ ಪ್ರಮುಖ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲೂ ಬಿಡುಗಡೆಗೊಳ್ಳಲಿದೆಯೆಂತೆ.

ಮೇ 17ರಂದು ಬಿಡುಗಡೆಯಾಗಲಿರುವ ಹ್ಯುಂಡೈ ವೆನ್ಯೂ ಸ್ಪೆಷಾಲಿಟಿ ಏನು?

ಕಂಪ್ಯಾಕ್ಟ್ ಎಸ್‍‍ಯುವಿ ವಿನ್ಯಾಸ ಆಧಾರಿತ ಕಾರ್ಲಿನೊ ಪರಿಕಲ್ಪನೆಯ ಕಾರನ್ನು ಮೊದಲು ಹ್ಯುಂಡೈ ಸಂಸ್ಥೆಯು 2016ರ ದೆಹಲಿ ಆಟೋ ಎಕ್ಸ್ ಪೋ ಮೇಳದಲ್ಲಿ ಪ್ರದರ್ಶನ ಮಾಡಿತ್ತು. ಆದ್ರೆ ಕಾರಣಾಂತರಗಳಿಂದ ಹೊಸ ಕಾರಿನ ಉತ್ಪಾದನಾ ಪ್ರಕ್ರಿಯೆಯನ್ನು ಮೂಂದೂಡಿಕೆ ಮಾಡುತ್ತಾ ಬಂದಿದ್ದ ಹ್ಯುಂಡೈ ಇದೀಗ ವೆನ್ಯೂ ಹೆಸರಿನೊಂದಿಗೆ ಬಿಡುಗಡೆ ಮಾಡುತ್ತಿದೆ.

MOST READ: ಹೊಸ ಬೈಕ್‌ಗಳಿಗೆ ಹೊಸ ರೂಲ್ಸ್- ಸಿಬಿಎಸ್ ಮತ್ತು ಎಬಿಎಸ್ ಇಲ್ಲದ ಬೈಕ್ ಖರೀದಿ ಬೇಡವೇ ಬೇಡ..!

ಮೇ 17ರಂದು ಬಿಡುಗಡೆಯಾಗಲಿರುವ ಹ್ಯುಂಡೈ ವೆನ್ಯೂ ಸ್ಪೆಷಾಲಿಟಿ ಏನು?

ಎಂಜಿನ್ ಸಾಮರ್ಥ್ಯ

ವೆನ್ಯೂ ಕಾರುಗಳು ಒಟ್ಟು ಮೂರು ಎಂಜಿನ್ ಆಯ್ಕೆಯೊಂದಿಗೆ ಖರೀದಿಗೆ ಲಭ್ಯವಾಗುತ್ತಿದ್ದು, ಪೆಟ್ರೋಲ್ ಎಂಜಿನ್‌ನಲ್ಲಿ 1.0 ಲೀಟರ್ ತ್ರಿ ಸಿಲಿಂಡರ್ ಎಂಜಿನ್ ಮತ್ತು 1.4 ಲೀಟರ್ ಎಂಜಿನ್ ಹೊಂದಿರಲಿದೆ. ಹಾಗೆಯೇ 1.4-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಸಹ ಹೊಂದಿರಲಿದೆ.

ಮೇ 17ರಂದು ಬಿಡುಗಡೆಯಾಗಲಿರುವ ಹ್ಯುಂಡೈ ವೆನ್ಯೂ ಸ್ಪೆಷಾಲಿಟಿ ಏನು?

1.4-ಲೀಟರ್ ಪೆಟ್ರೋಲ್ ಎಂಜಿನ್ ಮಾದರಿಯು ಸದ್ಯ ಮಾರುಕಟ್ಟೆಯಲ್ಲಿರುವ ವೆರ್ನಾ ಸೆಡಾನ್ ಕಾರಿನಿಂದ ಎರವಲು ಪಡೆಯಲಾಗಿದ್ದು, ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್ಇಡಿ ಟೈಲ್ ಲೈಟ್, 6 ಸ್ಪೀಡ್ ಡ್ಯುಯಲ್ ಕ್ಲಚ್ ಗೇರ್‌ಬಾಕ್ಸ್, ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಎಬಿಎಸ್, 4 ಏರ್‌ಬ್ಯಾಗ್, ಸನ್‌ರೂಫ್, ಡ್ಯುಯಲ್ ಟೋನ್ ಬಾಡಿ ಕಲರ್, ಡ್ಯುಯಲ್ ಟೋನ್ ಇಂಟಿರಿಯರ್, ರಿಯರ್ ವ್ಯೂ ಕ್ಯಾಮೆರಾ, ಪಾರ್ಕಿಂಗ್ ಸೆನ್ಸಾರ್, ಸ್ಮಾರ್ಟ್ ಕೆನೆಕ್ಟಿವಿಟಿ, ಜಿಯೋ ಫೆನ್ಸ್, ಆ್ಯಂಟಿ ಥೆಫ್ಟ್ ಮತ್ತು ಲಾರ್ಜ್ ಟಚ್‌ಸ್ಕ್ರೀನ್ ಡಿಸ್‌ಪ್ಲೇಯೊಂದಿಗೆ ಹಲವು ಮಾದರಿಯ ಪ್ರೀಮಿಯಂ ಸೌಲಭ್ಯಗಳನ್ನು ಪಡೆದುಕೊಂಡಿರಲಿದೆ.

MOST READ: ಬ್ರೇಕ್ ಫೇಲ್ ಆದಾಗ ಜೀವ ಉಳಿಸಿಕೊಳ್ಳಲು ಈ ಟಿಪ್ಸ್ ಖಂಡಿತ ನಿಮ್ಮ ಸಹಾಯಕ್ಕೆ ಬರುತ್ತೆ..!

ಮೇ 17ರಂದು ಬಿಡುಗಡೆಯಾಗಲಿರುವ ಹ್ಯುಂಡೈ ವೆನ್ಯೂ ಸ್ಪೆಷಾಲಿಟಿ ಏನು?

ಕಾರಿನ ಬೆಲೆಗಳು(ಅಂದಾಜು)

ಹೊಸ ವೆನ್ಯೂ ಕಾರು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಒಟ್ಟು ಆರು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ಹೊಸ ಕಾರಿನ ಬೆಲೆಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 7.40 ಲಕ್ಷದಿಂದ ಟಾಪ್ ಎಂಡ್ ಮಾದರಿಗೆ ರೂ.11 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.

Source:CarAndBike

Article Published On: Wednesday, April 3, 2019, 13:44 [IST]
English summary
Hyundai Venue India-Launch Details Revealed. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+