ಹ್ಯುಂಡೈ ವೆನ್ಯೂವಿಗೆ ಹೆಚ್ಚಿದ ಡಿಮ್ಯಾಂಡ್

ಹ್ಯುಂಡೈ ವೆನ್ಯೂ ಎಸ್‍ಯುವಿಯು ದೇಶಿಯ ಮಾರುಕಟ್ಟೆಯಲ್ಲಿ ದಾಖಲೆಯ ಪ್ರಮಾಣದಲ್ಲಿ ಮಾರಾಟವಾಗಿದೆ. ಹ್ಯುಂಡೈ ವೆನ್ಯೂ ಬಿಡುಗಡೆಯಾಗಿ ಆರು ತಿಂಗಳಲ್ಲಿ 50ಸಾವಿರಕ್ಕೂ ಹೆಚ್ಚು ಕಾರುಗಳು ಮಾರಾಟವಾಗಿದೆ.

ಹ್ಯುಂಡೈ ವೆನ್ಯೂವಿಗೆ ಹೆಚ್ಚಿದ ಡಿಮ್ಯಾಂಡ್

ಎಸ್‍‍ಯುವಿ ಸೆಗ್‍ಮೆಂಟ್‍ನಲ್ಲಿ ಕಿಯಾ ಸೆಲ್ಟೊಸ್ ಮತ್ತು ಮಾರುತಿ ಸುಜುಕಿ ವಿಟಾರಾ ಬ್ರಿಝಾ ಎಸ್‍‍ಯುವಿಗಳ ಪೈಪೋಟಿಯ ನಡುವೆ ಹ್ಯುಂಡೈ ವೆನ್ಯೂ ಉತ್ತಮವಾಗಿ ಮಾರಾಟವಾಗುತ್ತಿದೆ. ಹ್ಯುಂಡೈ ವೆನ್ಯೂ ಈ ವರ್ಷದ ಮೇ ತಿಂಗಳಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಯಾಗಿತ್ತು.

ಹ್ಯುಂಡೈ ವೆನ್ಯೂವಿಗೆ ಹೆಚ್ಚಿದ ಡಿಮ್ಯಾಂಡ್

ಬಿಡುಗಡೆಯಾದ 6 ತಿಂಗಳಲ್ಲಿ ಹ್ಯುಂಡೈ ವೆನ್ಯೂ ಎಸ್‍ಯುವಿಯ ಒಟ್ಟು 51,257 ಯು‍‍ನಿಟ್‍‍ಗಳು ಮಾರಾಟವಾಗಿದೆ. ಇದರಲ್ಲಿ ಹ್ಯುಂಡೈ ವೆನ್ಯೂ ಪೆಟ್ರೋಲ್ ಆವೃತ್ತಿಯ 29,796 ಯು‍‍ನಿ‍ಟ್‍ಗಳು ಮಾರಾಟವಾಗಿದ್ದರೆ, ಡೀಸೆಲ್ ಆವೃತ್ತಿಯ 21,531 ಯು‍‍ನಿ‍‍‍ಟ್‍‍ಗಳು ಮಾರಾಟವಾಗಿವೆ.

ಹ್ಯುಂಡೈ ವೆನ್ಯೂವಿಗೆ ಹೆಚ್ಚಿದ ಡಿಮ್ಯಾಂಡ್

ಭಾರತದ ಎಕ್ಸ್ ಶೋರೂಂ ಪ್ರಕಾರ ಹ್ಯುಂಡೈ ವೆನ್ಯೂ ಕಾರಿನ ಆರಂಭಿಕ ಬೆಲೆಯು ರೂ.6.5 ಲಕ್ಷಗಳಾಗಿದೆ. ಹ್ಯುಂಡೈ ವೆನ್ಯೂ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದ ಮೊದಲ ಎಸ್‍‍ಯು‍ವಿಯಾಗಿದೆ. ಹ್ಯುಂಡೈ ವೆನ್ಯೂ ಹಲವಾರು ವಿನೂತನ ಫೀಚರ್ಸ್‍ಗಳನ್ನು ಹೊಂದಿರುವ ಎಸ್‍‍ಯುವಿಯಾಗಿದೆ. ಹ್ಯುಂಡೈ ಮೋಟಾರ್ಸ್ ಕಂಪನಿಗೆ ದೇಶಿಯ ಮಾರುಕಟ್ಟೆಯಲ್ಲಿ ವೆನ್ಯೂ ಎಸ್‍‍ಯುವಿಗೆ ಹೆಚ್ಚಿನ ಪ್ರತಿಕ್ರಿಯೆಯನ್ನು ಲಭಿಸಿದೆ.

ಹ್ಯುಂಡೈ ವೆನ್ಯೂವಿಗೆ ಹೆಚ್ಚಿದ ಡಿಮ್ಯಾಂಡ್

ಕಾಂಪ್ಯಾಕ್ಟ್ ಎಸ್‍‍ಯುವಿಯು ಬಿ‍ಡುಗಡೆಯಾದ ಎರಡು ತಿಂಗಳಲ್ಲಿ ಮಾರಾಟದಲ್ಲಿ ಅಗ್ರಸ್ಥಾನವನ್ನು ಪಡೆದುಕೊಂಡಿತ್ತು. ಪ್ರಸ್ತುತ ಹ್ಯುಂಡೈ ವೆನ್ಯೂ ದೇಶಿಯ ಮಾರುಕಟ್ಟೆಯಲ್ಲಿ ಕಿಯಾ ಸೆಲ್ಟೋಸ್ ಮತ್ತು ಮಾರುತಿ ಸುಜುಕಿ ವಿಟಾರಾ ಬ್ರಿಝಾ ಪೈಪೋಟಿಯಿಂದಾಗಿ ಹೆಚ್ಚು ಮಾರಾಟವಾದ ಎಸ್‍ಯು‍ವಿಗಳ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಕುಸಿದಿದೆ.

ಹ್ಯುಂಡೈ ವೆನ್ಯೂವಿಗೆ ಹೆಚ್ಚಿದ ಡಿಮ್ಯಾಂಡ್

ವೆನ್ಯೂ ಕಾರಿನಲ್ಲಿ ಎರಡು ಪೆಟ್ರೋಲ್ ಎಂಜಿನ್ ಆಯ್ಕೆಗಳಿದ್ದು, ಡಿಸೇಲ್ ಎಂಜಿನ್‌ನಲ್ಲಿ ಒಂದು ಆಯ್ಕೆಯನ್ನು ನೀಡಲಾಗಿದೆ. ಇ, ಎಸ್, ಎಸ್ಎಕ್ಸ್ ಮತ್ತು ಎಸ್ಎಕ್ಸ್(0) ಎಂಬ ನಾಲ್ಕು ರೂಪಾಂತರಗಳಲ್ಲಿ ವೆನ್ಯೂ ಲಭ್ಯವಿದೆ.

ಹ್ಯುಂಡೈ ವೆನ್ಯೂವಿಗೆ ಹೆಚ್ಚಿದ ಡಿಮ್ಯಾಂಡ್

ಇದರಲ್ಲಿ 1.2-ಲೀಟರ್ ಪೆಟ್ರೋಲ್ ಎಂಜಿನ್ ಮತ್ತು 1.4-ಡೀಸೆಲ್ ಎಂಜಿನ್‌ಗಳು ಹೊಂದಿದ್ದರೆ, 1.0-ಲೀಟರ್ ಪೆಟ್ರೋಲ್ ವೆನ್ಯೂ ಟಾಪ್ ಎಂಡ್ ಮಾದರಿಯಾಗಿದೆ. ವೆನ್ಯೂ ಕಾಂಪ್ಯಾಕ್ಟ್ ಎಸ್‍‍ಯುವಿನಲ್ಲಿ 1.2-ಲೀಟರ್ ಪೆಟ್ರೋಲ್ ಎಂಜಿನ್ 83 ಬಿಎಚ್‌ಪಿ ಪವರ್ ಮತ್ತು 115 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

MOST READ: ಬೈಕ್ ಚಲಾಯಿಸಿದ್ದು ಮಗ, ದಂಡ ಬಿದ್ದಿದ್ದು ಅಪ್ಪನಿಗೆ..!

ಹ್ಯುಂಡೈ ವೆನ್ಯೂವಿಗೆ ಹೆಚ್ಚಿದ ಡಿಮ್ಯಾಂಡ್

ಎಂಜಿನ್‍‍ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ ಅನ್ನು ಅಳವಡಿಸಲಾಗಿದೆ. ಇನ್ನೂ 1.4-ಲೀಟರ್ ಡೀಸೆಲ್ ಎಂಜಿನ್ 89 ಬಿಎಚ್‌ಪಿ ಪವರ್ ಮತ್ತು 220 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಎಂಜಿನ್‍‍ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ ಅನ್ನು ಅಳವಡಿಸಲಾಗಿದೆ.

ಹ್ಯುಂಡೈ ವೆನ್ಯೂವಿಗೆ ಹೆಚ್ಚಿದ ಡಿಮ್ಯಾಂಡ್

ಟಾಪ್ ಎಂಡ್ ಮಾದರಿ 1.0 ಲೀಟರ್ ಮೂರು ಸಿಲಿಂಡರ್ ಪೆಟ್ರೋಲ್ ಎಂಜಿನ್ 120 ಬಿಎಚ್‌ಪಿ ಪವರ್ ಮತ್ತು 170-ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್‍‍ನೊಂದಿಗೆ 6 ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮತ್ತು 7-ಸ್ಪೀಡ್ ಡಿಸಿಟಿ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ನೀಡಲಾಗಿದೆ.

MOST READ: ಬೈಕ್ ಸವಾರನ ಪ್ರಾಣ ಉಳಿಸಿದ ಆಪಲ್ ವಾಚ್..!

ಹ್ಯುಂಡೈ ವೆನ್ಯೂವಿಗೆ ಹೆಚ್ಚಿದ ಡಿಮ್ಯಾಂಡ್

ಈ ಎಸ್‍‍ಯುವಿನಲ್ಲಿ ಬ್ಲೂ ಲಿಂಕ್ ಪ್ಯಾಕೇಜ್‌, ಎರ್ಮಜೆನ್ಸಿ ಅಸಿಸ್ಟ್, ಕಾರು ಟ್ರಾಕಿಂಗ್ ಸೇರಿದಂತೆ ಹಲವಾರು ಸುರಕ್ಷಾ ಫೀಚರ್ಸ್‌ಗಳನ್ನು ನೀಡಲಾಗಿದೆ. ಈ ಎಸ್‍‍ಯುವಿಯ ಮುಂಭಾಗದಲ್ಲಿ ಗ್ರಿಲ್, ಡ್ಯುಯಲ್ ಹೆಡ್‌ಲ್ಯಾಂಪ್ ಕ್ಲಸ್ಟರ್, ಲೈಟ್ ಸ್ಟ್ರಿಪ್, ಹೆಡ್‌ಲ್ಯಾಂಪ್ ಕ್ಲಸ್ಟರ್, ಎಲ್ಇಡಿ ಡಿಆರ್‌ಎಲ್ ಮತ್ತು 16-ಇಂಚಿನ ಟಯರ್ ಅನ್ನು ಅಳವಡಿಸಲಾಗಿದೆ.

ಹ್ಯುಂಡೈ ವೆನ್ಯೂವಿಗೆ ಹೆಚ್ಚಿದ ಡಿಮ್ಯಾಂಡ್

ದೇಶಿಯ ಮಾರುಕಟ್ಟೆಯಲ್ಲಿ ಹ್ಯುಂಡೈ ವೆನ್ಯೂ ಹೆಚ್ಚು ಮಾರಾಟವಾಗುತ್ತಿರುವ ಎಸ್‍‍ಯುವಿಗಳಲ್ಲಿ ಒಂದಾಗಿದೆ. ಹ್ಯುಂಡೈ ವೆನ್ಯೂ ವಿನೂತನ ಫೀಚರ್ಸ್‍‍ಗಳ ಮೂಲಕ ಹೆಚ್ಚಿನ ಗ್ರಾಹಕರನ್ನು ಸೆಳೆಯುವಲ್ಲಿ ಯಶ್ವಸಿಯಾಗಿದೆ. ಹ್ಯುಂಡೈ ವೆನ್ಯೂ ದೇಶಿಯ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ವಿಟಾರಾ ಬ್ರಿಝಾ, ಫೋರ್ಡ್ ಇಕೋಸ್ಪೋರ್ಟ್, ಮಹಿಂದ್ರಾ ಎಕ್ಸ್​ಯುವಿ 300 ಮತ್ತು ಕಿಯಾ ಸೆಲ್ಟೋಸ್ ಕಾರುಗಳಿಗೆ ಪೈಪೋಟಿ ನೀಡುತ್ತದೆ.

More from DriveSpark

Article Published On: Saturday, November 30, 2019, 14:58 [IST]
English summary
Hyundai Venue sales cross 50,000 milestone in six months - Read in Kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+