ಮಾರುತಿ ವಿಟಾರಾ ಬ್ರೆಝಾ ಹಿಂದಿಕ್ಕಿ ನಂ.1 ಸ್ಥಾನಕ್ಕೇರಿದ ಹ್ಯುಂಡೈ ವೆನ್ಯೂ

ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಮಾರುತಿ ಸುಜುಕಿ ವಿಟಾರಾ ಬ್ರೆಝಾ ಮತ್ತು ಹ್ಯುಂಡೈ ವೆನ್ಯೂ ನಡುವೆ ಭಾರೀ ಪೈಪೋಟಿ ಶುರುವಾಗಿದ್ದು, ಸತತ 2 ವರ್ಷಗಳ ಕಾಲ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಅಗ್ರಸ್ಥಾನದಲ್ಲಿದ್ದ ವಿಟಾರಾ ಬ್ರೆಝಾ ಆವೃತ್ತಿಯನ್ನು ವೆನ್ಯೂ ಕಾರು ಕೇವಲ ನಾಲ್ಕು ತಿಂಗಳ ಅವಧಿಯಲ್ಲಿ ನಂ.1 ಸ್ಥಾನಕ್ಕೇರಿದೆ.

ಮಾರುತಿ ವಿಟಾರಾ ಬ್ರೆಝಾ ಹಿಂದಿಕ್ಕಿ ನಂ.1 ಸ್ಥಾನಕ್ಕೇರಿದ ಹ್ಯುಂಡೈ ವೆನ್ಯೂ

ಅಗಸ್ಟ್ ಅವಧಿಯಲ್ಲಿ ಹ್ಯುಂಡೈ ವೆನ್ಯೂ ಕಾರು 9,342 ಯುನಿಟ್ ಮಾರಾಟವಾಗಿದ್ದರೇ ಮಾರುತಿ ಸುಜುಕಿ ವಿಟಾರಾ ಬ್ರೆಝಾ ಕಾರು ಮಾತ್ರ 7,109 ಯುನಿಟ್ ಮಾರಾಟ ಮಾತ್ರವೇ ಸಾಧ್ಯವಾಗಿದೆ. ಈ ಮೂಲಕ ಸತತ ಎರಡು ವರ್ಷಗಳ ಕಾಲ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿದ್ದ ಅಗ್ರಸ್ಥಾನವನ್ನು ವಿಟಾರಾ ಬ್ರೆಝಾದಿಂದ ತನ್ನದಾಗಿಸಿಕೊಂಡಿರುವ ವೆನ್ಯೂ ಕಾರು ಮತ್ತಷ್ಟು ಮಾರಾಟ ಗುರಿಹೊಂದಿದ್ದು, ಟಾಪ್ 5 ಕಾರು ಮಾರಾಟ ಪಟ್ಟಿಯಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವ ನೀರಿಕ್ಷೆಯಲ್ಲಿದೆ.

ಮಾರುತಿ ವಿಟಾರಾ ಬ್ರೆಝಾ ಹಿಂದಿಕ್ಕಿ ನಂ.1 ಸ್ಥಾನಕ್ಕೇರಿದ ಹ್ಯುಂಡೈ ವೆನ್ಯೂ

ಸದ್ಯ ಮಾರುಕಟ್ಟೆಯಲ್ಲಿ ಬ್ರೆಝಾ ಕಾರು ಡೀಸೆಲ್ ಮಾದರಿಯಲ್ಲಿ ಮಾತ್ರವೇ ಮಾರಾಟಕ್ಕಿದ್ದು, ಪ್ರತಿ ಸ್ಪರ್ಧಿ ವೆನ್ಯೂ ಮಾತ್ರ ಪೆಟ್ರೋಲ್, ಡೀಸೆಲ್ ಮಾದರಿಗಳಲ್ಲಿ ಮಾತ್ರವಲ್ಲದೇ ಪರ್ಫಾಮೆನ್ಸ್ ಆವೃತ್ತಿಯನ್ನು ಹೊಂದಿರುವುದೇ ಅಧಿಕ ಮಟ್ಟದ ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ.

ಮಾರುತಿ ವಿಟಾರಾ ಬ್ರೆಝಾ ಹಿಂದಿಕ್ಕಿ ನಂ.1 ಸ್ಥಾನಕ್ಕೇರಿದ ಹ್ಯುಂಡೈ ವೆನ್ಯೂ

ಇನ್ನು ವೆನ್ಯೂ ಸದ್ಯ ಹ್ಯುಂಡೈ ನಿರ್ಮಾಣದ ಇತರೆ ಕಾರುಗಳಿಂತಲೂ ಅತಿ ವಿನೂತನ ತಂತ್ರಜ್ಞಾನ ಸೌಲಭ್ಯಗಳನ್ನು ಹೊತ್ತು ಬಂದಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಒಟ್ಟು 4 ವೆರಿಯೆಂಟ್‌ಗಳಲ್ಲಿ ಲಭ್ಯವಿರುವ ಹೊಸ ವೆನ್ಯೂ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.6.50,000 ದಿಂದ ಟಾಪ್ ಎಂಡ್ ಆವೃತ್ತಿಯು ರೂ.11,10,500 ಬೆಲೆ ಪಡೆದುಕೊಂಡಿದೆ.

ಮಾರುತಿ ವಿಟಾರಾ ಬ್ರೆಝಾ ಹಿಂದಿಕ್ಕಿ ನಂ.1 ಸ್ಥಾನಕ್ಕೇರಿದ ಹ್ಯುಂಡೈ ವೆನ್ಯೂ

ವೆನ್ಯೂ ಕಾರಿನಲ್ಲಿ ಎರಡು ಪೆಟ್ರೋಲ್ ಎಂಜಿನ್ ಆಯ್ಕೆಗಳನ್ನು ಪಡೆದುಕೊಂಡಿದ್ದರೆ ಡಿಸೇಲ್ ಎಂಜಿನ್‌ನಲ್ಲಿ ಒಂದು ಆಯ್ಕೆಯನ್ನು ನೀಡಲಾಗಿದ್ದು, ಇ, ಎಸ್, ಎಸ್ಎಕ್ಸ್ ಮತ್ತು ಎಸ್ಎಕ್ಸ್(0) ವೆರಿಯೆಂಟ್‌ಗಳಲ್ಲಿ ಹೊಸ ವೆನ್ಯೂ ಖರೀದಿಗೆ ಲಭ್ಯವಿದೆ. ಇದರಲ್ಲಿ 1.2-ಲೀಟರ್ ಕಪ್ಪಾ ಪೆಟ್ರೋಲ್ ಎಂಜಿನ್ ಮತ್ತು 1.4-ಡೀಸೆಲ್ ಎಂಜಿನ್‌ಗಳು ಸಾಮಾನ್ಯ ಮಾದರಿಯ ಕಾರುಗಳಗಾಗಿ ಮಾರಾಟಗೊಳ್ಳಲಿದ್ದರೆ, ಕಡಿಮೆ ಎಂಜಿನ್ ಸಾಮಾರ್ಥ್ಯದ 1.0-ಲೀಟರ್ ಪೆಟ್ರೋಲ್ ಆವೃತ್ತಿಯು ಅತಿ ಹೆಚ್ಚು ಬಿಎಚ್‌ಪಿ ಉತ್ಪಾದನೆಯೊಂದಿಗ ವೆನ್ಯೂ ಟಾಪ್ ಎಂಡ್ ಮಾದರಿಯಾಗಿ ಹೊರಹೊಮ್ಮಿದೆ.

ಮಾರುತಿ ವಿಟಾರಾ ಬ್ರೆಝಾ ಹಿಂದಿಕ್ಕಿ ನಂ.1 ಸ್ಥಾನಕ್ಕೇರಿದ ಹ್ಯುಂಡೈ ವೆನ್ಯೂ

ಎಂಜಿನ್ ಪರ್ಫಾಮೆನ್ಸ್

ಐ20 ಕಾರಿನಿಂದ ಎರವಲು ಪಡೆಯಲಾದ 1.2-ಲೀಟರ್ ಪೆಟ್ರೋಲ್ ಎಂಜಿನ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 83-ಬಿಎಚ್‌ಪಿ, 115-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ, 1.4-ಲೀಟರ್ ಡೀಸೆಲ್ ಮಾದರಿಯು ಕ್ರೆಟಾದಿಂದ ಎರವಲು ಪಡೆಯಲಾದ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 89-ಬಿಎಚ್‌ಪಿ, 220-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.

ಮಾರುತಿ ವಿಟಾರಾ ಬ್ರೆಝಾ ಹಿಂದಿಕ್ಕಿ ನಂ.1 ಸ್ಥಾನಕ್ಕೇರಿದ ಹ್ಯುಂಡೈ ವೆನ್ಯೂ

ಹಾಗೆಯೇ ಟಾಪ್ ಎಂಡ್ ಮಾದರಿಯಾದ 1.0-ಲೀಟರ್ ತ್ರಿ ಸಿಲಿಂಡರ್ ಪೆಟ್ರೋಲ್ ಎಂಜಿನ್ ಮಾದರಿಯು 120-ಬಿಎಚ್‌ಪಿ ಮತ್ತು 170-ಎನ್ಎಂ ಟಾರ್ಕ್ ಉತ್ಪಾದನೆ ಮೂಲಕ ಪರ್ಫಾಮೆನ್ಸ್ ಪ್ರಿಯರಿಗಾಗಿಯೇ ವಿಶೇಷವಾಗಿ ಸಿದ್ದಗೊಂಡಿದ್ದು, ಇದರಲ್ಲಿ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಅಥವಾ 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಅನ್ನು ಆಯ್ಕೆ ಮಾಡಬಹುದಾಗಿದೆ.

ಮಾರುತಿ ವಿಟಾರಾ ಬ್ರೆಝಾ ಹಿಂದಿಕ್ಕಿ ನಂ.1 ಸ್ಥಾನಕ್ಕೇರಿದ ಹ್ಯುಂಡೈ ವೆನ್ಯೂ

ವೆನ್ಯೂ ತಾಂತ್ರಿಕ ವೈಶಿಷ್ಟ್ಯತೆ ಹ್ಯುಂಡೈ ವೆನ್ಯೂ ಕಾರಿನಲ್ಲಿ 33 ಫೀಚರ್ಸ್‌ಗಳನ್ನು ಹೊಂದಿರುವ ಬ್ಯೂ ಲಿಂಕ್ ಕನೆಕ್ಟಿವಿಟಿ ಸೌಲಭ್ಯವನ್ನು ಜೋಡಿಸಲಾಗಿದ್ದು, ಪ್ಯಾಕೇಜ್ ಮಾದರಿಯನ್ನು ಹೊಂದಿರುವ ಈ ಸೌಲಭ್ಯವು ಹೊಸ ಕಾರಿಗೆ ಗರಿಷ್ಠ ಸುರಕ್ಷತೆಯ ಜೊತೆಗೆ ಕಾರು ಪ್ರಯಾಣವನ್ನು ಸುಖವಾಗಿಸಲು ಹಲವು ಮಾಹಿತಿಗಳನ್ನು ನೀಡಲಿದೆ.

MOST READ: ನಿಮ್ಮ ವಾಹನಗಳ ಮೈಲೇಜ್ ಕಡಿತವಾಗುತ್ತಿರುವುದಕ್ಕೆ ಅಸಲಿ ಕಾರಣ ಏನು ಗೊತ್ತಾ?

ಮಾರುತಿ ವಿಟಾರಾ ಬ್ರೆಝಾ ಹಿಂದಿಕ್ಕಿ ನಂ.1 ಸ್ಥಾನಕ್ಕೇರಿದ ಹ್ಯುಂಡೈ ವೆನ್ಯೂ

ಬ್ಲೂ ಲಿಂಕ್ ಪ್ಯಾಕೇಜ್‌ನಲ್ಲಿ ಜಿಯೋ ಫೆನ್ಸ್, ಎರ್ಮಜೆನ್ಸಿ ಅಸಿಸ್ಟ್, ಕಾರ್ ಟ್ರಾಕಿಂಗ್ ಸೇರಿದಂತೆ ಹಲವಾರು ಸುರಕ್ಷಾ ಫೀಚರ್ಸ್‌ಗಳನ್ನು ನೀಡಲಾಗಿದ್ದು, ಸಿಗ್ನಿಚೆಕ್ ಕಾಸ್‌ಕ್ಲ್ಯಾಡಿಂಗ್ ಹೆಕ್ಸಾಗೊನಲ್ ಫ್ರಂಟ್ ಗ್ರಿಲ್, ಡ್ಯುಯಲ್ ಹೆಡ್‌ಲ್ಯಾಂಪ್ ಕ್ಲಸ್ಟರ್, ಸಣ್ಣ ಎಳೆಯಂತಿರುವ ಲೈಟ್ ಸ್ಟ್ರಿಪ್, ಹೆಡ್‌ಲ್ಯಾಂಪ್ ಕ್ಲಸ್ಟರ್ ಕಳೆಭಾಗದಲ್ಲಿ ಹೊಂದಿಕೊಂಡಂತಿರುವ ಎಲ್ಇಡಿ ಡಿಆರ್‌ಎಲ್ಎಸ್ ಮತ್ತು 16-ಇಂಚಿನ ಟೈರ್ ಸೌಲಭ್ಯವು ಎಸ್‌ಯುವಿ ಪ್ರಿಯರನ್ನು ಸೆಳೆಯಲಿವೆ.

MOST READ: ಕೊಹ್ಲಿಗೆ ಟೋಪಿ ಹಾಕಿದ ಕಾಲ್ ಸೆಂಟರ್ ಕಿಲಾಡಿ- ಠಾಣೆಯಲ್ಲೇ ಅನಾಥವಾಗಿ ಬಿದ್ದ ರೂ. 3 ಕೋಟಿ ಕಾರು..!

ಮಾರುತಿ ವಿಟಾರಾ ಬ್ರೆಝಾ ಹಿಂದಿಕ್ಕಿ ನಂ.1 ಸ್ಥಾನಕ್ಕೇರಿದ ಹ್ಯುಂಡೈ ವೆನ್ಯೂ

ಇದಲ್ಲದೇ ಹೊಸ ಕಾರಿನ ಒಳಾಂಗಣ ವಿನ್ಯಾಸದ ಬಗೆಗೆ ಹೇಳುವುದಾದರೇ, 5-ಸೀಟರ್ ಸೌಲಭ್ಯ ಹೊಂದಿರುವ ವೆನ್ಯೂ ಕಾರು ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ಪಡೆದಿದ್ದು, ಬ್ಲ್ಯಾಕ್ ಡ್ಯಾಶ್‌ಬೋರ್ಡ್ ಮತ್ತು ಕ್ಯಾಬಿನ್, 8-ಇಂಚಿನ ಇನ್ಪೋಟೈನ್‌ಮೆಂಟ್ ಡಿಸ್ಪೈ, ಸೆಂಟರ್ ಕನ್ಸೊಲ್, ಡ್ಯಾಶ್‌ಬೋರ್ಡ್ ಸುತ್ತಲೂ ಸಿಲ್ವರ್ ಎಕ್ಸೆಂಟ್, ಉತ್ತಮ ದರ್ಜೆಯ ಲೆದರ್ ಸೀಟುಗಳು, ವೈರ್‌ಲೆಸ್ ಚಾರ್ಚಿಂಗ್ ಪಾಯಿಂಟ್ ಮತ್ತು ಎಲೆಕ್ಟ್ರಿಕ್ ಸನ್‌ರೂಫ್ ಸೌಲಭ್ಯವಿದೆ.

ಮಾರುತಿ ವಿಟಾರಾ ಬ್ರೆಝಾ ಹಿಂದಿಕ್ಕಿ ನಂ.1 ಸ್ಥಾನಕ್ಕೇರಿದ ಹ್ಯುಂಡೈ ವೆನ್ಯೂ

ಪ್ರೀಮಿಯಂ ಸೌಲಭ್ಯಗಳ ಜೊತೆಗೆ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಕ್ರೂಸ್ ಕಂಟ್ರೋಲ್, ಫ್ರಂಟ್ ವೀಲ್ಹ್ ಡಿಸ್ಕ್ ಬ್ರೇಕ್, ಆರು ಏರ್‌ಬ್ಯಾಗ್, ಹಿಲ್ ಅಸಿಸ್ಟ್ ಕಂಟ್ರೋಲ್, ಬ್ರೇಕ್ ಅಸಿಸ್ಟ್ ಕಂಟ್ರೋಲ್, ಎಬಿಎಸ್, ಇಬಿಡಿ, ಇಎಸ್‌ಸಿ, ವಿಎಸ್ಎಂ, ಸ್ಪೀಡ್ ಸೆನ್ಸಾರಿಂಗ್ ಆಟೋ ಡೋರ್ ಲಾಕ್, ISOFIX ಸೀಟ್, ಹೊಂದಿರುವ ವೆನ್ಯೂ ಕಾರು ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳಲ್ಲೇ ವಿಶೇಷ ಎನ್ನಿಸಲಿದೆ.

More from DriveSpark

Article Published On: Saturday, September 14, 2019, 9:00 [IST]
English summary
Hyundai Venue has become the best-selling SUV in the compact SUV segment.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+