ಸ್ಪಾಟ್ ಟೆಸ್ಟಿಂಗ್‌ನಲ್ಲಿ ಗಮನಸೆಳೆದ ಹ್ಯುಂಡೈ ವೆನ್ಯೂ

ಬಿಡುಗಡೆಯ ಸನಿಹದಲ್ಲಿರುವ ಹ್ಯುಂಡೈ ವೆನ್ಯೂ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಇದೇ ತಿಂಗಳು ಬಿಡುಗಡೆಯಾಗುತ್ತಿದ್ದು, ಅಂತಿಮ ಹಂತದ ಸ್ಪಾಟ್ ಟೆಸ್ಟಿಂಗ್ ಪೂರ್ಣಗೊಳಿಸುತ್ತಿರುವ ವೆನ್ಯೂ ಕಾರು ಕಂಪ್ಯಾಕ್ಟ್ ಎಸ್‌ಯುವಿ ಪ್ರಿಯರ ಆಕರ್ಷಣೆಗೆ ಕಾರಣವಾಗಿದೆ.

ಸ್ಪಾಟ್ ಟೆಸ್ಟಿಂಗ್‌ನಲ್ಲಿ ಗಮನಸೆಳೆದ ಹ್ಯುಂಡೈ ವೆನ್ಯೂ

ಹ್ಯುಂಡೈ ಸಂಸ್ಥೆಯು ವೆನ್ಯೂ ಕಂಪ್ಯಾಕ್ಟ್ ಎಸ್‌ಯುವಿ ಕಾರನ್ನು ಕಳೆದ ವಾರವಷ್ಟೇ ನ್ಯೂಯಾರ್ಕ್ ಆಟೋ ಮೇಳದಲ್ಲಿ ಪ್ರದರ್ಶನಗೊಳಿಸಿದ್ದು, ಇದೇ ತಿಂಗಳು 17ರಂದು ಭಾರತದಲ್ಲೂ ಕೂಡಾ ಬಿಡುಗಡೆ ಮಾಡುತ್ತಿದೆ. ಹೀಗಾಗಿ ಹೊಸ ಕಾರು ಖರೀದಿಗಾಗಿ ಮೇ 2ರಿಂದ ಅಧಿಕೃತವಾಗಿ ಬುಕ್ಕಿಂಗ್ ಆರಂಭವಾಗಲಿದ್ದು, ಆಸಕ್ತ ಗ್ರಾಹಕರು ರೂ.50 ಸಾವಿರ ಮುಂಗಡ ನೀಡಿ ಹೆಸರು ನೋಂದಾಯಿಸಬಹುದಾಗಿದೆ.

ಸ್ಪಾಟ್ ಟೆಸ್ಟಿಂಗ್‌ನಲ್ಲಿ ಗಮನಸೆಳೆದ ಹ್ಯುಂಡೈ ವೆನ್ಯೂ

ಸದ್ಯ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ನಂತರ ಕಾರು ಮಾರಾಟದಲ್ಲಿ 2ನೇ ಸ್ಥಾನದಲ್ಲಿರುವ ಹ್ಯುಂಡೈ ಸಂಸ್ಥೆಯು ಟಾಪ್ 10ರ ಪಟ್ಟಿಯಲ್ಲಿ ಒಟ್ಟು ಮೂರು ಕಾರುಗಳನ್ನು ಮಾರಾಟ ಮಾಡುತ್ತಿದೆ. ಇದೇ ಟಾಪ್ 10ರ ಪಟ್ಟಿಯಲ್ಲಿ ಒಟ್ಟು ಆರು ಕಾರುಗಳನ್ನು ತನ್ನದಾಗಿಸಿಕೊಂಡಿರುವ ಮಾರುತಿ ಸುಜುಕಿಗೆ ಹ್ಯುಂಡೈ ವೆನ್ಯೂ ಭಾರೀ ಪೈಪೋಟಿ ನೀಡುವ ಸುಳಿವು ನೀಡಿದೆ.

ಸ್ಪಾಟ್ ಟೆಸ್ಟಿಂಗ್‌ನಲ್ಲಿ ಗಮನಸೆಳೆದ ಹ್ಯುಂಡೈ ವೆನ್ಯೂ

ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿರುವ ಮಾರುತಿ ಸುಜುಕಿ ಬ್ರೆಝಾ, ಮಹೀಂದ್ರಾ ಎಕ್ಸ್‌ಯುವಿ 300, ಟಾಟಾ ನೆಕ್ಸಾನ್, ಫೋರ್ಡ್ ಇಕೋ ಸ್ಪೋರ್ಟ್ ಕಾರುಗಳಿಗೆ ತೀವ್ರ ಪೈಪೋಟಿ ನೀಡಲಿರುವ ವೆನ್ಯೂ ಕಾರು ಸದ್ಯ ಮಾರುಕಟ್ಟೆಯಲ್ಲಿರುವ ಕ್ರೆಟಾ ಕಾರಿನಂತೆಯೇ ಹೊಸ ಸಂಚಲನಕ್ಕೆ ಕಾರಣವಾಗಿದೆ.

ಜೊತೆಗೆ ವೆನ್ಯೂ ಕಾರಿನಲ್ಲಿ ಅಳವಡಿಸಲಾಗಿರುವ ಬ್ಲ್ಯೂ ಲಿಂಕ್ ತಂತ್ರಜ್ಞಾನವು ಕಾರು ಮಾರಾಟದಲ್ಲಿ ಹ್ಯುಂಡೈಗೆ ವರದಾನವಾಗಲಿದ್ದು, ಜಿಯೋ ಫೆನ್ಸ್ ಸೌಲಭ್ಯವು ಕೂಡಾ ಕಾರಿಗೆ ಮತ್ತಷ್ಟು ಭದ್ರತೆ ನೀಡಲಿದೆ. ಒಂದು ನೀರ್ದಿಷ್ಟ ಪ್ರದೇಶವನ್ನು ಬ್ಯೂ ಲಿಂಕ್ ಮೂಲಕ ಗುರುತು ಮಾಡಿಟ್ಟಲ್ಲಿ ಆ ಪ್ರದೇಶವನ್ನು ದಾಟಿ ನಿಮ್ಮ ಕಾರು ಹೊರಹೊದಲ್ಲಿ ನಿಮ್ಮನ್ನು ತಕ್ಷಣವೇ ಎಚ್ಚರಿಸುವಂತಹ ತಂತ್ರಜ್ಞಾನ ಇದಾಗಿದೆ.

ಸ್ಪಾಟ್ ಟೆಸ್ಟಿಂಗ್‌ನಲ್ಲಿ ಗಮನಸೆಳೆದ ಹ್ಯುಂಡೈ ವೆನ್ಯೂ

ಹಾಗೆಯೇ ರಿಯರ್ ಟೈಮ್ ವೆಹಿಕಲ್ ಟ್ರ್ಯಾಕಿಂಗ್ ಮೂಲಕ ಕಳ್ಳತನವಾದ ಕಾರನ್ನು ಕೆಲವೇ ನಿಮಿಷಗಳಲ್ಲಿ ಪತ್ತೆ ಮಾಡಬಹುದಾಗಿದ್ದು, ರಿಮೋಟ್ ಮೂಲಕವೇ ಎಂಜಿನ್ ಸ್ಟಾರ್ಟ್/ಸ್ಟಾಪ್, ಲಾಕ್/ಅನ್‌ಲಾಕ್, ಹಾರ್ನ್ ಮತ್ತು ಲೈಟ್ ಕಂಟ್ರೋಲ್, ಫೈಂಡ್ ಮೈ ಕಾರ್ ಲೋಕೇಷನ್, ಶೇರ್ ಮೈ ಕಾರ್ ಮತ್ತು ರಿಯರ್ ಟೈಮ್ ಮೂಲಕ ಟ್ರಾಫಿಕ್ ಇನ್‌ಫಾರ್ಮೆಷನ್ ಪಡೆದುಕೊಳ್ಳಬಹುದಾದ ಸೌಲಭ್ಯ ಈ ಕಾರಿನಲ್ಲಿದೆ.

ಸ್ಪಾಟ್ ಟೆಸ್ಟಿಂಗ್‌ನಲ್ಲಿ ಗಮನಸೆಳೆದ ಹ್ಯುಂಡೈ ವೆನ್ಯೂ

ವೆನ್ಯೂ ಕಾರುಗಳು ಒಟ್ಟು ಮೂರು ಎಂಜಿನ್ ಆಯ್ಕೆಯೊಂದಿಗೆ ಖರೀದಿಗೆ ಲಭ್ಯವಾಗುತ್ತಿದ್ದು, ಪೆಟ್ರೋಲ್ ಎಂಜಿನ್‌ನಲ್ಲಿ 1.0 ಲೀಟರ್ ತ್ರಿ ಸಿಲಿಂಡರ್ ಎಂಜಿನ್ ಮತ್ತು 1.4 ಲೀಟರ್ ಎಂಜಿನ್ ಹೊಂದಿರಲಿದೆ. ಹಾಗೆಯೇ 1.4-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಸಹ ಹೊಂದಿರಲಿದೆ.

ಸ್ಪಾಟ್ ಟೆಸ್ಟಿಂಗ್‌ನಲ್ಲಿ ಗಮನಸೆಳೆದ ಹ್ಯುಂಡೈ ವೆನ್ಯೂ

ಇನ್ನು ಹೊಸ ಕಾರಿನಲ್ಲಿ ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್ಇಡಿ ಟೈಲ್ ಲೈಟ್, 6 ಸ್ಪೀಡ್ ಡ್ಯುಯಲ್ ಕ್ಲಚ್ ಗೇರ್‌ಬಾಕ್ಸ್, ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಎಬಿಎಸ್, 4 ಏರ್‌ಬ್ಯಾಗ್, ಸನ್‌ರೂಫ್, ಡ್ಯುಯಲ್ ಟೋನ್ ಬಾಡಿ ಕಲರ್, ಡ್ಯುಯಲ್ ಟೋನ್ ಇಂಟಿರಿಯರ್, ರಿಯರ್ ವ್ಯೂ ಕ್ಯಾಮೆರಾ, ಪಾರ್ಕಿಂಗ್ ಸೆನ್ಸಾರ್, ಸ್ಮಾರ್ಟ್ ಕೆನೆಕ್ಟಿವಿಟಿ ಮತ್ತು ಲಾರ್ಜ್ ಟಚ್‌ಸ್ಕ್ರೀನ್ ಡಿಸ್‌ಪ್ಲೇಯೊಂದಿಗೆ ಹಲವು ಮಾದರಿಯ ಪ್ರೀಮಿಯಂ ಸೌಲಭ್ಯಗಳನ್ನು ಪಡೆದುಕೊಂಡಿರಲಿದೆ.

ಸ್ಪಾಟ್ ಟೆಸ್ಟಿಂಗ್‌ನಲ್ಲಿ ಗಮನಸೆಳೆದ ಹ್ಯುಂಡೈ ವೆನ್ಯೂ

ಕಾರಿನ ಬೆಲೆಗಳು(ಅಂದಾಜು)

ಹೊಸ ವೆನ್ಯೂ ಕಾರು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಒಟ್ಟು ಆರು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ಹೊಸ ಕಾರಿನ ಬೆಲೆಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 7.50 ಲಕ್ಷದಿಂದ ಟಾಪ್ ಎಂಡ್ ಮಾದರಿಗೆ ರೂ.10 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.

Source: BMC HD Videos

Most Read Articles

Kannada
English summary
Hyundai Venue SUV On Indian Roads — Here's Everything You Should Know. Read in Kannada.
Story first published: Tuesday, April 30, 2019, 17:40 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X