ನಾಳೆ ಬಿಡುಗಡೆಯಾಗಲಿರುವ ಹ್ಯುಂಡೈ ವೆನ್ಯೂ ಸ್ಪೆಷಲ್ ಏನು?

ದಕ್ಷಿಣ ಕೊರಿಯಾದ ಕಾರು ಉತ್ಪಾದನಾ ದೈತ್ಯ ಹ್ಯುಂಡೈ ಸಂಸ್ಥೆಯು ಇದೇ ಮೊದಲ ಬಾರಿಗೆ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾರಾಟದಲ್ಲಿ ಎಂಟ್ರಿ ನೀಡುತ್ತಿದ್ದು, ವಿನೂತನ ಡಿಸೈನ್‌ಗಳೊಂದಿಗೆ ಸಿದ್ದವಾಗಿರುವ ವೆನ್ಯೂ ಕಾರು ನಾಳೆ ಅಧಿಕೃತವಾಗಿ ಮಾರಾಟಕ್ಕೆ ಚಾಲನೆ ಸಿಗಲಿದೆ.

ನಾಳೆ ಬಿಡುಗಡೆಯಾಗಲಿರುವ ಹ್ಯುಂಡೈ ವೆನ್ಯೂ ಸ್ಪೆಷಲ್ ಏನು?

ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳಲ್ಲೇ ವಿಶೇಷ ಎನ್ನಿಸುವ ಹ್ಯುಂಡೈ ವೆನ್ಯೂ ಕಾರಿಗೆ ಬುಕ್ಕಿಂಗ್ ಆರಂಭವಾದ ಕೇವಲ 20 ದಿನಗಳಲ್ಲಿ 10 ಸಾವಿರಕ್ಕೂ ಹೆಚ್ಚು ಗ್ರಾಹಕರು ರೂ.21 ಸಾವಿರ ಪಾವತಿಸಿ ಬುಕ್ಕಿಂಗ್ ಮಾಡಿದ್ದು, ಪ್ರತಿ ಗಂಟೆಗೆ ದೇಶಾದ್ಯಂತ 84 ವೆನ್ಯೂ ಕಾರುಗಳಿಗಾಗಿ ಬುಕ್ಕಿಂಗ್ ಹರಿದು ಬಂದಿದೆ. ಅತ್ಯಾಧುನಿಕ ತಂತ್ರಜ್ಞಾನ ಬಳಕೆ, ಅತ್ಯುತ್ತಮ ಎಂಜಿ ಪರ್ಫಾಮೆನ್ಸ್, ಪ್ರತಿ ಸ್ಪರ್ಧಿ ಕಾರುಗಳಿಂತಲೂ ಉತ್ತಮ ಡಿಸೈನ್, ಬೆಲೆ ಮತ್ತು ಗುಣಮಟ್ಟವು ವೆನ್ಯೂ ಕಾರಿನ ಪ್ರಮುಖ ಆಕರ್ಷಣೆಯಾಗಿದೆ.

ನಾಳೆ ಬಿಡುಗಡೆಯಾಗಲಿರುವ ಹ್ಯುಂಡೈ ವೆನ್ಯೂ ಸ್ಪೆಷಲ್ ಏನು?

ಹ್ಯುಂಡೈ ವೆನ್ಯೂ ಕಾರಿನ ಟಾಪ್ ಎಂಡ್ ವೆರಿಯೆಂಟ್ ಬೆಲೆಗಳು ಈಗಾಗಲೇ ಸೋರಿಕೆಯಾಗಿದೆ. ಟಾಪ್ ಎಂಡ್ ಆವೃತ್ತಿಯಾದ ಎಸ್‌ಎಕ್ಸ್‌ ಪ್ಲಸ್ ಮಾದರಿಯು ರೂ. 10.65 ಲಕ್ಷ ಎಕ್ಸ್‌ಶೋರೂಂ ಬೆಲೆ ಪಡೆದಿದ್ದು, 1.0-ಲೀಟರ್ ಟರ್ಬೋ ಚಾರ್ಜ್ಡ್ ಪೆಟ್ರೋಲ್ ಎಂಜಿನ್‌ನೊಂದಿಗೆ 7-ಸ್ಪೀಡ್ ಡಿಸಿಟಿ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಹೊಂದಿರಲಿದೆಯೆಂತೆ.

ನಾಳೆ ಬಿಡುಗಡೆಯಾಗಲಿರುವ ಹ್ಯುಂಡೈ ವೆನ್ಯೂ ಸ್ಪೆಷಲ್ ಏನು?

ಇದರಲ್ಲೇ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಹೊಂದಿರುವ ಎಸ್ಎಕ್ಸ್ ಟರ್ಬೋ ಚಾರ್ಜ್ಡ್ 1.0-ಲೀಟರ್ ಪೆಟ್ರೋಲ್ ಎಂಜಿನ್ ಹೊಂದಿರುವ ಆವೃತ್ತಿಯು ಎಕ್ಸ್‌ಶೋರೂಂ ಪ್ರಕಾರ ರೂ.10.09 ಲಕ್ಷ ಬೆಲೆ ಪಡೆದುಕೊಂಡಿದೆ.

ನಾಳೆ ಬಿಡುಗಡೆಯಾಗಲಿರುವ ಹ್ಯುಂಡೈ ವೆನ್ಯೂ ಸ್ಪೆಷಲ್ ಏನು?

ಇನ್ನು 1.4-ಲೀಟರ್ ಎಂಜಿನ್ ಹೊಂದಿರುವ ಡೀಸೆಲ್ ಟಾಪ್ ಎಂಡ್ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ರೂ. 10.42 ಲಕ್ಷ ಬೆಲೆ ಹೊಂದಿದ್ದು, 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ ಉತ್ತಮ ಮೈಲೇಜ್ ಹೊಂದಿರುವ ಮಾದರಿ ಇದಾಗಿದೆ. ವಿಶೇಷ ಅಂದ್ರೆ ಪೆಟ್ರೋಲ್ ಟಾಪ್ ಎಂಡ್ ಮಾದರಿಯು ಎಂಜಿನ್ ಸಾಮರ್ಥ್ಯದಲ್ಲಿ ಕಡಿಮೆ ಎನ್ನಿಸಿದರೂ ಸಹ ತಾಂತ್ರಿಕವಾಗಿ ಮತ್ತು ಅತ್ಯಾಧುನಿಕ ಸುರಕ್ಷಾ ಸೌಲಭ್ಯಗಳೊಂದಿಗೆ ಗ್ರಾಹಕರನ್ನು ಸೆಳೆಯಲಿದೆ.

ನಾಳೆ ಬಿಡುಗಡೆಯಾಗಲಿರುವ ಹ್ಯುಂಡೈ ವೆನ್ಯೂ ಸ್ಪೆಷಲ್ ಏನು?

ಸದ್ಯಕ್ಕೆ ಸೋರಿಕೆಯಾಗಿರುವ ಮಾಹಿತಿಗಳಲ್ಲಿ ವೆನ್ಯೂ ಕಾರಿನ ಟಾಪ್ ಎಂಡ್ ಮಾದರಿಗಳ ಬೆಲೆ ಮಾತ್ರವೇ ದೊರೆತಿದ್ದು, ಆರಂಭಿಕ ಕಾರಿನ ಬೆಲೆಯು ಎಕ್ಸ್‌ಶೋರೂಂ ಪ್ರಕಾರ ರೂ. 7.50 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.

ನಾಳೆ ಬಿಡುಗಡೆಯಾಗಲಿರುವ ಹ್ಯುಂಡೈ ವೆನ್ಯೂ ಸ್ಪೆಷಲ್ ಏನು?

ಜೊತೆಗೆ ವೆನ್ಯೂ ಕಾರಿನಲ್ಲಿ ಅಳವಡಿಸಲಾಗಿರುವ ಬ್ಲ್ಯೂ ಲಿಂಕ್ ತಂತ್ರಜ್ಞಾನವು ಕಾರು ಮಾರಾಟದಲ್ಲಿ ಹ್ಯುಂಡೈಗೆ ವರದಾನವಾಗಲಿದ್ದು, ಜಿಯೋ ಫೆನ್ಸ್ ಸೌಲಭ್ಯವು ಕೂಡಾ ಕಾರಿಗೆ ಮತ್ತಷ್ಟು ಭದ್ರತೆ ನೀಡಲಿದೆ. ಒಂದು ನೀರ್ದಿಷ್ಟ ಪ್ರದೇಶವನ್ನು ಬ್ಯೂ ಲಿಂಕ್ ಮೂಲಕ ಗುರುತು ಮಾಡಿಟ್ಟಲ್ಲಿ ಆ ಪ್ರದೇಶವನ್ನು ದಾಟಿ ನಿಮ್ಮ ಕಾರು ಹೊರಹೋದಲ್ಲಿ ನಿಮ್ಮನ್ನು ತಕ್ಷಣವೇ ಎಚ್ಚರಿಸುವಂತಹ ತಂತ್ರಜ್ಞಾನ ಇದಾಗಿದೆ.

MOST READ: ಹೊಸ ಕಾರು ವಿತರಣೆಯಲ್ಲಿ ವಿಳಂಬ- ಜೀಪ್ ಡೀಲರ್ಸ್‌ಗೆ ಬಿತ್ತು ರೂ. 50 ಸಾವಿರ ದಂಡ..!

ನಾಳೆ ಬಿಡುಗಡೆಯಾಗಲಿರುವ ಹ್ಯುಂಡೈ ವೆನ್ಯೂ ಸ್ಪೆಷಲ್ ಏನು?

ಹಾಗೆಯೇ ರಿಯರ್ ಟೈಮ್ ವೆಹಿಕಲ್ ಟ್ರ್ಯಾಕಿಂಗ್ ಮೂಲಕ ಕಳ್ಳತನವಾದ ಕಾರನ್ನು ಕೆಲವೇ ನಿಮಿಷಗಳಲ್ಲಿ ಪತ್ತೆ ಮಾಡಬಹುದಾಗಿದ್ದು, ರಿಮೋಟ್ ಮೂಲಕವೇ ಎಂಜಿನ್ ಸ್ಟಾರ್ಟ್/ಸ್ಟಾಪ್, ಲಾಕ್/ಅನ್‌ಲಾಕ್, ಹಾರ್ನ್ ಮತ್ತು ಲೈಟ್ ಕಂಟ್ರೋಲ್, ಫೈಂಡ್ ಮೈ ಕಾರ್ ಲೋಕೇಷನ್, ಶೇರ್ ಮೈ ಕಾರ್ ಮತ್ತು ರಿಯರ್ ಟೈಮ್ ಮೂಲಕ ಟ್ರಾಫಿಕ್ ಇನ್‌ಫಾರ್ಮೆಷನ್ ಪಡೆದುಕೊಳ್ಳಬಹುದಾದ ಸೌಲಭ್ಯ ಈ ಕಾರಿನಲ್ಲಿದೆ.

ನಾಳೆ ಬಿಡುಗಡೆಯಾಗಲಿರುವ ಹ್ಯುಂಡೈ ವೆನ್ಯೂ ಸ್ಪೆಷಲ್ ಏನು?

ಹೊಸ ಕಾರಿನಲ್ಲಿ ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್ಇಡಿ ಟೈಲ್ ಲೈಟ್, 6 ಸ್ಪೀಡ್ ಡ್ಯುಯಲ್ ಕ್ಲಚ್ ಗೇರ್‌ಬಾಕ್ಸ್, ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಎಬಿಎಸ್, 4 ಏರ್‌ಬ್ಯಾಗ್, ಸನ್‌ರೂಫ್, ಡ್ಯುಯಲ್ ಟೋನ್ ಬಾಡಿ ಕಲರ್, ಡ್ಯುಯಲ್ ಟೋನ್ ಇಂಟಿರಿಯರ್, ರಿಯರ್ ವ್ಯೂ ಕ್ಯಾಮೆರಾ, ಪಾರ್ಕಿಂಗ್ ಸೆನ್ಸಾರ್, ಸ್ಮಾರ್ಟ್ ಕೆನೆಕ್ಟಿವಿಟಿ ಮತ್ತು ಲಾರ್ಜ್ ಟಚ್‌ಸ್ಕ್ರೀನ್ ಡಿಸ್‌ಪ್ಲೇಯೊಂದಿಗೆ ಹಲವು ಮಾದರಿಯ ಪ್ರೀಮಿಯಂ ಸೌಲಭ್ಯಗಳನ್ನು ಪಡೆದುಕೊಂಡಿರಲಿದೆ.

MOST READ: ನಿಮ್ಮ ವಾಹನಗಳ ಮೈಲೇಜ್ ಕಡಿತವಾಗುತ್ತಿರುವುದಕ್ಕೆ ಅಸಲಿ ಕಾರಣ ಏನು ಗೊತ್ತಾ?

ನಾಳೆ ಬಿಡುಗಡೆಯಾಗಲಿರುವ ಹ್ಯುಂಡೈ ವೆನ್ಯೂ ಸ್ಪೆಷಲ್ ಏನು?

ಈ ಮೂಲಕ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿರುವ ಮಾರುತಿ ಸುಜುಕಿ ಬ್ರೆಝಾ, ಮಹೀಂದ್ರಾ ಎಕ್ಸ್‌ಯುವಿ 300, ಟಾಟಾ ನೆಕ್ಸಾನ್, ಫೋರ್ಡ್ ಇಕೋ ಸ್ಪೋರ್ಟ್ ಕಾರುಗಳಿಗೆ ತೀವ್ರ ಪೈಪೋಟಿ ನೀಡಲಿರುವ ವೆನ್ಯೂ ಕಾರು ನಾಳೆ ಮಾರುಕಟ್ಟೆಗೆ ಅಧಿಕೃತ ಪ್ರವೇಶಿಸುತ್ತಿದ್ದು, ಈ ಬಗ್ಗೆ ನಿಮ್ಮ ಅಭಿಪ್ರಾಯ ಹಂಚಿಕೊಳ್ಳಿ..

Most Read Articles

Kannada
English summary
South Korean carmaker Hyundai Motor India is all set to launch its first compact SUV Venue tomorrow. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X