ಹ್ಯುಂಡೈ ವೆನ್ಯೂ ಪೆಟ್ರೋಲ್ ಮಾದರಿಯಲ್ಲಿ ಮೊದಲ ಬಾರಿಗೆ ಸಿಎನ್‌ಜಿ ಕಿಟ್ ಬಳಕೆ

ಹೆಚ್ಚುತ್ತಿರುವ ಮಾಲಿನ್ಯ ತಡೆಗಾಗಿ ಹಸಿರು ವಾಹನಗಳತ್ತ ಹೆಚ್ಚು ಗಮನಹರಿಸಲಾಗುತ್ತಿದ್ದು, ಪೆಟ್ರೋಲ್ ಮತ್ತು ಡೀಸೆಲ್‌ಗೆ ಪರ್ಯಾಯವಾಗಿ ಸಿಎನ್‌ಜಿ ಮತ್ತು ಎಲೆಕ್ಟ್ರಿಕ್ ವಾಹನ ಮಾದರಿಗಳತ್ತ ಹೆಚ್ಚು ಗಮನಹರಿಸಲಾಗುತ್ತಿದೆ.

ಹ್ಯುಂಡೈ ವೆನ್ಯೂ ಪೆಟ್ರೋಲ್ ಮಾದರಿಯಲ್ಲಿ ಮೊದಲ ಬಾರಿಗೆ ಸಿಎನ್‌ಜಿ ಕಿಟ್ ಬಳಕೆ

ಹ್ಯುಂಡೈ ಸಂಸ್ಥೆಯು ಸಹ ತನ್ನ ಜನಪ್ರಿಯ ಕಾರುಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆ ಜೊತೆಗೆ ಸಿಎನ್‌ಜಿ ಆಯ್ಕೆ ನೀಡುವ ಯೋಜನೆಯಲ್ಲಿದ್ದು, ಕೆಲವು ಆಸಕ್ತ ಗ್ರಾಹಕರು ಹ್ಯುಂಡೈ ಬಿಡುಗಡೆ ಮಾಡುವುದಕ್ಕೂ ಮುನ್ನವೇ ಸಿಎನ್‌ಜಿ ಕಿಟ್ ಅಳವಡಿಸಿಕೊಂಡಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದೆ. ಸಿಎನ್‌ಜಿ ಮಾದರಿಯು ಡೀಸೆಲ್ ಎಂಜಿನ್ ನೀಡುವ ಇಂಧನ ಕಾರ್ಯಕ್ಷಮತೆ ಸಮನಾಗಿದ್ದು, ಮಾಲಿನ್ಯ ಹೊರಸೂಸುವಿಕೆಯಲ್ಲೂ ಸಾಕಷ್ಟು ಸುಧಾರಣೆ ಹೊಂದಿದೆ.

ಹ್ಯುಂಡೈ ವೆನ್ಯೂ ಪೆಟ್ರೋಲ್ ಮಾದರಿಯಲ್ಲಿ ಮೊದಲ ಬಾರಿಗೆ ಸಿಎನ್‌ಜಿ ಕಿಟ್ ಬಳಕೆ

ಹೀಗಾಗಿ ಬಹುತೇಕ ಕಾರು ಉತ್ಪಾದನಾ ಸಂಸ್ಥೆಗಳು ಇದೀಗ ಪೆಟ್ರೋಲ್ ಮತ್ತು ಸಿಎನ್‌ಜಿ ಕಾರುಗಳ ಆಯ್ಕೆಯನ್ನು ಹೆಚ್ಚಿಸುವ ಮೂಲಕ ಡೀಸೆಲ್ ಎಂಜಿನ್ ಕಾರುಗಳ ಮಾರಾಟವನ್ನು ಕಡಿತ ಮಾಡಲಾಗುತ್ತಿದ್ದು, ಇದೀಗ ವೆನ್ಯೂ ಕಾರಿನಲ್ಲಿ ಜೋಡಣೆ ಮಾಡಲಾಗಿರುವ ಸಿಎನ್‌ಜಿ ಕಿಟ್ ಗ್ರಾಹಕರ ಆಕರ್ಷಣೆಗೆ ಕಾರಣವಾಗಿದೆ.

ಹ್ಯುಂಡೈ ವೆನ್ಯೂ ಪೆಟ್ರೋಲ್ ಮಾದರಿಯಲ್ಲಿ ಮೊದಲ ಬಾರಿಗೆ ಸಿಎನ್‌ಜಿ ಕಿಟ್ ಬಳಕೆ

ಸಿಎನ್‌ಜಿ ಎಂಜಿನ್ ಆಯ್ಕೆಯು ಕಾರುಗಳ ನಿರ್ವಹಣಾ ವೆಚ್ಚವನ್ನು ತಗ್ಗಿಸಲಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್‌ಗಿಂತಲೂ ಉತ್ತಮ ಎಂಬುವುದನ್ನು ಈಗಾಗಲೇ ಹಲವು ಆಟೋ ಮೊಬೈಲ್ ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇನ್ನು ಪ್ರಸ್ತುತ ಮಾರುಕಟ್ಟೆಯಲ್ಲಿ ಖರೀದಿಗೆ ಲಭ್ಯವಿರುವ ವೆನ್ಯೂ ಕಾರು 1.2-ಲೀಟರ್ ಪೆಟ್ರೋಲ್, 1.4-ಲೀಟರ್ ಡೀಸೆಲ್ ಮತ್ತು 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 6.50 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.11.11 ಲಕ್ಷ ಬೆಲೆ ಪಡೆದುಕೊಂಡಿದೆ.

ಹ್ಯುಂಡೈ ವೆನ್ಯೂ ಪೆಟ್ರೋಲ್ ಮಾದರಿಯಲ್ಲಿ ಮೊದಲ ಬಾರಿಗೆ ಸಿಎನ್‌ಜಿ ಕಿಟ್ ಬಳಕೆ

ಐ20 ಕಾರಿನಿಂದ ಎರವಲು ಪಡೆಯಲಾದ 1.2-ಲೀಟರ್ ಪೆಟ್ರೋಲ್ ಎಂಜಿನ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 83-ಬಿಎಚ್‌ಪಿ, 115-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ, 1.4-ಲೀಟರ್ ಡೀಸೆಲ್ ಮಾದರಿಯು ಕ್ರೆಟಾದಿಂದ ಎರವಲು ಪಡೆಯಲಾದ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 89-ಬಿಎಚ್‌ಪಿ, 220-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.

ಹ್ಯುಂಡೈ ವೆನ್ಯೂ ಪೆಟ್ರೋಲ್ ಮಾದರಿಯಲ್ಲಿ ಮೊದಲ ಬಾರಿಗೆ ಸಿಎನ್‌ಜಿ ಕಿಟ್ ಬಳಕೆ

ಹಾಗೆಯೇ ಟಾಪ್ ಎಂಡ್ ಮಾದರಿಯಾದ 1.0-ಲೀಟರ್ ತ್ರಿ ಸಿಲಿಂಡರ್ ಪೆಟ್ರೋಲ್ ಎಂಜಿನ್ ಮಾದರಿಯು 120-ಬಿಎಚ್‌ಪಿ ಮತ್ತು 170-ಎನ್ಎಂ ಟಾರ್ಕ್ ಉತ್ಪಾದನೆ ಮೂಲಕ ಪರ್ಫಾಮೆನ್ಸ್ ಪ್ರಿಯರಿಗಾಗಿಯೇ ವಿಶೇಷವಾಗಿ ಸಿದ್ದಗೊಂಡಿದ್ದು, ಇದರಲ್ಲಿ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಅಥವಾ 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಅನ್ನು ಆಯ್ಕೆ ಮಾಡಬಹುದಾಗಿದೆ.

ಹ್ಯುಂಡೈ ವೆನ್ಯೂ ಪೆಟ್ರೋಲ್ ಮಾದರಿಯಲ್ಲಿ ಮೊದಲ ಬಾರಿಗೆ ಸಿಎನ್‌ಜಿ ಕಿಟ್ ಬಳಕೆ

ವೆನ್ಯೂ ತಾಂತ್ರಿಕ ವೈಶಿಷ್ಟ್ಯತೆ ಹ್ಯುಂಡೈ ವೆನ್ಯೂ ಕಾರಿನಲ್ಲಿ 33 ಫೀಚರ್ಸ್‌ಗಳನ್ನು ಹೊಂದಿರುವ ಬ್ಯೂ ಲಿಂಕ್ ಕನೆಕ್ಟಿವಿಟಿ ಸೌಲಭ್ಯವನ್ನು ಜೋಡಿಸಲಾಗಿದ್ದು, ಪ್ಯಾಕೇಜ್ ಮಾದರಿಯನ್ನು ಹೊಂದಿರುವ ಈ ಸೌಲಭ್ಯವು ಹೊಸ ಕಾರಿಗೆ ಗರಿಷ್ಠ ಸುರಕ್ಷತೆಯ ಜೊತೆಗೆ ಕಾರು ಪ್ರಯಾಣವನ್ನು ಸುಖವಾಗಿಸಲು ಹಲವು ಮಾಹಿತಿಗಳನ್ನು ನೀಡಲಿದೆ.

MOST READ: ಆಕರ್ಷಕ ಬೆಲೆಗಳಲ್ಲಿ ಮಾರುತಿ ಸುಜುಕಿ 6 ಸೀಟರ್ ಎಕ್ಸ್ಎಲ್6 ಬಿಡುಗಡೆ

ಹ್ಯುಂಡೈ ವೆನ್ಯೂ ಪೆಟ್ರೋಲ್ ಮಾದರಿಯಲ್ಲಿ ಮೊದಲ ಬಾರಿಗೆ ಸಿಎನ್‌ಜಿ ಕಿಟ್ ಬಳಕೆ

ಇದಲ್ಲದೇ ಹೊಸ ಕಾರಿನ ಒಳಾಂಗಣ ವಿನ್ಯಾಸದ ಬಗೆಗೆ ಹೇಳುವುದಾದರೇ, 5-ಸೀಟರ್ ಸೌಲಭ್ಯ ಹೊಂದಿರುವ ವೆನ್ಯೂ ಕಾರು ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ಪಡೆದಿದ್ದು, ಬ್ಲ್ಯಾಕ್ ಡ್ಯಾಶ್‌ಬೋರ್ಡ್ ಮತ್ತು ಕ್ಯಾಬಿನ್, 8-ಇಂಚಿನ ಇನ್ಪೋಟೈನ್‌ಮೆಂಟ್ ಡಿಸ್ಪೈ, ಸೆಂಟರ್ ಕನ್ಸೊಲ್, ಡ್ಯಾಶ್‌ಬೋರ್ಡ್ ಸುತ್ತಲೂ ಸಿಲ್ವರ್ ಎಕ್ಸೆಂಟ್, ಉತ್ತಮ ದರ್ಜೆಯ ಲೆದರ್ ಸೀಟುಗಳು, ವೈರ್‌ಲೆಸ್ ಚಾರ್ಚಿಂಗ್ ಪಾಯಿಂಟ್ ಮತ್ತು ಎಲೆಕ್ಟ್ರಿಕ್ ಸನ್‌ರೂಫ್ ಸೌಲಭ್ಯವಿದೆ.

MOST READ: ಬಾಲಿವುಡ್ ಸಿಂಗಂ ಕೈಸೇರಿದ ದೇಶದ ಅತಿ ದುಬಾರಿ ಎಸ್‌ಯುವಿ ಕಾರು..!

ಹ್ಯುಂಡೈ ವೆನ್ಯೂ ಪೆಟ್ರೋಲ್ ಮಾದರಿಯಲ್ಲಿ ಮೊದಲ ಬಾರಿಗೆ ಸಿಎನ್‌ಜಿ ಕಿಟ್ ಬಳಕೆ

ಪ್ರೀಮಿಯಂ ಸೌಲಭ್ಯಗಳ ಜೊತೆಗೆ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಕ್ರೂಸ್ ಕಂಟ್ರೋಲ್, ಫ್ರಂಟ್ ವೀಲ್ಹ್ ಡಿಸ್ಕ್ ಬ್ರೇಕ್, ಆರು ಏರ್‌ಬ್ಯಾಗ್, ಹಿಲ್ ಅಸಿಸ್ಟ್ ಕಂಟ್ರೋಲ್, ಬ್ರೇಕ್ ಅಸಿಸ್ಟ್ ಕಂಟ್ರೋಲ್, ಎಬಿಎಸ್, ಇಬಿಡಿ, ಇಎಸ್‌ಸಿ, ವಿಎಸ್ಎಂ, ಸ್ಪೀಡ್ ಸೆನ್ಸಾರಿಂಗ್ ಆಟೋ ಡೋರ್ ಲಾಕ್, ISOFIX ಸೀಟ್, ಹೊಂದಿರುವ ವೆನ್ಯೂ ಕಾರು ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳಲ್ಲೇ ವಿಶೇಷ ಎನ್ನಿಸಲಿದೆ.

Most Read Articles

Kannada
English summary
Hyundai Venue Turbo Petrol Engine Gets CNG Kit-Video. Read in Kannada.
Story first published: Wednesday, August 28, 2019, 19:51 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X