ಹ್ಯುಂಡೈ ವೆನ್ಯೂ ಪಾಲಾದ 'ಇಂಡಿಯನ್ ಕಾರ್ ಆಫ್ ದಿ ಇಯರ್' ಪ್ರತಿಷ್ಠಿತ ಪ್ರಶಸ್ತಿ

ಭಾರತೀಯ ಆಟೋ ಉದ್ಯಮದಲ್ಲಿ ಗ್ರಾಹಕರ ಮೆಚ್ಚುಗೆಗೆ ಪಾತ್ರವಾದ ಕಾರುಗಳಿಗೆ ನೀಡಲಾಗುವ 'ಇಂಡಿಯನ್ ಕಾರ್ ಆಫ್ ದಿ ಇಯರ್' ಪ್ರತಿಷ್ಠಿತ ಪ್ರಶಸ್ತಿಯನ್ನು ಹ್ಯುಂಡೈ ನಿರ್ಮಾಣದ ವೆನ್ಯೂ ಕಂಪ್ಯಾಕ್ಟ್ ಎಸ್‌ಯುವಿ ತನ್ನದಾಗಿಸಿಕೊಂಡಿದೆ.

ಹ್ಯುಂಡೈ ವೆನ್ಯೂ ಪಾಲಾದ 'ಇಂಡಿಯನ್ ಕಾರ್ ಆಫ್ ದಿ ಇಯರ್' ಪ್ರತಿಷ್ಠಿತ ಪ್ರಶಸ್ತಿ

2020ರ 'ಇಂಡಿಯನ್ ಕಾರ್ ಆಫ್ ದಿ ಇಯರ್' ಪ್ರಶಸ್ತಿ ರೇಸ್‌ನಲ್ಲಿದ್ದ ಪ್ರಮುಖ ಕಾರುಗಳನ್ನು ಹಿಂದಿಕ್ಕಿರುವ ಹ್ಯುಂಡೈ ವೆನ್ಯೂ ಸಬ್ ಫೋರ್ ಮೀಟರ್ ಕಾರುಗಳ ಮಾರಾಟ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದು, ಪ್ರಶಸ್ತಿ ಪಟ್ಟಿಯಲ್ಲಿದ್ದ ಕಿಯಾ ಸೆಲ್ಟೊಸ್, ರೆನಾಲ್ಟ್ ಟ್ರೈಬರ್, ಹೋಂಡಾ ಸಿವಿಕ್, ಮಾರುತಿ ಸುಜುಕಿ ಎಸ್-ಪ್ರೆಸ್ಸೊ, ಎಂಜಿ ಹೆಕ್ಟರ್, ಮಹೀಂದ್ರಾ ಎಕ್ಸ್‌ಯುವಿ300, ಹ್ಯುಂಡೈ ಗ್ರಾಂಡ್ ಐ10 ನಿಯೋಸ್, ನಿಸ್ಸಾನ್ ಕಿಕ್ಸ್ ಮತ್ತು ಟಾಟಾ ಹ್ಯಾರಿಯರ್ ಕಾರುಗಳನ್ನು ಹಿಂದಿಕ್ಕಿ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸಿದೆ.

ಹ್ಯುಂಡೈ ವೆನ್ಯೂ ಪಾಲಾದ 'ಇಂಡಿಯನ್ ಕಾರ್ ಆಫ್ ದಿ ಇಯರ್' ಪ್ರತಿಷ್ಠಿತ ಪ್ರಶಸ್ತಿ

ಮಾರುಕಟ್ಟೆಯಲ್ಲಿನ ಬೇಡಿಕೆ, ಗ್ರಾಹಕರ ಸೇವಾ ಗುಣಮಟ್ಟ, ಎಂಜಿನ್ ಕಾರ್ಯಕ್ಷಮತೆ ಮತ್ತು ಬೆಲೆ ಆಧಾರದ ಮೇಲೆ ನೀಡಲಾಗುವ ಗುಣಮಟ್ಟದ ಸೌಲಭ್ಯಗಳ ಮೇಲೆ ಹ್ಯುಂಡೈ ವೆನ್ಯೂ ಕಾರನ್ನು ಇಂಡಿಯನ್ ಕಾರ್ ಆಫ್ ದಿ ಇಯರ್' ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಹ್ಯುಂಡೈ ವೆನ್ಯೂ ಪಾಲಾದ 'ಇಂಡಿಯನ್ ಕಾರ್ ಆಫ್ ದಿ ಇಯರ್' ಪ್ರತಿಷ್ಠಿತ ಪ್ರಶಸ್ತಿ

ಆಟೋ ಉದ್ಯಮದ 16 ವಿವಿಧ ವಿಭಾಗಗಳ ತಂತ್ರಜ್ಞರನ್ನು ಒಳಗೊಂಡ ಸಮಿತಿಯು ಇಂಡಿಯನ್ ಕಾರ್ ಆಫ್ ದಿ ಇಯರ್ ಪ್ರಶಸ್ತಿಯನ್ನು ಅಂತಿಮಗೊಳಿಸಿದ್ದು, ಕಳೆದ ವರ್ಷ ಮಾರುತಿ ಸುಜುಕಿ ನ್ಯೂ ಜನರೇಷನ್ ಸ್ವಿಫ್ಟ್ ಕಾರು ಈ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತ್ತು.

ಹ್ಯುಂಡೈ ವೆನ್ಯೂ ಪಾಲಾದ 'ಇಂಡಿಯನ್ ಕಾರ್ ಆಫ್ ದಿ ಇಯರ್' ಪ್ರತಿಷ್ಠಿತ ಪ್ರಶಸ್ತಿ

ಇನ್ನು ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಸದ್ಯ ಮಾರುತಿ ಸುಜುಕಿ ವಿಟಾರಾ ಬ್ರೆಝಾ ಕಾರಿಗೆ ಭರ್ಜರಿ ಪೈಪೋಟಿ ನೀಡುತ್ತಿರುವ ಹ್ಯುಂಡೈ ವೆನ್ಯೂ ಕಾರು ಬಿಡುಗಡೆಯಾದ ಕೇವಲ ದಿನಗಳಲ್ಲಿ ನೀರಿಕ್ಷೆಗೂ ಮೀರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಇದುವರೆಗೆ ಬರೋಬ್ಬರಿ 1.15 ಲಕ್ಷ ಬುಕ್ಕಿಂಗ್ ಪಡೆದುಕೊಳ್ಳುವ ಮೂಲಕ ಬಹುಬೇಡಿಕೆಯ ಕಾರು ಮಾದರಿಯಾಗಿ ಹೊರಹೊಮ್ಮಿದೆ. 2019ರ ಮೇ ನಲ್ಲಿ ಮೊದಲ ಬಾರಿಗೆ ಬಿಡುಗಡೆಗೊಂಡ ನಂತರ ಪ್ರತಿ ತಿಂಗಳು ಸರಾಸರಿಯಾಗಿ 10 ಸಾವಿರ ಯುನಿಟ್ ಮಾರಾಟವಾಗುತ್ತಿರುವ ವೆನ್ಯೂ ಕಾರು ಸದ್ಯದಲ್ಲೇ ಬಿಎಸ್-6 ಎಂಜಿನ್‌ನೊಂದಿಗೆ ಮತ್ತಷ್ಟು ಬೇಡಿಕೆ ಗಿಟ್ಟಿಸಿಕೊಳ್ಳುವ ನೀರಿಕ್ಷೆಯಲ್ಲಿದೆ.

ಹ್ಯುಂಡೈ ವೆನ್ಯೂ ಪಾಲಾದ 'ಇಂಡಿಯನ್ ಕಾರ್ ಆಫ್ ದಿ ಇಯರ್' ಪ್ರತಿಷ್ಠಿತ ಪ್ರಶಸ್ತಿ

ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಒಟ್ಟು 4 ವೆರಿಯೆಂಟ್‌ಗಳಲ್ಲಿ ಲಭ್ಯವಿರುವ ಹೊಸ ವೆನ್ಯೂ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.6,50,000 ದಿಂದ ಟಾಪ್ ಎಂಡ್ ಆವೃತ್ತಿಯು ರೂ.11,10,500 ಬೆಲೆ ಪಡೆದುಕೊಂಡಿದೆ.

ಹ್ಯುಂಡೈ ವೆನ್ಯೂ ಪಾಲಾದ 'ಇಂಡಿಯನ್ ಕಾರ್ ಆಫ್ ದಿ ಇಯರ್' ಪ್ರತಿಷ್ಠಿತ ಪ್ರಶಸ್ತಿ

ವೆನ್ಯೂ ಕಾರು ಎರಡು ಪೆಟ್ರೋಲ್ ಎಂಜಿನ್ ಆಯ್ಕೆ ಪಡೆದುಕೊಂಡಿದ್ದರೆ ಡಿಸೇಲ್ ಎಂಜಿನ್‌ನಲ್ಲಿ ಒಂದು ಆಯ್ಕೆ ಹೊಂದಿದ್ದು, ಇ, ಎಸ್, ಎಸ್ಎಕ್ಸ್ ಮತ್ತು ಎಸ್ಎಕ್ಸ್(0) ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದೆ. ಇದರಲ್ಲಿ 1.2-ಲೀಟರ್ ಕಪ್ಪಾ ಪೆಟ್ರೋಲ್ ಎಂಜಿನ್ ಮತ್ತು 1.4-ಡೀಸೆಲ್ ಎಂಜಿನ್‌ಗಳು ಸಾಮಾನ್ಯ ಎಂಜಿನ್ ಆಯ್ಕೆಯಾಗಿದ್ದರೆ, 1.0-ಲೀಟರ್ ಪೆಟ್ರೋಲ್ ಆವೃತ್ತಿಯು ಅತಿ ಹೆಚ್ಚು ಬಿಎಚ್‌ಪಿ ಉತ್ಪಾದನೆಯೊಂದಿಗೆ ಪರ್ಫಾಮೆನ್ಸ್ ಪ್ರಿಯರ ನೆಚ್ಚಿನ ಆಯ್ಕೆಯಾಗಿದೆ.

MOST READ: ಫಾಸ್ಟ್‌ಟ್ಯಾಗ್ ಸೌಲಭ್ಯದಿಂದಾಗಿ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರಕ್ಕೆ ಭರ್ಜರಿ ಆದಾಯ

ಹ್ಯುಂಡೈ ವೆನ್ಯೂ ಪಾಲಾದ 'ಇಂಡಿಯನ್ ಕಾರ್ ಆಫ್ ದಿ ಇಯರ್' ಪ್ರತಿಷ್ಠಿತ ಪ್ರಶಸ್ತಿ

ವೆನ್ಯೂ ತಾಂತ್ರಿಕ ವೈಶಿಷ್ಟ್ಯತೆ ಹ್ಯುಂಡೈ ವೆನ್ಯೂ ಕಾರಿನಲ್ಲಿ 33 ಫೀಚರ್ಸ್‌ಗಳನ್ನು ಹೊಂದಿರುವ ಬ್ಯೂ ಲಿಂಕ್ ಕನೆಕ್ಟಿವಿಟಿ ಸೌಲಭ್ಯವನ್ನು ಜೋಡಿಸಲಾಗಿದ್ದು, ಪ್ಯಾಕೇಜ್ ಮಾದರಿಯನ್ನು ಹೊಂದಿರುವ ಈ ಸೌಲಭ್ಯವು ಹೊಸ ಕಾರಿಗೆ ಗರಿಷ್ಠ ಸುರಕ್ಷತೆಯ ಜೊತೆಗೆ ಕಾರು ಪ್ರಯಾಣವನ್ನು ಸುಖವಾಗಿಸಲು ಹಲವು ಮಾಹಿತಿಗಳನ್ನು ನೀಡಲಿದೆ.

MOST READ: ಕಾರು ಖರೀದಿದಾರರ ನೆಚ್ಚಿನ ಬಣ್ಣ ಯಾವುದು ಗೊತ್ತಾ?

ಹ್ಯುಂಡೈ ವೆನ್ಯೂ ಪಾಲಾದ 'ಇಂಡಿಯನ್ ಕಾರ್ ಆಫ್ ದಿ ಇಯರ್' ಪ್ರತಿಷ್ಠಿತ ಪ್ರಶಸ್ತಿ

ಬ್ಲೂ ಲಿಂಕ್ ಪ್ಯಾಕೇಜ್‌ನಲ್ಲಿ ಜಿಯೋ ಫೆನ್ಸ್, ಎರ್ಮಜೆನ್ಸಿ ಅಸಿಸ್ಟ್, ಕಾರ್ ಟ್ರಾಕಿಂಗ್ ಸೇರಿದಂತೆ ಹಲವಾರು ಸುರಕ್ಷಾ ಫೀಚರ್ಸ್‌ಗಳನ್ನು ನೀಡಲಾಗಿದ್ದು, ಸಿಗ್ನಿಚೆಕ್ ಕಾಸ್‌ಕ್ಲ್ಯಾಡಿಂಗ್ ಹೆಕ್ಸಾಗೊನಲ್ ಫ್ರಂಟ್ ಗ್ರಿಲ್, ಡ್ಯುಯಲ್ ಹೆಡ್‌ಲ್ಯಾಂಪ್ ಕ್ಲಸ್ಟರ್, ಸಣ್ಣ ಎಳೆಯಂತಿರುವ ಲೈಟ್ ಸ್ಟ್ರಿಪ್, ಹೆಡ್‌ಲ್ಯಾಂಪ್ ಕ್ಲಸ್ಟರ್ ಕಳೆಭಾಗದಲ್ಲಿ ಹೊಂದಿಕೊಂಡಂತಿರುವ ಎಲ್ಇಡಿ ಡಿಆರ್‌ಎಲ್ಎಸ್ ಮತ್ತು 16-ಇಂಚಿನ ಟೈರ್ ಸೌಲಭ್ಯಗಳು ಎಸ್‌ಯುವಿ ಪ್ರಿಯರನ್ನು ಸೆಳೆಯುತ್ತಿವೆ.

MOST READ: ವಾಹನ ಡೀಲರ್‍‍ಗಳ ಟ್ರೇಡ್ ಸರ್ಟಿಫಿಕೇಟ್ ಅಮಾನತುಗೊಳಿಸಿದ ಸಾರಿಗೆ ಇಲಾಖೆ

ಹ್ಯುಂಡೈ ವೆನ್ಯೂ ಪಾಲಾದ 'ಇಂಡಿಯನ್ ಕಾರ್ ಆಫ್ ದಿ ಇಯರ್' ಪ್ರತಿಷ್ಠಿತ ಪ್ರಶಸ್ತಿ

ಇದಲ್ಲದೇ ಹೊಸ ಕಾರಿನ ಒಳಾಂಗಣ ವಿನ್ಯಾಸದ ಬಗೆಗೆ ಹೇಳುವುದಾದರೇ, 5-ಸೀಟರ್ ಸೌಲಭ್ಯ ಹೊಂದಿರುವ ವೆನ್ಯೂ ಕಾರು ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ಪಡೆದಿದ್ದು, ಬ್ಲ್ಯಾಕ್ ಡ್ಯಾಶ್‌ಬೋರ್ಡ್ ಮತ್ತು ಕ್ಯಾಬಿನ್, 8-ಇಂಚಿನ ಇನ್ಪೋಟೈನ್‌ಮೆಂಟ್ ಡಿಸ್ಪೈ, ಸೆಂಟರ್ ಕನ್ಸೊಲ್, ಡ್ಯಾಶ್‌ಬೋರ್ಡ್ ಸುತ್ತಲೂ ಸಿಲ್ವರ್ ಎಕ್ಸೆಂಟ್, ಉತ್ತಮ ದರ್ಜೆಯ ಲೆದರ್ ಸೀಟುಗಳು, ವೈರ್‌ಲೆಸ್ ಚಾರ್ಚಿಂಗ್ ಪಾಯಿಂಟ್ ಮತ್ತು ಎಲೆಕ್ಟ್ರಿಕ್ ಸನ್‌ರೂಫ್ ಸೌಲಭ್ಯವಿದೆ.

ಹ್ಯುಂಡೈ ವೆನ್ಯೂ ಪಾಲಾದ 'ಇಂಡಿಯನ್ ಕಾರ್ ಆಫ್ ದಿ ಇಯರ್' ಪ್ರತಿಷ್ಠಿತ ಪ್ರಶಸ್ತಿ

ಪ್ರೀಮಿಯಂ ಸೌಲಭ್ಯಗಳ ಜೊತೆಗೆ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಕ್ರೂಸ್ ಕಂಟ್ರೋಲ್, ಫ್ರಂಟ್ ವೀಲ್ಹ್ ಡಿಸ್ಕ್ ಬ್ರೇಕ್, ಆರು ಏರ್‌ಬ್ಯಾಗ್, ಹಿಲ್ ಅಸಿಸ್ಟ್ ಕಂಟ್ರೋಲ್, ಬ್ರೇಕ್ ಅಸಿಸ್ಟ್ ಕಂಟ್ರೋಲ್, ಎಬಿಎಸ್, ಇಬಿಡಿ, ಇಎಸ್‌ಸಿ, ವಿಎಸ್ಎಂ, ಸ್ಪೀಡ್ ಸೆನ್ಸಾರಿಂಗ್ ಆಟೋ ಡೋರ್ ಲಾಕ್, ISOFIX ಸೀಟ್, ಹೊಂದಿರುವ ವೆನ್ಯೂ ಕಾರು ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳಲ್ಲೇ ವಿಶೇಷ ಎನ್ನಿಸಲಿದೆ.

More from DriveSpark

Article Published On: Thursday, December 19, 2019, 13:02 [IST]
English summary
Hyundai Venue Wins The Prestigious Indian Car Of The Year Award. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+