ಬಿಡುಗಡೆಗೆ ಸಜ್ಜಾದ ಫೇಸ್‌ಲಿಫ್ಟ್ ಹ್ಯುಂಡೈ ವೆರ್ನಾ ಸೆಡಾನ್

ಹ್ಯುಂಡೈ ಇಂಡಿಯಾ ಸದ್ಯ ಫೇಸ್‌ಲಿಫ್ಟ್ ಆವೃತ್ತಿಗಳನ್ನು ಬಿಡುಗಡೆಗೊಳಿಸಲು ಮಹತ್ವದ ಯೋಜನೆ ರೂಪಿಸಿದ್ದು, 2020ರ ಆರಂಭದಲ್ಲಿ ವೆರ್ನಾ ಸೆಡಾನ್, ಕ್ರೆಟಾ ಮತ್ತು ಐ20 ಫೇಸ್‌ಲಿಫ್ಟ್ ಆವೃತ್ತಿಗಳನ್ನು ಭಾರೀ ಬದಲಾವಣೆಗಳೊಂದಿಗೆ ಬಿಡುಗಡೆ ಮಾಡಲಿದೆ. ಹೀಗಾಗಿ ಹೊಸ ಕಾರುಗಳ ಎಂಜಿನ್ ಕಾರ್ಯಕ್ಷಮತೆ ಕುರಿತಾಗಿ ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ನಡೆಸಿದ್ದು, ಮೊದಲ ಬಾರಿಗೆ ಹೊಚ್ಚ ಹೊಸ ವೆರ್ನಾ ಸಾರ್ವಜನಿಕವಾಗಿ ಕಾಣಿಸಿಕೊಂಡಿದೆ.

ಬಿಡುಗಡೆಗೆ ಸಜ್ಜಾದ ಫೇಸ್‌ಲಿಫ್ಟ್ ಹ್ಯುಂಡೈ ವೆರ್ನಾ ಸೆಡಾನ್

ಹ್ಯುಂಡೈ ಸಂಸ್ಥೆಯು ಭಾರತ ಸೇರಿದಂತೆ ಯುರೋಪ್ ಮತ್ತು ದಕ್ಷಿಣ ಅಮೆರಿಕಾ ರಾಷ್ಟ್ರಗಳಲ್ಲಿ ವೆರ್ನಾ ಕಾರು ಮಾರಾಟ ಪ್ರಕ್ರಿಯೆ ನಡೆಸುತ್ತಿದ್ದು, ನೆಕ್ಸ್ಟ್ ಜನರೇಷನ್ ಆವೃತ್ತಿಯನ್ನು ಬಿಡುಗಡೆ ಮಾಡಲು ಸಿದ್ದತೆ ನಡೆಸುತ್ತಿದೆ. ರೋಡ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡಿರುವ ಹೊಸ ವೆರ್ನಾ ಮಾದರಿಯು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಸಾಮಾನ್ಯ ವೆರ್ನಾ ಕಾರಿಗಿಂತಲೂ ವಿಭಿನ್ನ ವಿನ್ಯಾಸವನ್ನು ಪಡೆದುಕೊಂಡಿದ್ದು, ಚೀನಾದಲ್ಲಿ ಹೊಸ ಕಾರು ರೋಡ್ ಟೆಸ್ಟಿಂಗ್ ನಡೆಸುತ್ತಿರುವ ಮಾಹಿತಿ ಲಭ್ಯವಾಗಿದೆ.

ಬಿಡುಗಡೆಗೆ ಸಜ್ಜಾದ ಫೇಸ್‌ಲಿಫ್ಟ್ ಹ್ಯುಂಡೈ ವೆರ್ನಾ ಸೆಡಾನ್

ರೋಡ್ ಟೆಸ್ಟಿಂಗ್‌ನಲ್ಲಿ ಕಂಡುಬಂದ ವೆರ್ನಾ ಮಾದರಿಯಲ್ಲಿ ಮುಂಭಾಗದ ಗ್ರಿಲ್ ಸ್ಲಾಟ್ ಸಾಕಷ್ಟು ಬದಲಾವಣೆ ಹೊಂದಿದ್ದು, ವಿದೇಶಿ ಮಾರುಕಟ್ಟೆಗಳಲ್ಲಿ ಸದ್ಯ ಮಾರಾಟದಲ್ಲಿರುವ ಸೊನಾಟಾ ಸೆಡಾನ್ ಮಾದರಿಯ ಹೋಲಿಕೆಯನ್ನು ಪಡೆದುಕೊಂಡಿರುವುದು ಚಿತ್ರದಲ್ಲಿ ಸ್ಪಷ್ಟವಾಗುತ್ತದೆ.

ಬಿಡುಗಡೆಗೆ ಸಜ್ಜಾದ ಫೇಸ್‌ಲಿಫ್ಟ್ ಹ್ಯುಂಡೈ ವೆರ್ನಾ ಸೆಡಾನ್

ಹೊಸ ಮಾದರಿಯ ಹೆಡ್‌ಲ್ಯಾಂಪ್ ಸೌಲಭ್ಯವು ಕಾರಿನ ನೋಟಕ್ಕೆ ಮತ್ತಷ್ಟು ಬಲಿಷ್ಠತೆಯನ್ನು ತುಂಬಲಿದ್ದು, ಮೂರು ಲೈಟ್‌ಗಳೂ ಪ್ರತ್ಯೇಕ ಹೋಸ್ ವಿನ್ಯಾಸವನ್ನು ಪಡೆದುಕೊಂಡಿರುವ ಪ್ರೀಮಿಯಂಗೆ ಮತ್ತಷ್ಟು ಪೂರಕವಾಗಿದೆ. ಹಾಗೆಯೇ ಎಲ್ಇಡಿ ಹೆಡ್‌ಲ್ಯಾಂಪ್ ಬೀಮ್, ಪ್ರೋಜೆಕ್ಟರ್ ಹೆಡ್‌ಲ್ಯಾಂಪ್ ಮತ್ತು ಸನ್‌ರೂಫ್ ಇದರಲ್ಲಿದೆ.

ಬಿಡುಗಡೆಗೆ ಸಜ್ಜಾದ ಫೇಸ್‌ಲಿಫ್ಟ್ ಹ್ಯುಂಡೈ ವೆರ್ನಾ ಸೆಡಾನ್

ಇನ್ನು ಹೊಸ ವೆರ್ನಾ ಕಾರಿನ ಹಿಂಭಾಗದ ತಾಂತ್ರಿಕ ವಿನ್ಯಾಸದಲ್ಲೂ ಮಹತ್ವದ ಬದಲಾವಣೆಗಳನ್ನು ತರಲಾಗಿದ್ದು, ನವೀಕೃತ ಬಂಪರ್ ವಿನ್ಯಾಸ, ಹೊಸ ಮಾದರಿಯ ಟೈಲ್ ಲ್ಯಾಂಪ್, ಬೂಟ್ ಲಿಡ್ ಮತ್ತು ಸ್ಪೋರ್ಟಿ ಮಾದರಿಯ ಕ್ರೊಮ್ ನೀಡಿರುವುದು ಕೂಡಾ ಮಹತ್ವದ ಬದಲಾವಣೆ ಕಾರಣವಾಗಿದೆ. ಆದ್ರೆ ಕಾರಿನ ಹೊರವಿನ್ಯಾಸದ ಹೊರತಾಗಿ ಇಂಟಿರಿಯರ್ ಮಾಹಿತಿ ಲಭ್ಯವಾಗಿಲ್ಲವಾದರೂ ಪ್ರಸ್ತುತ ಮಾದರಿಗಿಂತ ಅತ್ಯುತ್ತಮ ಫೀರ್ಚಸ್ ಹೊಂದಿರುವುದು ಬಹುತೇಕ ಖಚಿತವಾಗಿದೆ.

ಬಿಡುಗಡೆಗೆ ಸಜ್ಜಾದ ಫೇಸ್‌ಲಿಫ್ಟ್ ಹ್ಯುಂಡೈ ವೆರ್ನಾ ಸೆಡಾನ್

ಹೋಂಡಾ ಸಿಟಿ ಮತ್ತು ಮಾರುತಿ ಸುಜುಕಿ ಸಿಯಾಜ್‌ಗೆ ಟಕ್ಕರ್ ನೀಡುತ್ತಿರುವ ಟೊಯೊಟಾ ಯಾರಿಸ್ ಖರೀದಿಗೆ ಈಗಲೇ ಟೆಸ್ಟ್ ಡ್ರೈವ್ ಮಾಡಿ..!

ಸದ್ಯ ಮಾರುಕಟ್ಟೆಯಲ್ಲಿ ಹ್ಯುಂಡೈ ವೆರ್ನಾ ಮಾದರಿಯು 1.6-ಲೀಟರ್ ಡೀಸೆಲ್ ಮತ್ತು 1.6-ಲೀಟರ್ ಪೆಟ್ರೋಲ್ ಜೊತೆಗೆ 1.4-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದ್ದು, ಫೇಸ್‌ಲಿಫ್ಟ್ ಆವೃತ್ತಿಯಲ್ಲಿ ಬಿಎಸ್-6 ನಿಯಮಾವಳಿಗೆ ಅನುಗುಣವಾಗಿ ಕೆಲವು ಮಹತ್ವದ ಬದಲಾವಣೆಗಳನ್ನು ತರಲಾಗುತ್ತಿದೆ.

ಬಿಡುಗಡೆಗೆ ಸಜ್ಜಾದ ಫೇಸ್‌ಲಿಫ್ಟ್ ಹ್ಯುಂಡೈ ವೆರ್ನಾ ಸೆಡಾನ್

ಮಾಲಿನ್ಯ ಉತ್ಪಾದನೆಯನ್ನು ತಗ್ಗಿಸುವ ನಿಟ್ಟಿನಲ್ಲಿ ಸುಧಾರಿತ ತಂತ್ರಜ್ಞಾನ ಪ್ರೇರಿತ 1.5-ಲೀಟರ್ ಡೀಸೆಲ್ ಮತ್ತು 1.5-ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಮಾತ್ರವೇ ಫೇಸ್‌ಲಿಫ್ಟ್ ವೆರ್ನಾದಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ.

ಬಿಡುಗಡೆಗೆ ಸಜ್ಜಾದ ಫೇಸ್‌ಲಿಫ್ಟ್ ಹ್ಯುಂಡೈ ವೆರ್ನಾ ಸೆಡಾನ್

ಹೀಗಾಗಿ ಪ್ರಸ್ತುತ ಮಾರುಕಟ್ಟೆಯಲ್ಲಿರುವ ಡೀಸೆಲ್ ಮತ್ತು ಪೆಟ್ರೋಲ್ ಎಂಜಿನ್‌ ಆಯ್ಕೆಯನ್ನು ತೆಗೆದುಹಾಕಲಿರುವ ಹ್ಯುಂಡೈ ಸಂಸ್ಥೆಯು 1.5-ಲೀಟರ್ ಎಂಜಿನ್ ಮಾದರಿಯನ್ನು ಬಿಡುಗಡೆಗಾಗಿ ನಿರ್ಧರಿಸಿರುವ ಕ್ರೆಟಾ ಫೇಸ್‌ಲಿಫ್ಟ್ ಮಾದರಿಯಲ್ಲೂ ಪರಿಚಯಿಸುವ ನೀರಿಕ್ಷೆಗಳಿವೆ.

ಬಿಡುಗಡೆಗೆ ಸಜ್ಜಾದ ಫೇಸ್‌ಲಿಫ್ಟ್ ಹ್ಯುಂಡೈ ವೆರ್ನಾ ಸೆಡಾನ್

ಇನ್ನು 2020ರ ಏಪ್ರಿಲ್ 1ರಿಂದ ದೇಶಾದ್ಯಂತ ಬಿಎಸ್-6 ನಿಯಮವು ಜಾರಿಗೆ ಬರಲಿದ್ದು, ಬಿಎಸ್-4 ವಾಹನಗಳ ಉತ್ಪಾದನೆ ಮತ್ತು ಮಾರಾಟವು ಸಂಪೂರ್ಣ ಬಂದ್ ಆಗಲಿದೆ. ಹೀಗಾಗಿ ಬಹುತೇಕ ವಾಹನ ಉತ್ಪಾದನಾ ಸಂಸ್ಥೆಗಳು ಕೇಂದ್ರ ಸರ್ಕಾರದ ನಿರ್ದೇಶನದಂತೆ ಬಿಎಸ್-6 ನಿಯಮವನ್ನು ಜಾರಿಗೆ ತರುತ್ತಿದ್ದು, ನಿಯಮ ಮೀರಿ ಮಾಲಿನ್ಯ ಉತ್ಪತ್ತಿ ಮಾಡುತ್ತಿರುವ ಡೀಸೆಲ್ ಮತ್ತು ಪೆಟ್ರೋಲ್ ಎಂಜಿನ್ ಮಹತ್ವದ ಬದಲಾವಣೆ ತರಲಾಗುತ್ತಿದೆ.

Source: Autohome

Most Read Articles

Kannada
English summary
The first images of the Hyundai Verna facelift have leaked online. The car was seen in China.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X