Just In
- 9 hrs ago ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- 11 hrs ago Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- 12 hrs ago ಈ ಬೈಕ್ಗಳನ್ನು ಗ್ರಾಹಕರು ಮುಗಿಬಿದ್ದು ಖರೀದಿಸುತ್ತಿದ್ದಾಗಲೇ ಬೆಲೆ ಏರಿಕೆ ಮಾಡಿ ಶಾಕ್ ಕೊಟ್ಟ ಟ್ರಯಂಫ್
- 13 hrs ago ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
Don't Miss!
- Movies 'KGF-2' ಚಿತ್ರದಿಂದ ಸಿಕ್ಕಿದ್ದು 200 ಕೋಟಿ ರೂ.; 'ಟಾಕ್ಸಿಕ್', 'ರಾಮಾಯಣ'ಕ್ಕೆ ಯಶ್ 50-50 ಡೀಲ್!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಿಂಗಳಿಗೆ 9 ಸಾವಿರ ವೆನ್ಯೂ ಕಾರುಗಳ ಉತ್ಪಾದನೆಗೆ ಹ್ಯುಂಡೈ ಸಿದ್ದತೆ
ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಸಂಚಲನ ಸೃಷ್ಠಿಸಲು ಸಜ್ಜಾಗಿರುವ ಹ್ಯುಂಡೈ ವೆನ್ಯೂ ಕಂಪ್ಯಾಕ್ಟ್ ಎಸ್ಯುವಿ ಕಾರು ನ್ಯೂಯಾರ್ಕ್ ಆಟೋ ಮೇಳದಲ್ಲಿ ಪ್ರದರ್ಶನಗೊಂಡಿದ್ದು, ಮುಂದಿನ ತಿಂಗಳು ಮೇ 17ರಂದು ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ಕಾರು ಹ್ಯುಂಡೈ ಪ್ರಿಯರ ಆಕರ್ಷಣೆಗೆ ಕಾರಣವಾಗಿದೆ.
ಸದ್ಯ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ನಂತರ ಕಾರು ಮಾರಾಟದಲ್ಲಿ 2ನೇ ಸ್ಥಾನದಲ್ಲಿರುವ ಹ್ಯುಂಡೈ ಸಂಸ್ಥೆಯು ಟಾಪ್ 10ರ ಪಟ್ಟಿಯಲ್ಲಿ ಒಟ್ಟು ಮೂರು ಕಾರುಗಳನ್ನು ಮಾರಾಟ ಮಾಡುತ್ತಿದೆ. ಇದೇ ಟಾಪ್ 10ರ ಪಟ್ಟಿಯಲ್ಲಿ ಒಟ್ಟು ಆರು ಕಾರುಗಳನ್ನು ತನ್ನದಾಗಿಸಿಕೊಂಡಿರುವ ಮಾರುತಿ ಸುಜುಕಿಗೆ ಹೊಸದಾಗಿ ಬರುತ್ತಿರುವ ವೆನ್ಯೂ ಭಾರೀ ಪೈಪೋಟಿ ನೀಡುವ ಸುಳಿವು ನೀಡಿದೆ.
ಪ್ರತಿತಿಂಗಳು ಕನಿಷ್ಠ 10 ಸಾವಿರ ವೆನ್ಯೂ ಕಾರುಗಳನ್ನು ಮಾರಾಟ ಮಾಡುವ ನೀರಿಕ್ಷೆಯಲ್ಲಿರುವ ಹ್ಯುಂಡೈ ಸಂಸ್ಥೆಯು ಗ್ರಾಹಕರ ಬೇಡಿಕೆಗೆ ತಕ್ಕಂತೆ ಕಾರುಗಳ ಉತ್ಪಾದನೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಹೊಸ ಪ್ಲ್ಯಾಟ್ಫಾರ್ಮ್ ಸಿದ್ದಗೊಳಿಸಿದ್ದು, ಗ್ರಾಹಕರ ಕಾಯುವಿಕೆ ಅವಧಿಯನ್ನು ತಗ್ಗಿಸಲು ಬೃಹತ್ ಯೋಜನೆ ರೂಪಿಸಿದೆ.
ಹೀಗಾಗಿ ಕಂಪ್ಯಾಕ್ಟ್ ಎಸ್ಯುವಿ ಮಾರಾಟ ಮುಂಚೂಣಿ ಸಾಧಿಸುತ್ತಿರುವ ಮಾರುತಿ ಸುಜುಕಿ ಬ್ರೆಝಾ, ಮಹೀಂದ್ರಾ ಎಕ್ಸ್ಯುವಿ 300, ಟಾಟಾ ನೆಕ್ಸಾನ್, ಫೋರ್ಡ್ ಇಕೋ ಸ್ಪೋರ್ಟ್ ಕಾರುಗಳಿಗೆ ತೀವ್ರ ಪೈಪೋಟಿ ನೀಡಲಿರುವ ವೆನ್ಯೂ ಕಾರು ಸದ್ಯ ಮಾರುಕಟ್ಟೆಯಲ್ಲಿರುವ ಕ್ರೆಟಾ ಕಾರಿನಂತೆಯೇ ಹೊಸ ಸಂಚಲನಕ್ಕೆ ಕಾರಣವಾಗಿದೆ.
ಹಾಗೆಯೇ ಹೊಸ ವೆನ್ಯೂ ಕಾರಿನಲ್ಲಿ ಅಳವಡಿಸಲಾಗಿರುವ ಬ್ಲ್ಯೂ ಲಿಂಕ್ ತಂತ್ರಜ್ಞಾನವು ಕಾರು ಮಾರಾಟದಲ್ಲಿ ಹ್ಯುಂಡೈಗೆ ವರದಾನವಾಗಲಿದ್ದು, ಕಾರಿನ ಸುರಕ್ಷತೆಗೆ ಹೆಚ್ಚಿನ ಭದ್ರತೆ ಸಿಗಲಿದೆ. ಹಾಗೆಯೇ ಜಿಯೋ ಫೆನ್ಸ್ ಸೌಲಭ್ಯವು ನಿಮ್ಮ ಕಾರಿಗೆ ಮತ್ತಷ್ಟು ಭದ್ರತೆ ನೀಡಲಿದ್ದು, ನೀವು ಒಂದು ನೀರ್ದಿಷ್ಟ ಪ್ರದೇಶವನ್ನು ಬ್ಯೂ ಲಿಂಕ್ ಮೂಲಕ ಗುರುತು ಮಾಡಿಟ್ಟಲ್ಲಿ ಆ ಪ್ರದೇಶವನ್ನು ದಾಟಿ ನಿಮ್ಮ ಕಾರು ಹೊರಹೊದಲ್ಲಿ ನಿಮ್ಮನ್ನು ತಕ್ಷಣವೇ ಎಚ್ಚರಿಸುವಂತಹ ತಂತ್ರಜ್ಞಾನ ಇದಾಗಿದೆ.
ಜೊತೆಗೆ ರಿಯರ್ ಟೈಮ್ ವೆಹಿಕಲ್ ಟ್ರ್ಯಾಕಿಂಗ್ ಮೂಲಕ ಕಳ್ಳತನವಾದ ಕಾರನ್ನು ಕೆಲವೇ ನಿಮಿಷಗಳಲ್ಲಿ ಪತ್ತೆ ಮಾಡಬಹುದಾಗಿದೆ. ಹಾಗೆಯೇ ರಿಮೋಟ್ ಮೂಲಕವೇ ಎಂಜಿನ್ ಸ್ಟಾರ್ಟ್/ಸ್ಟಾಪ್, ಲಾಕ್/ಅನ್ಲಾಕ್, ಹಾರ್ನ್ ಮತ್ತು ಲೈಟ್ ಕಂಟ್ರೋಲ್, ಫೈಂಡ್ ಮೈ ಕಾರ್ ಲೋಕೇಷನ್, ಶೇರ್ ಮೈ ಕಾರ್ ಮತ್ತು ರಿಯರ್ ಟೈಮ್ ಮೂಲಕ ಟ್ರಾಫಿಕ್ ಇನ್ಫಾರ್ಮೆಷನ್ ಪಡೆದುಕೊಳ್ಳಬಹುದಾದ ಸೌಲಭ್ಯ ಈ ಕಾರಿನಲ್ಲಿದೆ.
ವೆನ್ಯೂ ಕಾರುಗಳು ಒಟ್ಟು ಮೂರು ಎಂಜಿನ್ ಆಯ್ಕೆಯೊಂದಿಗೆ ಖರೀದಿಗೆ ಲಭ್ಯವಾಗುತ್ತಿದ್ದು, ಪೆಟ್ರೋಲ್ ಎಂಜಿನ್ನಲ್ಲಿ 1.0 ಲೀಟರ್ ತ್ರಿ ಸಿಲಿಂಡರ್ ಎಂಜಿನ್ ಮತ್ತು 1.4 ಲೀಟರ್ ಎಂಜಿನ್ ಹೊಂದಿರಲಿದೆ. ಹಾಗೆಯೇ 1.4-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಸಹ ಹೊಂದಿರಲಿದೆ.
MOST READ: ಕೊಹ್ಲಿಗೆ ಟೋಪಿ ಹಾಕಿದ ಕಾಲ್ ಸೆಂಟರ್ ಕಿಲಾಡಿ- ಠಾಣೆಯಲ್ಲೇ ಅನಾಥವಾಗಿ ಬಿದ್ದ ರೂ. 3 ಕೋಟಿ ಕಾರು..!
ಇನ್ನು ಹೊಸ ಕಾರಿನಲ್ಲಿ ಎಲ್ಇಡಿ ಹೆಡ್ಲ್ಯಾಂಪ್, ಎಲ್ಇಡಿ ಟೈಲ್ ಲೈಟ್, 6 ಸ್ಪೀಡ್ ಡ್ಯುಯಲ್ ಕ್ಲಚ್ ಗೇರ್ಬಾಕ್ಸ್, ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಎಬಿಎಸ್, 4 ಏರ್ಬ್ಯಾಗ್, ಸನ್ರೂಫ್, ಡ್ಯುಯಲ್ ಟೋನ್ ಬಾಡಿ ಕಲರ್, ಡ್ಯುಯಲ್ ಟೋನ್ ಇಂಟಿರಿಯರ್, ರಿಯರ್ ವ್ಯೂ ಕ್ಯಾಮೆರಾ, ಪಾರ್ಕಿಂಗ್ ಸೆನ್ಸಾರ್, ಸ್ಮಾರ್ಟ್ ಕೆನೆಕ್ಟಿವಿಟಿ ಮತ್ತು ಲಾರ್ಜ್ ಟಚ್ಸ್ಕ್ರೀನ್ ಡಿಸ್ಪ್ಲೇಯೊಂದಿಗೆ ಹಲವು ಮಾದರಿಯ ಪ್ರೀಮಿಯಂ ಸೌಲಭ್ಯಗಳನ್ನು ಪಡೆದುಕೊಂಡಿರಲಿದೆ.
ಕಾರಿನ ಬೆಲೆಗಳು(ಅಂದಾಜು)
ಹೊಸ ವೆನ್ಯೂ ಕಾರು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಒಟ್ಟು ಆರು ವೆರಿಯೆಂಟ್ಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ಹೊಸ ಕಾರಿನ ಬೆಲೆಯು ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ ರೂ. 7.40 ಲಕ್ಷದಿಂದ ಟಾಪ್ ಎಂಡ್ ಮಾದರಿಗೆ ರೂ.11 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.