2020ರಲ್ಲಿ ಬಿಡುಗಡೆಯಾಗಲಿರುವ ಪ್ರಮುಖ ಕಾರುಗಳಲ್ಲಿ ಟಾಟಾ ಕ್ಯಾಸಿನಿ ಕೂಡಾ ಒಂದು..

ಜಿನೆವಾ ಆಟೋ ಮೇಳದಲ್ಲಿ ಬಝರ್ಡ್ ಹೆಸರಿನಲ್ಲಿ ಪ್ರದರ್ಶನಗೊಂಡಿದ್ದ ಟಾಟಾ ಬಹುನೀರಿಕ್ಷಿತ 7 ಸೀಟರ್ ಎಸ್‌ಯುವಿ ಮಾದರಿಯು ಭಾರತದಲ್ಲಿ ಕ್ಯಾಸಿನಿ ಹೆಸರಿನೊಂದಿಗೆ ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುತ್ತಿದ್ದು, 2020ರ ಫೆಬ್ರುವರಿಯಲ್ಲಿ ನಡೆಯಲಿರುವ ದೆಹಲಿ ಆಟೋ ಮೇಳದಲ್ಲಿ ಪ್ರದರ್ಶನಗೊಂಡ ನಂತರವಷ್ಟೇ ಮಾರುಕಟ್ಟೆಗೆ ಪ್ರವೇಶಿಸಲಿದೆ.

2020ರಲ್ಲಿ ಬಿಡುಗಡೆಯಾಗಲಿರುವ ಪ್ರಮುಖ ಕಾರುಗಳಲ್ಲಿ ಟಾಟಾ ಕ್ಯಾಸಿನಿ ಕೂಡಾ ಒಂದು..

ಪ್ರಸ್ತುತ ಮಾರುಕಟ್ಟೆಯಲ್ಲಿರುವ 5 ಸೀಟರ್ ಹ್ಯಾರಿಯರ್ ಕಾರಿನ ವಿನ್ಯಾಸವನ್ನೇ ಪಡೆದುಕೊಂಡಿರುವ ಕ್ಯಾಸಿನಿ ಕಾರು ಗ್ರಾಹಕರ ಬೇಡಿಕೆಯೆಂತೆ ವಿಶೇಷ ತಾಂತ್ರಿಕ ಸೌಲಭ್ಯವನ್ನು ಪಡೆದುಕೊಂಡಿದ್ದು, ಎಸ್‌ಯುವಿ ಆವೃತ್ತಿಗಳಲ್ಲಿ ಮುಂಚೂಣಿಯಲ್ಲಿರುವ ಫೋರ್ಡ್ ಎಂಡೀವರ್, ಮಹೀಂದ್ರಾ ಅಲ್ಟುರಾಸ್ ಜಿ4 ಮತ್ತು ಟೊಯೊಟಾ ಫಾರ್ಚೂನರ್ ಕಾರುಗಳಿಗೂ ಕ್ಯಾಸಿನಿ ಕಾರು ಪ್ರಬಲ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.

2020ರಲ್ಲಿ ಬಿಡುಗಡೆಯಾಗಲಿರುವ ಪ್ರಮುಖ ಕಾರುಗಳಲ್ಲಿ ಟಾಟಾ ಕ್ಯಾಸಿನಿ ಕೂಡಾ ಒಂದು..

ಕ್ಯಾಸಿನಿ ಕಾರು 4,661-ಎಂಎಂ ಉದ್ದ, 1786-ಎಂಎಂ ಎತ್ತರ ಮತ್ತು 2,741-ಎಂಎಂ ವೀಲ್ಹ್ ಬೆಸ್‌ನೊಂದಿಗೆ ಹ್ಯಾರಿಯರ್‌ಗಿಂತಲೂ 63-ಎಂಎಂ ಹೆಚ್ಚು ಉದ್ದ, 80-ಎಂಎಂ ಕಡಿಮೆ ಎತ್ತರ ಪಡೆದುಕೊಂಡಿದೆ.

2020ರಲ್ಲಿ ಬಿಡುಗಡೆಯಾಗಲಿರುವ ಪ್ರಮುಖ ಕಾರುಗಳಲ್ಲಿ ಟಾಟಾ ಕ್ಯಾಸಿನಿ ಕೂಡಾ ಒಂದು..

ಟಾಟಾ ಹೊಸ ಎಸ್‍ಯುವಿ ಕಾರು ಇಂಪ್ಯಾಕ್ಟ್ 2.0 ಡಿಸೈನ್ ಅಡಿ ನಿರ್ಮಾಣವಾಗಿದ್ದು, ಫ್ಲೇರ್ಡ್ ಆರ್ಚೆಸ್, ಮುಂಭಾಗದ ಬಂಪರ್‍‍ಗಳಿಗೆ ಟ್ರೈ ಆರೋ ಡಿಸೈನ್, ಡ್ಯುಯಲ್ ಟೋನ್ ಬಂಪರ್, ಎಲ್ಇಡಿ ಹೆಡ್‍ಲೈಟ್, ವ್ರಾಪ್ಡ್ ಅರೌಂಡ್ ಟೈಲ್ ಲೈಟ್ ಮತ್ತು ಸ್ಕಿಡ್ ಪ್ಲೇಟ್‍‍ಗಳಿಂದ ಸಜ್ಜುಗೊಂಡಿದೆ.

2020ರಲ್ಲಿ ಬಿಡುಗಡೆಯಾಗಲಿರುವ ಪ್ರಮುಖ ಕಾರುಗಳಲ್ಲಿ ಟಾಟಾ ಕ್ಯಾಸಿನಿ ಕೂಡಾ ಒಂದು..

ಇನ್ನು ಕ್ಯಾಸಿನಿ ಕಾರು ಹ್ಯಾರಿಯರ್‍‍ನಂತೆಯೇ ಎಕ್ಸ್ಇ, ಎಕ್ಸ್ಎಂ, ಎಕ್ಸ್ ಟಿ ಮತ್ತು ಎಕ್ಸ್‌ಜೆಡ್ ಎಂಬ ನಾಲ್ಕು ವೆರಿಯೆಂಟ್‍‍ಗಳಲ್ಲಿ ಬಿಡುಗಡೆಯಾಗಲಿದ್ದು, 18-ಇಂಚಿನ ಅಲಾಯ್ ವ್ಹೀಲ್ಸ್, ಆಲ್ ವ್ಹೀಲ್ ಡಿಸ್ಕ್ ಬ್ರೇಕ್, ವಿಭಿನ್ನವಾದ ಬೂಟ್ ಲಿಡ್ ಮತ್ತು ಟೈಲ್ ಲ್ಯಾಂಪ್ಸ್ ಅನ್ನು ಹೊಂದಿರಲಿದೆ. ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ ಟಾಟಾ ಕ್ಯಾಸಿನಿ ಕಾರು ಹ್ಯಾರಿಯರ್ ಕಾರಿಗಿಂತಲೂ ವಿಭಿನ್ನವಾದ ಸ್ಪೋರ್ಟಿ ಸ್ಪಾಯ್ಲರ್, ಎಲ್ಇಡಿ ಟೈಲ್‍ಲೈಟ್ಸ್ ಅನ್ನು ಪಡೆದುಕೊಂಡಿದ್ದು, ಬಿಎಸ್ 6 ಎಂಜಿನ್ ಪ್ರೇರಿತ ಹ್ಯಾರಿಯರ್ ಕಾರಿನೊಂದಿಗೆ ಸಧ್ಯ ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿದೆ.

2020ರಲ್ಲಿ ಬಿಡುಗಡೆಯಾಗಲಿರುವ ಪ್ರಮುಖ ಕಾರುಗಳಲ್ಲಿ ಟಾಟಾ ಕ್ಯಾಸಿನಿ ಕೂಡಾ ಒಂದು..

ಕ್ಯಾಸಿನಿ ಎಸ್‍ಯುವಿ ಕಾರು ಐಷಾರಾಮಿ ಒಳವಿನ್ಯಾಸದೊಂದಿಗೆ ವಿಶಾಲವಾದ ಕ್ಯಾಬಿನ್ ಸ್ಪೆಸ್ ಹೊಂದಿದ್ದು, ಟಚ್‍ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಂ, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲರ್, ಪ್ರೀಮಿಯಂ ಆಡಿಯೋ ಸಿಸ್ಟಂ ಹಾಗೂ ಇನ್ನು ಹಲವಾರು ವೈಶಿಷ್ಟ್ಯತೆಗಳನ್ನು ಪಡೆದುಕೊಂಡಿರಲಿದೆ.

2020ರಲ್ಲಿ ಬಿಡುಗಡೆಯಾಗಲಿರುವ ಪ್ರಮುಖ ಕಾರುಗಳಲ್ಲಿ ಟಾಟಾ ಕ್ಯಾಸಿನಿ ಕೂಡಾ ಒಂದು..

ಜೊತೆಗೆ ಹೊಸ ಕಾರು ಆಪ್ಟಿಮಲ್ ಮಾಡ್ಯುಲರ್ ಎಫಿಶಿಯೆಂಟ್ ಗ್ಲೋಬಲ್ ಅಡ್ವಾನ್ಸ್ಡ್ ಪ್ಲಾಟ್‍ಫಾರ್ಮ್ ಅನ್ನು ಆಧರಿಸಿದ್ದು, ಇದೇ ತಂತ್ರವನ್ನು ಲ್ಯಾಂಡ್ ರೋವರ್ ಡಿಸ್ಕವರಿ ಕಾರಿನಲ್ಲಿಯೂ ಕೂಡಾ ಇದನ್ನು ನಾವು ಕಾಣಬಹುದಾಗಿದೆ.

2020ರಲ್ಲಿ ಬಿಡುಗಡೆಯಾಗಲಿರುವ ಪ್ರಮುಖ ಕಾರುಗಳಲ್ಲಿ ಟಾಟಾ ಕ್ಯಾಸಿನಿ ಕೂಡಾ ಒಂದು..

ಹೀಗಾಗಿ ಎಸ್‌‌ಯುವಿ ಕಾರುಗಳಲ್ಲೇ ವಿಭಿನ್ನ ಎನ್ನಸಲಿರುವ ಕ್ಯಾಸಿನಿ ಕಾರು 7 ಸೀಟರ್‌ನೊಂದಿಗೆ 3ನೇ ಸಾಲಿನಲ್ಲಿರುವ ಕೂರುವ ಪ್ರಯಾಣಿಕರಿಗೆ ಅನುಕೂಲಕರ ಸ್ಥಳಾವಕಾಶ ಒದಗಿಸಿ ಕೊಡಲಿದ್ದು, ಫುಟ್ ಬೋರ್ಡ್, ರೂಫ್ ರೈಲ್ಸ್ ಮತ್ತು 18-ಇಂಚಿನ ಅಲಾಯ್ ಚಕ್ರಗಳು ಗ್ರಾಹಕರನ್ನು ಸೆಳೆಯುವುದರಲ್ಲಿ ಯಾವುದೇ ಅನುಮಾನವಿಲ್ಲ.

2020ರಲ್ಲಿ ಬಿಡುಗಡೆಯಾಗಲಿರುವ ಪ್ರಮುಖ ಕಾರುಗಳಲ್ಲಿ ಟಾಟಾ ಕ್ಯಾಸಿನಿ ಕೂಡಾ ಒಂದು..

ಎಂಜಿನ್ ಸಾಮರ್ಥ್ಯ

ಕ್ಯಾಸಿನಿ ಕಾರು ಬಿಎಸ್6 ಆಧಾರಿತ 2.0-ಲೀಟರ್ ಕ್ರೆಯೊಟೆಕ್ ಡೀಸೆಲ್ ಎಂಜಿನ್ ಸಹಾಯದಿಂದ 170-ಬಿಹೆಚ್‍ಪಿ ಹಾಗೂ 350-ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಶಕ್ಟಿಯನ್ನು ಪಡೆದಿದ್ದು, ಹ್ಯುಂಡೈನಿಂದ ಎರವಲು ಪಡೆಯಲಾಗಿರುವ ಸಿಕ್ಸ್ ಸ್ಪೀಡ್ ಮ್ಯಾನುವಲ್ ಮತ್ತು ಸಿಕ್ಸ್ ಸ್ಪಿಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಟ್ರಾನ್ಸ್‌ಮಿಷನ್ ಸೌಲಭ್ಯ ಪಡೆದುಕೊಳ್ಳಲಿದೆ.

2020ರಲ್ಲಿ ಬಿಡುಗಡೆಯಾಗಲಿರುವ ಪ್ರಮುಖ ಕಾರುಗಳಲ್ಲಿ ಟಾಟಾ ಕ್ಯಾಸಿನಿ ಕೂಡಾ ಒಂದು..

2020ರ ಮಾರ್ಚ್ ಆರಂಭದಲ್ಲಿ ಬಿಡುಗಡೆಯಾಗುವ ನೀರಿಕ್ಷೆಯಲ್ಲಿರುವ ಕ್ಯಾಸಿನಿ ಕಾರು ಪ್ರತಿಸ್ಪರ್ಧಿ ಎಸ್‌ಯುವಿ ಕಾರುಗಳಿಂತಲೂ ಅತಿ ಕಡಿಮೆ ಬೆಲೆಯಲ್ಲಿ ದೊರೆಯಲಿದ್ದು, ಎಕ್ಸ್‌ಶೋರೂಂ ಪ್ರಕಾರ ಆರಂಭಿಕ ಆವೃತ್ತಿಯು ರೂ.18 ಲಕ್ಷದಿಂದ ಟಾಪ್ ಎಂಡ್ ಆವೃತ್ತಿಯು ರೂ.22 ಲಕ್ಷ ಬೆಲೆ ಹೊಂದಿರಬಹುದು ಎಂದು ನೀರಿಕ್ಷಿಸಲಾಗಿದೆ.

Most Read Articles

Kannada
English summary
Here we are compiled some important things about biggest Tata Harrier SUV expected as Buzzard brand.
Story first published: Wednesday, October 30, 2019, 20:12 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X