Just In
- 6 hrs ago ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- 9 hrs ago Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- 9 hrs ago ಈ ಬೈಕ್ಗಳನ್ನು ಗ್ರಾಹಕರು ಮುಗಿಬಿದ್ದು ಖರೀದಿಸುತ್ತಿದ್ದಾಗಲೇ ಬೆಲೆ ಏರಿಕೆ ಮಾಡಿ ಶಾಕ್ ಕೊಟ್ಟ ಟ್ರಯಂಫ್
- 10 hrs ago ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
Don't Miss!
- Movies 'KGF-2' ಚಿತ್ರದಿಂದ ಸಿಕ್ಕಿದ್ದು 200 ಕೋಟಿ ರೂ.; 'ಟಾಕ್ಸಿಕ್', 'ರಾಮಾಯಣ'ಕ್ಕೆ ಯಶ್ 50-50 ಡೀಲ್!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಭಾರತದಲ್ಲಿ ಎಂಜಿ ಮೋಟಾರ್ ಮೊದಲ ಕಾರು ಹೆಕ್ಟರ್ ಬಿಡುಗಡೆಗೆ ದಿನಗಣನೆ ಶುರು..!
ಭಾರತೀಯ ಆಟೋಮೊಬೈಲ್ ಕ್ಷೇತ್ರದಲ್ಲಿ ಇತ್ತೀಚೆಗೆ ಭಾರೀ ಬದಲಾವಣೆ ಕಂಡುಬರುತ್ತಿದ್ದು, ಎಂಜಿ ಮೋಟಾರ್ ಸೇರಿದಂತೆ ಹೊಸ ಕಾರು ಉತ್ಪಾದನಾ ಸಂಸ್ಥೆಗಳು ಭಾರತದಲ್ಲಿ ತಮ್ಮ ಜನಪ್ರಿಯ ಕಾರು ಉತ್ಪನ್ನಗಳನ್ನು ಬಿಡುಗಡೆಗೊಳಿಸುವ ನಿಟ್ಟಿನಲ್ಲಿ ಬೃಹತ್ ಯೋಜನೆಗಳನ್ನು ರೂಪಿಸುತ್ತಿವೆ.
ಬ್ರಿಟಿಷ್ ಮೂಲದ ಎಂಜಿ ಮೋಟಾರ್ ಸಂಸ್ಥೆಯು ಮೊದಲ ಬಾರಿಗೆ ದೇಶಿಯ ಮಾರುಕಟ್ಟೆಯ ಪ್ರವೇಶ ಪಡೆಯುತ್ತಿದ್ದು, ಈ ನಿಟ್ಟಿನಲ್ಲಿ ಬೃಹತ್ ಬಂಡವಾಳದೊಂದಿಗೆ ಕಳೆದ ವರ್ಷವಷ್ಟೇ ತನ್ನ ಮೊದಲ ಉತ್ಪಾದನಾ ಘಟಕವನ್ನು ಆರಂಭಗೊಳಿಸಿದ್ದಲ್ಲೇ ಇದೀಗ ಬಿಡುಗಡೆಯಾಗಲಿರುವ ಮೊದಲ ಕಾರಿನ ಟೀಸರ್ ಅನ್ನು ಸಹ ಬಿಡುಗಡೆ ಮಾಡಿ ಎಸ್ಯುವಿ ಪ್ರಿಯರಲ್ಲಿ ಕುತೂಹಲ ಹುಟ್ಟುಹಾಕಿದೆ.
ಹೆಕ್ಟರ್ ಹೆಸರಿನಲ್ಲಿ ಭಾರತೀಯ ರಸ್ತೆಗಳಲ್ಲಿ ಸದ್ದು ಮಾಡಲಿರುವ ಹೊಸ ಎಂಜಿ ಮೋಟಾರ್ ಕಾರು ಜೀಪ್ ಕಂಪಾಸ್ ಎಸ್ಯುವಿ ಮಾದರಿಯಲ್ಲಿ ಬಾಡಿ ಕಿಟ್ ಹೊಂದಿದ್ದು, 2019ರ ಮಧ್ಯಂತರದಲ್ಲಿ ಹೊಸ ಕಾರು ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದೆ.
ಬಿಎಸ್-6 ಎಂಜಿನ್ ಸೌಲಭ್ಯ ಹೊಂದಿರುವ ಹೊಸ ಹೆಕ್ಟರ್ ಕಾರು 1.5-ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ ಮತ್ತು 2.0-ಲೀಟರ್ ಡೀಸೆಲ್ ಎಂಜಿನ್(ಎಫ್ಸಿಎ ಯಿಂದ ಎರವಲು) ಪಡೆದುಕೊಂಡಿದ್ದು, ಪೆಟ್ರೋಲ್ ಆವೃತ್ತಿಯು 160ಬಿಎಚ್ಪಿ/200ಎನ್ಎಂ ಮತ್ತು ಡೀಸೆಲ್ ಆವೃತ್ತಿಯು 170ಬಿಎಚ್ಪಿ/340ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.
ಹೆಕ್ಟರ್ ಕಾರು ಸದ್ಯ ಇಂಡೋನೇಷ್ಯಾದಲ್ಲಿ ವುಲಿಂಗ್ ಅಲ್ಮಾಜ್ ಮತ್ತು ಚೀನಾದಲ್ಲಿ ಬಾಔನ್ 530 ಹೆಸರಿನಲ್ಲಿ ಮಾರಾಟವಾಗುತ್ತಿದ್ದು, ಇದೇ ಕಾರು ಕೆಲವು ತಾಂತ್ರಿಕ ಬದಲಾವಣೆಗಳೊಂದಿಗೆ ಭಾರತದಲ್ಲಿ ಹೆಕ್ಟರ್ ಹೆಸರಿನಲ್ಲಿ ರಸ್ತೆಗಿಳಿಯುತ್ತಿದೆ.
ಇನ್ನು 1924ರಿಂದಲೇ ಎಂಜಿ ಮೋಟಾರ್ ಸಂಸ್ಥೆಯು ಆಟೋ ಉದ್ಯಮದಲ್ಲಿ ಕಾರ್ಯಚರಣೆ ನಡೆಸುತ್ತಿದ್ದು, ಇತ್ತೀಚೆಗೆ ಹಣಕಾಸು ಮುಗ್ಗಟ್ಟು ಎದುರಿಸಿತ್ತು. ಈ ಹಿನ್ನೆಲೆಯಲ್ಲಿ ನಷ್ಟದ ಸುಳಿಯಲ್ಲಿದ್ದ ಸಂಸ್ಥೆಯನ್ನು ಚೀನಾ ಮೂಲದ ಎಸ್ಎಐಸಿ( SAIC) ಸಂಸ್ಧೆಯು ಸ್ಪಾಧೀನಪಡಿಸಿಕೊಂಡು ಭಾರತದಲ್ಲಿ ಹೊಸ ಕಾರು ಉತ್ಪನ್ನಗಳನ್ನು ಪರಿಚಯಿಸುತ್ತಿದೆ.
MOST READ: ಭದ್ರತೆಗಾಗಿ ಮತ್ತೊಂದು ದುಬಾರಿ ಕಾರು ಖರೀದಿಸಿದ ಉದ್ಯಮಿ ಮುಕೇಶ್ ಅಂಬಾನಿ..!
ಗ್ರಾಹಕರ ಬೇಡಿಕೆಯಂತೆ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಪ್ರೇರಿತ ಹ್ಯಾಚ್ಬ್ಯಾಕ್. ಸೆಡಾನ್, ಎಸ್ಯುವಿ ಕಾರುಗಳನ್ನು ಅಷ್ಟೇ ಅಲ್ಲದೇ ಎಲೆಕ್ಟ್ರಿಕ್ ಕಾರುಗಳನ್ನು ಸಹ ಅಭಿವೃದ್ದಿ ಮಾಡಲಿರುವ ಎಂಜಿ ಮೋಟಾರ್ ಸಂಸ್ಥೆಯು ಭಾರತದಲ್ಲಿ ಬೃಹತ್ ಪ್ರಮಾಣದ ಹೂಡಿಕೆ ಮಾಡುತ್ತಿದ್ದು, 2019ರ ಎರಡನೇ ತ್ರೈಮಾಸಿಕ ಅವಧಿಗೆ ತನ್ನ ಹೊಸ ಕಾರುಗಳನ್ನು ಮಾರುಕಟ್ಟೆಗೆ ಪರಿಚಯಿಸುವ ಬಗ್ಗೆ SAIC ಸಂಸ್ಥೆಯು ಸುಳಿವು ನೀಡಿದೆ.
ಇದಕ್ಕಾಗಿಯೇ ಗುಜರಾತ್ನಲ್ಲಿ 170 ಎಕರೆ ಭೂಮಿಯನ್ನು ಕೂಡಾ ಖರೀದಿಸಿರುವ ಎಂಜಿ ಮೋಟಾರ್ ಸಂಸ್ಥೆಯು ಹೊಸ ಕಾರು ಉತ್ಪಾದನಾ ಘಟಕಕ್ಕೆ ಈಗಾಗಲೇ ಚಾಲನೆ ನೀಡಿದ್ದು, ಪ್ರತಿ ವರ್ಷ 80 ಸಾವಿರ ಕಾರುಗಳ ಉತ್ಪಾದನೆಯ ಗುರಿ ಹೊಂದಿರುವ ಎಂಜಿ ಮೋಟಾರ್ ಸಂಸ್ಥೆಯು ಭಾರತದಲ್ಲಿ ಹಲವು ಕಾರು ಉತ್ಪಾದನಾ ಸಂಸ್ಥೆಗಳಿಗೆ ಪ್ರಬಲ ಪೈಪೋಟಿಯಾಗಲಿದೆ.
MOST READ: ಹೈವೇ ನಲ್ಲಿ ಚಲಿಸುವ ಹೈ ಸ್ಪೀಡ್ ವಾಹನಗಳ ಮೇಲೆ ಗೂಗಲ್ ಹದ್ದಿನ ಕಣ್ಣು..!
ಹೊಸ ಕಾರುಗಳನ್ನು ನಿಗದಿತ ಅವಧಿಯೊಳಗೆ ಪರಿಚಯಿಸಲು ದೇಶಾದ್ಯಂತ ಈಗಾಗಲೇ 45ಕ್ಕೂ ಹೆಚ್ಚು ಅಧಿಕೃತ ಕಾರು ಮಾರಾಟ ಮಳಿಗೆಗಳನ್ನು ಹೊಂದಿರುವ ಎಂಜಿ ಮೋಟಾರ್ ಸಂಸ್ಥೆಯು, ಕಾರು ಮಾರಾಟಕ್ಕೆ ಚಾಲನೆ ನೀಡುವ ವೇಳೆಗೆ 100ಕ್ಕೂ ಹೆಚ್ಚು ಡೀಲರ್ಸ್ ತೆರೆಯುವ ಯೋಜನೆ ಹೊಂದಿದೆ.
Image Courtesy: Cumberphotos, Eurocarspotter