7 ಸೀಟರ್ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆಯಾಗಲಿದೆ ಕಿಯಾ ಕಾರ್ನಿವಾಲ್

ದಕ್ಷಿಣ ಕೊರಿಯಾದ ಜನಪ್ರಿಯ ಕಾರು ಉತ್ಪಾದನಾ ಸಂಸ್ಥೆಯಾದ ಕಿಯಾ ಮೋಟಾರ್ಸ್ ಭಾರತದಲ್ಲಿ ಮೊಟ್ಟ ಮೊದಲ ಬಾರಿಗೆ ಹೊಸ ಕಾರುಗಳ ಮಾರಾಟ ಪ್ರಕ್ರಿಯೆಯನ್ನು ಆರಂಭಿಸುತ್ತಿದ್ದು, ದೇಶಿಯ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ 8ಕ್ಕೂ ಹೆಚ್ಚು ಹೊಸ ಕಾರು ಮಾದರಿಗಳನ್ನು ಬಿಡುಗಡೆಗೊಳಿಸುತ್ತಿದೆ.

7 ಸೀಟರ್ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆಯಾಗಲಿದೆ ಕಿಯಾ ಕಾರ್ನಿವಾಲ್

ಕಿಯಾ ಮೋಟಾರ್ಸ್ ಸಂಸ್ಥೆಯು ಸದ್ಯ ಭಾರತೀಯ ಆಟೋ ಉದ್ಯಮದಲ್ಲಿ ಬಹುದೊಡ್ಡ ಬದಲಾವಣೆ ತರಲಿರುವ ಬಹುನೀರಿಕ್ಷಿತ ಕಾರು ಉತ್ಪಾದನಾ ಸಂಸ್ಥೆ ಅಂದ್ರೆ ತಪ್ಪಾಗುವುದಿಲ್ಲ. ಈಗಾಗಲೇ ಭಾರತದಲ್ಲಿ ಮೊದಲ ಹಂತವಾಗಿ ಬಿಡುಗಡೆಯಾಗುವ ತನ್ನ ಹೊಸ ಕಾರು ಉತ್ಪನ್ನಗಳ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಕಿಯಾ ಸಂಸ್ಥೆಯು ಸದ್ಯದಲ್ಲೇ ಇನೋವಾ ಪ್ರತಿಸ್ಪರ್ಧಿಯಾದ ಕಾರ್ನಿವಾಲ್ ಎಂಪಿವಿ ಕಾರನ್ನು ಸಹ ಬಿಡುಗಡೆ ಮಾಡುವ ಸುಳಿವು ನೀಡಿದೆ.

ಕಿಯಾ ಇಂಡಿಯಾ ಸಂಸ್ಥೆಯು ವಿವಿಧ ಮಾದರಿಯ ಒಟ್ಟು 8 ಹೊಸ ಕಾರುಗಳನ್ನು ಬಿಡುಗಡೆಗೊಳಿಸುವ ಯೋಜನೆಯಲ್ಲಿದ್ದು, ಇದರಲ್ಲಿ ಮೊದಲಿಗೆ ಮಾರುಕಟ್ಟೆಗೆ ಲಗ್ಗೆಯಿಡುವುದೇ ಎಸ್‌ಪಿ2ಐ ಕಾನ್ಸೆಪ್ಟ್ ಕಂಪ್ಯಾಕ್ಟ್ ಎಸ್‌ಯುವಿ. ತದನಂತರವಷ್ಟೇ ಕಾರ್ನಿವಾಲ್ ಕಾರಿನ ಸದ್ದು ಜೋರಾಗಲಿದೆ.

7 ಸೀಟರ್ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆಯಾಗಲಿದೆ ಕಿಯಾ ಕಾರ್ನಿವಾಲ್

2019ರ ಜೂನ್-ಜುಲೈ ಅವಧಿಯಲ್ಲಿ ತನ್ನ ಮೊದಲ ಕಾರನ್ನು ಬಿಡುಗಡೆ ಮಾಡಲಿರುವ ಕಿಯಾ ಸಂಸ್ಥೆಯು ತದನಂತರ 7 ಸೀಟರ್ ಮಾದರಿಯ ಕಾರ್ನಿವಾಲ್ ಎಂಪಿವಿ ಮತ್ತು 5 ಸೀಟರ್ ಸ್ಟೊನಿಕ್ ಕ್ರಾಸ್ ಓವರ್ ಎಸ್‌ಯುವಿ ಕಾರುಗಳನ್ನು ಬಿಡುಗಡೆ ಮಾಡುವ ಯೋಜನೆ ಹೊಂದಿದೆ.

7 ಸೀಟರ್ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆಯಾಗಲಿದೆ ಕಿಯಾ ಕಾರ್ನಿವಾಲ್

ವರದಿಗಳ ಪ್ರಕಾರ, ಕಿಯಾ ನಿರ್ಮಾಣದ ಸ್ಟೊನಿಕ್ ಕ್ರಾಸ್‍ಓವರ್ ಮತ್ತು ಕಾರ್ನಿವಾಲ್ ಎಂಪಿವಿ ಕಾರುಗಳು ದೇಶಿಯ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಸಿದ್ದಗೊಂಡಿದ್ದು, ಸ್ಟೊನಿಕ್ ಕಾರು ಹ್ಯುಂಡೈ ನಿರ್ಮಾಣದ ಕೋನಾ ಎಸ್‌ಯುವಿ ಕಾರಿನ ಹೋಲಿಕೆಯಿದ್ದಲ್ಲಿ ಕಾರ್ನಿವಾಲ್ ಕಾರು ಇನೋವಾ ಕಾರಿಗೆ ಪ್ರತಿಸ್ಪರ್ಧಿಯಾಗಲಿದೆ.

7 ಸೀಟರ್ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆಯಾಗಲಿದೆ ಕಿಯಾ ಕಾರ್ನಿವಾಲ್

ಸದ್ಯ ಕಾರ್ನಿವಾಲ್ ಕಾರು ಉತ್ತರ ಅಮೆರಿಕದ ಪ್ರಮುಖ ರಾಷ್ಟ್ರಗಳಲ್ಲಿ ಸೆಡೊನಾ ಹೆಸರಿನಲ್ಲಿ ಮಾರಾಟವಾಗುತ್ತಿದ್ದು, ಗ್ರಾಹಕರ ಬೇಡಿಕೆ ಅನುಗುಣವಾಗಿ 5 ಸೀಟರ್, 7 ಸೀಟರ್, 9 ಸೀಟರ್ ಮತ್ತು 11 ಸೀಟರ್ ಫೀಚರ್ಸ್‌ಗಳೊಂದಿಗೆ ಮಾರಾಟವಾಗುತ್ತಿದೆ.

ಆದ್ರೆ ಭಾರತದಲ್ಲಿ ಮಾರಾಟವಾಗುವ ಕಾರ್ನಿವಾಲ್ ಕಾರುಗಳು 7 ಸೀಟರ್ ಜೊತೆಗೆ 9 ಸೀಟರ್ ಮಾದರಿಯಲ್ಲಿ ಬಿಡುಗಡೆಯಾಗಬಹುದು ಎನ್ನಲಾಗುತ್ತಿದ್ದು, ಐದು ಬಾಗಿಲು ವಿನ್ಯಾಸವನ್ನು ಹೊಂದಿರುವ ಈ ಕಾರು ಪವರ್ ಸ್ಲಿಡಿಂಗ್ ಡೋರ್ ಸಿಸ್ಟಂ ಪಡೆದುಕೊಂಡಿದೆ.

7 ಸೀಟರ್ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆಯಾಗಲಿದೆ ಕಿಯಾ ಕಾರ್ನಿವಾಲ್

ಜೊತೆಗೆ ಆಟೋಮ್ಯಾಟಿಕ್ ಡೋರ್ ಲಾಕ್ ಸಿಸ್ಟಂ, ಡ್ಯುಯಲ್ ಸನ್‌ರೂಫ್, ತ್ರಿ ಜೋನ್ ಏರ್ ಕಂಡಿಷನ್ ಸಿಸ್ಟಂ ಸೇರಿದಂತೆ ಹಲವು ವಿಶ್ವದರ್ಜೆ ಸೌಲಭ್ಯವನ್ನು ಪಡೆದಿರುವುದು ಎಂಪಿವಿ ಪ್ರಿಯರ ಆಕರ್ಷಣೆಗೆ ಕಾರಣವಾಗಿದೆ.

ಎಂಜಿನ್ ಸಾಮರ್ಥ್ಯ

ಸದ್ಯ ಮಾರುಕಟ್ಟೆಯಲ್ಲಿರುವ ಕಾರ್ನಿವಾಲ್ ಕಾರುಗಳು 2.2-ಲೀಟರ್ ಡಿಸೇಲ್ ಎಂಜಿನ್‌ನೊಂದಿಗೆ ಮಾರಾಟವಾಗುತ್ತಿದ್ದು, 7-ಸ್ಪೀಡ್ ಆಟೋ ಮ್ಯಾಟಿಕ್ ಗೇರ್‌ಬಾಕ್ಸ್ ವಿನ್ಯಾಸ ಹೊಂದಿವೆ. ಹೀಗಾಗಿ ಭಾರತದಲ್ಲಿ ಬಿಡುಗಡೆಯಾಗಲಿರುವ ಕಾರ್ನಿವಾಲ್ ಕಾರು ಸಹ 8-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ 2.2-ಲೀಟರ್ ಡೀಸೆಲ್ ಎಂಜಿನ್ ಮತ್ತು ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಿರಲಿದೆ.

7 ಸೀಟರ್ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆಯಾಗಲಿದೆ ಕಿಯಾ ಕಾರ್ನಿವಾಲ್

ಹಾಗೆಯೇ ಹೊಸ ಕಾರು 5,155-ಎಂಎಂ ಉದ್ದ, 1,985-ಎಂಎಂ ಅಗಲ, 1,740-ಎಂಎಂ ಎತ್ತರ ಮತ್ತು 3,060-ಎಂಎಂ ವೀಲ್ಹ್‌ ಬೆಸ್ ಪಡೆದಿದ್ದು, ಇದು 2,750-ಎಂಎಂ ವೀಲ್ಹ್ ಬೆಸ್ ಪಡೆದಿರುವ ಇನೋವಾ ಕ್ರಿಸ್ಟಾ ಕಾರಿಗಿಂತಲೂ 310-ಎಂಎಂ ಹೆಚ್ಚು ಉದ್ದವಿರಲಿದೆ.

7 ಸೀಟರ್ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆಯಾಗಲಿದೆ ಕಿಯಾ ಕಾರ್ನಿವಾಲ್

ಹೀಗಾಗಿ ಇದು ಸಂಪೂರ್ಣವಾಗಿ ಇನೋವಾ ಕ್ರಿಸ್ಟಾ ಕಾರುಗಳಿಗೆ ಪ್ರತಿಸ್ಫರ್ಧಿಯಾಗಲಿರುವ ಕಾರ್ನಿವಾಲ್ ಕಾರು ಮಾದರಿಯು ಬೆಲೆಯಲ್ಲಿ ತುಸು ದುಬಾರಿ ಎನ್ನಿಸಲಿದ್ದು, ಟೂರಿಸ್ಟ್ ಹಾಗೂ ಹೋಟೆಲ್ ಉದ್ಯಮದಲ್ಲಿ ಹೆಚ್ಚಿನ ಮಟ್ಟದ ಬೇಡಿಕೆ ಪಡೆಯುವ ತವಕದಲ್ಲಿದೆ.

7 ಸೀಟರ್ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆಯಾಗಲಿದೆ ಕಿಯಾ ಕಾರ್ನಿವಾಲ್

ಕಾರಿನ ಬೆಲೆಗಳು(ಅಂದಾಜು)

ಸದ್ಯ ಭಾರತದಲ್ಲಿ ಖರೀದಿಗೆ ಲಭ್ಯವಾಗುವ ಕಾರ್ನಿವಾಲ್ ಕಾರುಗಳನ್ನು ವಿದೇಶಿ ಮಾರುಕಟ್ಟೆಗಳಿಂದ ಆಮದು ಮಾಡಿಕೊಂಡು ಮಾರಾಟ ಮಾಡಲು ನಿರ್ಧರಿಸಲಾಗಿದ್ದು, ಹೀಗಾಗಿ ಕಾರಿನ ಬೆಲೆಗಳು ಎಕ್ಸ್‌ಶೋರೂಂ ಪ್ರಕಾರ ರೂ. 18 ಲಕ್ಷದಿಂದ ರೂ. 23 ಲಕ್ಷ ಬೆಲೆ ಹೊಂದುವ ಸಾಧ್ಯತೆಗಳಿವೆ.

7 ಸೀಟರ್ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆಯಾಗಲಿದೆ ಕಿಯಾ ಕಾರ್ನಿವಾಲ್

ಇನ್ನು ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಪೆನುಕೊಂಡದದ ಬಳಿ ಆರಂಭಗೊಂಡಿರುವ ಕಿಯಾ ಕಾರು ಉತ್ಪಾದನಾ ಘಟಕವು ಸಹ ಸಾಕಷ್ಟು ವಿಶೇಷತೆಗಳಿಗೆ ಕಾರಣವಾಗಿದ್ದು, ಪ್ರತಿವರ್ಷ 3 ಲಕ್ಷ ಕಾರುಗಳನ್ನು ಉತ್ಪಾದನಾ ಸಾಮರ್ಥ್ಯದ ಘಟಕದ ನಿರ್ಮಾಣಕ್ಕೆ ಬರೋಬ್ಬರಿ 7 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡಲಾಗಿದೆ.

7 ಸೀಟರ್ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆಯಾಗಲಿದೆ ಕಿಯಾ ಕಾರ್ನಿವಾಲ್

ಬರೋಬ್ಬರಿ 540 ಎಕರೆ ವಿಸ್ತಿರಣದಲ್ಲಿ ವಿಶ್ವದರ್ಜೆ ಸೌಲಭ್ಯಗಳೊಂದಿಗೆ ಈ ಘಟಕವನ್ನು ನಿರ್ಮಾಣ ಮಾಡಲಾಗಿದ್ದು, ಕಾರು ಬಿಡಿಭಾಗಗಳು, ಎಂಜಿನ್ ಅಭಿವೃದ್ಧಿ, ಸಂಶೋಧನೆ ಸೇರಿದಂತೆ ವಿವಿಧ ತಾಂತ್ರಿಕ ಅಂಶಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ವಿಭಾಗಗಳನ್ನು ಹೊಂದಿದೆ.

Most Read Articles

Kannada
Read more on ಕಿಯಾ kia motors
English summary
Toyota Innova Crysta Rival Kia Carnival 7-Seater MPV India Launch In Early 2020. Read in Kannada.
Story first published: Monday, February 18, 2019, 18:56 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X