ಬಹುನೀರಿಕ್ಷಿತ ಫೋಕ್ಸ್‌ವ್ಯಾಗನ್ ಟಿ-ಕ್ರಾಸ್ ಕಾರಿನ ಬಿಡುಗಡೆ ಮಾಹಿತಿ ಬಹಿರಂಗ

ಜರ್ಮನ್ ಬ್ರಾಂಡ್ ಫೋಕ್ಸ್‌ವ್ಯಾಗನ್ ಸಂಸ್ಥೆಯು ದೇಶಿಯ ಮಾರುಕಟ್ಟೆ ಸೇರಿದಂತೆ ಅಂತಾರಾಷ್ಟ್ರಿಯ ಮಾರುಕಟ್ಟೆಯಲ್ಲಿ ವಿವಿಧ ಮಾದರಿ ಹೊಸ ಕಾರುಗಳನ್ನು ಬಿಡುಗಡೆಗೊಳಿಸುವ ಸಲುವಾಗಿ ಕಳೆದ ಕೆಲ ತಿಂಗಳ ಹಿಂದಷ್ಟೇ ಬರೋಬ್ಬರಿ 8 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡಿದ್ದು, ಮೊದಲ ಹಂತವಾಗಿ ತನ್ನ ಬಹುನೀರಿಕ್ಷಿತ ಟಿ-ಕ್ರಾಸ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಬಿಡುಗಡೆಗೆ ಸಜ್ಜುಗೊಳ್ಳುತ್ತಿದೆ.

ಬಹುನೀರಿಕ್ಷಿತ ಫೋಕ್ಸ್‌ವ್ಯಾಗನ್ ಟಿ-ಕ್ರಾಸ್ ಕಾರಿನ ಬಿಡುಗಡೆ ಮಾಹಿತಿ ಬಹಿರಂಗ

ಭಾರತ ಸೇರಿದಂತೆ ಅಂತಾರಾಷ್ಟ್ರೀಯ ಪ್ರಮುಖ ಮಾರುಕಟ್ಟೆಗಳಿಗಾಗಿ ಟಿ-ಕ್ರಾಸ್ ಕಂಪ್ಯಾಕ್ಟಾ ಎಸ್‌ಯುವಿ ಮಾದರಿಯನ್ನು ಸಿದ್ದಗೊಳಿಸಿರುವ ಫೋಕ್ಸ್‌ವ್ಯಾಗನ್ ಸಂಸ್ಥೆಯು ಮೊದಲ ಬಾರಿಗೆ ಹೊಸ ಕಾರಿನ ತಾಂತ್ರಿಕ ಅಂಶಗಳನ್ನು ಬಹಿರಂಗಗೊಳಿಸಿದ್ದು, ಹ್ಯುಂಡೈ ಕ್ರೇಟಾ, ಮಾರುತಿ ಸುಜುಕಿ ಬ್ರೆಝಾ ಮತ್ತು ಮಹೀಂದ್ರಾ ಎಕ್ಸ್‌ಯುವಿ300 ಕಾರುಗಳಿಗೆ ತ್ರೀವ ಪೈಪೋಟಿ ನೀಡುವ ತವಕದಲ್ಲಿದೆ.

ಬಹುನೀರಿಕ್ಷಿತ ಫೋಕ್ಸ್‌ವ್ಯಾಗನ್ ಟಿ-ಕ್ರಾಸ್ ಕಾರಿನ ಬಿಡುಗಡೆ ಮಾಹಿತಿ ಬಹಿರಂಗ

ಫೋಕ್ಸ್‌ವ್ಯಾಗನ್ ಸಂಸ್ಥೆಯು ಬೃಹತ್ ಬಂಡವಾಳದೊಂದಿಗೆ ವಿವಿಧ ಮಾದರಿಯ 19 ಹೊಸ ಕಾರುಗಳನ್ನು ವಿವಿಧ ರಾಷ್ಟ್ರಗಳಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದ್ದು, ಭಾರತದಲ್ಲೂ ತನ್ನ ಹೊಸ ಶಕೆ ಆರಂಭಿಸುತ್ತಿದೆ. ಇದರಲ್ಲಿ ಟಿ-ಕ್ರಾಸ್ ಕಂಪ್ಯಾಕ್ಟ್ ಮಾದರಿಯು ಹಲವು ವಿಶೇಷತೆಗಳೊಂದಿಗೆ ಬಿಡುಗಡೆಯಾಗುತ್ತಿದ್ದು, ದೇಶಿಯ ಗ್ರಾಹಕರ ಬೇಡಿಕೆ ಅನುಗುಣವಾಗಿ ಸಿದ್ದಗೊಳಿಸಲಾಗಿದೆ.

ಬಹುನೀರಿಕ್ಷಿತ ಫೋಕ್ಸ್‌ವ್ಯಾಗನ್ ಟಿ-ಕ್ರಾಸ್ ಕಾರಿನ ಬಿಡುಗಡೆ ಮಾಹಿತಿ ಬಹಿರಂಗ

ಫೋಕ್ಸ್‌ವ್ಯಾಗನ್ ಬಿಡುಗಡೆಗೊಳಿಸಲಿರುವ 19 ಹೊಸ ಎಸ್‌ಯುವಿಗಳಲ್ಲಿ ಟಿ-ಕ್ರಾಸ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಕೂಡಾ ಪ್ರಮುಖವಾಗಿದ್ದು, ಯುರೋಪ್ ಮಾರುಕಟ್ಟೆಯಲ್ಲಿ ಬಿಡುಗಡೆಯಾಗುವ ಟಿ-ಕ್ರಾಸ್‌ಗಿಂತ ಭಾರತದಲ್ಲಿ ಬಿಡುಗಡೆಯಾಗಲಿರುವ ಟಿ-ಕ್ರಾಸ್ ಸಾಕಷ್ಟು ಭಿನ್ನತೆ ಹೊಂದಿರಲಿಯೆಂತೆ.

ಬಹುನೀರಿಕ್ಷಿತ ಫೋಕ್ಸ್‌ವ್ಯಾಗನ್ ಟಿ-ಕ್ರಾಸ್ ಕಾರಿನ ಬಿಡುಗಡೆ ಮಾಹಿತಿ ಬಹಿರಂಗ

ಕೆಲವು ಸುದ್ಧಿ ಮಾಧ್ಯಮಗಳು ಪ್ರಕಟಿಸಿರುವ ಮಾಹಿತಿಗಳ ಪ್ರಕಾರ, 2,651-ಎಂಎಂ ನಷ್ಟು ವೀಲ್ಹ್ ಬೆಸ್ ಹೊಂದಿರುವ ಟಿ-ಕ್ರಾಸ್ ಕಾರು ಯುರೋಪ್ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಟಿ-ಕ್ರಾಸ್ ಕಾರಿಗಿಂತ 10-ಎಂಎಂ ನಷ್ಟು ಕಡಿಮೆ ವೀಲ್ಹ್ ಬೇಸ್ ಹೊಂದಿದೆ. ಹಾಗೆಯೇ ವಿದೇಶಿ ಮಾರುಕಟ್ಟೆ ಬಿಡುಗಡೆಯಾಗಲಿರುವ ಟಿ-ಕ್ರಾಸ್ ಕಾರಿಗಿಂತ ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ಕಾರು 100-ಎಂಎಂ ನಷ್ಟು ಉದ್ದವಾಗಿದ್ದು, ಇದು ಹಿಂಬದಿ ಸವಾರರಿಗೆ ಹೆಚ್ಚಿನ ಅನುಕೂಲವಾಗಲಿದೆ.

ಬಹುನೀರಿಕ್ಷಿತ ಫೋಕ್ಸ್‌ವ್ಯಾಗನ್ ಟಿ-ಕ್ರಾಸ್ ಕಾರಿನ ಬಿಡುಗಡೆ ಮಾಹಿತಿ ಬಹಿರಂಗ

ಜೊತೆಗೆ ಫೋಕ್ಸ್‌ವ್ಯಾಗನ್ ಟಿ-ಕ್ರಾಸ್ ಕಾರುಗಳ ಯಾಂತ್ರಿಕ ಘಟಕದ ಬಾಹ್ಯ ಮತ್ತು ಒಳಾಂಗಣ ಅಂಶಗಳನ್ನು ಹೊಸ ಪೊಲೊ ಮತ್ತು ವರ್ಟಸ್ ಕಾರುಗಳೊಂದಿಗೆ ಹಂಚಿಕೊಳ್ಳುವ ನಿರೀಕ್ಷೆಯಿದ್ದು, ಈ ಕಾರು ಸುಮಾರು 4.19 ಮೀಟರ್ ಉದ್ದಳತೆಯೊಂದಿಗೆ ಸುಮಾರು 2.65 ಮೀಟರ್‌ಗಳಷ್ಟು ವೀಲ್ ಬೇಸ್ ಹೊಂದಿರಲಿದೆ.

ಬಹುನೀರಿಕ್ಷಿತ ಫೋಕ್ಸ್‌ವ್ಯಾಗನ್ ಟಿ-ಕ್ರಾಸ್ ಕಾರಿನ ಬಿಡುಗಡೆ ಮಾಹಿತಿ ಬಹಿರಂಗ

ಇನ್ನು ಟಿ-ಕ್ರಾಸ್ ಆವೃತ್ತಿಯಲ್ಲಿ ಅಳವಡಿಸಿರುವ ಎಂಜಿನ್ ಮಾದರಿಯು1.0- ಲೀಟರ್ ಪೆಟ್ರೋಲ್ ಎಂಜಿನ್ ಇಲ್ಲವೇ 1.5-ಲೀಟರ್-ಡೀಸೆಲ್ 4 ಸಿಲಿಂಡರ್ ಎಂಜಿನ್ ಆಯ್ಕೆಯೆಯೊಂದಿಗೆ ಬಿಡುಗಡೆಗೊಳ್ಳುವ ಸಾಧ್ಯತೆಗಳಿದ್ದು, ಹೊಸ ಎಂಜಿನ್ ಮಾದರಿಯು 113-ಬಿಎಚ್‌ಪಿ ಮತ್ತು ಟಾಪ್ ಎಂಡ್ ಎಂಜಿನ್ ಮಾದರಿಯು 128-ಬಿಎಚ್‌ಪಿ ಉತ್ಪಾದನೆ ಮಾಡಲಿವೆ ಎನ್ನಲಾಗಿದೆ.

MOST READ: ಮತ್ತೊಂದು ದುಬಾರಿ ಕಾರಿನ ಒಡೆಯನಾದ ಕ್ರಿಕೆಟಿಗ ವಿರಾಟ್ ಕೊಹ್ಲಿ

ಬಹುನೀರಿಕ್ಷಿತ ಫೋಕ್ಸ್‌ವ್ಯಾಗನ್ ಟಿ-ಕ್ರಾಸ್ ಕಾರಿನ ಬಿಡುಗಡೆ ಮಾಹಿತಿ ಬಹಿರಂಗ

ಮುಂದಿನ ಚಕ್ರಗಳಿಗೂ ಶಕ್ತಿ ಪೂರೈಸುವ 7-ಸ್ಪೀಡ್ ಡುಯಲ್ ಕ್ಲಚ್ ಗೇರ್‌ಬಾಕ್ಸ್ ಸೌಲಭ್ಯ ಪಡೆದುಕೊಂಡಿರುವ ಈ ಫೋಕ್ಸ್‌ವ್ಯಾಗನ್ ಟಿ-ಕ್ರಾಸ್ ಹೊಸ ಕಾರುಗಳು ಟರ್ಬೊಚಾರ್ಜ್ಡ್ ಎಂಜಿನ್ ಆಯ್ಕೆಯನ್ನು ಸಹ ಪಡೆಯುವ ಸಾಧ್ಯತೆ ಇದೆ.

ಬಹುನೀರಿಕ್ಷಿತ ಫೋಕ್ಸ್‌ವ್ಯಾಗನ್ ಟಿ-ಕ್ರಾಸ್ ಕಾರಿನ ಬಿಡುಗಡೆ ಮಾಹಿತಿ ಬಹಿರಂಗ

ಫೋಕ್ಸ್‌ವ್ಯಾಗನ್ ಸಂಸ್ಥೆಯು ದಕ್ಷಿಣ ಅಮೆರಿಕದಂತಹ ಉದಯೋನ್ಮುಖ ಮಾರುಕಟ್ಟೆಗಳಿಗಾಗಿ 6-ಸ್ಪೀಡ್ ಆಟೊಮ್ಯಾಟಿಕ್ ಟ್ರಾನ್ಸ್ಮಿಷನ್ ಜೊತೆಗೆ 5-ಸ್ಪೀಡ್ ಮ್ಯಾನ್ಯುವಲ್ ಗೇರ್‌ಬಾಕ್ಸ್ ನೀಡಲು ಸಾಧ್ಯತೆ ಇದ್ದು, ಭಾರತದಲ್ಲಿ ಈ ಕಾರಿನ ವೆಚ್ಚ ತಗ್ಗಿಸಲು ಕೆಲವು ವಿಶೇಷತೆಗಳನ್ನು ಕಡಿತಗೊಳಿಸುವ ಸಂಭವ ಕೂಡಾ ಇದೆ.

MOST READ: ಪಾರ್ಕಿಂಗ್ ವೇಳೆ ಮಹಿಳೆಯ ಎಡವಟ್ಟು- ಮೊದಲ ಮಹಡಿಯಿಂದ ಲೆಕ್ಸಸ್ ಕಾರು ಜಂಪ್..!

ಬಹುನೀರಿಕ್ಷಿತ ಫೋಕ್ಸ್‌ವ್ಯಾಗನ್ ಟಿ-ಕ್ರಾಸ್ ಕಾರಿನ ಬಿಡುಗಡೆ ಮಾಹಿತಿ ಬಹಿರಂಗ

ಇನ್ನು ಹೊಸ ಕಾರು 2020ರ ಆರಂಭದಲ್ಲಿ ಯುರೋಪ್ ಮತ್ತು ದಕ್ಷಿಣ ಅಮೆರಿಕಾ ರಾಷ್ಟ್ರಗಳಲ್ಲಿ ಬಿಡುಗಡೆಯಾಗಲಿದ್ದು, ತದನಂತರವಷ್ಟೇ ಭಾರತದಲ್ಲೂ ಬಿಡುಗಡೆಯಾಗಲಿರುವ ಹೊಸ ಕಾರು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 9 ಲಕ್ಷ ಮತ್ತು ಟಾಪ್ ಎಂಡ್ ಮಾದರಿಗೆ ರೂ.13 ಲಕ್ಷ ಬೆಲೆಯೊಂದಿಗೆ ಹ್ಯುಂಡೈ ಕ್ರೇಟಾ, ಮಾರುತಿ ಸುಜುಕಿ ಬ್ರೆಝಾ ಮತ್ತು ಮಹೀಂದ್ರಾ ಎಕ್ಸ್‌ಯುವಿ300 ಕಾರುಗಳಿಗೆ ತ್ರೀವ ಪೈಪೋಟಿ ನೀಡುವ ನಿರೀಕ್ಷೆಯಲ್ಲಿದೆ.

Most Read Articles

Kannada
English summary
India-spec Volkswagen T-Cross Details Revealed — Bigger On The Inside. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X