ಸ್ಪೋರ್ಟಿ ವಿನ್ಯಾಸದಲ್ಲಿ ಮಿಂಚಿದ ಹೊಸ ಹ್ಯುಂಡೈ ವೆನ್ಯೂ

ಹ್ಯುಂಡೈ ಸಂಸ್ಥೆಯು ಕೆಲ ದಿನಗಳ ಹಿಂದಷ್ಟೆ ತಮ್ಮ ಬಹುನಿರೀಕ್ಷಿತ ವೆನ್ಯೂ ಕಾಂಪ್ಯಾಕ್ಟ್ ಎಸ್‍ಯುವಿ ಕಾರನ್ನು ಬಿಡುಗಡೆ ಮಾಡಲಾಗಿದ್ದು, ಈಗಾಗಲೇ 20,000 ಅಧಿಕ ಸಂಖ್ಯೆಯಲ್ಲಿ ಬುಕ್ಕಿಂಗ್ ಅನ್ನು ಪಡೆದುಕೊಂಡಿದೆ. ಹಾಗಯೆ ಬುಕ್ಕಿಂಗ್ ಮಾಡಿಕೊಂಡ ಗ್ರಾಹಕರ ಕೈಗೆ ವೆನ್ಯೂ ಕಾರನ್ನು ಸಹ ಡೆಲಿವರಿ ಮಾಡುವ ಕಾರ್ಯವನ್ನು ಹ್ಯುಂಡೈ ಸಂಸ್ಥೆಯು ಪ್ರಾರಂಭಿಸಲಾಗಿದೆ.

ಸ್ಪೋರ್ಟಿ ವಿನ್ಯಾಸದಲ್ಲಿ ಮಿಂಚಿದ ಹೊಸ ಹ್ಯುಂಡೈ ವೆನ್ಯೂ

ಮಾರುತಿ ಸುಜುಕಿ, ಹ್ಯುಂಡೈ ಸಂಸ್ಥೆಗಳು ತಮ್ಮ ಯಾವುದೇ ಡೀಲರ್‍‍ಗಳ ಬಳಿ ತಮ್ಮ ತಮ್ಮ ಕಾರಿನ ಬಾಹ್ಯ ವಿನ್ಯಾಸವನ್ನು ಮಾರ್ಪಾಡು ಮಾಡಿಕೊಳ್ಳುವ ಆಯ್ಕೆಯನ್ನು ನೀಡುವುದಿಲ್ಲವಾದರೂ, ಅದಾಗ್ಯೂ ಈಗಾಗಲೇ ಮಾರುಕಟ್ಟೆಯಲ್ಲಿರುವ ಕೆಲ ಮಾಡಿಫಿಕೇಷನ್ ತಜ್ಞರು ಇತ್ತೀಚೆಗೆ ಬಿಡುಗಡೆಗೊಂಡ ವೆನ್ಯೂ ಕಾರಿನ ಮಾಡಿಫಿಕೇಷನ್ ಅನ್ನು ಮಾಡಲು ಮುಂದಾಗಿದ್ದಾರೆ. ಈ ಲೇಖನದಲ್ಲಿ ನಿಮಗೆ ಮಾಡಿಫೈಗೊಂಡ ಮೊದಲ ವೆನ್ಯೂ ಕಾರಿನ ಬಗ್ಗೆ ಮಾಹಿತಿಯನ್ನು ನೀಡಲಿದ್ದೇವೆ.

ಸ್ಪೋರ್ಟಿ ವಿನ್ಯಾಸದಲ್ಲಿ ಮಿಂಚಿದ ಹೊಸ ಹ್ಯುಂಡೈ ವೆನ್ಯೂ

ವಿನಯ್ ಕಪೋರ್ ಎಂಬ ಯೂಟ್ಯೂಬ್ ಚಾನಲ್ ವ್ಯಕ್ತಿಯು ವೆನ್ಯೂ ಕಾರನ್ನು ಮಾಡಿಫಿಕೇಷನ್ ಮಾಡಿಸಲಾಗಿದ್ದು, ಈ ಕುರಿತಾದ ಒಂದು ವಿಡಿಯೋವನ್ನು ತನ್ನ ಯೂಟ್ಯೂಬ್ ಖಾತೆಯಲ್ಲಿ ಅಪ್ಲೋಡ್ ಮಾಡಿದ್ದಾನೆ. ವಿಡಿಯೋವನ್ನು ಗಮನಿಸಿದ್ದಲ್ಲಿ, ಕಾರಿನ ಬಾಹ್ಯ ವಿನ್ಯಾಸದಲ್ಲಿ ಕೆಲ ಗುರುತರ ಬದಲಾವಣೆಗಳನ್ನು ಮಾಡಲಾಗಿದ್ದು, ನಾರ್ಮಲ್ ವೆನ್ಯೂ ಕಾರನ್ನು ಆಕರ್ಷಕವಾದ ಸ್ಪೋರ್ಟಿ ವಿನ್ಯಾಸವನ್ನು ಒಳ್ಡಗೊಂಡ ವೆನ್ಯೂ ಕಾರಿನಂತೆ ಮಾರ್ಪಾಡುಗಳನ್ನು ಮಾಡಲಾಗಿದೆ.

ಸ್ಪೋರ್ಟಿ ವಿನ್ಯಾಸದಲ್ಲಿ ಮಿಂಚಿದ ಹೊಸ ಹ್ಯುಂಡೈ ವೆನ್ಯೂ

ಹ್ಯುಂಡೈ ವೆನ್ಯೂ ಸಧ್ಯ ಆಟೋಮೊಬೈಲ್ ಉದ್ಯಮದಲ್ಲಿ ಬಹು ನಿರೀಕ್ಷಿತ ಕಾರು ಆದುದರಿಂದ ಈ ಕಾರಿನ ಮಾಡಲಾದ ಮಾಡಿಫಿಕೇಷನ್ ಕೂಡಾ ಇನ್ನು ಹೆಚ್ಚಿನ ಗ್ರಾಹಕರನ್ನು ಸೆಳೆಯದೆಯೆ ಇರಲಾರದು. ಬದಲಾವಣೆಗಳ ಬಗ್ಗೆ ಮಾತನಾಡುವುದಾದ್ರೆ ಈ ಕಾರಿನ ಮೇಲ್ಭಾಗದಲೈರುವ ರೂಫ್‍ ಅನ್ನು ಕಪ್ಪು ಬಣ್ಣದಿಂದ ಸಜ್ಜುಗೊಳಿಸಲಾಗಿದ್ದು, ಡ್ಯುಯಲ್ ತೋನ್ ಬಣ್ಣವನ್ನು ಪಡೆದ ವೆನ್ಯೂ ಕಾರಿನಂತೆ ಇದು ಕಾಣಿಸುತ್ತದೆ.

ಸ್ಪೋರ್ಟಿ ವಿನ್ಯಾಸದಲ್ಲಿ ಮಿಂಚಿದ ಹೊಸ ಹ್ಯುಂಡೈ ವೆನ್ಯೂ

ಇನ್ನು ಕಾರಿನ ಮುಂಭಾಗದಲ್ಲಿ ನೀಡಲಾದ ಗ್ರಿಲ್‍ನ ಮೇಲಿನ ಕೆಲವು ಕಡೆ ಕೆಂಪು ಬಣ್ಣವನ್ನು ಒದಗಿಸಿದ ಕಾರ ಹೆಚ್ಚಿನ ಸ್ಪೋರ್ಟಿ ಲುಕ್ ಅನ್ನು ಈ ಕಾರು ಪಡೆದುಕೊಂಡಿದೆ. ಇವುಗಳನ್ನು ಹೊರತು ಪಡಿ ಬಾನೆಟ್ ಲಿಡ್‍ನ ಮೇಲೆಯು ಸಹ ಆಕರ್ಷಕವಾದ ಗ್ರಾಫಿಕ್ಸ್ ಅನ್ನು ಒದಗಿಸಲಾಗಿದೆ.

ಸ್ಪೋರ್ಟಿ ವಿನ್ಯಾಸದಲ್ಲಿ ಮಿಂಚಿದ ಹೊಸ ಹ್ಯುಂಡೈ ವೆನ್ಯೂ

ಮತ್ತೊಂದು ಕಡೆ ಕಾರಿನ ಸೈಡ್ ಪ್ರೊಫೈಲ್‍ನಲ್ಲಿ ಕೂಡಾ ಕೆಂಪು ಬಣ್ಣವನ್ನು ನೀಡಲಾಗಿದ್ದು, ಅಲಾಯ್ ವ್ಹೀಲ್ಸ್ ಅನ್ನು ಸಹ ಒದಗಿಸಲಾಗಿದೆ. ಈ ಕಾರು ರಸ್ತೆಗಳಲ್ಲಿ ಓಡಾಡಲು ಶುರು ಮಾಡಿದ ನಂತರ ನೋಡುಗರನ್ನು ತನ್ನತ್ತ ಸೆಳೆಯುವಲ್ಲಿ ಯಶಸ್ವಿಯಾಗುವುದಂತು ಪಕ್ಕಾ.

ಸ್ಪೋರ್ಟಿ ವಿನ್ಯಾಸದಲ್ಲಿ ಮಿಂಚಿದ ಹೊಸ ಹ್ಯುಂಡೈ ವೆನ್ಯೂ

ವಿ.ಸೂ: ಈ ಕಾರಿನಲ್ಲಿ ಮಾಡಲದ ಬದಲಾವಣೆಗಳು ಕಾನೂನು ಬಾಹಿರವಾಗಿರುವುದಿಲ್ಲ. ಏಕೆಂದರೆ ಕಾರಿನ ಬಣ್ಣ ಬದಲಾಯಿಸುವುದು ಮತ್ತು ಕಾರು ಖರೀದಿ ಮಾಡಿದಾದ ನೋದಣಿ ಪತ್ರದಲ್ಲಿ ನೀಡಲಾದ ಉಪಕರಣಗಳನ್ನು ಬದಲಾಯಿಸಿದರೆ ಮಾತರ ಅದು ಕಾನೂನು ಬಾಹಿರವಾಗಿದ್ದುಮ್ ಈ ಕಾರಿನಲ್ಲಿ ಕೇವಲ ಸ್ಟಿಕರಿಂಗ್ ಅನ್ನು ಮಾತ್ರ ಮಾಡಲಾಗಿದೆ.

ವೆನ್ಯೂ ಕಾರು ಸದ್ಯ ಹ್ಯುಂಡೈ ನಿರ್ಮಾಣದ ಇತರೆ ಕಾರುಗಳಿಂತಲೂ ಅತಿ ವಿನೂತನ ತಂತ್ರಜ್ಞಾನ ಸೌಲಭ್ಯಗಳನ್ನು ಹೊತ್ತು ಬಂದಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಒಟ್ಟು 4 ವೆರಿಯೆಂಟ್‌ಗಳಲ್ಲಿ ಲಭ್ಯವಿರುವ ಹೊಸ ವೆನ್ಯೂ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.6.50,000 ದಿಂದ ಟಾಪ್ ಎಂಡ್ ಆವೃತ್ತಿಯು ರೂ.11,10,500 ಬೆಲೆ ಪಡೆದುಕೊಂಡಿದೆ.

ಸ್ಪೋರ್ಟಿ ವಿನ್ಯಾಸದಲ್ಲಿ ಮಿಂಚಿದ ಹೊಸ ಹ್ಯುಂಡೈ ವೆನ್ಯೂ

ವೆನ್ಯೂ ಕಾರಿನಲ್ಲಿ ಎರಡು ಪೆಟ್ರೋಲ್ ಎಂಜಿನ್ ಆಯ್ಕೆಗಳನ್ನು ಪಡೆದುಕೊಂಡಿದ್ದರೆ ಡಿಸೇಲ್ ಎಂಜಿನ್‌ನಲ್ಲಿ ಒಂದು ಆಯ್ಕೆಯನ್ನು ನೀಡಲಾಗಿದ್ದು, ಇ, ಎಸ್, ಎಸ್ಎಕ್ಸ್ ಮತ್ತು ಎಸ್ಎಕ್ಸ್(0) ವೆರಿಯೆಂಟ್‌ಗಳಲ್ಲಿ ಹೊಸ ವೆನ್ಯೂ ಖರೀದಿಗೆ ಲಭ್ಯವಿದೆ. ಇದರಲ್ಲಿ 1.2-ಲೀಟರ್ ಕಪ್ಪಾ ಪೆಟ್ರೋಲ್ ಎಂಜಿನ್ ಮತ್ತು 1.4-ಡೀಸೆಲ್ ಎಂಜಿನ್‌ಗಳು ಸಾಮಾನ್ಯ ಮಾದರಿಯ ಕಾರುಗಳಗಾಗಿ ಮಾರಾಟಗೊಳ್ಳಲಿದ್ದರೆ, ಕಡಿಮೆ ಎಂಜಿನ್ ಸಾಮಾರ್ಥ್ಯದ 1.0-ಲೀಟರ್ ಪೆಟ್ರೋಲ್ ಆವೃತ್ತಿಯು ಅತಿ ಹೆಚ್ಚು ಬಿಎಚ್‌ಪಿ ಉತ್ಪಾದನೆಯೊಂದಿಗ ವೆನ್ಯೂ ಟಾಪ್ ಎಂಡ್ ಮಾದರಿಯಾಗಿ ಹೊರಹೊಮ್ಮಿದೆ.

MOST READ: ಸ್ಮಾರ್ಟ್ ಹೈಬ್ರಿಡ್ ಟೆಕ್ನಾಲಜಿಯೊಂದಿಗೆ ಮಾರಾಟದಲ್ಲಿ ಮಿಂಚುತ್ತಿದೆ ಮಾರುತಿ ಬಲೆನೊ

ಸ್ಪೋರ್ಟಿ ವಿನ್ಯಾಸದಲ್ಲಿ ಮಿಂಚಿದ ಹೊಸ ಹ್ಯುಂಡೈ ವೆನ್ಯೂ

ಎಂಜಿನ್ ಪರ್ಫಾಮೆನ್ಸ್

ಐ20 ಕಾರಿನಿಂದ ಎರವಲು ಪಡೆಯಲಾದ 1.2-ಲೀಟರ್ ಪೆಟ್ರೋಲ್ ಎಂಜಿನ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 83-ಬಿಎಚ್‌ಪಿ, 115-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ, 1.4-ಲೀಟರ್ ಡೀಸೆಲ್ ಮಾದರಿಯು ಕ್ರೆಟಾದಿಂದ ಎರವಲು ಪಡೆಯಲಾದ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 89-ಬಿಎಚ್‌ಪಿ, 220-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.

ಸ್ಪೋರ್ಟಿ ವಿನ್ಯಾಸದಲ್ಲಿ ಮಿಂಚಿದ ಹೊಸ ಹ್ಯುಂಡೈ ವೆನ್ಯೂ

ಹಾಗೆಯೇ ಟಾಪ್ ಎಂಡ್ ಮಾದರಿಯಾದ 1.0-ಲೀಟರ್ ತ್ರಿ ಸಿಲಿಂಡರ್ ಪೆಟ್ರೋಲ್ ಎಂಜಿನ್ ಮಾದರಿಯು 120-ಬಿಎಚ್‌ಪಿ ಮತ್ತು 170-ಎನ್ಎಂ ಟಾರ್ಕ್ ಉತ್ಪಾದನೆ ಮೂಲಕ ಪರ್ಫಾಮೆನ್ಸ್ ಪ್ರಿಯರಿಗಾಗಿಯೇ ವಿಶೇಷವಾಗಿ ಸಿದ್ದಗೊಂಡಿದ್ದು, ಇದರಲ್ಲಿ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಅಥವಾ 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಅನ್ನು ಆಯ್ಕೆ ಮಾಡಬಹುದಾಗಿದೆ.

MOST READ: ವಾಹನ ಚಾಲಕರೇ ಇತ್ತ ಗಮನಿಸಿ - ಓವರ್‍‍ಸ್ಪೀಡಿಂಗ್ ಮಾಡುವವರನ್ನು ತಡೆಯಲು ಪೊಲೀಸರ ಕೈಗೆ ಹೊಸ ಅಸ್ತ್ರ

ಸ್ಪೋರ್ಟಿ ವಿನ್ಯಾಸದಲ್ಲಿ ಮಿಂಚಿದ ಹೊಸ ಹ್ಯುಂಡೈ ವೆನ್ಯೂ

ವೆನ್ಯೂ ತಾಂತ್ರಿಕ ವೈಶಿಷ್ಟ್ಯತೆ

ಹ್ಯುಂಡೈ ವೆನ್ಯೂ ಕಾರಿನಲ್ಲಿ 33 ಫೀಚರ್ಸ್‌ಗಳನ್ನು ಹೊಂದಿರುವ ಬ್ಯೂ ಲಿಂಕ್ ಕನೆಕ್ಟಿವಿಟಿ ಸೌಲಭ್ಯವನ್ನು ಜೋಡಿಸಲಾಗಿದ್ದು, ಪ್ಯಾಕೇಜ್ ಮಾದರಿಯನ್ನು ಹೊಂದಿರುವ ಈ ಸೌಲಭ್ಯವು ಹೊಸ ಕಾರಿಗೆ ಗರಿಷ್ಠ ಸುರಕ್ಷತೆಯ ಜೊತೆಗೆ ಕಾರು ಪ್ರಯಾಣವನ್ನು ಸುಖವಾಗಿಸಲು ಹಲವು ಮಾಹಿತಿಗಳನ್ನು ನೀಡಲಿದೆ.

ಸ್ಪೋರ್ಟಿ ವಿನ್ಯಾಸದಲ್ಲಿ ಮಿಂಚಿದ ಹೊಸ ಹ್ಯುಂಡೈ ವೆನ್ಯೂ

ಬ್ಲೂ ಲಿಂಕ್ ಪ್ಯಾಕೇಜ್‌ನಲ್ಲಿ ಜಿಯೋ ಫೆನ್ಸ್, ಎರ್ಮಜೆನ್ಸಿ ಅಸಿಸ್ಟ್, ಕಾರ್ ಟ್ರಾಕಿಂಗ್ ಸೇರಿದಂತೆ ಹಲವಾರು ಸುರಕ್ಷಾ ಫೀಚರ್ಸ್‌ಗಳನ್ನು ನೀಡಲಾಗಿದ್ದು, ಸಿಗ್ನಿಚೆಕ್ ಕಾಸ್‌ಕ್ಲ್ಯಾಡಿಂಗ್ ಹೆಕ್ಸಾಗೊನಲ್ ಫ್ರಂಟ್ ಗ್ರಿಲ್, ಡ್ಯುಯಲ್ ಹೆಡ್‌ಲ್ಯಾಂಪ್ ಕ್ಲಸ್ಟರ್, ಸಣ್ಣ ಎಳೆಯಂತಿರುವ ಲೈಟ್ ಸ್ಟ್ರಿಪ್, ಹೆಡ್‌ಲ್ಯಾಂಪ್ ಕ್ಲಸ್ಟರ್ ಕಳೆಭಾಗದಲ್ಲಿ ಹೊಂದಿಕೊಂಡಂತಿರುವ ಎಲ್ಇಡಿ ಡಿಆರ್‌ಎಲ್ಎಸ್ ಮತ್ತು 16-ಇಂಚಿನ ಟೈರ್ ಸೌಲಭ್ಯವು ಎಸ್‌ಯುವಿ ಪ್ರಿಯರನ್ನು ಸೆಳೆಯಲಿವೆ.

MOST READ: ರಾಜ್ಯದೆಲ್ಲೆಡೆ ಎಂಬತ್ತೊಂಬತ್ತು ಸಾವಿರಕ್ಕು ಹೆಚ್ಚಿನ ಡ್ರೈವಿಂಗ್ ಲೈಸೆನ್ಸ್ ರದ್ದು

ಸ್ಪೋರ್ಟಿ ವಿನ್ಯಾಸದಲ್ಲಿ ಮಿಂಚಿದ ಹೊಸ ಹ್ಯುಂಡೈ ವೆನ್ಯೂ

ಇನ್ನು ಹೊಸ ಕಾರಿನ ಒಳಾಂಗಣ ವಿನ್ಯಾಸದ ಬಗೆಗೆ ಹೇಳುವುದಾದರೇ, 5-ಸೀಟರ್ ಸೌಲಭ್ಯ ಹೊಂದಿರುವ ವೆನ್ಯೂ ಕಾರು ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ಪಡೆದಿದ್ದು, ಬ್ಲ್ಯಾಕ್ ಡ್ಯಾಶ್‌ಬೋರ್ಡ್ ಮತ್ತು ಕ್ಯಾಬಿನ್, 8-ಇಂಚಿನ ಇನ್ಪೋಟೈನ್‌ಮೆಂಟ್ ಡಿಸ್ಪೈ, ಸೆಂಟರ್ ಕನ್ಸೊಲ್, ಡ್ಯಾಶ್‌ಬೋರ್ಡ್ ಸುತ್ತಲೂ ಸಿಲ್ವರ್ ಎಕ್ಸೆಂಟ್, ಉತ್ತಮ ದರ್ಜೆಯ ಲೆದರ್ ಸೀಟುಗಳು, ವೈರ್‌ಲೆಸ್ ಚಾರ್ಚಿಂಗ್ ಪಾಯಿಂಟ್ ಮತ್ತು ಎಲೆಕ್ಟ್ರಿಕ್ ಸನ್‌ರೂಫ್ ಸೌಲಭ್ಯವಿದೆ.

ಸ್ಪೋರ್ಟಿ ವಿನ್ಯಾಸದಲ್ಲಿ ಮಿಂಚಿದ ಹೊಸ ಹ್ಯುಂಡೈ ವೆನ್ಯೂ

ಹೊಸ ಕಾರಿನಲ್ಲಿ ಪ್ರೀಮಿಯಂ ಸೌಲಭ್ಯಗಳ ಜೊತೆಗೆ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಕ್ರೂಸ್ ಕಂಟ್ರೋಲ್, ಫ್ರಂಟ್ ವೀಲ್ಹ್ ಡಿಸ್ಕ್ ಬ್ರೇಕ್, ಆರು ಏರ್‌ಬ್ಯಾಗ್, ಹಿಲ್ ಅಸಿಸ್ಟ್ ಕಂಟ್ರೋಲ್, ಬ್ರೇಕ್ ಅಸಿಸ್ಟ್ ಕಂಟ್ರೋಲ್, ಎಬಿಎಸ್, ಇಬಿಡಿ, ಇಎಸ್‌ಸಿ, ವಿಎಸ್ಎಂ, ಸ್ಪೀಡ್ ಸೆನ್ಸಾರಿಂಗ್ ಆಟೋ ಡೋರ್ ಲಾಕ್, ISOFIX ಸೀಟ್, ಹೊಂದಿರುವ ವೆನ್ಯೂ ಕಾರು ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳಲ್ಲೇ ವಿಶೇಷ ಎನ್ನಿಸಲಿದೆ.

ಸ್ಪೋರ್ಟಿ ವಿನ್ಯಾಸದಲ್ಲಿ ಮಿಂಚಿದ ಹೊಸ ಹ್ಯುಂಡೈ ವೆನ್ಯೂ

ಖರೀದಿಗೆ ಲಭ್ಯವಿರುವ ಬಣ್ಣಗಳು

ವೆನ್ಯೂ ಕಾರು ಒಟ್ಟು 10 ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದ್ದು, 7 ಸಿಂಗಲ್ ಟೋನ್ ಮತ್ತು 3 ಡ್ಯುಯಲ್ ಟೋನ್ ಬಣ್ಣಗಳ ಆಯ್ಕೆಯನ್ನು ಪಡೆದಿದೆ. ಸಿಂಗಲ್ ಟೋನ್‌ನಲ್ಲಿ ಪೊಲಾರ್ ವೈಟ್, ಸಿಲ್ವರ್, ಫ್ಲೆರಿ ರೆಡ್, ಡೆನಿಮ್ ಬ್ಲ್ಯೂ, ಲಾವಾ ಆರೆಂಜ್, ಸ್ಟಾರ್ ಡಸ್ಟ್, ಡೀಪ್ ಫಾರೆಸ್ಟ್ ಮತ್ತು ಡ್ಯುಯಲ್ ಟೋನ್‌ನಲ್ಲಿ ಡೆನಿಮ್ ಬ್ಲ್ಯೂ ಜೊತೆ ಪೊಲಾರ್ ವೈಟ್ ರೂಫ್, ಪೊಲಾರ್ ವೈಟ್ ಜೊತೆ ಬ್ಲ್ಯಾಕ್ ರೂಫ್ ಮತ್ತು ಲಾವಾ ಆರೇಂಜ್ ಜೊತೆ ಬ್ಲ್ಯಾಕ್ ರೂಫ್ ನೀಡಲಾಗಿದೆ.

More from DriveSpark

Article Published On: Saturday, June 1, 2019, 14:35 [IST]
English summary
India's First Modified Hyundai Venue (Video). Read In Kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+