Just In
- 10 hrs ago ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- 11 hrs ago ಟೊಯೊಟಾದ ಫಾರ್ಚ್ಯೂನರ್ನಲ್ಲೂ ಸಿಗಲಿದೆ ಹೈಬ್ರಿಡ್: ಇದರ ಮೈಲೇಜ್ ಕೇಳಿ ಸುಸ್ತಾದ ಗ್ರಾಹಕರು!
- 11 hrs ago ನಿಜವಾದ ಮಾನವತಾವಾದಿ: ನಟ ರಾಘವ ಲಾರೆನ್ಸ್ರಿಂದ ವಿಶೇಷ ಚೇತನ ಸಾಧಕರಿಗೆ 13 ಟಿವಿಎಸ್ ಸ್ಕೂಟರ್ ಗಿಫ್ಟ್
- 13 hrs ago ಜನ ಕ್ಯೂ ನಿಂತು ಖರೀದಿಸುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಮಾರಾಟದಲ್ಲಿ ಕುಸಿತ: ಕಾರಣವೇನು?
Don't Miss!
- News Lok Sabha Election 2024 Phase 1 Polling LIVE: ಲೋಕಸಭಾ ಚುನಾವಣೆ 2024ರ ಮೊದಲ ಹಂತದ ಮತದಾನ!
- Movies 'ಮಾರ್ಟಿನ್' ಚಿತ್ರದ ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್: ಕೊನೆಗೂ ಸಿಕ್ತು ಸ್ಪಷ್ಟನೆ
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಜೀಪ್ ನಿರ್ಮಾಣದ ಹೊಸ 7 ಸೀಟರ್ ಎಸ್ಯುವಿ
ಪ್ರೀಮಿಯಂ ಎಸ್ಯುವಿ ಕಾರುಗಳ ಮಾರಾಟದಲ್ಲಿ ಮಹತ್ವದ ಬದಲಾವಣೆ ತರುತ್ತಿರುವ ಜೀಪ್ ಇಂಡಿಯಾ ಸಂಸ್ಥೆಯು ಕಂಪಾಸ್ ಎಸ್ಯುವಿ ಕಾರಿನ ಯಶಸ್ವಿ ನಂತರ ಶೀಘ್ರದಲ್ಲೇ ಮತ್ತೆರಡು ಹೊಸ ಕಾರುಗಳನ್ನು ಬಿಡುಗಡೆ ಮಾಡುವ ಸುಳಿವು ನೀಡಿದ್ದು, ಭಾರತೀಯ ಗ್ರಾಹಕರ ಬೇಡಿಕೆಯೆಂತೆ ಸಣ್ಣ ಗಾತ್ರದ ಎಸ್ಯುವಿ ಜೊತೆ ಬಿ ಸೆಗ್ಮೆಂಟ್ನಲ್ಲೂ ಹೊಸ ಮಾದರಿಯ ಎಸ್ಯುವಿಯೊಂದನ್ನು ಅಭಿವೃದ್ಧಿಪಡಿಸುವುದಾಗಿ ಹೇಳಿಕೊಂಡಿದೆ.
ಸದ್ಯ ದೇಶಿಯ ಮಾರುಕಟ್ಟೆಯಲ್ಲಿ ಎಸ್ಯುವಿ ಮತ್ತು ಕಂಪ್ಯಾಕ್ಟ್ ಎಸ್ಯುವಿ ಕಾರುಗಳಿಗೆ ಉತ್ತಮ ಬೇಡಿಕೆ ಕಂಡುಬರುತ್ತಿದ್ದು, ಇದೇ ನಿಟ್ಟಿನಲ್ಲಿ ಹೊಸ ಯೋಜನೆ ರೂಪಿಸುತ್ತಿರುವ ಜೀಪ್ ಸಂಸ್ಥೆಯು ರೂ.10 ಲಕ್ಷದೊಳಗೆ ಒಂದು ಕಂಪ್ಯಾಕ್ಟ್ ಎಸ್ಯುವಿ ಮಾದರಿಯನ್ನು ಮತ್ತು ಬಿ ಸೆಗ್ಮೆಂಟ್ನಲ್ಲಿ ಜನಪ್ರಿಯವಾಗಿರುವ ಟೊಯೊಟಾ ಫಾರ್ಚೂನರ್ ಮತ್ತು ಫೋರ್ಡ್ ಎಂಡೀವರ್ ಕಾರುಗಳಿಗೆ ಪ್ರತಿಸ್ಪರ್ಧಿಯಾಗಿ ಐಷಾರಾಮಿ 7 ಸೀಟರ್ ಎಸ್ಯುವಿ ಮಾದರಿಯೊಂದನ್ನು ಬಿಡುಗಡೆಗೊಳಿಸುವ ಇರಾದೆಯಲ್ಲಿದೆ.
ಹೊಸ ಕಾರುಗಳ ಬಿಡುಗಡೆ ಕುರಿತಂತೆ ಮಾತನಾಡಿರುವ ಜೀಪ್ ಇಂಡಿಯಾ ಸಿಇಒ ಕೇವಿನ್ ಫ್ಲೈಯನ್ ಅವರು, ಅಭಿವೃದ್ಧಿ ಪಥದಲ್ಲಿರುವ ಭಾರತದಲ್ಲಿ ಪ್ರೀಮಿಯಂ ಕಾರುಗಳ ಮಾರುಕಟ್ಟೆಗೆ ತ್ವರಿತಗತಿಯಲ್ಲಿ ಬೆಳವಣಿಗೆ ಕಾಣುತ್ತಿದ್ದು, ಗ್ರಾಹಕರ ಬೇಡಿಕೆಯೆಂತೆ ಕೆಲವು ಹೊಸ ಉತ್ಪನ್ನಗಳನ್ನು ಬಿಡುಗಡೆಗೊಳಿಸಲು ಇದು ಸೂಕ್ತ ಸಮಯ ಎಂದಿದ್ದಾರೆ.
ಕೇವಿನ್ ಫ್ಲೆಯನ್ ಅವರು ಪ್ರಕಾರ, ರೂ.10 ಲಕ್ಷ ಬೆಲೆಯೊಳಗಿನ ಕಾರುಗಳು ಸಾಕಷ್ಟು ಲಾಭದಾಯಕವಾಗಲಿದ್ದರೆ, ಪ್ರೀಮಿಯಂ ಕಾರುಗಳು ಬ್ರಾಂಡ್ ಮೌಲ್ಯವನ್ನು ಹೆಚ್ಚಿಸಲಿವೆ. ಹೀಗಾಗಿ ಎರಡು ಮಾದರಿಯಲ್ಲೂ ಕಾರುಗಳನ್ನು ಹೊರತರಲಾಗುತ್ತಿದ್ದು, ಮುಂಬರುವ ಕೆಲವೇ ದಿನಗಳಲ್ಲಿ ಹೊಸ ಕಾರುಗಳು ಭಾರತೀಯ ರಸ್ತೆಗಿಳಿಯಲಿವೆ ಎಂದಿದ್ದಾರೆ.
ಹೀಗಾಗಿ ಜೀಪ್ ಸಂಸ್ಥೆಯು ಭಾರತದಲ್ಲಿ ರೂ.10 ಲಕ್ಷ ಬೆಲೆಯ ಅಂತರದಲ್ಲಿ ರೆನೆಗೆಡ್ ಕಂಪ್ಯಾಕ್ಟ್ ಎಸ್ಯುವಿ ಕಾರುನ್ನು ಬಿಡುಗಡೆ ಮಾಡಲಿದ್ದರೆ, ಟೊಯೊಟಾ ಫಾರ್ಚೂನರ್ ಕಾರಿಗೆ ಪ್ರತಿಸ್ಪರ್ಧಿಯಾಗಿ ಗ್ರ್ಯಾಂಡ್ ಕಮಾಂಡರ್ ಅಥವಾ ಗ್ರ್ಯಾಂಡ್ ಕಮಾಂಡರ್ ಹೋಲಿಕೆ ಇರುವ ಮತ್ತೊಂದು ಹೊಸ ಕಾರು ಉತ್ಪನ್ನವನ್ನು ಬಿಡುಗಡೆಗೊಳಿಸುವ ಬಗ್ಗೆ ಮುಂದಿನ ಕೆಲವೇ ದಿನಗಳಲ್ಲಿ ಮಾಹಿತಿ ಹಂಚಿಕೊಳ್ಳುವುದಾಗಿ ಮಾಹಿತಿ ನೀಡಿದೆ.
ಒಟ್ಟಿನಲ್ಲಿ ಭಾರತದಲ್ಲಿ ಜೀಪ್ ಸಂಸ್ಥೆಯು ಹೊಸದಾಗಿ ಎರಡು ಕಾರುಗಳು ಬಿಡುಗಡೆಯಾಗುವುದು ಖಚಿತವಾಗಿದ್ದು, ಹೊಸ ಯೋಜನೆಯ ಭಾಗವಾಗಿ ಕಾರುಗಳ ಉತ್ಪಾದನಾ ಸಾಮಾರ್ಥ್ಯವನ್ನು ಸಹ ಹೆಚ್ಚಿಸುವತ್ತ ಜೀಪ್ ಸಂಸ್ಥೆಯು ಭಾರೀ ಪ್ರಮಾಣದಲ್ಲಿ ಬಂಡವಾಳ ಹೂಡಿಕೆ ಮಾಡಿದೆ.
ಪುಣೆಯ ಬಳಿಯಿರುವ ರಂಜನ್ಗಾಂವ್ನಲ್ಲಿ ಜೀಪ್ ಕಾರು ಉತ್ಪಾದನಾ ಘಟಕವನ್ನು ವಿಸ್ತರಣೆ ಮಾಡಲಾಗುತ್ತಿದ್ದು, ಇಷ್ಟು ದಿನಗಳ ಕಾಲ ಕಂಪಾಸ್ ಆವೃತ್ತಿ ಹೊರತುಪಡಿಸಿ ಇನ್ನುಳಿದ ಐಷಾರಾಮಿ ಕಾರುಗಳನ್ನು ವಿದೇಶಿ ಮಾರುಕಟ್ಟೆಗಳಿಂದ ಆಮದು ಮಾಡುತ್ತಿದ್ದ ಜೀಪ್ ಸಂಸ್ಥೆಯು ಇನ್ಮುಂದೆ ಭಾರತದಲ್ಲೇ ಪೂರ್ಣ ಪ್ರಮಾಣದಲ್ಲಿ ಹೊಸ ಕಾರುಗಳನ್ನು ಅಭಿವೃದ್ಧಿಪಡಿಸಲಿದೆ.
MOST READ: ಖರೀದಿಸಿದ ಬೈಕ್ ಪಡೆಯಲು ಕಾನೂನು ಹೋರಾಟ ಮಾಡಿದ ಉದ್ಯಮಿ
2020 ಕೊನೆಯಲ್ಲಿ ಅಥವಾ 2021ರ ಆರಂಭದಲ್ಲಿ ಹೊಸ ಕಾರುನ್ನು ಬಿಡುಗಡೆಗೊಳಿಸುವ ಯೋಜನೆ ರೂಪಿಸಿರುವ ಜೀಪ್ ಸಂಸ್ಥೆಯು ಫಾರ್ಚೂನರ್ ಪ್ರತಿಸ್ಪರ್ಧಿ ಕಾರಿನಲ್ಲಿ 2.7-ಲೀಟರ್ ಡೀಸೆಲ್ ಎಂಜಿನ್ ಮತ್ತು 2.5-ಲೀಟರ್ ಪೆಟ್ರೋಲ್ ಎಂಜಿನ್ ಒದಗಿಸಲಿದ್ದರೆ, ಕಂಪ್ಯಾಕ್ಟ್ ಎಸ್ಯುವಿ ಮಾದರಿಯಾದ ರೆನೆಗೆಡ್ನಲ್ಲಿ 1.2-ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಅಳವಡಿಸುವ ಸಾಧ್ಯತೆಗಳಿವೆ.
MOST READ: ಚಾರ್ಜಿಂಗ್ ಸೌಲಭ್ಯ ನೀಡದ ಬಸ್ಸಿಗೆ ಬಿತ್ತು 5,000 ದಂಡ
ಅದಕ್ಕೂ ಮುನ್ನ ಜೀಪ್ ಸಂಸ್ಥೆಯು ರ್ಯಾಂಗ್ಲರ್ ಫೇಸ್ಲಿಫ್ಟ್ ಆವೃತ್ತಿಯನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದ್ದು, ತದನಂತರ ಗ್ರ್ಯಾಂಡ್ ಚರೋಕಿ ಫೇಸ್ಲಿಫ್ಟ್ ಮತ್ತು ಜೀಪ್ ಕಂಪಾಸ್ ಫೇಸ್ಲಿಫ್ಟ್ ಆವೃತ್ತಿಗಳನ್ನು ಬಿಡುಗಡೆಗೊಳಿಸಲು ಯೋಜನೆ ರೂಪಿಸಿದೆ.