Just In
- 11 hrs ago ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- 12 hrs ago ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- 14 hrs ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- 14 hrs ago ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
Don't Miss!
- Technology Earbuds: 2000 ರೂ. ಒಳಗೆ ಲಭ್ಯ ಇರುವ ಅತ್ಯುತ್ತಮ ಇಯರ್ಬಡ್ಸ್! ಸಖತ್ ಫೀಚರ್ಸ್...
- Finance mukesh ambaniಗೆ 67 ವರ್ಷ, ಅವರು ಹೊಂದಿರುವ ದುಬಾರಿ ವಸ್ತುಗಳು ಏನೇನು ಗೊತ್ತಾ?
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Movies ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶೀಘ್ರವೇ ಬಿಡುಗಡೆಗೊಳ್ಳಲಿದೆ ಜೀಪ್ ಕಂಪಾಸ್ ಟ್ರೈಲ್ಹಾವ್ಕ್ ಎಸ್ಯುವಿ ಕಾರು
ದೇಶಿಯ ಮಾರುಕಟ್ಟೆಯಲ್ಲಿ ತಮ್ಮ ವಾಹನಗಳಿಂದ ಜನಪ್ರಿಯತೆಯನ್ನು ಪಡೆದುಕೊಂಡ ಜೀಪ್ ಸಂಸ್ಥೆಯು ಇದೀಗ ಮಾರುಕಟ್ಟೆಗೆ ತಮ್ಮ ಕಂಪಾಸ್ ಟ್ರೈಲ್ಹಾವ್ಕ್ಸ್ ಎಸ್ಯುವಿ ಕಾರನ್ನು ಪರಿಚಯಿಸಲಿದ್ದು, ಮಹಾರಾಷ್ಟ್ರದಲ್ಲಿನ ಫಿಯಾಟ್ ಕ್ರಿಸ್ಲೆರ್ ರಂಜಾನ್ಗೌನ್ ಪ್ಲಾಂಟ್ನಲ್ಲಿ ಬಿಡಿಭಾಗಗಳನ್ನು ಜೋಡಿಸುವ ಕಾರ್ಯದಲ್ಲಿದೆ.
ಜೀಪ್ ಕಂಪಾಸ್ ಟ್ರೈಲ್ಹಾವ್ಕ್ ವೇರಿಯಂಟ್ ಇದೇ ವರ್ಷದ ಜೂನ್ ಅಥವಾ ಜುಲೈ ತಿಂಗಳಿನಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳ್ಳುವುದಾಗಿ ಕಾರ್ಟಾಕ್ ವರದಿಗಳು ಹೇಳಲಾಗಿದೆ. ಇದರ ಜೊತೆಗೆ ಜೂನ್ ಮೊದಲ ವಾರದಲ್ಲಿ ಅಧಿಕೇತವಾಗಿ ಬಹಿರಂಗಪಡಿಸಲಿದೆ ಎಂಬ ಮಾಹಿತಿ ಕೂಡಾ ಲಭ್ಯವಾಗಿದೆ. ಸಾಧಾರಣ ಜೀಪ್ ಕಂಪಾಸ್ ಕಾರುಗಳಿಗೆ ಹೋಲಿಸಿದರೆ ವಿನ್ಯಾಸದಲ್ಲಿ ಹೆಚ್ಚು ಬದಲಾವಣೆಗಳನ್ನು ಪಡೆದುಕೊಳ್ಳಲ್ಲಿದೆ. ಈ ಬಾರಿ ಮರುವಿನ್ಯಾಸಗೊಳಿಸಲಾದ ಬಂಪರ್, ತೋ ಹುಕ್ಸ್, ಹೆಚ್ಚಿನ ಗ್ರೌಂಡ್ ಕ್ಲಿಯರೆನ್ಸ್, 17 ಇಂಚಿನ ವ್ಹೀಲ್ಸ್ ಮತ್ತು ಪ್ಯಾನಾರಮಿಕ್ ಸನ್ರೂಫ್ ಅನ್ನು ನೀಡಲಾಗಿದೆ.
ಜೀಪ್ ಸಂಸ್ಥೆಯು ಇತ್ತೀಚೆಗೆ ತಮ್ಮ ಹೊಸ ಕಂಪಾಸ್ ಲಿಮಿಟೆಡ್ ಎಡಿಷನ್ ಕಾರನ್ನು ಬಿಡುಗಡೆಗೊಳಿಸಿದ್ದು, ದೆಹಲಿಯ ಎಕ್ಸ್ ಶೋರಂ ಪ್ರಕಾರ ರೂ. 21.07 ಲಕ್ಷದ ಮಾರಾಟದ ಬೆಲೆಯನ್ನು ಪಡೆದುಕೊಂಡಿದೆ. ದೇಶದಲ್ಲಿನ ಜೀಪ್ ಅಭಿಮಾನಿಗಳು ಇದೀಗ ಟ್ರೈಲ್ಹಾವ್ಕ್ ಕಾರಿನ ಬಿಡುಗಡೆಗಾಗಿ ಕಾತುರದಲ್ಲಿದ್ದಾರೆ.
ಟ್ರೈಲ್ಹಾವ್ಕ್ ಕಾರಿನಲ್ಲಿ ಹೈಲೈಟ್ ಎಂದರೆ, ಕಾರಿಗೆ ನೀಡಲಾದ 'ಟ್ರೈಲ್ಹಾವ್ಕ್' ಬ್ಯಾಡ್ಜಿಂಗ್, ಹೊಸ 8.4 ಇಂಚಿನ ಅನ್-ಕನೆಕ್ಟ್ ಟಚ್ಸ್ಕ್ರೀನ್ ಇನ್ಫೀಟೈನೆಂಟ್ ಸಿಸ್ಟಂ ಮತ್ತು ಕಾರಿನ ಲಿಮಿಟೆಡ್ ಪ್ಲಸ್ಸ್ ಕಾರಿನಲ್ಲಿ ಹಲವಾರು ಸುರಕ್ಷಾ ಸೌಲಭ್ಯಗಳನ್ನು ನೀಡಲಾಗಿದ್ದು, ಮಾರುಕಟ್ಟೆಗೆ ಒಮ್ಮೆ ಲಗ್ಗೆ ಇಟ್ಟಲ್ಲಿ ಜೀಪ್ ಕಂಪಾಸ್ ಕಾರಿನಲ್ಲಿ ಪ್ರೀಮಿಯಂ ವೈಶಿಷ್ಟ್ಯತೆಗಳನ್ನು ಪಡೆದುಕೊಂಡಿರುವ ಕಾರೆಂಬ ಖ್ಯಾತಿ ಪಡೆಯಲಿದೆ.
ಇನ್ನು ಕಾರಿನ ಸ್ಪೈ ಚಿತ್ರಗಳನ್ನು ಗಮನಿಸಿದಲ್ಲಿ ಕಪ್ಪು ಡೆಕಲ್ಸ್, ರೆಡ್ ಹುಕ್ಸ್, ಅಪ್ಪರ್ ಗ್ರಿಲ್, ಫಾಗ್ ಲ್ಯಾಂಪ್ ಬೆಸೆಲ್ಸ್, ರೂಫ್ ರೈಲ್ಸ್, 17 ಇಂಚಿನ ಡ್ಯುಯಲ್ ಟೋನ್ ಆಫ್ ರೋಡ್ ಅಲಾಯ್ ವ್ಹೀಲ್ಸ್, ಕಪ್ಪನೆಯ ಜೀಪ್ ಬ್ಯಾಡ್ಜೆಸ್, ಟ್ರೈಲ್ ರೇಟೆಡ್ ಫೆಂಡರ್ ಮತ್ತು ಟ್ರೈಲ್ ಹ್ವಾಕ್ ಟೈಲ್ಗೇಟ್ ಬ್ಯಾಡ್ಜಿಂಗ್ ಅನ್ನು ಅಳವಡಿಸಲಾಗಿದೆ.
ಈಗಾಗಲೆ ಈ ಕಾರು ಭಾರತೀಯ ರಸ್ತೆಗಳಲ್ಲಿ ತನ್ನ ಎಂಜಿನ್ ಕಾರ್ಯಕ್ಷಮತೆಯನ್ನು ಪರೀಶೀಲಿಸಲಾಗುತ್ತಿದೆ. ಸ್ಪಾಟ್ ಟೆಸ್ಟಿಂಗ್ ವೇಳೆ ಕಾರಿನ ಇಂಟೀರಿಯರ್ ವಿನ್ಯಾಸಗಳು ಕೂಡಾ ಬಹಿರಂಗವಾಗಿದ್ದು, ಸಂಪೂರ್ಣ ಕಪ್ಪು ಮತ್ತು ಕೆಂಪು ಬಣ್ಣವನ್ನು ಹೈಲೈಟ್ ಮಾಡಿರಬಹುದೆಂದು ಹೇಳಲಾಗಿದೆ. ಡ್ರೈವರ್ ಮತ್ತು ಪ್ಯಾಸೆಂಜರ್ ಸೀಟ್ ಗಳು ಲೆದರ್ನಿಂದ ಸುತ್ತುವರೆದಿದೆ.
ಎಂಜಿನ್ ಸಾಮರ್ಥ್ಯ
ಭಾರತಕ್ಕೆ ಬರಲಿರುವ ಜೀಪ್ ಕಂಪಾಸ್ ಟ್ರೈಲ್ಹ್ವಾಕ್ ಕಾರು ಪೆಟ್ರೋಲ್ ಹಾಗು ಡೀಸೆಲ್ ಎಂಜಿನ್ ಆಯ್ಕೆಗಳಲ್ಲಿ ಲಭ್ಯವಿದಲಿದ್ದು, ಪೆಟ್ರೋಲ್ ಆಧಾರಿತ ಕಾರುಗಳು 1.4 ಲೀಟರ್ ಮಲ್ಟಿಏರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಸಹಾಯದಿಂದ 160 ಬಿಹೆಚ್ಪಿ ಮತ್ತು 250ಎನ್ಎಮ್ ಟಾರ್ಕ್ ಅನ್ನು ಉತ್ಪಾದಿಸುವ ಶಕ್ತಿಯನ್ನು ಪಡೆದುಕೊಂಡಿದೆ.
ಇನ್ನು ಡೀಸೆಲ್ ಆಧಾರಿತ ಜೀಪ್ ಕಂಪಾಸ್ ಟ್ರೈಲ್ಹಾವ್ಕ್ ಕಾರುಗಳು 2.0 ಲೀಟರ್ ಮಲ್ಟಿಜೆಟ್ ಡೀಸೆಲ್ ಎಂಜಿನ್ ಸಹಾಯದಿಂದ 170ಬಿಹೆಚ್ಪಿ ಮತ್ತು 350ಎನ್ಎಮ್ ಟಾರ್ಕ್ ಅನ್ನು ಉತ್ಪಾದಿಸುವ ಶಕ್ತಿಯನ್ನು ಪಡೆದುಕೊಂಡಿದೆ. ಪೆಟ್ರೋಲ್ ಎಂಜಿನ್ ಅನ್ನು 6 ಸ್ಪೀಡ್ ಆಟೋಮ್ಯಾಟಿಕ್ ಗೇರ್ಬಾಕ್ಸ್ ಹಾಗು ಡೀಸೆಲ್ ಎಂಜಿನ್ ಅನ್ನು 6 ಸ್ಪೀಡ್ ಮ್ಯಾನುವಲ್ ಗೇರ್ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ.
ಜೀಪ್ ಕಂಪಾಸ್ ಟ್ರೈಲ್ಹಾವ್ಕ್ ಕಾರು ಒಮ್ಮೆ ಬಿಡುಗಡೆಗೊಂಡಲ್ಲಿ ಸಮರು 23ಲಕ್ಷದ (ಅಂದಾಜು) ಮಾರಾಟದ ಬೆಲೆಯನ್ನು ಪಡೆದುಕೊಳ್ಳಲಿದ್ದು, ಮಾರುಕಟ್ತೆಯಲ್ಲಿರುವ ಮಹೀಂದ್ರಾ ಎಕ್ಸ್ಯುವಿ 500 ಮತ್ತು ಬಿಡುಗಡೆಗೊಳ್ಳಲಿರುವ ಟಾಟಾ ಸಂಸ್ಥೆಯ ಹ್ಯಾರಿಯರ್ ಕಾರುಗಳಿಗೆ ಪೈಪೋಟಿ ನೀಡಲಿದೆ.