ಆಫ್ ರೋಡ್ ಪ್ರಿಯರಿಗಾಗಿ ಜೀಪ್ ಕಂಪಾಸ್ ಸ್ಪೋರ್ಟ್ ಪ್ಲಸ್ ವೆರಿಯೆಂಟ್ ಬಿಡುಗಡೆ

ಮಧ್ಯಮ ಕ್ರಮಾಂಕದ ಐಷಾರಾಮಿ ಎಸ್‌ಯುವಿ ಕಾರುಗಳಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿರುವ ಜೀಪ್ ಕಂಪಾಸ್ ಎಸ್‌ಯುವಿ ಮಾದರಿಯಲ್ಲಿ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹೊಸ ಸ್ಪೋರ್ಟ್ ಆವೃತ್ತಿಯೊಂದನ್ನು ಬಿಡುಗಡೆ ಮಾಡಲಾಗಿದ್ದು, ಆಫ್ ರೋಡ್ ಪ್ರಿಯರ ಬೇಡಿಕೆ ಪೂರೈಕೆಗೆ ಹೊಸ ವೆರಿಯೆಂಟ್ ಸಾಕಷ್ಟು ಸಹಕಾರಿಯಾಗಲಿದೆ.

ಆಫ್ ರೋಡ್ ಪ್ರಿಯರಿಗಾಗಿ ಜೀಪ್ ಕಂಪಾಸ್ ಸ್ಪೋರ್ಟ್ ಪ್ಲಸ್ ವೆರಿಯೆಂಟ್ ಬಿಡುಗಡೆ

ಜೀಪ್ ಸಂಸ್ಥೆಯು ಸದ್ಯ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಪೆಟ್ರೋಲ್ ಮತ್ತು ಡೀಸೆಲ್ ಆವೃತ್ತಿಗಳಲ್ಲಿ ಒಟ್ಟು ಹತ್ತು ವೆರಿಯೆಂಟ್‌ಗಳನ್ನು ಮಾರಾಟ ಮಾಡುತ್ತಿದ್ದು, ಆರಂಭಿಕ ವೆರಿಯೆಂಟ್ ಸ್ಪೋರ್ಟ್ ಮಾದರಿಗಿಂತ ತುಸು ತಾಂತ್ರಿಕವಾಗಿ ಬಲಿಷ್ಠಲಾಗಿರುವ ಸ್ಪೋರ್ಟ್ ಪ್ಲಸ್ ವೆರಿಯೆಂಟ್ ಅನ್ನು ಇದೀಗ ಬಿಡುಗಡೆ ಮಾಡಲಾಗಿದೆ. ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ರೂ.15.99 ಲಕ್ಷ ಬೆಲೆ ಪಡೆದುಕೊಂಡಿದ್ದು, ಸ್ಪೋರ್ಟ್ ಮತ್ತು ಲ್ಯಾಂಗಿಟ್ಯುಡ್ ವೆರಿಯೆಂಟ್ ಮಧ್ಯದ ಕಾರು ಆವೃತ್ತಿಯಾಗಿ ಇದು ಮಾರಾಟಗೊಳ್ಳಲಿದೆ.

ಆಫ್ ರೋಡ್ ಪ್ರಿಯರಿಗಾಗಿ ಜೀಪ್ ಕಂಪಾಸ್ ಸ್ಪೋರ್ಟ್ ಪ್ಲಸ್ ವೆರಿಯೆಂಟ್ ಬಿಡುಗಡೆ

ಹೊಸ ವೆರಿಯೆಂಟ್‌ನಲ್ಲಿ ಸ್ಪೋರ್ಟ್ ಮಾದರಿಗಿಂತ ತುಸು ಹೆಚ್ಚುವರಿ ತಾಂತ್ರಿಕ ಸೌಲಭ್ಯಗಳನ್ನು ಸೇರಿಸಲಾಗಿದ್ದು, 16-ಇಂಚಿನ ಅಲಾಯ್ ವೀಲ್ಹ್, ಡ್ಯುಯಲ್ ಜೋನ್ ಕ್ಲೈಮೆಟ್ ಕಂಟ್ರೋಲ್, ಬ್ಲ್ಯಾಕ್ ರೂಫ್ ರೈಲ್ಸ್, ರಿಯರ್ ಪಾರ್ಕಿಂಗ್ ಸೆನ್ಸಾರ್, ಆಲ್ ವೀಲ್ಹ್ ಡಿಸ್ಕ್ ಬ್ರೇಕ್ ಸೌಲಭ್ಯವನ್ನು ನೀಡಲಾಗಿದೆ.

ಆಫ್ ರೋಡ್ ಪ್ರಿಯರಿಗಾಗಿ ಜೀಪ್ ಕಂಪಾಸ್ ಸ್ಪೋರ್ಟ್ ಪ್ಲಸ್ ವೆರಿಯೆಂಟ್ ಬಿಡುಗಡೆ

ಕೆಲವು ತಾಂತ್ರಿಕ ಅಂಶಗಳನ್ನು ಹೊರತುಪಡಿಸಿ ಎಂಜಿನ್ ಸೌಲಭ್ಯವನ್ನು ಈ ಹಿಂದಿನಂತೆಯೇ ಮುಂದುವರಿಸಲಾಗಿದ್ದು, ಡೀಸೆಲ್ ಮತ್ತು ಪೆಟ್ರೋಲ್ ಎರಡು ಆವೃತ್ತಿಯಲ್ಲಿ ಲಭ್ಯವಿರುವ ಸ್ಪೋರ್ಟ್ ಪ್ಲಸ್ ಮಾದರಿಯು 2.0-ಲೀಟರ್ ಟರ್ಬೋ ಡೀಸೆಲ್ ಎಂಜಿನ್ ಮತ್ತು 1.4-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಪಡೆದುಕೊಂಡಿದೆ.

ಆಫ್ ರೋಡ್ ಪ್ರಿಯರಿಗಾಗಿ ಜೀಪ್ ಕಂಪಾಸ್ ಸ್ಪೋರ್ಟ್ ಪ್ಲಸ್ ವೆರಿಯೆಂಟ್ ಬಿಡುಗಡೆ

ಡೀಸೆಲ್ ಆವೃತ್ತಿಗಳಲ್ಲಿ 6-ಸ್ಪೀಡ್ ಗೇರ್‌ಬಾಕ್ಸ್ ಮತ್ತು ಪೆಟ್ರೋಲ್ ಆವೃತ್ತಿಗಳಲ್ಲಿ 7-ಸ್ಪೀಡ್ ಗೇರ್‌ಬಾಕ್ಸ್ ವ್ಯವಸ್ಥೆಯನ್ನು ಕಲ್ಪಿಸಿರುವ ಜೀಪ್ ಸಂಸ್ಥೆಯು ಕಂಪಾಸ್ ಮಾದರಿಗಳಲ್ಲಿ ಆಟೋ , ಸ್ನೋ, ಸ್ಯಾಂಡ್ ಮತ್ತು ಮಡ್ ಡ್ರೈವಿಂಗ್ ಮೂಡ್‌ಗಳಲ್ಲಿ ಚಾಲನೆಗೆ ಅವಕಾಶ ನೀಡಿದೆ.

ಆಫ್ ರೋಡ್ ಪ್ರಿಯರಿಗಾಗಿ ಜೀಪ್ ಕಂಪಾಸ್ ಸ್ಪೋರ್ಟ್ ಪ್ಲಸ್ ವೆರಿಯೆಂಟ್ ಬಿಡುಗಡೆ

ಹಾಗೆಯೇ ಕಪ್ಪು ಬಣ್ಣದ ಡ್ಯಾಶ್‌ಬೋರ್ಡ್, ಆಫ್ ವೈಟ್ ಬಣ್ಣದೊಂದಿಗೆ ಕೂಡಿದ ಸೀಟುಗಳು ಮತ್ತು ಮೇಲ್ಛಾವಣೆ, ಅತ್ಯುತ್ತಮ ಆಸನ ವ್ಯವಸ್ಥೆ, ಹಿಂಭಾಗದ ಸೀಟಿನ ಮಧ್ಯದ ಆರ್ಮ್ ರೆಸ್ಟ್, 5-ಇಂಚಿನ ಟಚ್ ಸ್ಕ್ರಿನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಕಾರ್ ಪ್ಲೇ, ಆಂಡ್ರಾಯಿಡ್ ಆಟೋ, ಯುಎಸ್‌ಬಿ ಸೇರಿದಂತೆ ಪ್ರಸ್ತುತ ಸೌಲಭ್ಯಗಳನ್ನು ಹೊಂದಿದೆ.

ಆಫ್ ರೋಡ್ ಪ್ರಿಯರಿಗಾಗಿ ಜೀಪ್ ಕಂಪಾಸ್ ಸ್ಪೋರ್ಟ್ ಪ್ಲಸ್ ವೆರಿಯೆಂಟ್ ಬಿಡುಗಡೆ

ಇದರೊಂದಿಗೆ ಜೀಪ್ ಕಂಪಾಸ್ ಮಾದರಿಗಳಲ್ಲಿ ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡಲಾಗಿದ್ದು, 6 ಏರ್‌ಬ್ಯಾಗ್, ಡ್ಯುಯಲ್ ಸ್ಟೇಜ್ ಆಕ್ಟಿವೇಷನ್, ಟಿಸಿಎಸ್, ಇಬಿಡಿ, ಇಎಸ್‌ಪಿ ಮತ್ತು ಎಬಿಎಸ್ ತಂತ್ರಜ್ಞಾನಗಳ ಜೋಡಣೆ ಮಾಡಲಾಗಿದೆ.

MOST READ: ಕಾನೂನು ಬಾಹಿರ ಮಾಡಿಫೈ ಮಾಡಿಸಿದ ಕಾರು ಮಾಲೀಕನಿಗೆ ಬರೋಬ್ಬರಿ 5 ಲಕ್ಷ ದಂಡ..!

ಆಫ್ ರೋಡ್ ಪ್ರಿಯರಿಗಾಗಿ ಜೀಪ್ ಕಂಪಾಸ್ ಸ್ಪೋರ್ಟ್ ಪ್ಲಸ್ ವೆರಿಯೆಂಟ್ ಬಿಡುಗಡೆ

ಇದಲ್ಲದೇ ಕೀ ಲೇಸ್ ಡ್ರೈವಿಂಗ್, ಎಂಜಿನ್ ಸ್ಟಾರ್ಟ್/ಸ್ಟಾಪ್ ಬಟನ್, ರಿವರ್ಸ್ ಪಾರ್ಕಿಂಗ್ ಕ್ಯಾಮೆರಾ, ಡ್ಯುಯಲ್ ಜೋನ್ ಕ್ಲೈಮೆಟ್ ಕಂಟ್ರೋಲರ್ ಮತ್ತು ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್ ಒದಗಿಸಲಾಗಿದ್ದು, ಕಾರಿನ ಬೆಲೆಯು ಆರಂಭಿಕವಾಗಿ ಎಕ್ಸ್‌ಶೋರೂಂ ಪ್ರಕಾರ ರೂ. 15.40 ಲಕ್ಷದಿಂದ ಟಾಪ್ ಎಂಡ್ ಮಾದರಿಗೆ ರೂ. 22.90 ಲಕ್ಷ ಬೆಲೆ ಹೊಂದಿದೆ.

ಆಫ್ ರೋಡ್ ಪ್ರಿಯರಿಗಾಗಿ ಜೀಪ್ ಕಂಪಾಸ್ ಸ್ಪೋರ್ಟ್ ಪ್ಲಸ್ ವೆರಿಯೆಂಟ್ ಬಿಡುಗಡೆ

ಇನ್ನು ಮೇಡ್ ಇನ್ ಇಂಡಿಯಾ ಖ್ಯಾತಿಯ ಜೀಪ್ ಕಂಪಾಸ್ ಕಾರು ಈ ಹಿಂದೆ 2017ರ ನವೆಂಬರ್‌ನಲ್ಲಿ ಬಿಡುಗಡೆಯಾಗುವ ಮೂಲಕ ಹೊಸ ಟ್ರೆಂಡ್ ಸೃಷ್ಠಿಸಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ 1.6-ಲೀಟರ್ ಡಿಸೇಲ್ ಎಂಜಿನ್ ಮಾದರಿಯನ್ನು ಸಹ ಪರಿಚಯಿಸಲು ನಿಟ್ಟಿನಲ್ಲಿ ವಿವಿಧ ಮಾದರಿಯ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಕೈಗೊಳ್ಳುತ್ತಿದೆ.

Most Read Articles

Kannada
Read more on ಜೀಪ್ jeep
English summary
Jeep Compass ‘Sport Plus’ Variant Launched In India — Priced At Rs 15.99 Lakh. Read in Kannada.
Story first published: Thursday, April 4, 2019, 19:19 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X