ಅಗಸ್ಟ್ 9ಕ್ಕೆ ಬಿಡುಗಡೆಯಾಗಲಿದೆ ನಾಲ್ಕನೇ ತಲೆಮಾರಿನ ಜೀಪ್ ರ‍್ಯಾಂಗ್ಲರ್

ಜೀಪ್ ಸಂಸ್ಥೆಯು ಭಾರತದಲ್ಲಿ ನಾಲ್ಕನೇ ತಲೆಮಾರಿನ ರ‍್ಯಾಂಗ್ಲರ್ ಆಫ್ ರೋಡ್ ಎಸ್‌ಯುವಿ ಆವೃತ್ತಿಯನ್ನು ಇದೇ ತಿಂಗಳು 9ಕ್ಕೆ ಬಿಡುಗಡೆಗೊಳಿಸುವುದಾಗಿ ಹೇಳಿಕೊಂಡಿದ್ದು, ಹೊಸ ರ‍್ಯಾಂಗ್ಲರ್ ಕಾರು ಹಲವಾರು ಹೊಸ ಬದಲಾವಣೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿದೆ.

ಅಗಸ್ಟ್ 9ಕ್ಕೆ ಬಿಡುಗಡೆಯಾಗಲಿದೆ ನಾಲ್ಕನೇ ತಲೆಮಾರಿನ ಜೀಪ್ ರ‍್ಯಾಂಗ್ಲರ್

ಲಾಸ್ ಏಂಜಲೀಸ್ ಆಟೋ ಮೇಳದಲ್ಲಿ ಹೊಸ ಮಾದರಿಯ ರ‍್ಯಾಂಗ್ಲರ್ ಎಸ್‌ಯುವಿ ಕಾರುಗಳನ್ನು ಪ್ರದರ್ಶನಗೊಳಿಸಿದ್ದ ಜೀಪ್ ಸಂಸ್ಥೆಯು ಇದೀಗ ಬಿಡುಗಡೆಗೊಳಿಸಲು ಸಿದ್ದವಾಗುತ್ತಿದ್ದು, ಮೂರು ಬಾಗಿಲು ಆವೃತ್ತಿಯಾದ ರ‍್ಯಾಂಗ್ಲರ್ ರೂಬಿಕಾನ್ ಸಾಕಷ್ಟು ಆಕರ್ಷಣೆಗೆ ಕಾರಣವಾಗಿದೆ. ಇಲ್ಲಿ ಮತ್ತೊಂದು ಇಂಟ್ರಸ್ಟಿಂಗ್ ವಿಚಾರ ಅಂದ್ರೆ, ರೂಬಿಕಾನ್ ಹೆಸರನ್ನು ಅಂತರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಮಾತ್ರವೇ ಬಳಸಲು ನಿರ್ಧರಿಸಿರುವ ಜೀಪ್ ಸಂಸ್ಥೆಯು ಅದೇ ಕಾರನ್ನು ಭಾರತದಲ್ಲಿ ಮೊಬ್ ಹೆಸರಿನೊಂದಿಗೆ ಬಿಡುಗಡೆ ಮಾಡುವುದಾಗಿ ತಿಳಿಸಿದೆ.

ಅಗಸ್ಟ್ 9ಕ್ಕೆ ಬಿಡುಗಡೆಯಾಗಲಿದೆ ನಾಲ್ಕನೇ ತಲೆಮಾರಿನ ಜೀಪ್ ರ‍್ಯಾಂಗ್ಲರ್

ಇನ್ನು ಈ ಹಿಂದೆ ಸ್ಪಾಟ್ ಟೆಸ್ಟಿಂಗ್‌ನಲ್ಲಿ ಕಾಣಿಸಿಕೊಂಡಾಗ ರ‍್ಯಾಂಗ್ಲರ್ ಮೊಬ್ ಎಸ್‌ಯುವಿ ಕಾರು ಈ ಹಿಂದಿನ ಮಾದರಿಗಿಂತಲೂ ಸಾಕಷ್ಟು ಬದಲಾವಣೆ ಹೊಂದಿರುವುದು ಖಚಿತವಾಗಿದ್ದು, ಮರುವಿನ್ಯಾಸಗೊಳಿಸಲಾದ ಮುಂಭಾಗದ ಗ್ರಿಲ್, ದೊಡ್ಡದಾದ ಎಲ್ಇಡಿ ಹೆಡ್ ಲ್ಯಾಂಪ್ ಮತ್ತು ಎಲ್ಇಡಿ ಹಗಲಿನ ರನ್ನಿಂಗ್ ಲೈಟ್‌ಗಳನ್ನು ಫೆಂಡರ್‌ಗಳಲ್ಲಿ ಹೊಂದಿದೆ.

ಅಗಸ್ಟ್ 9ಕ್ಕೆ ಬಿಡುಗಡೆಯಾಗಲಿದೆ ನಾಲ್ಕನೇ ತಲೆಮಾರಿನ ಜೀಪ್ ರ‍್ಯಾಂಗ್ಲರ್

ಜೊತೆಗೆ ಕಾರಿನ ವಿಂಡೋಗಳುಜೊತೆಗೆ ಕಾರಿನ ಕಿಟಕಿಗಳು ಈ ಹಿಂದಿನ ಮಾದರಿಗಳಿಂತ ಸ್ವಲ್ಪ ಮಟ್ಟಿಗೆ ದೊಡ್ಡದಾಗಿದ್ದು, ವಿಸ್ತರಿತ ವಿಂಡ್ ಸ್ಕ್ರೀನ್, ಸ್ಲಿಕ್ ಎಲ್ಇಡಿ ಟೈಲ್ ಲೈಟ್ ಕ್ಲಸ್ಟರ್. ವೀಲ್ ಮತ್ತು ಪರಿಷ್ಕರಿಸಿದ ಬಂಪರ್ ಕೂಡಾ ಹೊಸ ಕಾರಿನ ವಿನ್ಯಾಸಕ್ಕೆ ಮೆರಗು ತಂದಿವೆ.

ಅಗಸ್ಟ್ 9ಕ್ಕೆ ಬಿಡುಗಡೆಯಾಗಲಿದೆ ನಾಲ್ಕನೇ ತಲೆಮಾರಿನ ಜೀಪ್ ರ‍್ಯಾಂಗ್ಲರ್

ಇನ್ನು ಕಾರಿನ ಇಂಟಿರಿಯರ್ ವಿನ್ಯಾಸಗಳ ಬಗೆಗೆ ಹೇಳುವುದಾದರೇ, ಈ ಹಿಂದಿನ ಮಾದರಿಯಂತೆಯೇ ಬಹುತೇಕ ಫೀಚರ್ಸ್‌ಗಳು ಹೊಸ ಮಾದರಿಯಲ್ಲೂ ಮುಂದುವರಿಸಲಾಗಿದ್ದು, ಸುಧಾರಿತ ಡ್ಯಾಶ್‌ಬೋರ್ಡ್, ಚಾಲಕನ ಭಾಗದಲ್ಲಿ 7 ಇಂಚಿನ್ ಎಲ್‌ಸಿಡಿ ಮಾಹಿತಿ ಪರದೆ ಮತ್ತು 8.4 ಇಂಚಿನ್ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ ಪಡೆದಿದೆ. ಹಾಗೆಯೇ 4ನೇ ಜನರೇಷನ್ ವೈಶಿಷ್ಟ್ಯತೆಗಳೊಂದಿಗೆ ನಿರ್ಮಾಣವಾಗುತ್ತಿರುವ 2019ರ ಜೀಪ್ ರ‍್ಯಾಂಗ್ಲರ್‌ ಮಾದರಿಗಳು ಈ ಬಾರಿ ವೀಲ್‌ಬೇಸ್‌ನಲ್ಲೂ ಬದಲಾವಣೆ ಹೊಂದಿದ್ದು, ಪರಿಣಾಮ ಲೆಗ್ ರೂಮಂ ವಿಸ್ತರಣೆ ಮಾಡುವ ಮೂಲಕ ಆಪ್ ರೋಡ್ ಪ್ರಿಯರಿಗೆ ಮತ್ತಷ್ಟು ಅನುಕೂಲ ಮಾಡಿಕೊಡಲಾಗಿದೆ.

ಅಗಸ್ಟ್ 9ಕ್ಕೆ ಬಿಡುಗಡೆಯಾಗಲಿದೆ ನಾಲ್ಕನೇ ತಲೆಮಾರಿನ ಜೀಪ್ ರ‍್ಯಾಂಗ್ಲರ್

ಎಂಜಿನ್ ಸಾಮರ್ಥ್ಯ

ಸದ್ಯ ವಿದೇಶಿ ಮಾರುಕಟ್ಟೆಯಲ್ಲಿರುವ ಹೊಸ ಜೀಪ್ ರ‍್ಯಾಂಗ್ಲರ್ ಆವೃತ್ತಿಗಳು 2 ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಮತ್ತು 2.2 ಲೀಟರ್ ಟರ್ಬೋಚಾರ್ಜ್ಡ್ ಡೀಸೆಲ್ ಎಂಜಿನ್ ಪಡೆದುಕೊಂಡಿದ್ದು, ಇದೇ ಮಾದರಿಗಳು ಭಾರತೀಯ ಮಾರುಕಟ್ಟೆಯಲ್ಲೂ ಬಿಡುಗಡೆಯಾಗಬಹುದು ಎನ್ನಲಾಗಿದೆ.

ಅಗಸ್ಟ್ 9ಕ್ಕೆ ಬಿಡುಗಡೆಯಾಗಲಿದೆ ನಾಲ್ಕನೇ ತಲೆಮಾರಿನ ಜೀಪ್ ರ‍್ಯಾಂಗ್ಲರ್

ಇದರೊಂದಿಗೆ ಹೈ ಪರ್ಫಾಮೆನ್ಸ್ ಬಯಸುವ ಗ್ರಾಹಕರಿಗೆ ಸಾಂಪ್ರದಾಯಿಕ ಎಂಜಿನ್‌ಗಳನ್ನು ಹೊರತುಪಡಿಸಿ 3.0-ಲೀಟರ್ ವಿ6 ಡಿಸೇಲ್ ಮತ್ತು 3.6-ಲೀಟರ್ ಪೆಟ್ರೋಲ್ ಎಂಜಿನ್‌ ಆಯ್ಕೆ ಕೂಡಾ ಲಭ್ಯವಿರಲಿದ್ದು, ಮೂರು ಬಾಗಿಲು ಮತ್ತು ಐದು ಬಾಗಿಲು ಆಯ್ಕೆಯೊಂದಿಗೆ ಹೊಸ ಕಾರು ಮಾರುಕಟ್ಟೆಗೆ ಬರಲಿದೆ.

ಅಗಸ್ಟ್ 9ಕ್ಕೆ ಬಿಡುಗಡೆಯಾಗಲಿದೆ ನಾಲ್ಕನೇ ತಲೆಮಾರಿನ ಜೀಪ್ ರ‍್ಯಾಂಗ್ಲರ್

ಹೊಸ ಕಾರುಗಳು 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಅಥವಾ 8-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಹೊಂದಲಿರುವ ಹೊಸ ಜೀಪ್ ರ‍್ಯಾಂಗ್ಲರ್‌ ಕಾರು ದೆಹಲಿ ಎಕ್ಸ್‌ಶೋರಂ ಪ್ರಕಾರ ಆರಂಭಿಕವಾಗಿ ರೂ.55 ಲಕ್ಷದಿಂದ ಟಾಪ್ ಎಂಡ್ ಮಾದರಿಗೆ ರೂ.65 ಲಕ್ಷ ಬೆಲೆ ಹೊಂದಿರಬಹುದೆಂದು ಅಂದಾಜಿಸಲಾಗಿದೆ.

Article Published On: Thursday, August 1, 2019, 19:04 [IST]
English summary
Jeep India to launch the fourth-gen Wrangler in the Indian market on August 9, 2019.
Read more on ಜೀಪ್ jeep
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+