ಸ್ಪಾಟ್ ಟೆಸ್ಟಿಂಗ್‌ನಲ್ಲಿ ಕಂಡು ಬಂದ ಜೀಪ್ ರ‍್ಯಾಂಗ್ಲರ್ ರೂಬಿಕಾನ್ ವೆರಿಯೆಂಟ್..!

ಐಷಾರಾಮಿ ಕಾರು ಉತ್ಪಾದನಾ ಜೀಪ್ ಸಂಸ್ಥೆಯು ಭಾರತದಲ್ಲಿ 2019ರ ರ‍್ಯಾಂಗ್ಲರ್ ಎಸ್‌ಯುವಿ ಆವೃತ್ತಿಯನ್ನು ಬಿಡುಗಡೆ ಮಾಡುತ್ತಿರುವ ಹಿನ್ನೆಲೆಯಲ್ಲಿ ವಿವಿಧ ಹಂತದ ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಮಾರುಕಟ್ಟೆಗೆ ಲಗ್ಗೆಯಿಡುವ ಸುಳಿವು ನೀಡಿದೆ.

ಸ್ಪಾಟ್ ಟೆಸ್ಟಿಂಗ್‌ನಲ್ಲಿ ಕಂಡು ಬಂದ ಜೀಪ್ ರ‍್ಯಾಂಗ್ಲರ್ ರೂಬಿಕಾನ್ ವೆರಿಯೆಂಟ್..!

2017ರ ಲಾಸ್ ಏಂಜಲೀಸ್ ಆಟೋ ಮೇಳದಲ್ಲಿ ಹೊಸ ಮಾದರಿಯ ರ‍್ಯಾಂಗ್ಲರ್ ಎಸ್‌ಯುವಿ ಕಾರುಗಳನ್ನು ಪ್ರದರ್ಶನಗೊಳಿಸಿದ್ದ ಜೀಪ್ ಸಂಸ್ಥೆಯು ಇದೀಗ ಬಿಡುಗಡೆಗೊಳಿಸಲು ಸಿದ್ದವಾಗುತ್ತಿದ್ದು, ಪುಣೆಯ ಪ್ರಮುಖ ಕಡೆಗಳಲ್ಲಿ ಹೊಸ ಕಾರಿನ ಎಂಜಿನ್ ಕಾರ್ಯಕ್ಷಮತೆ ಕುರಿತಾಗಿ ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿರುವಾಗ ತ್ರಿ ಡೋರ್ ಮಾದರಿಯ ರೂಬಿಕಾನ್ ವೆರಿಯೆಂಟ್ ಕಾಣಿಸಿಕೊಂಡಿದೆ.

ಸ್ಪಾಟ್ ಟೆಸ್ಟಿಂಗ್‌ನಲ್ಲಿ ಕಂಡು ಬಂದ ಜೀಪ್ ರ‍್ಯಾಂಗ್ಲರ್ ರೂಬಿಕಾನ್ ವೆರಿಯೆಂಟ್..!

ಸ್ಪಾಟ್ ಟೆಸ್ಟಿಂಗ್‌ನಲ್ಲಿ ಕಾಣಿಸಿಕೊಂಡಿರುವ ರ‍್ಯಾಂಗ್ಲರ್ ಎಸ್‌ಯುವಿ ಕಾರು ಈ ಹಿಂದಿನ ಮಾದರಿಗಿಂತಲೂ ಭಾರೀ ಬದಲಾವಣೆ ಹೊಂದಿದ್ದು, ಮರುವಿನ್ಯಾಸಗೊಳಿಸಲಾದ ಮುಂಭಾಗದ ಗ್ರಿಲ್, ದೊಡ್ಡದಾದ ಎಲ್ಇಡಿ ಹೆಡ್ ಲ್ಯಾಂಪ್ ಮತ್ತು ಎಲ್ಇಡಿ ಹಗಲಿನ ರನ್ನಿಂಗ್ ಲೈಟ್‌ಗಳನ್ನು ಫೆಂಡರ್‌ಗಳಲ್ಲಿ ಹೊಂದಿದೆ.

ಸ್ಪಾಟ್ ಟೆಸ್ಟಿಂಗ್‌ನಲ್ಲಿ ಕಂಡು ಬಂದ ಜೀಪ್ ರ‍್ಯಾಂಗ್ಲರ್ ರೂಬಿಕಾನ್ ವೆರಿಯೆಂಟ್..!

ಜೊತೆಗೆ ಕಾರಿನ ವಿಂಡೋಗಳುಜೊತೆಗೆ ಕಾರಿನ ಕಿಟಕಿಗಳು ಈ ಹಿಂದಿನ ಮಾದರಿಗಳಿಂತ ಸ್ವಲ್ಪ ಮಟ್ಟಿಗೆ ದೊಡ್ಡದಾಗಿದ್ದು, ವಿಸ್ತರಿತ ವಿಂಡ್ ಸ್ಕ್ರೀನ್, ಸ್ಲಿಕ್ ಎಲ್ಇಡಿ ಟೈಲ್ ಲೈಟ್ ಕ್ಲಸ್ಟರ್. ವೀಲ್ ಮತ್ತು ಪರಿಷ್ಕರಿಸಿದ ಬಂಪರ್ ಕೂಡಾ ಹೊಸ ಕಾರಿನ ವಿನ್ಯಾಸಕ್ಕೆ ಮೆರಗು ತಂದಿವೆ.

ಸ್ಪಾಟ್ ಟೆಸ್ಟಿಂಗ್‌ನಲ್ಲಿ ಕಂಡು ಬಂದ ಜೀಪ್ ರ‍್ಯಾಂಗ್ಲರ್ ರೂಬಿಕಾನ್ ವೆರಿಯೆಂಟ್..!

ಇನ್ನು ಕಾರಿನ ಇಂಟಿರಿಯರ್ ವಿನ್ಯಾಸಗಳ ಬಗೆಗೆ ಹೇಳುವುದಾದರೇ, ಈ ಹಿಂದಿನ ಮಾದರಿಯಂತೆಯೇ ಬಹುತೇಕ ಫೀಚರ್ಸ್‌ಗಳು ಹೊಸ ಮಾದರಿಯಲ್ಲೂ ಮುಂದುವರಿಸಲಾಗಿದ್ದು, ಸುಧಾರಿತ ಡ್ಯಾಶ್‌ಬೋರ್ಡ್, ಚಾಲಕನ ಭಾಗದಲ್ಲಿ 7 ಇಂಚಿನ್ ಎಲ್‌ಸಿಡಿ ಮಾಹಿತಿ ಪರದೆ ಮತ್ತು 8.4 ಇಂಚಿನ್ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ ಪಡೆದಿದೆ.

ಸ್ಪಾಟ್ ಟೆಸ್ಟಿಂಗ್‌ನಲ್ಲಿ ಕಂಡು ಬಂದ ಜೀಪ್ ರ‍್ಯಾಂಗ್ಲರ್ ರೂಬಿಕಾನ್ ವೆರಿಯೆಂಟ್..!

ಹಾಗೆಯೇ 4ನೇ ಜನರೇಷನ್ ವೈಶಿಷ್ಟ್ಯತೆಗಳೊಂದಿಗೆ ನಿರ್ಮಾಣವಾಗುತ್ತಿರುವ 2019ರ ಜೀಪ್ ರ‍್ಯಾಂಗ್ಲರ್‌ ಮಾದರಿಗಳು ಈ ಬಾರಿ ವೀಲ್‌ಬೇಸ್‌ನಲ್ಲೂ ಬದಲಾವಣೆ ಹೊಂದಿದ್ದು, ಪರಿಣಾಮ ಲೆಗ್ ರೂಮಂ ವಿಸ್ತರಣೆ ಮಾಡುವ ಮೂಲಕ ಆಪ್ ರೋಡ್ ಪ್ರಿಯರಿಗೆ ಮತ್ತಷ್ಟು ಅನುಕೂಲ ಮಾಡಿಕೊಡಲಾಗಿದೆ.

ಸ್ಪಾಟ್ ಟೆಸ್ಟಿಂಗ್‌ನಲ್ಲಿ ಕಂಡು ಬಂದ ಜೀಪ್ ರ‍್ಯಾಂಗ್ಲರ್ ರೂಬಿಕಾನ್ ವೆರಿಯೆಂಟ್..!

ಎಂಜಿನ್ ಸಾಮರ್ಥ್ಯ

ಸದ್ಯ ವಿದೇಶಿ ಮಾರುಕಟ್ಟೆಯಲ್ಲಿರುವ ಹೊಸ ಜೀಪ್ ರ‍್ಯಾಂಗ್ಲರ್ ಆವೃತ್ತಿಗಳು 2 ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಮತ್ತು 2.2 ಲೀಟರ್ ಟರ್ಬೋಚಾರ್ಜ್ಡ್ ಡೀಸೆಲ್ ಎಂಜಿನ್ ಪಡೆದುಕೊಂಡಿದ್ದು, ಇದೇ ಮಾದರಿಗಳು ಭಾರತೀಯ ಮಾರುಕಟ್ಟೆಯಲ್ಲೂ ಬಿಡುಗಡೆಯಾಗಬಹುದು ಎನ್ನಲಾಗಿದೆ.

MOST READ: ನಿಮ್ಮ ವಾಹನಗಳ ಮೈಲೇಜ್ ಕಡಿತವಾಗುತ್ತಿರುವುದಕ್ಕೆ ಅಸಲಿ ಕಾರಣ ಏನು ಗೊತ್ತಾ?

ಸ್ಪಾಟ್ ಟೆಸ್ಟಿಂಗ್‌ನಲ್ಲಿ ಕಂಡು ಬಂದ ಜೀಪ್ ರ‍್ಯಾಂಗ್ಲರ್ ರೂಬಿಕಾನ್ ವೆರಿಯೆಂಟ್..!

ಇದರೊಂದಿಗೆ ಹೈ ಪರ್ಫಾಮೆನ್ಸ್ ಬಯಸುವ ಗ್ರಾಹಕರಿಗೆ ಸಾಂಪ್ರದಾಯಿಕ ಎಂಜಿನ್‌ಗಳನ್ನು ಹೊರತುಪಡಿಸಿ 3.6-ಲೀಟರ್ ವಿ6 ಎಂಜಿನ್‌ ಆಯ್ಕೆ ಕೂಡಾ ಲಭ್ಯವಿರಲಿದ್ದು, ಮೂರು ಬಾಗಿಲು ಮತ್ತು ಐದು ಬಾಗಿಲು ಆಯ್ಕೆಯೊಂದಿಗೆ ಹೊಸ ಕಾರು ಮಾರುಕಟ್ಟೆಗೆ ಬರಲಿದೆ.

ಸ್ಪಾಟ್ ಟೆಸ್ಟಿಂಗ್‌ನಲ್ಲಿ ಕಂಡು ಬಂದ ಜೀಪ್ ರ‍್ಯಾಂಗ್ಲರ್ ರೂಬಿಕಾನ್ ವೆರಿಯೆಂಟ್..!

ಹೊಸ ಕಾರುಗಳು 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಅಥವಾ 8-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಹೊಂದಲಿರುವ ಹೊಸ ಜೀಪ್ ರ‍್ಯಾಂಗ್ಲರ್‌ ಕಾರು ದೆಹಲಿ ಎಕ್ಸ್‌ಶೋರಂ ಪ್ರಕಾರ ಆರಂಭಿಕವಾಗಿ ರೂ.55 ಲಕ್ಷದಿಂದ ಟಾಪ್ ಎಂಡ್ ಮಾದರಿಗೆ ರೂ.65 ಲಕ್ಷ ಬೆಲೆ ಹೊಂದಿರಬಹುದೆಂದು ಅಂದಾಜಿಸಲಾಗಿದೆ.

Source: Zigwheels

Article Published On: Thursday, May 16, 2019, 15:38 [IST]
English summary
Jeep Wrangler Rubicon Spotted Testing — Launching Third Quarter This Year.
Read more on ಜೀಪ್ jeep
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+