ಗ್ರಾಹಕರ ಬೇಡಿಕೆಯೆಂತೆ 6, 7, 8 ಸೀಟರ್ ಸೌಲಭ್ಯದೊಂದಿಗೆ ಬರಲಿದೆ ಕಿಯಾ ಕಾರ್ನಿವಾಲ್

ಕಿಯಾ ಮೋಟಾರ್ಸ್ ನೀರಿಕ್ಷಿತ ಕಾರ್ನಿವಾಲ್ ಎಂಪಿವಿ ಕಾರು ಮಾದರಿಯು 2020ರ ಜನವರಿ ಕೊನೆಯ ವಾರದಲ್ಲಿ ಬಿಡುಗಡೆಯಾಗುವ ಸುಳಿವು ನೀಡಿದ್ದು, ಹೊಸ ಕಾರು ಗ್ರಾಹಕರ ಬೇಡಿಕೆಯೆಂತೆ ಹಲವಾರು ಮಹತ್ವದ ಬದಲಾವಣೆಯೊಂದಿಗೆ ಮಾರುಕಟ್ಟೆಯನ್ನು ಪ್ರವೇಶಿಸಲಿದೆ.

ಗ್ರಾಹಕರ ಬೇಡಿಕೆಯೆಂತೆ 6, 7, 8 ಸೀಟರ್ ಸೌಲಭ್ಯದೊಂದಿಗೆ ಬರಲಿದೆ ಕಿಯಾ ಕಾರ್ನಿವಾಲ್

ಮಲ್ಟಿ ಪ್ಯಾಸೆಂಜರ್ ವೆಹಿಕಲ್(ಎಂಪಿವಿ) ವಿಭಾಗದಲ್ಲಿ ಅಗ್ರಸ್ಥಾನದಲ್ಲಿರುವ ಕಿಯಾ ಕಾರ್ನಿವಾಲ್ ಕಾರು ಮಾದರಿಯು ವಿದೇಶಿ ಮಾರುಕಟ್ಟೆಗಳಲ್ಲಿ ಭಾರೀ ಬೇಡಿಕೆ ಹೊಂದಿದ್ದು, ಗ್ರಾಹಕರ ಬೇಡಿಕೆಯೆಂತೆ 11 ಸೀಟರ್ ಮತ್ತು 9 ಸೀಟರ್ ಮತ್ತು 7 ಸೀಟರ್ ಆವೃತ್ತಿಗಳಲ್ಲಿ ಮಾರಾಟವಾಗುತ್ತಿದೆ. ಆದರೆ ದೇಶಿಯ ಮಾರುಕಟ್ಟೆಯಲ್ಲಿ ಕೆಲವು ಬದಲಾವಣೆಯೊಂದಿಗೆ ಬಿಡುಗಡೆಯಾಗಲಿರುವ ಹೊಸ ಕಾರು 6 ಸೀಟರ್, 7 ಸೀಟರ್ ಮತ್ತು 8 ಸೀಟರ್ ಆವೃತ್ತಿಯನ್ನು ಪಡೆದುಕೊಳ್ಳಲಿದೆ ಎನ್ನಲಾಗಿದೆ.

ಗ್ರಾಹಕರ ಬೇಡಿಕೆಯೆಂತೆ 6, 7, 8 ಸೀಟರ್ ಸೌಲಭ್ಯದೊಂದಿಗೆ ಬರಲಿದೆ ಕಿಯಾ ಕಾರ್ನಿವಾಲ್

6 ಸೀಟರ್ ಮಾದರಿಯು ಪ್ರತ್ಯೇಕವಾಗಿ 2+2+2 ಆಸನ ವ್ಯವಸ್ಥೆಯನ್ನು ಹೊಂದಿದ್ದರೆ 7 ಸೀಟರ್ ಮಾದರಿಯು 2+2+3 ಮತ್ತು 8 ಸೀಟರ್ ಮಾದರಿಯು 2+3+3 ಆಸನ ಸೌಲಭ್ಯವನ್ನು ಪಡೆದುಕೊಳ್ಳಲಿದ್ದು, ಗ್ರಾಹಕರು ತಮ್ಮ ಆದ್ಯತೆ ಮೇರೆಗೆ ವಿವಿಧ ಮಾದರಿಗಳನ್ನು ಖರೀದಿ ಮಾಡಬಹುದಾಗಿದೆ.

ಗ್ರಾಹಕರ ಬೇಡಿಕೆಯೆಂತೆ 6, 7, 8 ಸೀಟರ್ ಸೌಲಭ್ಯದೊಂದಿಗೆ ಬರಲಿದೆ ಕಿಯಾ ಕಾರ್ನಿವಾಲ್

ಜೊತೆಗೆ ಹೊಸ ಕಾರಿನಲ್ಲಿ ಕೆಲವು ಫೀಚರ್ಸ್‌ಗಳನ್ನು ಮಾಡಿಫೈ ಕೂಡಾ ಮಾಡಿಕೊಳ್ಳಬಹುದಾಗಿದ್ದು, ಡ್ಯುಯಲ್ ಸನ್‌ರೂಫ್ ಮತ್ತು ರೂಫ್ ಬಾಕ್ಸ್ ಸೌಲಭ್ಯವನ್ನು ಹೆಚ್ಚುವರಿ ಶುಲ್ಕದೊಂದಿಗೆ ಖರೀದಿ ಮಾಡಬೇಕಾಗುತ್ತದೆ.

ಗ್ರಾಹಕರ ಬೇಡಿಕೆಯೆಂತೆ 6, 7, 8 ಸೀಟರ್ ಸೌಲಭ್ಯದೊಂದಿಗೆ ಬರಲಿದೆ ಕಿಯಾ ಕಾರ್ನಿವಾಲ್

ಎಂಪಿವಿ ಕಾರುಗಳ ಮಾರಾಟ ವಿಭಾಗದಲ್ಲಿ ಸದ್ಯ ಭಾರೀ ಬೇಡಿಕೆ ಹೊಂದಿರುವ ಟೊಯೊಟಾ ಇನೋವಾ ಕ್ರಿಸ್ಟಾ ಕಾರಿಗೆ ಪೈಪೋಟಿಯಾಗಿ ಬಿಡುಗಡೆಯಾಗುತ್ತಿರುವ ಕಿಯಾ ಕಾರ್ನಿವಾಲ್ ಎಂಪಿವಿ ಕಾರು ಹಲವು ವಿಶೇಷತೆಗಳಿಗೆ ಕಾರಣವಾಗಿದ್ದು, ಹೊಸ ಕಾರು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 18 ಲಕ್ಷದಿಂದ ಟಾಪ್ ಎಂಡ್ ಮಾದರಿಯ ಬೆಲೆಯು ರೂ.25 ಲಕ್ಷ ಬೆಲೆ ಹೊಂದಬಹುದೆಂದು ಅಂದಾಜಿಸಲಾಗಿದೆ.

ಗ್ರಾಹಕರ ಬೇಡಿಕೆಯೆಂತೆ 6, 7, 8 ಸೀಟರ್ ಸೌಲಭ್ಯದೊಂದಿಗೆ ಬರಲಿದೆ ಕಿಯಾ ಕಾರ್ನಿವಾಲ್

ಕಾರ್ನಿವಾಲ್ ಕಾರು 5, 115-ಎಂಎಂ ಉದ್ದ, 1,985-ಎಂಎಂ ಅಗಲ ಮತ್ತು 1,755 ಎತ್ತರವನ್ನು ಹೊಂದಿದ್ದು, ಇದ್ದು ಇನೋವಾ ಕ್ರಿಸ್ಟಾ ಕಾರಿಗಿಂತಲೂ 375-ಎಂಎಂ ಹೆಚ್ಚು ಉದ್ದ,155-ಎಂಎಂ ಹೆಚ್ಚು ಅಗಲ ಮತ್ತು 40-ಎಂಎಂ ನಷ್ಟು ಕಡಿಮೆ ಎತ್ತರವನ್ನು ಪಡೆದುಕೊಂಡಿರಲಿದೆ.

ಗ್ರಾಹಕರ ಬೇಡಿಕೆಯೆಂತೆ 6, 7, 8 ಸೀಟರ್ ಸೌಲಭ್ಯದೊಂದಿಗೆ ಬರಲಿದೆ ಕಿಯಾ ಕಾರ್ನಿವಾಲ್

ಎಂಜಿನ್ ಸಾಮರ್ಥ್ಯ

ಕಿಯಾ ಕಾರ್ನಿವಾಲ್ ಕಾರು ಇನೋವಾ ಕ್ರಿಸ್ಟಾಗೆ ಪೈಪೋಟಿಯಾಗಿ 2.2-ಲೀಟರ್ ಟರ್ಬೋ ಡೀಸೆಲ್ ಜೊತೆ 3.3-ಲೀಟರ್ ವಿ6 ಎಂಪಿಐ ಪೆಟ್ರೋಲ್ ಎಂಜಿನ್ ಮಾದರಿಯೊಂದಿಗೆ ಮಾರಾಟವಾಗುತ್ತಿದ್ದು, ಭಾರತದಲ್ಲಿ ಬಿಡುಗಡೆಯಾಗಲಿರುವ ಮಾದರಿಯು ಬೆಲೆ ತಗ್ಗಿಸುವುದಕ್ಕಾಗಿ 2.5-ಲೀಟರ್ ಡೀಸೆಲ್ ಎಂಜಿನ್ ಮತ್ತು 2.6-ಲೀಟರ್ ಪೆಟ್ರೋಲ್ ಎಂಜಿನ್ ಪಡೆದುಕೊಳ್ಳುವ ಸಾಧ್ಯತೆಗಳಿವೆ.

MOST READ: ದೇಶದ ಜನಪ್ರಿಯ ಕಾರ್ ಬ್ರಾಂಡ್ ಆಗಿ ಮಿಂಚುತ್ತಿರುವ ಟಾಟಾ ಯಶಸ್ವಿ ಹಿಂದಿನ ಕಾರಣವೇನು?

ಗ್ರಾಹಕರ ಬೇಡಿಕೆಯೆಂತೆ 6, 7, 8 ಸೀಟರ್ ಸೌಲಭ್ಯದೊಂದಿಗೆ ಬರಲಿದೆ ಕಿಯಾ ಕಾರ್ನಿವಾಲ್

ಹಾಗೆಯೇ ಕಾರ್ನಿವಾಲ್ ಕಾರು ಇನೋವಾ ಕ್ರಿಸ್ಟಾಗಿಂತಲೂ ಉತ್ತಮ ಪ್ರೀಮಿಯಂ ಸೌಲಭ್ಯ ಹೊಂದಿದ್ದು, 10.1-ಇಂಚಿನ ಇನ್ಪೋಟೈನ್ ಸಿಸ್ಟಂ, ಕಿಯಾ ಯುವಿಒ ಕನೆಕ್ಟ್, ಕಾರ್ ಕನೆಕ್ಟಿವಿಟಿ ಸೂಟ್, ಲಾರ್ಜ್ ಟಚ್‌ಸ್ಕೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಎರಡು ಸನ್‌ರೂಫ್, ಪವರ್ ಅಡ್ಜೆಸ್ಟ್‌ಬಲ್ ಡ್ರೈವರ್ ಸೀಟ್, ತ್ರಿ ಕ್ಲೈಮೆಟ್ ಜೋನ್ ಕಂಟ್ರೋಲ್ ಸೌಲಭ್ಯ ಹೊಂದಿದೆ.

MOST READ: ಖರೀದಿಸಿದ ಬೈಕ್ ಪಡೆಯಲು ಕಾನೂನು ಹೋರಾಟ ಮಾಡಿದ ಉದ್ಯಮಿ

ಗ್ರಾಹಕರ ಬೇಡಿಕೆಯೆಂತೆ 6, 7, 8 ಸೀಟರ್ ಸೌಲಭ್ಯದೊಂದಿಗೆ ಬರಲಿದೆ ಕಿಯಾ ಕಾರ್ನಿವಾಲ್

ಪ್ರಯಾಣಿಕರ ಸುರಕ್ಷತೆಗಾಗಿ 6 ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಬ್ರೇಕ್ ಅಸಿಸ್ಟ್, ಟ್ರಾಕ್ಷನ್ ಕಂಟ್ರೋಲ್, ಹಿಲ್ ಅಸಿಸ್ಟ್ ಮತ್ತು ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ ಸಹ ಈ ಕಾರಿನಲ್ಲಿವೆ.

MOST READ: ಕಾರು ಖರೀದಿಸಿದ ಮಾಲೀಕನ ಮೇಲೆ ಕೇಸ್ ಜಡಿದ ಎಂಜಿ ಮೋಟಾರ್..!

ಗ್ರಾಹಕರ ಬೇಡಿಕೆಯೆಂತೆ 6, 7, 8 ಸೀಟರ್ ಸೌಲಭ್ಯದೊಂದಿಗೆ ಬರಲಿದೆ ಕಿಯಾ ಕಾರ್ನಿವಾಲ್

ಹೀಗಾಗಿ ಇನೋವಾ ಕ್ರಿಸ್ಟಾ ಆವೃತ್ತಿಗೆ ಪ್ರತಿಹಂತದಲ್ಲೂ ಪೈಪೋಟಿ ನೀಡಬಹುದಾದ ಎಲ್ಲಾ ಗುಣಲಕ್ಷಣಗಳನ್ನು ಹೊಂದಿರುವ ಕಿಯಾ ಕಾರ್ನಿವಾಲ್ ಕಾರು ಮಾದರಿಯು ಭಾರತದಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳುವ ಎಲ್ಲಾ ಗುಣಲಕ್ಷಣಗಳನ್ನು ಹೊಂದಿದ್ದು, ಫೆಬ್ರುವರಿ 5ರಿಂದ ಆರಂಭವಾಗಲಿರುವ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶನಕ್ಕೂ ಮುನ್ನ ಹೊಸ ಕಾರ್ನಿವಾಲ್ ಖರೀದಿಗೆ ಲಭ್ಯವಿರಲಿದೆ.

ಗ್ರಾಹಕರ ಬೇಡಿಕೆಯೆಂತೆ 6, 7, 8 ಸೀಟರ್ ಸೌಲಭ್ಯದೊಂದಿಗೆ ಬರಲಿದೆ ಕಿಯಾ ಕಾರ್ನಿವಾಲ್

ಇದಲ್ಲದೇ ಕಿಯಾ ಮೋಟಾರ್ಸ್ ಸಂಸ್ಥೆಯು ಈಗಾಗಲೇ ಸೆಲ್ಟೊಸ್ ಕಾರು ಮಾದರಿಯನ್ನು ಹೊಸ ಕಾರು ಉತ್ಪಾದನಾ ಘಟಕದಲ್ಲೇ ನಿರ್ಮಾಣ ಮಾಡಿ ಮಾರಾಟ ಮಾಡುತ್ತಿರುವುದಲ್ಲದೇ ವಿದೇಶಿ ಮಾರುಕಟ್ಟೆಗಳಿಗೂ ರಫ್ತು ಮಾಡುತ್ತಿದ್ದು, ಇದೀಗ ಹೊಸ ಘಟಕಕ್ಕೆ ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್‌ ಮೋಹನ್‌ ರೆಡ್ಡಿ ಕಳೆದ ವಾರವಷ್ಟೇ ಅಧಿಕೃತವಾಗಿ ಚಾಲನೆ ನೀಡಿದ್ದಾರೆ.

ಗ್ರಾಹಕರ ಬೇಡಿಕೆಯೆಂತೆ 6, 7, 8 ಸೀಟರ್ ಸೌಲಭ್ಯದೊಂದಿಗೆ ಬರಲಿದೆ ಕಿಯಾ ಕಾರ್ನಿವಾಲ್

ಆಂಧ್ರಪ್ರದೇಶದ ಅನಂತಪುರ ಜಿಲ್ಲೆ ಪೆನುಗೊಂಡ ಬಳಿಯಿರುವ ಕಿಯಾ ಮೋಟಾರ್ಸ್ ಮೊದಲ ಕಾರು ಉತ್ಪಾದನಾ ಘಟಕವು ಹಲವು ವಿಶೇಷತೆಗಳಿಗೆ ಕಾರಣವಾಗಿದ್ದು, ಬರೋಬ್ಬರಿ 211 ಎಕರೆ ಪ್ರದೇಶದಲ್ಲಿ ಬೃಹತ್ ಕಾರು ಉತ್ಪಾದನಾ ಘಟಕವು ತಲೆಎತ್ತಿದೆ. ವಾರ್ಷಿಕವಾಗಿ 3 ಲಕ್ಷ ಕಾರುಗಳ ನಿರ್ಮಾಣ ಮಾಡುವಷ್ಟು ಸಾಮರ್ಥ್ಯ ಹೊಂದಿರುವ ಈ ಹೊಸ ಘಟಕದಲ್ಲಿ ಪ್ರತಿ 1.20 ನಿಮಿಷಕ್ಕೆ ಒಂದು ಹೊಸ ಕಾರು ಅಭಿವೃದ್ದಿಪಡಿಸಲಾಗುತ್ತದೆ.

ಗ್ರಾಹಕರ ಬೇಡಿಕೆಯೆಂತೆ 6, 7, 8 ಸೀಟರ್ ಸೌಲಭ್ಯದೊಂದಿಗೆ ಬರಲಿದೆ ಕಿಯಾ ಕಾರ್ನಿವಾಲ್

ಕಿಯಾ ಮೋಟಾರ್ಸ್ ಸಂಸ್ಥೆಯು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ವಿವಿಧ ನಮೂನೆಯ ಕೈಗೆಟುಕುವ ಬೆಲೆಯ ಕಾರುಗಳನ್ನು ಬಿಡುಗಡೆಗೊಳಿಸುವ ಇರಾದೆಯಲ್ಲಿದ್ದು, ವಿವಿಧ ಮಾದರಿಯ ಹ್ಯಾಚ್‌ಬ್ಯಾಕ್, ಎಸ್‌ಯುವಿ, ಸೆಡಾನ್, ಎಂಪಿವಿ ಮತ್ತು ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಯ ಯೋಜನೆಯಲ್ಲಿದೆ.

ಗ್ರಾಹಕರ ಬೇಡಿಕೆಯೆಂತೆ 6, 7, 8 ಸೀಟರ್ ಸೌಲಭ್ಯದೊಂದಿಗೆ ಬರಲಿದೆ ಕಿಯಾ ಕಾರ್ನಿವಾಲ್

ಭಾರತದಲ್ಲಿ ಕಾರು ಉತ್ಪಾದನೆ ಮತ್ತು ಮಾರಾಟವನ್ನು ಆರಂಭಿದ ಕೇವಲ ನಾಲ್ಕು ತಿಂಗಳ ಅವಧಿಯಲ್ಲಿ ಕಿಯಾ ಮೋಟಾರ್ಸ್ ಸಂಸ್ಥೆಯು ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸಿರುವುದಲ್ಲದೇ ಅಧಿಕೃತವಾಗಿ ದೇಶದ ಐದನೇ ಅತಿದೊಡ್ಡ ಕಾರು ಮಾರಾಟ ಸಂಸ್ಥೆಯಾಗಿ ಹೊರಹೊಮ್ಮಿದೆ.

ಗ್ರಾಹಕರ ಬೇಡಿಕೆಯೆಂತೆ 6, 7, 8 ಸೀಟರ್ ಸೌಲಭ್ಯದೊಂದಿಗೆ ಬರಲಿದೆ ಕಿಯಾ ಕಾರ್ನಿವಾಲ್

ಕಾರು ಉತ್ಪಾದನೆ ಮತ್ತು ಮಾರಾಟದಲ್ಲಿ ಸದ್ಯ ಮಾರುತಿ ಸುಜುಕಿ, ಹ್ಯುಂಡೈ ಮೋಟಾರ್ಸ್, ಮಹೀಂದ್ರಾ ಆ್ಯಂಡ್ ಮಹೀಂದ್ರಾ ಮತ್ತು ಟಾಟಾ ಮೋಟಾರ್ಸ್ ಸಂಸ್ಥೆಗಳು ಅನುಕ್ರಮವಾಗಿ ಒಂದು, ಎರಡು, ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿದ್ದು, ಇದೀಗ ಹೊಸದಾಗಿ ಕಿಯಾ ಮೋಟಾರ್ಸ್ ಸಂಸ್ಥೆಯು ಐದನೇ ಅತಿದೊಡ್ಡ ಕಾರು ಮಾರಾಟ ಸಂಸ್ಥೆಯಾಗಿ ಸ್ಥಾನ ಪಡೆದಿದೆ.

ಗ್ರಾಹಕರ ಬೇಡಿಕೆಯೆಂತೆ 6, 7, 8 ಸೀಟರ್ ಸೌಲಭ್ಯದೊಂದಿಗೆ ಬರಲಿದೆ ಕಿಯಾ ಕಾರ್ನಿವಾಲ್

ಕಿಯಾ ಮೋಟಾರ್ಸ್ ಅಬ್ಬರದ ಮುಂದೆ ಟೊಯೊಟಾ ಮತ್ತು ಹೋಂಡಾ ಸಂಸ್ಥೆಗಳು ಸಹ ನೆಲಕಚ್ಚಿದ್ದು, ಶೀಘ್ರದಲ್ಲೇ ಮೂರನೇ ಸ್ಥಾನದತ್ತ ಮುನ್ನುಗ್ಗುವ ತವಕದಲ್ಲಿದೆ.

ಗ್ರಾಹಕರ ಬೇಡಿಕೆಯೆಂತೆ 6, 7, 8 ಸೀಟರ್ ಸೌಲಭ್ಯದೊಂದಿಗೆ ಬರಲಿದೆ ಕಿಯಾ ಕಾರ್ನಿವಾಲ್

ಮಾರುತಿ ಸುಜುಕಿ ಮತ್ತು ಹ್ಯುಂಡೈ ಸಂಸ್ಥೆಯು ಕಾರು ಮಾರಾಟದಲ್ಲಿ ಬಹುದೊಡ್ಡ ಜಾಲ ಹೊಂದಿದ್ದು, ತದನಂತರದ ಸ್ಥಾನದಲ್ಲಿರುವ ಮಹೀಂದ್ರಾ ಮತ್ತು ಟಾಟಾ ಮೋಟಾರ್ಸ್ ಸಂಸ್ಥೆಗಳಿಗೆ ಸರಿಸಮನಾಗಿ ಬೆಳೆಯುತ್ತಿರುವ ಕಿಯಾ ಸಂಸ್ಥೆಯು ಮತ್ತಷ್ಟು ಆಕರ್ಷಕ ಹೊಸ ಕಾರು ಉತ್ಪನ್ನಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

ಗ್ರಾಹಕರ ಬೇಡಿಕೆಯೆಂತೆ 6, 7, 8 ಸೀಟರ್ ಸೌಲಭ್ಯದೊಂದಿಗೆ ಬರಲಿದೆ ಕಿಯಾ ಕಾರ್ನಿವಾಲ್

ಈ ಮೂಲಕ ಎಲ್ಲಾ ಮಾದರಿಯ ಕಾರು ಮಾದರಿಗಳು ಪೈಪೋಟಿ ನೀಡಲು ಸಿದ್ದವಾಗಿರುವ ಕಿಯಾ ಸಂಸ್ಥೆಯು ಸದ್ಯ ಸೆಲ್ಟೊಸ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಮಾತ್ರವೇ ಮಾರಾಟ ಮಾಡುತ್ತಿದ್ದು, ಶೀಘ್ರದಲ್ಲೇ ಕಾರ್ನಿವಾಲ್ ಮತ್ತು ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಮಾಡಲಿದೆ.

ಗ್ರಾಹಕರ ಬೇಡಿಕೆಯೆಂತೆ 6, 7, 8 ಸೀಟರ್ ಸೌಲಭ್ಯದೊಂದಿಗೆ ಬರಲಿದೆ ಕಿಯಾ ಕಾರ್ನಿವಾಲ್

ಹೊಸ ಸಬ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಸದ್ಯ ಮಾರುಕಟ್ಟೆಯಲ್ಲಿರುವ ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಟಾಟಾ ನೆಕ್ಸಾನ್, ಹ್ಯುಂಡೈ ವೆನ್ಯೂ, ಮಹೀಂದ್ರಾ ಎಕ್ಸ್‌ಯುವಿ300, ಫೋರ್ಡ್ ಇಕೋಸ್ಪೋರ್ಟ್ ಕಾರುಗಳಿಗೆ ಪೈಪೋಟಿ ನೀಡಲಿದೆ.

ಗ್ರಾಹಕರ ಬೇಡಿಕೆಯೆಂತೆ 6, 7, 8 ಸೀಟರ್ ಸೌಲಭ್ಯದೊಂದಿಗೆ ಬರಲಿದೆ ಕಿಯಾ ಕಾರ್ನಿವಾಲ್

ಹೊಸ ಕಾರಿನ ತಾಂತ್ರಿಕ ಅಂಶಗಳ ಕುರಿತಾಗಿ ಈಗಾಗಲೇ ವಿವಿಧ ಸುತ್ತಿನ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಾಗಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.7 ಲಕ್ಷದಿಂದ ರೂ.11 ಲಕ್ಷ ಬೆಲೆ ಅಂತರ ಬಿಡುಗಡೆಯಾಗುವ ಸಾಧ್ಯತೆಗಳಿವೆ.

Most Read Articles

Kannada
English summary
Kia Carnival will be offered in three seating configuration. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X