ಕಿಯಾ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಅಧಿಕೃತ ಹೆಸರು ಬಹಿರಂಗ

ಕಿಯಾ ಮೋಟಾರ್ಸ್ ಸದ್ಯ ಸೆಲ್ಟೊಸ್ ಎಸ್‌ಯುವಿ ಕಾರು ಮಾರಾಟದಲ್ಲಿ ನೀರಿಕ್ಷೆಗೂ ಮೀರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಮುಂಬರುವ ದಿನಗಳಲ್ಲಿ ವಿವಿಧ ಮಾದರಿಯ ಐದು ಹೊಸ ಕಾರುಗಳನ್ನು ಪರಿಚಯಿಸಲು ಯೋಜನೆ ರೂಪಿಸಿದೆ. ಇದರಲ್ಲಿ ಕಾರ್ನಿವಾಲ್ ಎಂಪಿವಿ ಹಾಗೂ ಹೊಚ್ಚ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯೊಂದು ಭಾರೀ ಸದ್ದು ಮಾಡುವ ನೀರಿಕ್ಷೆಯಲ್ಲಿವೆ.

ಕಿಯಾ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಅಧಿಕೃತ ಹೆಸರು ಬಹಿರಂಗ

ಭಾರೀ ನೀರಿಕ್ಷೆಯೊಂದಿಗೆ ಭಾರತೀಯ ಆಟೋ ಉದ್ಯಮಕ್ಕೆ ಕಾಲಿಟ್ಟಿರುವ ದಕ್ಷಿಣ ಕೊರಿಯಾದ ಕಿಯಾ ಮೋಟಾರ್ಸ್ ಸಂಸ್ಥೆಯು ಸೆಲ್ಟೊಸ್ ಕಾರು ಮಾರಾಟ ಮೂಲಕ ದೇಶದ ಟಾಪ್ 4 ಕಾರು ಉತ್ಪಾದನಾ ಸಂಸ್ಥೆಯಾಗಿ ಹೊರಹೊಮ್ಮಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಮತ್ತಷ್ಟು ಹೊಸ ಬಗೆಯ ಕಾರುಗಳನ್ನು ಬಿಡುಗಡೆಗೊಳಿಸುವ ಇರಾದೆಯಲ್ಲಿದೆ. ಸೆಲ್ಟೊಸ್ ಬಿಡುಗಡೆಯ ನಂತರ ಕಾರ್ನಿವಾಲ್ ಸೇರಿದಂತೆ ವಿವಿಧ ನಮೂನೆಯ ಐದು ಹೊಸ ಕಾರುಗಳನ್ನು ರಸ್ತೆಗಿಳಿಸಲು ಸಿದ್ದತೆ ನಡೆಸುತ್ತಿದ್ದು, ಹೊಚ್ಚ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರು ಸದ್ಯ ಭಾರೀ ಚರ್ಚಗೆ ಕಾರಣವಾಗಿದೆ.

ಕಿಯಾ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಅಧಿಕೃತ ಹೆಸರು ಬಹಿರಂಗ

ಕಾರುಗಳ ಮಾರಾಟದಲ್ಲಿ ಮಹತ್ವದ ಬದಲಾವಣೆಗಾಗಿ ಕಿಯಾ ಸಂಸ್ಥೆಯು ಭಾರತದಲ್ಲಿ ಭಾರೀ ಪ್ರಮಾಣದ ಬಂಡವಾಳ ಹೂಡಿಕೆ ಮಾಡಿದ್ದು, ಗ್ರಾಹಕರ ಬೇಡಿಕೆಯೆಂತೆ ಅಗ್ಗದ ಬೆಲೆಯಲ್ಲಿ ಉತ್ತಮ ಮಾದರಿಯ ಹ್ಯಾಚ್‌ಬ್ಯಾಕ್, ಎಸ್‌ಯುವಿ, ಸೆಡಾನ್, ಎಂಪಿವಿ ಮತ್ತು ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಯ ಯೋಜನೆಯಲ್ಲಿದೆ.

ಕಿಯಾ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಅಧಿಕೃತ ಹೆಸರು ಬಹಿರಂಗ

ಮಾಹಿತಿಗಳ ಪ್ರಕಾರ, ಮುಂಬರುವ ಜನವರಿ ಕೊನೆಯಲ್ಲಿ ಕಾರ್ನಿವಾಲ್ ಎಂಪಿವಿ ಬಿಡುಗಡೆ ಮಾಡಲಿರುವ ಕಿಯಾ ಸಂಸ್ಥೆಯು ತದನಂತರ ಹೊಸ ಕಂಪ್ಯಾಕ್ಟ್ ಎಸ್‌ಯುವಿ, ಸೊರೆಂಟೊ ಸೆಡಾನ್ ಮತ್ತು ಸೊಲ್ ಎಲೆಕ್ಟ್ರಿಕ್, ನಿರೊ ಎಲೆಕ್ಟ್ರಿಕ್ ಮತ್ತು ಐಷಾರಾಮಿ ಎಸ್‌ಯುವಿ ಮಾದರಿಯಾದ ಟೆಲ್ಲುರೈಡ್ ಕಾರನ್ನು ಬಿಡುಗಡೆ ಮಾಡಲಿದೆಯೆಂತೆ.

ಕಿಯಾ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಅಧಿಕೃತ ಹೆಸರು ಬಹಿರಂಗ

ಸೆಲ್ಟೊಸ್ ಯಶಸ್ವಿ ನಂತರ ಮುಂದಿನ ಕಾರು ಬಿಡುಗಡೆಯ ಯೋಜನೆ ಕುರಿತಂತೆಯಂತೆ ಸುದ್ದಿ ಸಂಸ್ಥೆಗಳೊಂದಿಗೆ ಮಾತನಾಡಿರುವ ಕಿಯಾ ಹಿರಿಯ ಅಧಿಕಾರಿಯೊಬ್ಬರು ಪ್ರತಿ ಆರು ತಿಂಗಳಿಗೊಂದು ಹೊಸ ಕಾರು ಉತ್ಪನ್ನ ಬಿಡುಗಡೆ ಮಾಡುವ ಯೋಜನೆಯಿದ್ದು, ಮುಂಬರುವ 2020ರ ಫೆಬ್ರುವರಿಯಲ್ಲಿ ನಡೆಯಲಿರುವ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಭಾಗಿ ನಂತರ ಕಾರ್ನಿವಾಲ್ ಎಂಪಿವಿ ಹಾಗೂ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆಗೊಳಿಸಲಾಗುವುದು ಎನ್ನುವ ಮಾಹಿತಿ ನೀಡಿದ್ದಾರೆ.

ಕಿಯಾ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಅಧಿಕೃತ ಹೆಸರು ಬಹಿರಂಗ

ಇದೀಗ ಲಭ್ಯವಾಗಿರುವ ಮಾಹಿತಿಗಳ ಪ್ರಕಾರ ಕಿಯಾ ಬಿಡುಗಡೆ ಮಾಡಲಿರುವ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರು ಸೊನೆಟ್ ಹೆಸರಿನಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿದ್ದು, ಇದೇ ಕಾರು ಮಾದರಿಯು ವಿದೇಶಿ ಮಾರುಕಟ್ಟೆಗಳಲ್ಲೂ ಸದ್ದು ಮಾಡಲಿದೆ.

ಕಿಯಾ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಅಧಿಕೃತ ಹೆಸರು ಬಹಿರಂಗ

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿರುವ ಸ್ಟೊನಿಕ್ ಮಾದರಿಯಲ್ಲೇ ಅಭಿವೃದ್ದಿಗೊಂಡಿರುವ ಸೊನೆಟ್ ಕಾರು ಸದ್ಯ ಮಾರುಕಟ್ಟೆಯಲ್ಲಿರುವ ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಟಾಟಾ ನೆಕ್ಸಾನ್, ಹ್ಯುಂಡೈ ವೆನ್ಯೂ, ಮಹೀಂದ್ರಾ ಎಕ್ಸ್‌ಯುವಿ300, ಫೋರ್ಡ್ ಇಕೋಸ್ಪೋರ್ಟ್ ಕಾರುಗಳಿಗೆ ಪೈಪೋಟಿ ನೀಡಲಿದೆ.

MOST READ: ಬಿಡುಗಡೆಗೂ ಮುನ್ನವೇ ಹೊಸ ಸಂಚಲನಕ್ಕೆ ಕಾರಣವಾದ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್

ಕಿಯಾ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಅಧಿಕೃತ ಹೆಸರು ಬಹಿರಂಗ

ಹೊಸ ಕಾರಿನ ತಾಂತ್ರಿಕ ಅಂಶಗಳ ಕುರಿತಾಗಿ ಈಗಾಗಲೇ ವಿವಿಧ ಸುತ್ತಿನ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಾಗಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.7 ಲಕ್ಷದಿಂದ ರೂ.11 ಲಕ್ಷ ಬೆಲೆ ಅಂತರ ಬಿಡುಗಡೆಯಾಗುವ ಸಾಧ್ಯತೆಗಳಿವೆ.

MOST READ: ವಾಹನ ಡೀಲರ್‍‍ಗಳ ಟ್ರೇಡ್ ಸರ್ಟಿಫಿಕೇಟ್ ಅಮಾನತುಗೊಳಿಸಿದ ಸಾರಿಗೆ ಇಲಾಖೆ

ಕಿಯಾ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಅಧಿಕೃತ ಹೆಸರು ಬಹಿರಂಗ

ಜೊತೆಗೆ ಸೆಲ್ಟೊಸ್ ಕಾರು ಮಾದರಿಯಲ್ಲೇ ಸಾಮಾನ್ಯ ಮಾದರಿಯ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್‌ ಹೊರತುಪಡಿಸಿ ಪರ್ಫಾಮೆನ್ಸ್ ಪ್ರಿಯರಿಗಾಗಿ ಟರ್ಬೋ ಪೆಟ್ರೋಲ್ ಕಾರು ಆವೃತ್ತಿಯನ್ನು ಸಹ ಪಡೆದುಕೊಳ್ಳಲಿದ್ದು, 2020ರ ಏಪ್ರಿಲ್ ಅಥವಾ ಮೇ ಹೊತ್ತಿಗೆ ಹೊಸ ಕಾರು ಬಿಡುಗಡೆಗೊಳ್ಳಲಿದೆ.

MOST READ: ಪಾರ್ಕಿಂಗ್ ವೇಳೆ ಸಿಬ್ಬಂದಿ ಎಡವಟ್ಟು- ಮೊದಲ ಮಹಡಿಯಿಂದ ಜಿಗಿದ ಕಿಯಾ ಸೆಲ್ಟೊಸ್

ಕಿಯಾ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಅಧಿಕೃತ ಹೆಸರು ಬಹಿರಂಗ

ಇಂಡಿಯನ್ ಆಟೋ ಬ್ಲಾಗ್ ಸುದ್ದಿ ಸಂಸ್ಥೆಯ ಪ್ರಕಾರ ಹೊಸ ಕಾರಿನಲ್ಲಿ 1.2-ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಫೋರ್ ಸಿಲಿಂಡರ್ ಪೆಟ್ರೋಲ್, 1.0-ಲೀಟರ್ ಟರ್ಬೋ ಚಾರ್ಜ್ಡ್ ತ್ರೀ ಸಿಲಿಂಡರ್ ಪೆಟ್ರೋಲ್, 1.6-ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಫೋರ್ ಸಿಲಿಂಡರ್ ಪೆಟ್ರೋಲ್ ಮತ್ತು 1.4-ಲೀಟರ್ ಟರ್ಬೋಚಾರ್ಜ್ಡ್ ಫೋರ್ ಸಿಲಿಂಡರ್ ಡೀಸೆಲ್ ಎಂಜಿನ್ ಆಯ್ಕೆ ಪಡೆಯುವ ಸಾಧ್ಯತೆಗಳಿವೆ.

More from DriveSpark

Article Published On: Wednesday, December 18, 2019, 13:50 [IST]
English summary
According to a media report, much awaited Kia compact SUV may be called Sonet in India.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+