ಬಿಡುಗಡೆಗೆ ಸಜ್ಜಾದ ಕಿಯಾ ಮೋಟಾರ್ಸ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಕಿಯಾ ಮೋಟಾರ್ಸ್ ಸಂಸ್ಥೆಯು ಸೆಲ್ಟೊಸ್ ಎಸ್‌ಯುವಿ ಕಾರು ಮಾರಾಟದಲ್ಲಿ ನೀರಿಕ್ಷೆಗೂ ಮೀರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಮುಂಬರುವ ದಿನಗಳಲ್ಲಿ ವಿವಿಧ ಮಾದರಿಯ ಐದು ಹೊಸ ಕಾರುಗಳನ್ನು ಪರಿಚಯಿಸಲು ಯೋಜನೆ ರೂಪಿಸಿದೆ. ಇದರಲ್ಲಿ ಕಾರ್ನಿವಾಲ್ ಎಂಪಿವಿ ಹಾಗೂ ಹೊಚ್ಚ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯೊಂದು ಭಾರೀ ಸದ್ದು ಮಾಡುವ ನೀರಿಕ್ಷೆಯಲ್ಲಿವೆ.

ಬಿಡುಗಡೆಗೆ ಸಜ್ಜಾದ ಕಿಯಾ ಮೋಟಾರ್ಸ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಭಾರೀ ನೀರಿಕ್ಷೆಯೊಂದಿಗೆ ಭಾರತೀಯ ಆಟೋ ಉದ್ಯಮಕ್ಕೆ ಕಾಲಿಟ್ಟಿರುವ ದಕ್ಷಿಣ ಕೊರಿಯಾದ ಕಿಯಾ ಮೋಟಾರ್ಸ್ ಸಂಸ್ಥೆಯು ಸೆಲ್ಟೊಸ್ ಕಾರು ಮಾರಾಟ ಮೂಲಕ ದೇಶದ ಟಾಪ್ 4 ಕಾರು ಉತ್ಪಾದನಾ ಸಂಸ್ಥೆಯಾಗಿ ಹೊರಹೊಮ್ಮಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಮತ್ತಷ್ಟು ಹೊಸ ಬಗೆಯ ಕಾರುಗಳನ್ನು ಬಿಡುಗಡೆಗೊಳಿಸುವ ಇರಾದೆಯಲ್ಲಿದೆ. ಸೆಲ್ಟೊಸ್ ಬಿಡುಗಡೆಯ ನಂತರ ಕಾರ್ನಿವಾಲ್ ಸೇರಿದಂತೆ ವಿವಿಧ ನಮೂನೆಯ ಐದು ಹೊಸ ಕಾರುಗಳನ್ನು ರಸ್ತೆಗಿಳಿಸಲು ಸಿದ್ದತೆ ನಡೆಸುತ್ತಿದ್ದು, ಹೊಚ್ಚ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರು ಸದ್ಯ ಭಾರೀ ಚರ್ಚಗೆ ಕಾರಣವಾಗಿದೆ.

ಬಿಡುಗಡೆಗೆ ಸಜ್ಜಾದ ಕಿಯಾ ಮೋಟಾರ್ಸ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಸಹೋದರ ಸಂಸ್ಥೆ ಹ್ಯುಂಡೈಗಿಂತಲೂ ಅತ್ಯುತ್ತಮ ಕಾರು ಉತ್ಪನ್ನಗಳನ್ನು ಹೊಂದಿರುವ ಕಿಯಾ ಸಂಸ್ಥೆಯು ಭಾರತದಲ್ಲಿ ಭಾರೀ ಪ್ರಮಾಣದ ಬಂಡವಾಳ ಹೂಡಿಕೆ ಮಾಡಿದ್ದು, ಗ್ರಾಹಕರ ಬೇಡಿಕೆಯೆಂತೆ ಅಗ್ಗದ ಬೆಲೆಯಲ್ಲಿ ಉತ್ತಮ ಮಾದರಿಯ ಹ್ಯಾಚ್‌ಬ್ಯಾಕ್, ಎಸ್‌ಯುವಿ, ಸೆಡಾನ್, ಎಂಪಿವಿ ಮತ್ತು ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಯ ಯೋಜನೆಯಲ್ಲಿದೆ.

ಬಿಡುಗಡೆಗೆ ಸಜ್ಜಾದ ಕಿಯಾ ಮೋಟಾರ್ಸ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಮಾಹಿತಿಗಳ ಪ್ರಕಾರ, ಮುಂಬರುವ ಜನವರಿ ಕೊನೆಯಲ್ಲಿ ಕಾರ್ನಿವಾಲ್ ಎಂಪಿವಿ ಬಿಡುಗಡೆ ಮಾಡಲಿರುವ ಕಿಯಾ ಸಂಸ್ಥೆಯು ತದನಂತರ ಕ್ಯೂವೈಎ ಹೆಸರಿನ ಕಂಪ್ಯಾಕ್ಟ್ ಎಸ್‌ಯುವಿ, ಸೊರೆಂಟೊ ಸೆಡಾನ್ ಮತ್ತು ಸೊಲ್ ಎಲೆಕ್ಟ್ರಿಕ್, ನಿರೊ ಎಲೆಕ್ಟ್ರಿಕ್ ಮತ್ತು ಐಷಾರಾಮಿ ಎಸ್‌ಯುವಿ ಮಾದರಿಯಾದ ಟೆಲ್ಲುರೈಡ್ ಕಾರನ್ನು ಬಿಡುಗಡೆ ಮಾಡಲಿದೆಯೆಂತೆ.

ಬಿಡುಗಡೆಗೆ ಸಜ್ಜಾದ ಕಿಯಾ ಮೋಟಾರ್ಸ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಸೆಲ್ಟೊಸ್ ಯಶಸ್ವಿ ನಂತರ ಮುಂದಿನ ಕಾರು ಬಿಡುಗಡೆಯ ಯೋಜನೆ ಕುರಿತಂತೆಯಂತೆ ಸುದ್ದಿ ಸಂಸ್ಥೆಗಳೊಂದಿಗೆ ಮಾತನಾಡಿರುವ ಕಿಯಾ ಹಿರಿಯ ಅಧಿಕಾರಿಯೊಬ್ಬರು ಪ್ರತಿ ಆರು ತಿಂಗಳಿಗೊಂದು ಹೊಸ ಕಾರು ಉತ್ಪನ್ನ ಬಿಡುಗಡೆ ಮಾಡುವ ಯೋಜನೆಯಿದ್ದು, ಮುಂಬರುವ 2020ರ ಫೆಬ್ರುವರಿಯಲ್ಲಿ ನಡೆಯಲಿರುವ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಭಾಗಿ ನಂತರ ಕಾರ್ನಿವಾಲ್ ಎಂಪಿವಿ ಹಾಗೂ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆಗೊಳಿಸಲಾಗುವುದು ಎನ್ನುವ ಮಾಹಿತಿ ನೀಡಿದ್ದಾರೆ.

ಬಿಡುಗಡೆಗೆ ಸಜ್ಜಾದ ಕಿಯಾ ಮೋಟಾರ್ಸ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರು ಸದ್ಯ ಮಾರುಕಟ್ಟೆಯಲ್ಲಿರುವ ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಟಾಟಾ ನೆಕ್ಸಾನ್, ಹ್ಯುಂಡೈ ವೆನ್ಯೂ, ಮಹೀಂದ್ರಾ ಎಕ್ಸ್‌ಯುವಿ300, ಫೋರ್ಡ್ ಇಕೋಸ್ಪೋರ್ಟ್ ಕಾರುಗಳಿಗೆ ಪೈಪೋಟಿ ನೀಡಿದಲಿದೆ.

ಬಿಡುಗಡೆಗೆ ಸಜ್ಜಾದ ಕಿಯಾ ಮೋಟಾರ್ಸ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಹೊಸ ಕಾರಿನ ತಾಂತ್ರಿಕ ಅಂಶಗಳ ಕುರಿತಾಗಿ ಈಗಾಗಲೇ ವಿವಿಧ ಸುತ್ತಿನ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಾಗಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.7 ಲಕ್ಷದಿಂದ ರೂ.11 ಲಕ್ಷ ಬೆಲೆ ಅಂತರ ಬಿಡುಗಡೆಯಾಗುವ ಸಾಧ್ಯತೆಗಳಿವೆ.

MOST READ: ಕಾರು ಖರೀದಿಸಿದ ಮಾಲೀಕನ ಮೇಲೆ ಕೇಸ್ ಜಡಿದ ಎಂಜಿ ಮೋಟಾರ್..!

ಬಿಡುಗಡೆಗೆ ಸಜ್ಜಾದ ಕಿಯಾ ಮೋಟಾರ್ಸ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಸದ್ಯ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆ ಹೊಂದಿರುವ ಸೆಲ್ಟೊಲ್ ಕಾರು ಆರಂಭಿಕವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 9.69 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.16.99 ಲಕ್ಷ ಬೆಲೆ ಹೊಂದಿದ್ದು, ಸಾಮಾನ್ಯ ಮತ್ತು ಪರ್ಫಾಮೆನ್ಸ್ ಮಾದರಿಯಲ್ಲಿ ಈ ಕಾರು ಖರೀದಿಗೆ ಲಭ್ಯವಿದೆ.

MOST READ: ಖರೀದಿಸಿದ ಬೈಕ್ ಪಡೆಯಲು ಕಾನೂನು ಹೋರಾಟ ಮಾಡಿದ ಉದ್ಯಮಿ

ಬಿಡುಗಡೆಗೆ ಸಜ್ಜಾದ ಕಿಯಾ ಮೋಟಾರ್ಸ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಸೆಲ್ಟೊಸ್ ಕಾರು ಬಿಎಸ್-6 ನಿಯಮ ಅನುಸಾರ ಜಿಟಿ ಲೈನ್ ಕಾರುಗಳಲ್ಲಿ 1.4-ಲೀಟರ್ ಟಿ-ಜಿಡಿಐ ಪೆಟ್ರೋಲ್ ಎಂಜಿನ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಹೊಂದಿದ್ದರೆ ಸಾಮಾನ್ಯ ಮಾದರಿಯ ಟೆಕ್-ಲೈನ್ ಕಾರುಗಳು ಬಿಎಸ್-6 ಪ್ರೇರಿತ ನ್ಯಾಚುರಲಿ ಆಸ್ಪೆರೆಟೆಡ್ 1.5-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಸಿಆರ್‌ಡಿಐ ಡೀಸೆಲ್ ಎಂಜಿನ್ ಪಡೆದುಕೊಂಡಿವೆ.

MOST READ: ದೇಶದ ಜನಪ್ರಿಯ ಕಾರ್ ಬ್ರಾಂಡ್ ಆಗಿ ಮಿಂಚುತ್ತಿರುವ ಟಾಟಾ ಯಶಸ್ವಿ ಹಿಂದಿನ ಕಾರಣವೇನು?

ಬಿಡುಗಡೆಗೆ ಸಜ್ಜಾದ ಕಿಯಾ ಮೋಟಾರ್ಸ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಪ್ರತಿ ಸ್ಪರ್ಧಿ ಕಾರು ಮಾದರಿಗಳಾದ ಹ್ಯುಂಡೈ ಕ್ರೆಟಾ, ಟಾಟಾ ಹ್ಯಾರಿಯರ್, ಎಂಜಿ ಹೆಕ್ಟರ್ ಮತ್ತು ಜೀಪ್ ಕಂಪಾಸ್ ಕಾರುಗಳಿಂತಲೂ ಹೆಚ್ಚಿನ ಮಾರಾಟ ಪ್ರಮಾಣವನ್ನು ತನ್ನದಾಗಿಸಿಕೊಂಡಿದ್ದು, ಆಕರ್ಷಕ ಬೆಲೆಗಳೊಂದಿಗೆ ಎಸ್‌ಯುವಿ ಪ್ರಿಯರ ನೆಚ್ಚಿನ ಕಾರು ಮಾದರಿಯಾಗಿ ಹೊರಹೊಮ್ಮಿದೆ.

ಬಿಡುಗಡೆಗೆ ಸಜ್ಜಾದ ಕಿಯಾ ಮೋಟಾರ್ಸ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಇದೇ ರೀತಿಯಾಗಿ ಕಿಯಾ ಸಂಸ್ಥೆಯ ಮುಂಬರುವ ದಿನಗಳಲ್ಲಿ ಸಬ್ ಕಂಪ್ಯಾಕ್ಟ್ ಎಸ್‌ಯುವಿ ಮತ್ತು ಎಂಪಿವಿ ಕಾರುಗಳಲ್ಲೇ ವಿನೂತನ ವಿನ್ಯಾಸ ಹೊಂದಿರುವ ಕಾರ್ನಿವಾಲ್ ಬಿಡುಗಡೆ ಮೂಲಕ ಭಾರೀ ಪ್ರಮಾಣದ ಕಾರುಗಳ ಮಾರಾಟಕ್ಕೆ ಯೋಜನೆ ರೂಪಿಸಿದೆ.

More from DriveSpark

Article Published On: Sunday, December 8, 2019, 9:00 [IST]
English summary
Kia compact SUV to be launched in India in 2020. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+